Homeಅಂತರಾಷ್ಟ್ರೀಯಭಾರತೀಯ ವಿದ್ಯಾರ್ಥಿಯ ಗಡೀಪಾರು ವಿವಾದ | ಟ್ರಂಪ್ ಆಡಳಿತಕ್ಕೆ ಕೋರ್ಟ್‌ ನಿರ್ಬಂಧ

ಭಾರತೀಯ ವಿದ್ಯಾರ್ಥಿಯ ಗಡೀಪಾರು ವಿವಾದ | ಟ್ರಂಪ್ ಆಡಳಿತಕ್ಕೆ ಕೋರ್ಟ್‌ ನಿರ್ಬಂಧ

- Advertisement -
- Advertisement -

ಪ್ಯಾಲೆಸ್ತೀನಿ ಹೋರಾಟಗಾರರ ಗುಂಪು ‘ಹಮಾಸ್’ನ ಪರವಾಗಿದ್ದು ಅದನ್ನು ಪ್ರಚಾರ ಮಾಡಿದ್ದಾರೆ ಎಂಬ ಆರೋಪದ ಮೇಲೆ ಬಂಧಿಸಲ್ಪಟ್ಟ ಭಾರತೀಯ ಶಿಕ್ಷಣ ತಜ್ಞ ಬದರ್ ಖಾನ್ ಸೂರಿಯನ್ನು ಗಡೀಪಾರು ಮಾಡದಂತೆ ಅಮೆರಿಕದ ನ್ಯಾಯಾಧೀಶರು ಗುರುವಾರ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ಆದೇಶಿಸಿದ್ದಾರೆ ಎಂದು ಎಬಿಸಿ ನ್ಯೂಸ್ ವರದಿ ಮಾಡಿದೆ. ಭಾರತೀಯ ವಿದ್ಯಾರ್ಥಿಯ

ವರ್ಜೀನಿಯಾ ನ್ಯಾಯಾಲಯದ ಪೂರ್ವ ಜಿಲ್ಲೆಯ ನ್ಯಾಯಾಧೀಶೆ ಪೆಟ್ರೀಷಿಯಾ ಟೋಲಿವರ್ ಗೈಲ್ಸ್ ಅವರು “ನ್ಯಾಯಾಲಯವು ವ್ಯತಿರಿಕ್ತ ಆದೇಶವನ್ನು ನೀಡುವವರೆಗೆ” ಸೂರಿಯನ್ನು ಅಮೆರಿಕದಿಂದ ಗಡೀಪಾರು ಮಾಡುವುದನ್ನು ತಡೆಹಿಡಿದು ಆದೇಶ ಹೊರಡಿಸಿದ್ದಾರೆ. ಅಮೆರಿಕ ಅವರನ್ನು ಗಡಿಪಾರು ಮಾಡಲು ಪ್ರಯತ್ನಿಸುತ್ತಿದೆ ಎಂದು ಸೂರಿ ಪರ ವಕೀಲರು ಹೇಳಿದ್ದಾರೆ. ಭಾರತೀಯ ವಿದ್ಯಾರ್ಥಿಯ

ಬದರ್ ಖಾನ್ ಸೂರಿ ಅವರು ಪ್ಯಾಲೆಸ್ತೀನಿ ಹೋರಾಟಗಾರ ಗುಂಪು ಹಮಾಸ್ ಜೊತೆಗಿನ ಸಂಬಂಧ ಹೊಂದಿದ್ದಾರೆ ಎಂದು ಅಮೆರಿಕದ ಗೃಹ ಭದ್ರತಾ ಇಲಾಖೆಯು ಆರೋಪಿಸಿತ್ತು. ಜೊತೆಗೆ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಮಾಸ್ ಪರ ಪ್ರಚಾರ ಮಾಡುತ್ತಿದ್ದು, ಮತ್ತು ಯಹೂದಿಯರ ವಿರುದ್ಧ ಪ್ರೊಪಗಾಂಡ ಹರಡಿದ್ದಾರೆ ಎಂದು ಅದು ಆರೋಪಿಸಿದೆ.

ಶ್ವೇತಭವನದ ಉಪ ಮುಖ್ಯಸ್ಥ ಸ್ಟೀಫನ್ ಮಿಲ್ಲರ್ ಅವರು ಈ ಬಗ್ಗೆ ಅಲ್ಲಿನ ಬಲಪಂಥೀಯ ಚಾನೆಲ್‌ಗೆ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದ್ದು, ಅದಾಗ್ಯೂ ಅವರು ಯಾವುದೇ ಪುರಾವೆಗಳನ್ನು ಉಲ್ಲೇಖಿಸಿಲ್ಲ ಎಂದು ವರದಿಯಾಗಿದೆ. ಸೂರಿ ಅವರ ಚಟುವಟಿಕೆಗಳು ಅವರನ್ನು ಗಡೀಪಾರು ಮಾಡಲು ಅರ್ಹರನ್ನಾಗಿ ಮಾಡಿದೆ ಎಂದು ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ನಿರ್ಧರಿಸಿದ್ದಾರೆ ಎಂದು ಅದು ಹೇಳಿದೆ.

ಸೂರಿ ಅವರು ವಿದ್ಯಾರ್ಥಿ ವೀಸಾದ ಮೇಲೆ ಅಮೆರಿಕದಲ್ಲಿ ವಾಸಿಸುತ್ತಿದ್ದು, ಅವರು ಅಮೇರಿಕನ್ ಪ್ರಜೆಯನ್ನು ಮದುವೆಯಾಗಿದ್ದಾರೆ. ಅವರನ್ನು ಲೂಸಿಯಾನದ ಅಲೆಕ್ಸಾಂಡ್ರಿಯಾದಲ್ಲಿ ಬಂಧಿಸಲಾಗಿದೆ ಎಂದು ಅವರ ವಕೀಲರು ತಿಳಿಸಿದ್ದಾರೆ. ಅವರು ವಲಸೆ ನ್ಯಾಯಾಲಯದಲ್ಲಿ ನ್ಯಾಯಾಲಯದ ವಿಚಾರಣೆಗಾಗಿ ಕಾಯುತ್ತಿದ್ದಾರೆ ಎಂದು ವಕೀಲರು ತಿಳಿಸಿದ್ದಾರೆ.

ಸೂರಿಯಬನ್ನು ಸೋಮವಾರ ರಾತ್ರಿ ವರ್ಜೀನಿಯಾದ ರೋಸ್ಲಿನ್‌ನಲ್ಲಿರುವ ಅವರ ಮನೆಯ ಹೊರಗೆ ಅಮೆರಿಕದ ತನಿಖಾ ಸಂಸ್ಥೆಯ ಅಧಿಕಾರಿಗಳ ಬಂಧಿಸಿದ್ದರು. ಬಂಧನದ ನಂತರ ಅವರ ವೀಸಾವನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಸೂರಿ ಯಾವ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆನ್ನಲಾದರು ಎಂಬುದರ ವಿವರಗಳನ್ನು ಇಲಾಖೆ ಒದಗಿಸಿಲ್ಲ. ಪ್ಯಾಲೆಸ್ತೀನಿ ಹೋರಾಟ ಗುಂಪಾದ ಹಮಾಸ್ ಅನ್ನು ಅಮೆರಿಕ ಸರ್ಕಾರ ‘ಭಯೋತ್ಪಾದಕ ಸಂಘಟನೆ’ ಪಟ್ಟಿಯಲ್ಲಿ ಸೇರಿಸಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಉಡುಪಿ| ದಲಿತ ಮಹಿಳೆ ಮೇಲೆ ಹಲ್ಲೆ ಪ್ರಕರಣ: ಆರೋಪಿಗಳಿಗೆ ನ್ಯಾಯಾಂಗ ಬಂಧನ, ಇಬ್ಬರು ಪೊಲೀಸರು ಅಮಾನತು

ಉಡುಪಿ| ದಲಿತ ಮಹಿಳೆ ಮೇಲೆ ಹಲ್ಲೆ ಪ್ರಕರಣ: ಆರೋಪಿಗಳಿಗೆ ನ್ಯಾಯಾಂಗ ಬಂಧನ, ಇಬ್ಬರು ಪೊಲೀಸರು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್

ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಅಮೆರಿಕ-ಇರಾನ್ ನಡುವಿನ ಐತಿಹಾಸಿಕ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಹಾರ್ಮುಝ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.  ಮಾತುಕತೆ ವಿಫಲವಾದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಝ್...

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...