Homeಮುಖಪುಟರಷ್ಯಾದ ಸೇನೆಯಲ್ಲಿದ್ದ ಹಲವಾರು ಭಾರತೀಯರು ಇನ್ನೂ ನಾಪತ್ತೆ: ವರದಿ

ರಷ್ಯಾದ ಸೇನೆಯಲ್ಲಿದ್ದ ಹಲವಾರು ಭಾರತೀಯರು ಇನ್ನೂ ನಾಪತ್ತೆ: ವರದಿ

- Advertisement -
- Advertisement -

ರಷ್ಯಾದ ಸೈನ್ಯಕ್ಕೆ ಅಕ್ರಮವಾಗಿ ಸೇರ್ಪಡೆಗೊಂಡ ಹಲವಾರು ಭಾರತೀಯರು ನಾಪತ್ತೆಯಾಗಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮೂಲಗಳು ಮತ್ತು ನಾಪತ್ತೆಯಾದ ಇಬ್ಬರ ಕುಟುಂಬ ಸದಸ್ಯರನ್ನು ಉಲ್ಲೇಖಿಸಿ ದಿ ಹಿಂದೂ ಭಾನುವಾರ ವರದಿ ಮಾಡಿದೆ. ನಾಪತ್ತೆಯಾದವರಲ್ಲಿ ಒಬ್ಬರನ್ನು ಜಮ್ಮು ಕಾಶ್ಮೀರದ ಕುಪ್ವಾರ ಜಿಲ್ಲೆಯ ತಂಗ್‌ಧರ್‌ನ 27 ವರ್ಷದ ಜಹೂರ್ ಶೇಖ್ ಎಂದು ಗುರುತಿಸಲಾಗಿದೆ. ರಷ್ಯಾದ ಸೇನೆಯಲ್ಲಿದ್ದ

ನಾಪತ್ತೆಯಾದ ಜಹೂರ್‌ ಶೇಖ್‌ ಅವರ ತಂದೆ ಮೊಹಮ್ಮದ್ ಅಮೀನ್ ಶೇಖ್ ಮಾತನಾಡಿ, ತನ್ನ ಮಗ ಡಿಸೆಂಬರ್ 31 ರಂದು ಕುಟುಂಬದೊಂದಿಗೆ ಕೊನೆಯದಾಗಿ ಮಾತನಾಡಿದ್ದಾನೆ ಎಂದು ಹೇಳಿದ್ದಾರೆ. “ತಾನು ತರಬೇತಿಗೆ ಹೋಗುತ್ತಿರುವುದಾಗಿ ಮತ್ತು ಮುಂದಿನ ಮೂರು ತಿಂಗಳು ಫೋನ್‌ನಲ್ಲಿ ಲಭ್ಯವಿರುವುದಿಲ್ಲ ಎಂದು ಅವರು ಹೇಳಿದ್ದಾರೆ” ಎಂದು ಜಮ್ಮು ಕಾಶ್ಮೀರದ ಸಾರ್ವಜನಿಕ ಆರೋಗ್ಯ ಇಲಾಖೆಯ ನಿವೃತ್ತ ಇನ್ಸ್‌ಪೆಕ್ಟರ್ ಆಗಿರುವ ಮೊಹಮ್ಮದ್ ಅಮೀನ್ ಶೇಖ್ ಹೇಳಿದ್ದಾರೆಂದು ದಿ ಹಿಂದೂ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಅದಾಗ್ಯೂ, ಜನವರಿಯಲ್ಲಿ ರಷ್ಯಾದಲ್ಲಿ ಭಾರತೀಯರ ಸಾವಿನ ಬಗ್ಗೆ ಸುದ್ದಿಯನ್ನು ನೋಡಿ ನಾವು ಚಿಂತೆಗೊಳಗಾಗಿ, ಅವರ ಸಂಖ್ಯೆಗೆ ಕರೆ ಮಾಡಿದೆವು. ಆದರೆ ಅವರಿಗೆ ಸಂಪರ್ಕ ಸಾಧ್ಯವಾಗಲಿಲ್ಲ. ಅವರು ಕೂಡಾ ಇದುವರೆಗೆ ನಮಗೆ ಕರೆ ಮಾಡಿಲ್ಲ” ಎಂದು ಅವರು ಹೇಳಿದ್ದಾರೆ.

ಫೆಬ್ರವರಿ 24, 2022 ರಂದು ರಷ್ಯಾವು ಉಕ್ರೇನ್ ವಿರುದ್ಧ ಆಕ್ರಮಣ ಪ್ರಾರಂಭಿಸಿದ್ದು, ಎರಡನೇ ವಿಶ್ವ ಯುದ್ಧದ ನಂತರ ಯುರೋಪ್‌ನಲ್ಲಿ ನಡೆದ ಭಾರಿ ಸಂಘರ್ಷ ಇದಾಗಿದೆ. ಯುದ್ಧದಲ್ಲಿ ಸುಮಾರು ನೂರು ಭಾರತೀಯರನ್ನು ರಷ್ಯಾ ಸೈನ್ಯದ ಪರವಾಗಿ ಹೋರಾಡುವಂತೆ ಮಾಡಲಾಗಿದೆ ಎಂದು ನಂಬಲಾಗಿದೆ. ಅವರಲ್ಲಿ ಹತ್ತಾರು ಜನರು ಭಾರತಕ್ಕೆ ಮರಳಲು ಸರ್ಕಾರದ ಸಹಾಯವನ್ನು ಕೋರಿದ್ದರು.

ಜುಲೈ ವೇಳೆಗೆ ಸಂಘರ್ಷದಲ್ಲಿ ಕನಿಷ್ಠ ಎಂಟು ಭಾರತೀಯರು ಸಾವನ್ನಪ್ಪಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಸಂಸತ್ತಿಗೆ ತಿಳಿಸಿದ್ದಾರೆ. ಬೇರೆ ದುಡಿಮೆಗೆ ಎಂದು ರಷ್ಯಾಕ್ಕೆ ಕರೆಸಿಕೊಂಡು ಭಾರತೀಯರನ್ನು ಸೇನೆಗೆ ಸೇರಿಸಲಾಗುತ್ತಿದೆ ಎನ್ನಲಾಗುತ್ತಿದೆ.

ಕಳೆದ ವಾರ ಜಹೂರ್ ಶೇಖ್ ಬಗ್ಗೆ ಮಾಹಿತಿ ನೀಡಲು ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿ ವಿಫಲವಾದ ನಂತರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ರಷ್ಯಾದ ರಾಯಭಾರ ಕಚೇರಿಯಿಂದ ಉತ್ತರಗಳನ್ನು ಪಡೆಯಲು ಮೊಹಮ್ಮದ್ ಅಮೀನ್ ಶೇಖ್ ಮತ್ತು ಅವರ ಇಬ್ಬರು ಪುತ್ರರು ನವದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ರಷ್ಯಾದ ಸೇನೆಯಲ್ಲಿದ್ದ

“ನಾವು ರಷ್ಯಾದ ರಾಯಭಾರ ಕಚೇರಿಯಲ್ಲಿ ಮನವಿ ಸಲ್ಲಿಸಿದ್ದೇವೆ” ಎಂದು ಜಹೂರ್ ಶೇಖ್ ಅವರ ಹಿರಿಯ ಸಹೋದರ 31 ವರ್ಷದ ಐಜಾಜ್ ಅಮೀನ್ ದಿ ಹಿಂದೂಗೆ ತಿಳಿಸಿದ್ದಾರೆ. “ಅವರು ವಿಷಯವನ್ನು ಪರಿಶೀಲಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಕನಿಷ್ಠ 15 ಭಾರತೀಯರು ಇನ್ನೂ ನಾಪತ್ತೆಯಾಗಿದ್ದಾರೆ ಮತ್ತು ರಷ್ಯಾ ಸರ್ಕಾರವು ಸಹಕರಿಸುತ್ತಿದ್ದರೂ, ಸ್ಥಳದಲ್ಲಿ ಇರುವ ಅವರ ಕಮಾಂಡರ್‌ಗಳು ಸ್ಪಂದಿಸುತ್ತಿಲ್ಲ” ಎಂದು ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಭದ್ರತಾ ಕೆಲಸಕ್ಕೆ ಸಂಬಂಧಿಸಿದ ಯೂಟ್ಯೂಬ್ ವಿಡಿಯೋ ನೋಡಿದ ನಂತರ ಜಹೂರ್ ಶೇಖ್ ರಷ್ಯಾಕ್ಕೆ ಪ್ರಯಾಣಿಸಿದ್ದರು ಎಂದು ಐಜಾಜ್ ಅಮೀನ್ ಹೇಳಿದ್ದಾರೆ. ಆದರೆ, ಅವರು ರಷ್ಯಾಕ್ಕೆ ತಲುಪಿದ ನಂತರ ಸೈನ್ಯಕ್ಕೆ ಸೇರುವಂತೆ ಆಗಿತ್ತು, ಅಲ್ಲಿ ಅವರು ವಂಚನೆಗೊಳಗಾಗಿದ್ದಾರೆ. ಜಹೋರ್ ಅವರದೇ ರೀತಿ, ಪಂಜಾಬ್‌ನ ಜಲಂಧರ್‌ನ 30 ವರ್ಷದ ಮಂದೀಪ್ ಕೂಡಾ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

“ನಾವು ಮಂದೀಪ್ ಅವರೊಂದಿಗೆ ಕೊನೆಯದಾಗಿ ಮಾರ್ಚ್ 3 ರಂದು ಮಾತನಾಡಿದ್ದೇವೆ” ಎಂದು ಮಂದೀಪ್ ಅವರ ಸಹೋದರ ಜಗದೀಪ್ ಕುಮಾರ್ ಹೇಳಿದ್ದಾರೆಂದು ದಿ ಹಿಂದೂ ವರದಿ ಮಾಡಿದೆ. “ಅವರು ಆರಂಭದಲ್ಲಿ ಅರ್ಮೇನಿಯಾಕ್ಕೆ ಹೋಗಿದ್ದು, ಅಲ್ಲಿಂದ ಕೆಲಸ ಹುಡುಕಿಕೊಂಡು ಇಟಲಿಗೆ ಹೋಗಬೇಕಿತ್ತು. ಬದಲಾಗಿ, ಅವರು ವೀಸಾ ಏಜೆಂಟ್‌ನ ಮೋಸದಿಂದ ರಷ್ಯಾಕ್ಕೆ ಹೋಗಿ ಅವರ ಸೈನ್ಯಕ್ಕೆ ಸೇರುವಂತೆ ಆಯಿತು. ಕೆಲವು ದಿನಗಳ ತರಬೇತಿಯ ನಂತರ ಅವರನ್ನು ಯುದ್ಧ ವಲಯಕ್ಕೆ ಕಳುಹಿಸಲಾಗಿದೆ ಎಂದು ವರದಿ ಹೇಳಿದೆ.

ದೆಹಲಿಯಲ್ಲಿ ವಿದೇಶಾಂಗ ಸಚಿವಾಲಯದ ಅಧಿಕಾರಿಗಳನ್ನು ಭೇಟಿ ಮಾಡಿದ್ದೇನೆ ಎಂದು ಕುಮಾರ್ ಹೇಳಿದ್ದಾರೆ, ರಷ್ಯಾದಲ್ಲಿ ಕನಿಷ್ಠ 25 ಭಾರತೀಯರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ ಎಂದು ಅವರು ತಿಳಿಸಿದ್ದಾರೆ. ಅಕ್ಟೋಬರ್ 21 ರಂದು, ವಿದೇಶಾಂಗ ವ್ಯವಹಾರಗಳ ಸಚಿವಾಲಯವು ರಷ್ಯಾದ ಸೈನ್ಯಕ್ಕೆ ಸೇರ್ಪಡೆಗೊಂಡ ಮತ್ತು ಉಕ್ರೇನ್ ವಿರುದ್ಧದ ಯುದ್ಧದಲ್ಲಿ ಭಾಗವಹಿಸಲಿದ್ದ 85 ಭಾರತೀಯರನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದೆ.

ರಷ್ಯಾದ ಸೇನೆಯಿಂದ ಇನ್ನೂ 20 ಭಾರತೀಯರನ್ನು ಬಿಡುಗಡೆ ಮಾಡಬೇಕಾಗಿದೆ ಮತ್ತು ಅವರನ್ನು ಶೀಘ್ರವಾಗಿ ಬಿಡುಗಡೆ ಮಾಡಲು ಹೊಸ ದೆಹಲಿ ಪ್ರಯತ್ನಿಸುತ್ತಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಹೇಳಿದ್ದಾರೆ. ಜುಲೈನಲ್ಲಿ, ಪ್ರಧಾನಿ ನರೇಂದ್ರ ಮೋದಿ ರಷ್ಯಾಕ್ಕೆ ಭೇಟಿ ನೀಡಿದ್ದಾಗ, ರಷ್ಯಾವೂ ತನ್ನ ಮಿಲಿಟರಿಯಿಂದ ಎಲ್ಲಾ ಭಾರತೀಯರನ್ನು ಶೀಘ್ರವಾಗಿ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿತ್ತು ಎಂದು ವಿದೇಶಾಂಗ ಸಚಿವಾಲಯ ಹೇಳಿತ್ತು.

ಇದನ್ನೂ ಓದಿ: ಬಿಜೆಪಿ ಸೋಲಿಸಲು ದಲಿತ-ಅಲ್ಪಸಂಖ್ಯಾತರ ಮತಗಳನ್ನು ಒಗ್ಗೂಡಿಸಬೇಕು: ವಿಸಿಕೆ ಅಧ್ಯಕ್ಷ ತೊಳ್ ತಿರುಮಾವಳವನ್ ಕರೆ

ಬಿಜೆಪಿ ಸೋಲಿಸಲು ದಲಿತ-ಅಲ್ಪಸಂಖ್ಯಾತರ ಮತಗಳನ್ನು ಒಗ್ಗೂಡಿಸಬೇಕು: ವಿಸಿಕೆ ಅಧ್ಯಕ್ಷ ತೊಳ್ ತಿರುಮಾವಳವನ್ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...