Homeಮುಖಪುಟಭಾರತೀಯ ಕುಸ್ತಿ ಫೆಡರೇಶನ್‌ ಮುನ್ನಡೆಸಲು ತಾತ್ಕಾಲಿಕ ಸಮಿತಿ ರಚನೆ

ಭಾರತೀಯ ಕುಸ್ತಿ ಫೆಡರೇಶನ್‌ ಮುನ್ನಡೆಸಲು ತಾತ್ಕಾಲಿಕ ಸಮಿತಿ ರಚನೆ

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಶನ್‌(ಡಬ್ಲ್ಯುಎಫ್‌ಐ) ನ ನೂತನ ಸಮಿತಿಯನ್ನು ಕೇಂದ್ರ ಸರ್ಕಾರ ಅಮಾನತುಗೊಳಿಸಿರುವ ಹಿನ್ನೆಲೆ, ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ) ಡಬ್ಲ್ಯುಎಫ್‌ಐನ ವ್ಯವಹಾರಗಳನ್ನು ನೋಡಿಕೊಳ್ಳಲು ತಾತ್ಕಾಲಿಕ ಸಮಿತಿಯನ್ನು ರಚಿಸಿದೆ.

ತಾತ್ಕಾಲಿಕ ಸಮಿತಿಯ ನೇತೃತ್ವವನ್ನು ಭೂಪಿಂದರ್ ಸಿಂಗ್ ಬಾಜ್ವಾ ವಹಿಸಲಿದ್ದಾರೆ. ಎಂ.ಎಂ.ಸೋಮಯ ಮತ್ತು ಮಂಜುಷಾ ಕನ್ವರ್ ಸದಸ್ಯರಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಎನ್‌ಡಿವಿ ವರದಿ ಮಾಡಿದೆ.

ನ್ಯಾಯಯುತ ಕಾರ್ಯನಿರ್ವಹಣೆ, ಹೊಣೆಗಾರಿಕೆ ಮತ್ತು ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಹೊಸ ತಾತ್ಕಾಲಿಕ ಸಮಿತಿಯನ್ನು ನೇಮಿಸುತ್ತಿರುವುದಾಗಿ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಹೇಳಿದೆ.

ಐಒಎ ಮುಖ್ಯಸ್ಥೆ ಪಿ.ಟಿ ಉಷಾ ಇತ್ತೀಚೆಗೆ ಹೊರಡಿಸಿದ್ದ ಆದೇಶವೊಂದರಲ್ಲಿ, ಡಬ್ಲ್ಯುಎಫ್‌ಐಗೆ ಹೊಸದಾಗಿ ಆಯ್ಕೆಗೊಂಡ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಫೆಡರೇಶನ್‌ನ ಸಾಂವಿಧಾನಿಕ ನಿಬಂಧನೆಗಳನ್ನು ಉಲ್ಲಂಘಿಸಿ ಅನಿಯಂತ್ರಿತ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ ಎಂದು ಹೇಳಿದ್ದರು.

ಡಿಸೆಂಬರ್ 24ರಂದು ಸಂಜಯ್ ಸಿಂಗ್ ನೇತೃತ್ವದ ಡಬ್ಲ್ಯುಎಫ್‌ಐನ ನೂತನ ಸಮಿತಿಯನ್ನು ಕೇಂದ್ರ ಕ್ರೀಡಾ ಸಚಿವಾಲಯ ಅಮಾನತು ಮಾಡಿತ್ತು. ಈ ಸಮಿತಿಯು ಅಂಡರ್-15 ಮತ್ತು ಅಂಡರ್-20 ಕ್ರೀಡಾಪಟುಗಳಿಗೆ ತಯಾರಿ ನಡೆಸಲು ನೋಟಿಸ್ ನೀಡದೆ ಏಕಾಏಕಿ ಆಯ್ಕೆ ಮಾಡುವ ಮೂಲಕ ನಿಯಮಗಳನ್ನು ಉಲ್ಲಂಘಿಸಿತ್ತು ಎಂದು ಹೇಳಲಾಗಿದೆ.

ಕುಸ್ತಿ ಫೆಡರೇಶನ್‌ನ ಅಧ್ಯಕ್ಷರಾಗಿದ್ದ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿತ್ತು. ಇದೇ ವ್ಯಕ್ತಿಯ ಆಪ್ತ ಸಂಜಯ್ ಸಿಂಗ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಕ್ಕೆ ಬೇಸರಗೊಂಡು ಖ್ಯಾತ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ಬಜರಂಗ್‌ ಪೂನಿಯಾ ತಮ್ಮ ಪದ್ಮಶ್ರೀ ಪ್ರಶಸ್ತಿ ಹಿಂದಿರುಗಿಸಿದ್ದರು. ವಿರೇಂದರ್ ಸಿಂಗ್, ವಿನೇಶ್ ಫೋಗಟ್ ತಮ್ಮ ಅತ್ಯುನ್ನತ ಪ್ರಶಸ್ತಿಗಳನ್ನು ಹಿಂದಿರುಗಿಸುವುದಾಗಿ ಘೋಷಿಸಿದ್ದರು. ಈ ಬೆನ್ನಲ್ಲೇ ಕೇಂದ್ರ ಕ್ರೀಡಾ ಸಚಿವಾಲಯ ಡಬ್ಲ್ಯುಎಫ್‌ಐನ ನೂತನ ಸಮಿತಿಯನ್ನು ಅಮಾನತು ಮಾಡಿತ್ತು.

ಇದನ್ನೂ ಓದಿ : ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸ್ಥಾನದಿಂದ ಅನುಪಮ್ ಹಝ್ರಾ ವಜಾ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ರೋಹಿತ್ ವೇಮುಲಾ ಕಾಯ್ದೆ’ ಜಾರಿ: ಕೆ.ಸಿ ವೇಣುಗೋಪಾಲ್

0
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ಮತ್ತು ಕೋಮು ದೌರ್ಜನ್ಯ ತಡೆಯಲು 'ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಭರವಸೆ ನೀಡಿದ್ದಾರೆ. ಸಾಮಾಜಿಕ ಮತ್ತು...