Homeಅಂತರಾಷ್ಟ್ರೀಯಸಿಂಗಾಪುರ ಕೆಫೆಯಲ್ಲಿ ಕ್ಯಾಷಿಯರ್‌ ಕುರಿತು ಜನಾಂಗೀಯ ಟೀಕೆ; ಭಾರತೀಯ ಮೂಲದ ವ್ಯಕ್ತಿಗೆ ಜೈಲು ಶಿಕ್ಷೆ

ಸಿಂಗಾಪುರ ಕೆಫೆಯಲ್ಲಿ ಕ್ಯಾಷಿಯರ್‌ ಕುರಿತು ಜನಾಂಗೀಯ ಟೀಕೆ; ಭಾರತೀಯ ಮೂಲದ ವ್ಯಕ್ತಿಗೆ ಜೈಲು ಶಿಕ್ಷೆ

- Advertisement -
- Advertisement -

ಕೆಫೆಯಲ್ಲಿನ ಕ್ಯಾಷಿಯರ್‌ ಕುರಿತು ಜನಾಂಗೀಯ ನಿಂದನೆ ಮತ್ತು ಟಿಪ್ ಬಾಕ್ಸ್ ಅನ್ನು ಎಸೆದಿದ್ದಕ್ಕಾಗಿ ಭಾರತೀಯ ಮೂಲದ ವ್ಯಕ್ತಿಗೆ ನಾಲ್ಕು ವಾರಗಳ ಜೈಲು ಶಿಕ್ಷೆ ಮತ್ತು 4,000 ಸಿಂಗಾಪುರ ರೂಪಾಯಿ ದಂಡ ವಿಧಿಸಲಾಗಿದೆ.

27 ವರ್ಷದ ರಿಷಿ ಡೇವಿಡ್ ರಮೇಶ್ ನಂದ್ವಾನಿ ಅವರು ಸೋಮವಾರ ಹಾಲೆಂಡ್ ವಿಲೇಜ್‌ನ ದುಬಾರಿ ಶಾಪಿಂಗ್ ಕಾನ್‌ಕ್ಲೇವ್‌ನಲ್ಲಿ ಕೆಫೆಯಲ್ಲಿ ಕ್ಯಾಶಿಯರ್‌ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಅವಮಾನಕರ ಪದಗಳನ್ನು ಬಳಸಿದ್ದಾರೆ ಎನ್ನಲಾಗಿದೆ. ದುಡುಕಿನ ಕೃತ್ಯ ಮಾಡಿದ್ದೇನೆ ಎಂದು ಆರೋಪಿ ತಪ್ಪೊಪ್ಪಿಕೊಂಡಿದ್ದಾರೆ.

ಶಿಕ್ಷೆಯಲ್ಲಿ ಎರಡು ರೀತಿಯ ಆರೋಪಗಳನ್ನು ಪರಿಗಣಿಸಲಾಗಿದೆ. ರಿಷಿ ತನ್ನ ಬಂಧನದ ಸ್ಥಳದಿಂದ ವೀಡಿಯೊ ಲಿಂಕ್ ಮೂಲಕ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ. ಅಕ್ಟೋಬರ್ 31 ರಂದು ಈ ಘಟನೆ ಸಂಭವಿಸಿದ್ದು, ಕೆಫೆ ಕಿಕ್ಕಿರಿದು ತುಂಬಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳಿದ್ದರು ಎಂದು ತಿಳಿದುಬಂದಿದೆ.

ಮಧ್ಯಾಹ್ನ 12.20 ರ ಸುಮಾರಿಗೆ ರಿಷಿ ಅವರು ಆರ್ಡರ್‌ ಮಾಡಲು ಸರತಿ ಸಾಲಿನಲ್ಲಿ ಸೇರುತ್ತಿದ್ದಾರೆ ಎಂಬ ತಪ್ಪು ತಿಳುವಳಿಕೆಯಿಂದ ಕೌಂಟರ್ ಮುಂದೆ ನಿಂತಿದ್ದರು ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ವಾಸ್ತವವಾಗಿ ಅವರು ತಪ್ಪಾದ ಸರದಿಯಲ್ಲಿದ್ದರು. ಆತ ಕ್ಯಾಷಿಯರ್‌ನ ಮುಂದೆ ಬಂದಾಗ, ಸರದಿಯ ಹಿಂಭಾಗಕ್ಕೆ ಹೋಗಿ ಸರದಿಗಾಗಿ ಕಾಯುವಂತೆ ಕ್ಯಾಶಿಯರ್ ಹೇಳಿದ್ದಾರೆ. ಕ್ಯಾಷಿಯರ್ ತನಗೆ ಸೇವೆ ಸಲ್ಲಿಸಲು ನಿರಾಕರಿಸಿದ್ದಕ್ಕೆ ರಿಷಿ ಅಸಮಾಧಾನಗೊಂಡರು. ಅವರು ಚೀನೀ ಜನರ ವಿರುದ್ಧ ಜನಾಂಗೀಯ ನಿಂದನೆಗಳನ್ನು ಒಳಗೊಂಡಿರುವ ಆಕೆಯ ವಿರುದ್ಧ ಎರಡು ನಿಮಿಷಗಳ ಕಾಲ ಟೀಕೆ ಮಾಡಿದ್ದಾರೆ.

ಅಶ್ಲೀಲ ಮಾತುಗಳನ್ನೂ ಆಡಿದ್ದು, ಅವರು ಸರದಿಯನ್ನು ಹಿಡಿದಿಟ್ಟುಕೊಳ್ಳುವುದನ್ನು ಮುಂದುವರೆಸಿ, ಸಾಲಿನ ಹಿಂಭಾಗಕ್ಕೆ ಹೋಗಲು ನಿರಾಕರಿಸಿದರು ಎನ್ನಲಾಗಿದೆ.

ಆತನ ಅವಮಾನಕರ ಹೇಳಿಕೆಗಳು ಸಂತ್ರಸ್ತೆಯನ್ನು ಸಂಕಟಪಡಿಸಿದವು. ಆಕೆ ದೂರ ಸರಿಯುವ ಮೂಲಕ ನಿರ್ಲಿಪ್ತಳಾಗಿ, ತನ್ನ ಮೇಲಿನವರೊಂದಿಗೆ ಮಾತನಾಡುವಂತೆ ತಿಳಿಸಿದ್ದಾರೆ. ಆದರೂ, ರಿಷಿ ಸಂತ್ರಸ್ತೆಯನ್ನು ನಿಂದಿಸುವುದನ್ನು ಮುಂದುವರೆಸಿದ್ದಾನೆ. ನಂತರ ಅವನು ಕೌಂಟರ್‌ನಲ್ಲಿರುವ ಟಿಪ್ ಬಾಕ್ಸ್ ಅನ್ನು ಎತ್ತಿಕೊಂಡು ಅವಳ ಮೇಲೆ ಎಸೆದು, ಆಕೆಯ ಕೆಳ ಬೆನ್ನಿಗೆ ಹೊಡೆದಿದ್ದಾನೆ.

ಅಂತಿಮವಾಗಿ ಕೆಫೆಯಿಂದ ಹೊರಡುವ ಮೊದಲು ಅವನು ಕ್ಯಾಶಿಯರ್ ಮೇಲೆ ಅಸಭ್ಯ ಮತ್ತು ನಿಂದೆಗಳನ್ನು ಮಾಡುವುದನ್ನು ಮುಂದುವರೆಸಿದನು. ಸಂತ್ರಸ್ತೆ ಪೊಲೀಸರಿಗೆ ಕರೆ ಮಾಡಿ ವರದಿ ಮಾಡಿದ ಬಳಿಕ ಒಂದು ಗಂಟೆಯ ನಂತರ ರಿಷಿಯನ್ನು ಬಂಧಿಸಲಾಯಿತು.

ಆತನ ದಬ್ಬಾಳಿಕೆ ಮತ್ತು ಅವನು ಟಿಪ್ ಬಾಕ್ಸ್ ಎಸೆಯುವ ವೀಡಿಯೊಗಳನ್ನು ನ್ಯಾಯಾಲಯದಲ್ಲಿ ಪ್ಲೇ ಮಾಡಲಾಯಿತು. ಆತ ಕೂಗುತ್ತಿದ್ದಂತೆಯೇ ಅನೇಕ ಗ್ರಾಹಕರು ಸರತಿ ಸಾಲಿನಲ್ಲಿ ನಿಂತು ಮೌನವಾಗಿ ನೋಡುತ್ತಿರುವುದನ್ನು ತೋರಿಸಿದರು.

ತೀರ್ಪು ನೀಡುವಾಗ, ಜಿಲ್ಲಾ ನ್ಯಾಯಾಧೀಶ ಜಾನೆಟ್ ವಾಂಗ್ ಅವರು ರಿಷಿಯ ಅಪರಾಧಗಳು ಸಾರ್ವಜನಿಕ ಗೊಂದಲವನ್ನು ಉಂಟುಮಾಡಿದವು ಮತ್ತು ಸೇವಾ ಸಿಬ್ಬಂದಿಯನ್ನು ನಿಂದನೆಯಿಂದ ರಕ್ಷಿಸುವ ಅಗತ್ಯವನ್ನು ಕಾನೂನು ಗುರುತಿಸುತ್ತದೆ ಎಂದು ಹೇಳಿದರು.

ಇದನ್ನೂ ಓದಿ; ಅಫ್ಘಾನಿಸ್ತಾನ | ಮಹಿಳೆಯನ್ನು ನೇಮಿಸಿಕೊಳ್ಳುವ ಎನ್‌ಜಿಒಗಳ ಸ್ಥಗಿತ – ತಾಲಿಬಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...