Homeಅಂತರಾಷ್ಟ್ರೀಯಟ್ರಂಪ್ ಆಡಳಿತದಿಂದ ವೀಸಾ ರದ್ದು: ಕೊಲಂಬಿಯಾ ವಿವಿ ಭಾರತೀಯ ವಿದ್ಯಾರ್ಥಿ ಸ್ವಯಂ ಗಡಿಪಾರು

ಟ್ರಂಪ್ ಆಡಳಿತದಿಂದ ವೀಸಾ ರದ್ದು: ಕೊಲಂಬಿಯಾ ವಿವಿ ಭಾರತೀಯ ವಿದ್ಯಾರ್ಥಿ ಸ್ವಯಂ ಗಡಿಪಾರು

- Advertisement -
- Advertisement -

‘ಹಿಂಸೆ ಮತ್ತು ಭಯೋತ್ಪಾದನೆಯನ್ನು ಪ್ರತಿಪಾದಿಸುತ್ತಿದ್ದಾರೆ’ ಮತ್ತು ಹಮಾಸ್ ಅನ್ನು ಬೆಂಬಲಿಸುತ್ತಿದ್ದಾರೆ ಎಂಬ ಆರೋಪದ ಮೇಲೆ ಡೊನಾಲ್ಡ್ ಟ್ರಂಪ್ ಆಡಳಿತವು ಇತ್ತೀಚೆಗೆ ವೀಸಾ ರದ್ದುಗೊಳಿಸಿದ ಕೊಲಂಬಿಯಾ ವಿಶ್ವವಿದ್ಯಾಲಯದ ಭಾರತೀಯ ಪಿಎಚ್‌ಡಿ ವಿದ್ಯಾರ್ಥಿಯೊಬ್ಬರು ಸ್ವಯಂ ಗಡೀಪಾರು ಮಾಡಿ ದೇಶ ತೊರೆದಿದ್ದಾರೆ.

ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ನಗರ ಯೋಜನೆಯಲ್ಲಿ ಪಿಹೆಚ್‌ಡಿ ವಿದ್ಯಾರ್ಥಿಯಾಗಿದ್ದ ಭಾರತೀಯ ಪ್ರಜೆ ರಂಜನಿ ಶ್ರೀನಿವಾಸನ್ ಅವರು ಎಫ್‌-1 ವಿದ್ಯಾರ್ಥಿ ವೀಸಾದಲ್ಲಿ ಅಮೆರಿಕ ಪ್ರವೇಶಿಸಿದ್ದರು ಎಂದು ಅಮೆರಿಕದ ಗೃಹ ಭದ್ರತಾ ಇಲಾಖೆ (ಡಿಹೆಚ್‌ಎಸ್‌) ಶುಕ್ರವಾರ (ಮಾ.14) ಹೇಳಿಕೆಯಲ್ಲಿ ತಿಳಿಸಿದೆ.

ರಂಜನಿ ಶ್ರೀನಿವಾಸನ್ ಅವರು ಗಾಝಾದ ಹಮಾಸ್ ಗುಂಪನ್ನು ಬೆಂಬಲಿಸುವ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಅಮೆರಿಕ ವಿದೇಶಾಂಗ ಇಲಾಖೆ ಮಾರ್ಚ್ 5ರಂದು ಅವರ ವೀಸಾವನ್ನು ರದ್ದುಗೊಳಿಸಿತ್ತು. ಮಾರ್ಚ್ 11 ರಂದು ರಂಜನಿ ಅವರು ಕಸ್ಟಮ್ಸ್ ಅಂಡ್ ಬಾರ್ಡರ್ ಪ್ರೊಟೆಕ್ಷನ್ (ಸಿಬಿಪಿ) ಹೋಮ್ ಆ್ಯಪ್ ಬಳಸಿ ಸ್ವಯಂ-ಗಡೀಪಾರು ಮಾಡಿಕೊಂಡಿರುವುದಾಗಿ ಇಲಾಖೆ ತಿಳಿಸಿದೆ.

‘ಹಿಂಸೆ ಮತ್ತು ಭಯೋತ್ಪಾದನೆ’ಯನ್ನು ಪ್ರತಿಪಾದಿಸಿದ್ದಕ್ಕಾಗಿ ವಿದ್ಯಾರ್ಥಿ ವೀಸಾ ರದ್ದುಗೊಳಿಸಲ್ಪಟ್ಟ ಕೊಲಂಬಿಯಾ ವಿವಿ ವಿದ್ಯಾರ್ಥಿಗಳಲ್ಲಿ ಒಬ್ಬರು ಸಿಬಿಪಿ ಹೋಮ್ ಆ್ಯಪ್ ಬಳಸಿಕೊಂಡು ಸ್ವಯಂ-ಗಡಿಪಾರು ಮಾಡಿಕೊಂಡಿದ್ದಾರೆ ಎಂದು ಹೋಮ್‌ಲ್ಯಾಂಡ್ ಸೆಕ್ಯುರಿಟಿ ಕಾರ್ಯದರ್ಶಿ ಕ್ರಿಸ್ಟಿ ನೋಯೆಮ್ ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ರಂಜನಿ ಅವರು ದೇಶ ತೊರೆದ ವಿಡಿಯೋ ಹಂಚಿಕೊಂಡಿರುವ ಅವರು,”ಅಮೆರಿಕದಲ್ಲಿ ವಾಸಿಸಲು ಮತ್ತು ಅಧ್ಯಯನ ಮಾಡಲು ವೀಸಾ ನೀಡಲಾಗುತ್ತಿರುವುದು ಒಂದು ಸೌಭಾಗ್ಯ. ನೀವು ಹಿಂಸೆ ಮತ್ತು ಭಯೋತ್ಪಾದನೆಯನ್ನು ಪ್ರತಿಪಾದಿಸುವಾಗ ಆ ಸವಲತ್ತನ್ನು ರದ್ದುಗೊಳಿಸಬೇಕು ಮತ್ತು ನೀವು ಈ ದೇಶದಲ್ಲಿ ಇರಬಾರದು. ಕೊಲಂಬಿಯಾ ವಿಶ್ವವಿದ್ಯಾಲಯದ ಭಯೋತ್ಪಾದಕ ಬೆಂಬಲಿಗರಲ್ಲಿ ಒಬ್ಬರು ಸ್ವಯಂ ಗಡೀಪಾರು ಮಾಡಲು ಸಿಬಿಪಿ ಹೋಮ್ ಅಪ್ಲಿಕೇಶನ್ ಅನ್ನು ಬಳಸುವುದನ್ನು ನೋಡಿ ನನಗೆ ಸಂತೋಷವಾಗಿದೆ” ಎಂದು ಬರೆದುಕೊಂಡಿದ್ದಾರೆ.

ಎಫ್‌-1 ವೀಸಾದ ಅವಧಿ ಮೀರಿ ತಂಗಿದ್ದ ಪ್ಯಾಲೇಸ್ತೀನ್‌ ವಿದ್ಯಾರ್ಥಿಯೊಬ್ಬರನ್ನು ಬಂಧಿಸಲಾಗಿದೆ” ಎಂದು ಡಿಹೆಚ್‌ಎಸ್‌ ಹೇಳಿಕೆ ತಿಳಿಸಿದೆ.

ಜನವರಿ 26, 2022ರಂದು ಹಾಜರಾತಿ ಕೊರತೆಯಿಂದಾಗಿ ವಿದ್ಯಾರ್ಥಿ ವೀಸಾ ಅವಧಿ ಮುಗಿದಿದೆ. ಆ ನಂತರವೂ ದೇಶದಲ್ಲಿ ಉಳಿದಿದ್ದಕ್ಕಾಗಿ, ವೆಸ್ಟ್ ಬ್ಯಾಂಕ್‌ನ ಪ್ಯಾಲೆಸ್ತೀನ್‌ ಮೂಲದ ಲೆಕಾ ಕೊರ್ದಿಯಾ ಎಂಬ ಕೊಲಂಬಿಯಾ ವಿವಿ ವಿದ್ಯಾರ್ಥಿಯನ್ನು ಐಸಿಇ ಹೆಚ್‌ಎಸ್‌ಐ ನ್ಯೂಯಾರ್ಕ್ ಅಧಿಕಾರಿಗಳು ಬಂಧಿಸಿದ್ದಾರೆ.

ಏಪ್ರಿಲ್ 2024 ರಲ್ಲಿ, ನ್ಯೂಯಾರ್ಕ್ ನಗರದ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಹಮಾಸ್ ಪರ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದಕ್ಕಾಗಿ ಬಂಧಿಸಲ್ಪಟ್ಟವರಲ್ಲಿ ಕೊರ್ದಿಯಾ ಕೂಡ ಒಬ್ಬರು.

ಗಾಝಾದಲ್ಲಿ ಇಸ್ರೇಲ್ ನಡೆಸಿರುವ ಮತ್ತು ಪ್ರಸ್ತುತ ನಡೆಸುತ್ತಿರುವ ಆಕ್ರಮಣದ ವಿರುದ್ಧದ ಕ್ಯಾಂಪಸ್ ಪ್ರತಿಭಟನೆಗಳಲ್ಲಿ ಭಾಗವಹಿಸುವುದಕ್ಕೆ ಅಮೆರಿಕದ ಟ್ರಂಪ್ ಆಡಳಿತ ಅವಕಾಶ ನೀಡುತ್ತಿಲ್ಲ. ಈ ಪ್ರತಿಭಟನೆಗಳನ್ನು ಹಮಾಸ್‌ಗೆ ಬೆಂಬಲ ನೀಡುವುದಕ್ಕೆ ಸಮ ಎಂದು ಟ್ರಂಪ್ ಆಡಳಿತ ಪರಿಗಣಿಸಿದೆ.

ಭಾರತೀಯರು ಸೇರಿದಂತೆ ಗಣನೀಯ ಸಂಖ್ಯೆಯ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳನ್ನು ಹೊಂದಿರುವ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಹಲವಾರು ಬಾರಿ ಗಾಝಾ ಆಕ್ರಮಣದ ವಿರುದ್ದ ಪ್ರತಿಭಟನೆಗಳು ನಡೆದಿವೆ. ಆದರೆ, ಟ್ರಂಪ್ ಆಡಳಿತ ಬಂದ ಬಳಿಕ ಕ್ಯಾಂಪಸ್ ಪ್ರತಿಭಟನೆಗಳ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಕಳೆದ ಗುರುವಾರ (ಮಾ.13) ತಡರಾತ್ರಿ ಹೊರಡಿಸಿದ ಆದೇಶದಲ್ಲಿ ಟ್ರಂಪ್ ಆಡಳಿತವು ಕೊಲಂಬಿಯಾ ವಿವಿಯ ಮಧ್ಯಪ್ರಾಚ್ಯ, ದಕ್ಷಿಣ ಏಷ್ಯಾ ಮತ್ತು ಆಫ್ರಿಕನ್ ಅಧ್ಯಯನ ವಿಭಾಗವನ್ನು (MESAAS) ‘ಅಕಾಡೆಮಿಕ್‌ ರಿಸೀವರ್‌ಶಿಪ್‌’ಗೆ ಒಳಪಡಿಸಬೇಕೆಂದು ಒತ್ತಾಯಿಸಿದೆ. ಅಂದರೆ, ಈ ವಿಭಾಗಗಳನ್ನು ವಿವಿಯ ಹೊರತಾಗಿ ಹೊರಗಿನ ಪ್ರಾಧಿಕಾರವು ನಿಯಂತ್ರಣವನ್ನು ತೆಗೆದುಕೊಳ್ಳಲಿದೆ. ಆಗಾಗ, ವಿಭಾಗಗಳನ್ನು ದುರುಪಯೋಗ ಮಾಡಿಕೊಳ್ಳುವುತ್ತಿರುವುದಕ್ಕೆ ಶಿಕ್ಷೆಯಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಗಳು ಹೇಳಿವೆ.

ಮಾರ್ಚ್ 20ರೊಳಗೆ ಅಕಾಡೆಮಿಕ್‌ ರಿಸೀವರ್‌ಶಿಪ್‌ ವ್ಯವಸ್ಥೆ ರಚಿಸುವ ಯೋಜನೆ ರೂಪಿಸುವಂತೆ ವಿವಿಗೆ ಸೂಚಿಸಲಾಗಿದೆ. ಅನುಸರಿಸಲು ವಿಫಲವಾದರೆ ವಿವಿ ಮತ್ತು ಸರ್ಕಾರದ ನಡುವಿನ ಆರ್ಥಿಕ ಸಂಬಂಧದ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ ಎಂದು ಪತ್ರ ಆದೇಶ ಎಚ್ಚರಿಸಿದೆ.

ಕೊಲಂಬಿಯಾ ವಿವಿ 2023 ಮತ್ತು 2024ರಲ್ಲಿ ಗಾಝಾದಲ್ಲಿ ಇಸ್ರೇಲ್‌ ನಡೆಸುತ್ತಿದ್ದ ಆಕ್ರಮಣದ ವಿರುದ್ದ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆಗಳ ಕೇಂದ್ರ ಬಿಂದುವಾಗಿತ್ತು. ಇದರ ವಿರುದ್ದ ಕ್ಯಾಂಪಸ್‌ಗಳಾದ್ಯಂತ ನಡೆದ ದಮನ ಕಾರ್ಯಾಚರಣೆ ನಡೆಸಿದ್ದ ಪೊಲೀಸರು 3,000ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ ಎಂದು ಅಂದಾಜಿಸಲಾಗಿದೆ.

ಯಹೂದಿ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಕಿರುಕುಳ ತಡೆಯುವಲ್ಲಿ ವಿವಿ ವಿಫಲವಾಗಿದೆ ಎಂದು ಆರೋಪಿಸಿ, ವಿವಿಗೆ ಸರ್ಕಾರದ ನೀಡಲು ಉದ್ದೇಶಿಸಿದ್ದ ಸುಮಾರು 400 ಮಿಲಿಯನ್ ಡಾಲರ್ ಆರ್ಥಿಕ ಒಪ್ಪಂದವನ್ನು ರದ್ದುಗೊಳಿಸಿರುವುದಾಗಿ ಕಳೆದವಾರ ಟ್ರಂಪ್ ಆಡಳಿತ ಘೋಷಿಸಿತ್ತು.

ಜನವರಿ 20ರಂದು ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕಾರ್ಯಕಾರಿ ಆದೇಶಕ್ಕೆ ಸಹಿ ಹಾಕಿರುವ ಡೊನಾಲ್ಡ್ ಟ್ರಂಪ್, “ಅಮೆರಿಕದ ನಾಗರಿಕರು, ಸಂಸ್ಕೃತಿ, ಸರ್ಕಾರ, ಸಂಸ್ಥೆಗಳು ಮತ್ತು ಸ್ಥಾಪಕ ತತ್ವಗಳಿಗೆ’ ಪ್ರತಿಕೂಲ ವರ್ತನೆಗಳನ್ನು ಹೊಂದಿರುವ ಅಥವಾ ನಮ್ಮ ರಾಷ್ಟ್ರೀಯ ಭದ್ರತೆಗೆ ಇರುವ ಬೆದರಿಕೆಗಳನ್ನು ಬೆಂಬಲಿಸುವ ವಿದೇಶಿಯರನ್ನು ತಕ್ಷಣ ದೇಶದಿಂದ ಹೊರಹಾಕುವಂತೆ ಸೂಚಿಸಿದ್ದಾರೆ.

ಕೊಲಂಬಿಯಾ ವಿಶ್ವವಿದ್ಯಾಲಯದ ವೆಬ್‌ಸೈಟ್‌ನ ಪ್ರಕಾರ, ರಂಜನಿ ಶ್ರೀನಿವಾಸನ್ ಅಹಮದಾಬಾದ್‌ನ ಸಿಇಪಿಟಿ ವಿಶ್ವವಿದ್ಯಾಲಯದಿಂದ ಡಿಸೈನಿಂಗ್‌ನಲ್ಲಿ ಪದವಿ ಪಡೆದಿದ್ದಾರೆ ಮತ್ತು ಹಾರ್ವರ್ಡ್ ವಿಶ್ವವಿದ್ಯಾಲಯದ ಗ್ರಾಜುಯೇಟ್ ಸ್ಕೂಲ್ ಆಫ್ ಡಿಸೈನ್‌ನಲ್ಲಿ ಕ್ರಿಟಿಕಲ್ ಕನ್ಸರ್ವೇಶನ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆಯಲು ಫುಲ್‌ಬ್ರೈಟ್ ನೆಹರು ಮತ್ತು ಇನ್‌ಲ್ಯಾಕ್ಸ್ ವಿದ್ಯಾರ್ಥಿವೇತನವನ್ನು ಪಡೆದಿದ್ದಾರೆ.

ಪ್ಯಾಲೆಸ್ಟೀನಿಯನ್ನರನ್ನು  ಪೂರ್ವ ಆಫ್ರಿಕಾಕ್ಕೆ ಸ್ಥಳಾಂತರಿಸಲು ಬಯಸುತ್ತಿರುವ ಅಮೆರಿಕ, ಇಸ್ರೇಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ’: ಪ್ರಿಯಾಂಕ್ ಖರ್ಗೆ

ಬೆಂಗಳೂರು: ‘ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ’ ಎಂದು ಆರ್.ಎಸ್.ಎಸ್ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಮತ್ತೆ ಗುಡುಗಿದ್ದಾರೆ.  ರಾಜ್ಯದ ಗಮನ‌ ಸೆಳೆದಿದ್ದ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ...

“ಮಾಸ್ಕ್ ಧರಿಸಿದರೂ ಪ್ರಯೋಜನವಿಲ್ಲ”: ದೆಹಲಿ ವಾಯುಮಾಲಿನ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್

ದೆಹಲಿಯ ವಾಯುಮಾಲಿನ್ಯ 'ಗಂಭೀರ ಮಟ್ಟ' ತಲುಪಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಮಾಸ್ಕ್‌ ಧರಿಸಿದರೂ ಯಾವುದೇ ಪ್ರಯೋಜನವಿಲ್ಲದಂತಾಗಿದೆ. ವಕೀಲರು ವರ್ಚುವಲ್ ಮೂಲಕ ನ್ಯಾಯಾಲಯಕ್ಕೆ ಹಾಜರಾದರೆ ಸಾಕು ಎಂದು ಹೇಳಿದೆ. ವಿವಿಧ ಪ್ರಕರಣಗಳಲ್ಲಿ...

ಛತ್ತೀಸ್‌ಗಢ| ಇಬ್ಬರು ಉನ್ನತ ಕಮಾಂಡರ್‌ಗಳು ಸೇರಿದಂತೆ ಆರು ಜನ ಮಾವೋವಾದಿಗಳ ಎನ್‌ಕೌಂಟರ್‌

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನವೆಂಬರ್ 11 ರಂದು ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ಆರು ಮಾವೋವಾದಿಗಳಲ್ಲಿ ಮಾವೋವಾದಿ ನಾಯಕಿ, ಹಿರಿಯ ಕಾರ್ಯಕರ್ತ ಪಾಪಾ ರಾವ್ ಅವರ ಪತ್ನಿ ಊರ್ಮಿಳಾ ಮತ್ತು ಬುಚಣ್ಣ...

ಗ್ರೆನೇಡ್ ದಾಳಿಗೆ ಸಂಚು ರೂಪಿಸಿದ್ದ, ಪಾಕ್ ಐಎಸ್ಐ ಬೆಂಬಲಿತ ಗುಂಪು: ವಿದೇಶಿ ಮೂಲದ 10 ಹ್ಯಾಂಡ್ಲರ್‌ಗಳ ಬಂಧನ

ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಮಹತ್ವದ ಪ್ರಗತಿ ಸಾಧಿಸಿರುವ ಲುಧಿಯಾನ ಕಮಿಷನರೇಟ್ ಪೊಲೀಸರು, ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಬೆಂಬಲಿತ ಗ್ರೆನೇಡ್ ದಾಳಿ ಘಟಕದ 10 ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಅವರಿಂದ ಸ್ಪೋಟಕಗಳನ್ನು ವಶಕ್ಕೆ ಪಡೆದಿದ್ದಾರೆ.  ನವೆಂಬರ್...

ಗಾಜಾದಲ್ಲಿ ಮುಂದುವರೆದ ಪ್ಯಾಲೆಸ್ತೀನಿಯನ್ ಮಕ್ಕಳ ಕಾಣೆ ಪ್ರಕರಣ: ಮಕ್ಕಳ ಹಕ್ಕುಗಳ ಗುಂಪು

ಬುಧವಾರ ಪ್ಯಾಲೆಸ್ತೀನಿಯನ್ ಹಕ್ಕುಗಳ ಗುಂಪಿನ ವರದಿಯ ಪ್ರಕಾರ, ಇತ್ತೀಚಿನ ತಿಂಗಳುಗಳಲ್ಲಿ ಗಾಜಾದಿಂದ ಕನಿಷ್ಠ ಆರು ಮಕ್ಕಳು ಕಣ್ಮರೆಯಾಗಿದ್ದಾರೆ ಎಂದು 'ಮಕ್ತೂಬ್‌ ಮೀಡಿಯಾ' ವರದಿ ಮಾಡಿದೆ. ಕಾಣೆಯಾದ ಮಕ್ಕಳ ಕುಟುಂಬಗಳು ಈ ಪ್ರದೇಶದಲ್ಲಿನ ತನ್ನ ಮಿಲಿಟರಿ...

ರೂ. 15 ಲಕ್ಷ ಲಂಚ ಪಡೆದ ಪ್ರಕರಣ : ನ್ಯಾಯಾಧೀಶನ ಮೇಲೆ ಕೇಸ್, ಕೋರ್ಟ್ ಗುಮಾಸ್ತ ಅರೆಸ್ಟ್

ವಾಣಿಜ್ಯ ಮೊಕದ್ದಮೆಯೊಂದರಲ್ಲಿ ಅನುಕೂಲಕರ ಆದೇಶವನ್ನು ಪಡೆಯಲು 15 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಸ್ವೀಕರಿಸಿದ ಆರೋಪದ ಮೇಲೆ ಮುಂಬೈ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮಜಗಾಂವ್ ಸಿವಿಲ್ ಮತ್ತು ಸೆಷನ್ಸ್...

ಅಲಿಘರ್| ಶಾಲೆಯಲ್ಲಿ ‘ವಂದೇ ಮಾತರಂ’ ಹಾಡುವುದಕ್ಕೆ ಆಕ್ಷೇಪಿಸಿದ ಶಿಕ್ಷಕನ ಅಮಾನತು

ಉತ್ತರ ಪ್ರದೇಶದ ಶಾಹಪುರ್ ಕುತುಬ್‌ನ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ 'ವಂದೇ ಮಾತರಂ' ಹಾಡುವುದನ್ನು ಆಕ್ಷೇಪಿಸಿದ ಆರೋಪದ ಮೇಲೆ ಸರ್ಕಾರಿ ಶಾಲಾ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ರಾಷ್ಟ್ರಗೀತೆಯ ನಂತರ ವಂದೇಮಾತರಂ...

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್ಎಸ್ ಪಥಸಂಚಲನಕ್ಕೆ ಕರ್ನಾಟಕ ಹೈಕೋರ್ಟ್ ನ ಕಲಬುರಗಿ ಪೀಠ ಷರತ್ತುಬದ್ಧ ಅನುಮತಿ ನೀಡಿದೆ. ಇದರಿಂದ ತೀವ್ರ ಪ್ರತಿಷ್ಠೆಯ ವಿಷಯವಾಗಿದ್ದ ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನಕ್ಕೆ ದಿನಾಂಕ ನಿಗದಿಯಾಗಿದೆ. ನವೆಂಬರ್ 16ರ‌ ಭಾನುವಾರ...

ಯಡಿಯೂರಪ್ಪ ವಿರುದ್ದದ ಪೋಕ್ಸೋ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಈ ಮೂಲಕ ನ್ಯಾಯಮೂರ್ತಿ ಎಂ.ಐ ಅರುಣ್ ಅವರು, ವಿಚಾರಣಾ ನ್ಯಾಯಾಲಯ ಸಂಜ್ಞೇ (cognisance)ಪರಿಗಣಿಸಿ ಯಡಿಯೂರಪ್ಪ ಅವರಿಗೆ ಸಮನ್ಸ್ ಜಾರಿ...

ಗುಜರಾತ್| ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ; ರೂ.18 ಲಕ್ಷ ದಂಡ

ಗುಜರಾತ್‌ನ ಅಮ್ರೇಲಿಯಲ್ಲಿರುವ ಸೆಷನ್ಸ್ ನ್ಯಾಯಾಲಯವು, ಗುಜರಾತ್ ಪ್ರಾಣಿ ಸಂರಕ್ಷಣಾ ಕಾಯ್ದೆಯಡಿ ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದಲ್ಲಿ ಗೋ ಕುಟುಂಬಕ್ಕೆ ಸೇರಿದ ಪ್ರಾಣಿಗಳ ಹತ್ಯೆಯನ್ನು ಕಾನೂನು...