Homeಮುಖಪುಟಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ ಮೌಲ್ಯ

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ ಮೌಲ್ಯ

- Advertisement -
- Advertisement -

ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಶುಕ್ರವಾರದ (ಡಿ.27) ವಹಿವಾಹಿಟಿನಲ್ಲಿ 21 ಪೈಸೆ ಕುಸಿತ ಕಂಡು ವಹಿವಾಟಿನ ಅಂತ್ಯಕ್ಕೆ ರೂಪಾಯಿ ಮೌಲ್ಯ ₹85.48 ಆಗಿದೆ.

ಶುಕ್ರವಾರ ವಹಿವಾಟಿನ ಆರಂಭದಲ್ಲಿ ₹85.31 ಇದ್ದ ರೂಪಾಯಿ ಮೌಲ್ಯ, ಇಂಟ್ರಾಡೇ ವಹಿವಾಟಿನಲ್ಲಿ 53 ಪೈಸೆ ಕುಸಿದು ಎರಡು ವರ್ಷದ ವರ್ಷದ ಕನಿಷ್ಠ ಮಟ್ಟವಾದ ₹85.80ಗೆ ತಲುಪಿತ್ತು.

ಬಳಿಕ ಸ್ವಲ್ಪ ಚೇತರಿಕೆ ಕಂಡಿತ್ತು. ಆದರೂ, ₹85.48ರಲ್ಲಿವಹಿವಾಟು ಅಂತ್ಯಗೊಳಿಸಿದೆ. 2023ರ ಫೆಬ್ರವರಿ 2ರಂದು 68 ಪೈಸೆ ಕುಸಿದಿದ್ದು ಈವರೆಗಿನ ಇಂಟ್ರಾಡೇನ ದಾಖಲೆಯ ಕುಸಿತವಾಗಿದೆ.

ಆಮದುದಾರರು ಮತ್ತು ಬ್ಯಾಂಕ್‌ಗಳಲ್ಲಿ ಮಾಸಾಂತ್ಯದ ಪೇಮೆಂಟ್‌ಗೆ ಡಾಲರ್‌ ಬೇಡಿಕೆ ಹೆಚ್ಚಿದ್ದರಿಂದ ರೂಪಾಯಿ ಮೌಲ್ಯ ಕುಸಿದಿದೆ. ಅಲ್ಪಾವಧಿಯ ಖರೀದಿ ಒಪ್ಪಂದಗಳಲ್ಲಿ ತನ್ನ ಡಾಲರ್‌ ಪಾವತಿಗಳನ್ನು ಹಿಡಿದಿಟ್ಟುಕೊಳ್ಳುವ ರಿಸರ್ವ್‌ ಬ್ಯಾಂಕ್‌ನ ನಿಲುವು ರೂಪಾಯಿ ಮೌಲ್ಯ ಮತ್ತಷ್ಟು ಕುಸಿಯುವುದನ್ನು ತಡೆಯಿತು ಎಂದು ವರದಿಗಳು ಹೇಳಿವೆ.

ದೇಶೀಯ ಷೇರುಪೇಟೆ ಸ್ಥಿರವಾಗಿದ್ದರೂ, ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಬಂಡವಾಳ ಹಿಂಪಡೆಯುತ್ತಿರುವುದು ಮುಂದುವರಿದಿದೆ. ಗುರುವಾರದ ವಹಿವಾಟಿನಲ್ಲಿ ₹2,376 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ. ಕಳೆದ ಮೂರ್ನಾಲ್ಕು ವಾರಗಳಿಂದ ವಿದೇಶಿ ಬಂಡವಾಳದ ಹೊರಹರಿವು ಹೆಚ್ಚಿದೆ. ಜೊತೆಗೆ, ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯು ಏರಿಕೆಯಾಗುತ್ತಿದೆ. ಇದು ಡಾಲರ್‌ ಎದುರು ರೂಪಾಯಿ ಮೌಲ್ಯದ ಕುಸಿತಕ್ಕೆ ಕಾರಣವಾಗಿದೆ ಎಂದು ಮಾರುಕಟ್ಟೆ ವಿಶ್ಲೇಷಕರು ಹೇಳಿದ್ದಾರೆ.

ಇದನ್ನೂ ಓದಿ : ‘ದೆಹಲಿಯಲ್ಲಿ ಬಿಜೆಪಿ ಹಣ ಹಂಚುತ್ತಿದೆ’ ಎಂದು ಆರೋಪಿಸಿದ ಎಎಪಿ; ಜಾರಿ ನಿರ್ದೇಶನಾಲಯಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...

SIR ತಂದಿಟ್ಟ ಸಂಕಷ್ಟ : ದಾಖಲೆ ಹೊಂದಿಸಲು ಅಲೆಮಾರಿಗಳ ಅಲೆದಾಟ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಅನ್‌ಮ್ಯಾಪ್ಡ್ ಮತ್ತು ಅನಾಮಲಿಸ್ ಮತದಾರರಿಗೆ ನೋಟಿಸ್ ನೀಡಿ, ದಾಖಲೆಗಳ ಪರಿಶೀಲನೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ 23,45,428 ಅನ್‌ ಮ್ಯಾಪ್ಡ್ (ಪ್ರೊಜೆನಿ ಮ್ಯಾಪಿಂಗ್...

ಸಚಿವ ಸತೀಶ್ ಜಾರಕಿಹೊಳಿ, ಪುತ್ರಿ ಪ್ರಿಯಾಂಕಾ ನಿವಾಸಗಳ ಮೇಲೆ ಇಡಿ ದಾಳಿ: 18ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ

ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಪುತ್ರಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಸೇರಿದ ನಿವಾಸಗಳು ಮತ್ತು ಆಸ್ತಿಪಾಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ)...

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...