Homeಎಕಾನಮಿಡಾಲರ್ ಎದುರು ರೂಪಾಯಿ ಕುಸಿತ: ಚೇತನ್ ಭಗತ್, ಕಿರಣ್ ಬೇಡಿಯ ಹಳೆಯ ಟ್ವೀಟ್ ಗಳನ್ನು ಹಾಕಿ...

ಡಾಲರ್ ಎದುರು ರೂಪಾಯಿ ಕುಸಿತ: ಚೇತನ್ ಭಗತ್, ಕಿರಣ್ ಬೇಡಿಯ ಹಳೆಯ ಟ್ವೀಟ್ ಗಳನ್ನು ಹಾಕಿ ಟ್ರೋಲ್ ಮಾಡಿದ ನೆಟ್ಟಿಗರು

- Advertisement -
- Advertisement -

ತೀವ್ರ ಆರ್ಥಿಕ ಕುಸಿತದ ಬೆನ್ನಲ್ಲೇ ಡಾಲರ್ ಎದುರು ರೂಪಾಯಿ ಮೌಲ್ಯವು ಮತ್ತಷ್ಟು ಕುಸಿಸಿದೆ. ಸದ್ಯಕ್ಕೆ 1 ಡಾಲರ್ ಗೆ 71.65 ರೂಗಳು ಇದ್ದು ಬೆಳಿಗ್ಗೆ ಇದು 72 ರೂ ಗಳಿಗೆ ತಲುಪಿತ್ತು. ಇದೇ ವಿಚಾರ ಇಟ್ಟುಕೊಂಡು ನೆಟ್ಟಿಗರು ಟ್ರೋಲ್ ಆರಂಭಿಸಿದ್ದಾರೆ.

“ಡಾಲರ್ ಎದುರು ರುಪಾಯಿ 60 ರೂಗೆ ತಲುಪಿದೆ. ಇದು ಆರ್ಥಿಕ ಕುಸಿತದ ಸಂಕೇತ. ಆದರೂ ಏನೂ ಆಗಿಲ್ಲವೆನ್ನುವಂತೆ ಸರ್ಕಾರ ಸುಮ್ಮನೆ ಕುಳಿತಿದೆ” ಎಂದು ಲೇಖಕ ಚೇತನ್ ಭಗತ್ 2013ರ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಟ್ವೀಟ್ ಮಾಡಿ ಟೀಕಿಸಿದ್ದರು.ಈಗ 71 ರೂ ದಾಟಿದ ಹಿನ್ನೆಲೆಯಲ್ಲಿ ಆ ಟ್ವೀಟ್ ನ ಸ್ಕ್ರೀನ್ ಶಾಟ್ ಅನ್ನು ಪೋಸ್ಟ್ ಮಾಡಿ ಲೇವಡಿ ಮಾಡಿದ್ದಾರೆ. ಈಗ್ಯಾಕೆ ಚೇತನ್ ಭಗತ್ ಬಾಯಿ ಬಿಡುತ್ತಿಲ್ಲ ಎಂದು ಛೇಡಿಸಿದ್ದಾರೆ.

ಕಿರಣ್ ಬೇಡಿಯವರು ಸಹ 2013ರಲ್ಲಿಯೇ ಡಾಲರ್ ಎದುರು ರೂಪಾಯಿ ಕುಸಿತವನ್ನು ಒಂದು ಪದ್ಯದ ಮೂಲಕ ವ್ಯಂಗ್ಯ ಮಾಡಿದ್ದರು. “ಡಾಲರ್ ಎಸ್ಕಲೇಟರ್ ನಲ್ಲಿದೆ, ರುಪಾಯಿ ವೆಂಟಿಲೇಟರ್ ನಲ್ಲಿದೆ. ಫೈಲುಗಳು ಲಾಕರ್ ನಲ್ಲಿವೆ, ಮಾಧ್ಯಮಗಳು ಶಾಕ್ ಆಗಿವೆ, ಕೆಲವು ವ್ಯವಹಾರಕ್ಕೆ ಹೋಗವು ಬಂಕರ್ ಗಳು ಹೊಂದಿಕೊಂಡಿವೆ ಎನ್ನುವ ಅರ್ಥದಲ್ಲಿ ಬರೆದಿದ್ದರು.

ಆದರೆ ಈಗ ಕಿರಣ್ ಬೇಡಿಯವರು ಬಿಜೆಪಿ ಪಕ್ಷದಲ್ಲಿದ್ದು ರುಪಾಯಿ 72 ರೂ ಗೆ ಕುಸಿದರೂ ಉಸಿರೆ ಎತ್ತುತ್ತಿಲ್ಲ ಏಕೆ ಎಂದು ನೆಟ್ಟಿಗರು ವ್ಯಂಗ್ಯವಾಡಿದ್ದಾರೆ.

ಮುಖ್ಯವಾಗಿ ಈ ಇಬ್ಬರು ಸೆಲೆಬ್ರಟಿಗಳು ಸಹ ಬಿಜೆಪಿಯ ಬೆಂಬಲಿಗರಾಗಿದ್ದು ಯುಪಿಎ ಆಡಳಿತದ ಕಾಲಾವಧಿಯಲ್ಲಿ ಮಾತು ಮಾತಿಗೂ ಟ್ವೀಟ್ ಮಾಡುತ್ತಿದ್ದವರು ಈಗ ದೊಡ್ಡ ಆರ್ಥಿಕ ಕುಸಿತ ಉಂಟಾದರು ಏಕೆ ಮಾತಾಡುತ್ತಿಲ್ಲ ಎಂದು ಟೀಕಿಸಿದ್ದಾರೆ.

ಶ್ರೀನಿವಾಸ ಕಾರ್ಕಾಳರವರು ‘ವಿದೇಶದಲ್ಲಿರುವ ಭಾರತೀಯ “ದೇಶಭಕ್ತ” ರಿಗೆ ಖುಷಿಯೋ ಖುಷಿ. 1 ಡಾಲರ್ ಗೆ 72 ರುಪಾಯಿ ಸಿಗುತ್ತೆ.’ ಎಂದು ವ್ಯಂಗ್ಯವಾಡಿದ್ದಾರೆ.

ಇನ್ನು ಮೂರು ದಿನಗಳ ಹಿಂದೆ ತಾನೇ ಕರ್ನಾಟಕ ಬಿಜೆಪಿಯ ರಾಜ್ಯಧ್ಯಕ್ಷರಾಗಿ ಸಂಸದ ನಳೀನ್ ಕುಮಾರ್ ಕಟೀಲು ಆಯ್ಕೆಯಾಗಿದ್ದಾರೆ. ಅವರು ಅಧ್ಯಕ್ಷರಾದೊಡನೆ ಅವರು ಹಿಂದೆ ಚುನಾವಣಾ ಪ್ರಚಾರವೊಂದರಲ್ಲಿ ಮಾಡಿದ್ದ ಭಾಷಣವನ್ನು ಸಾಮಾಜಿಕ ಜಾಲತಾಣದಲ್ಲಿ ನೆನಪಿಸಿಕೊಳ್ಳಲಾಗಿದೆ.

ಅದರಲ್ಲಿ ಅವರು”ಬಿಜೆಪಿ ಅಧಿಕಾರಕ್ಕೆ ಬಂದರೆ ಒಂದು ಡಾಲರ್ ಎದುರು ರೂಪಾಯಿಯನ್ನು 15 ರೂ ಗೆ ತರುತ್ತೇವೆ ಎಂದು ಜೋರಾಗಿ ಭಾಷಣ ಮಾಡಿದ್ದರು. ಒಂದಲ್ಲ ಎರಡು ಬಾರಿ ಬಿಜೆಪಿ ಅಧಿಕಾರಕ್ಕೆ ಬಂದರೂ ಏಕೆ ರೂಪಾಯಿ ಮೌಲ್ಯ ಕುಸಿಯುತ್ತಲೇ ಇದೆ ಎಂದು ನೆಟ್ಟಿಗರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. gauri!!!

    Thanks for info, around the world recession will start now, because every one is taking care of our planet.

    All manufacturer of diesel vehicle is stoped.
    MSME & SMALL SCALE BUSINESSES WILL IMPACT NOT ONLY IN INDIA….

    so, flectuation will be there..

    Not only considering value of money ..

    Please consider the population and consumption also..

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...