Homeಅಂತರಾಷ್ಟ್ರೀಯಅಮೆರಿಕ| ಭಾರತೀಯ ವಿದ್ಯಾರ್ಥಿಗೆ ಕೈಕೋಳ ಹಾಕಿ, ನೆಲಕ್ಕೆ ಕೆಡವಿ ದೌರ್ಜನ್ಯ; ರಾಯಭಾರ ಕಚೇರಿ ಪ್ರತಿಕ್ರಿಯೆ

ಅಮೆರಿಕ| ಭಾರತೀಯ ವಿದ್ಯಾರ್ಥಿಗೆ ಕೈಕೋಳ ಹಾಕಿ, ನೆಲಕ್ಕೆ ಕೆಡವಿ ದೌರ್ಜನ್ಯ; ರಾಯಭಾರ ಕಚೇರಿ ಪ್ರತಿಕ್ರಿಯೆ

- Advertisement -
- Advertisement -

ನ್ಯೂಜೆರ್ಸಿಯ ನ್ಯೂವಾರ್ಕ್ ಲಿಬರ್ಟಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿ ಭಾರತೀಯ ವಿದ್ಯಾರ್ಥಿಯೊಬ್ಬರಿಗೆ ಕೈಕೋಳ ಹಾಕಿ, ನೆಲಕ್ಕೆ ಕೆಡವುವ ಮೂಲಕ ಬಂಧಿಸಿದ ಆತಂಕಕಾರಿ ವಿಡಿಯೋ ವೈರಲ್ ಆಗಿದ್ದು, ನ್ಯೂಯಾರ್ಕ್‌ನಲ್ಲಿರುವ ಭಾರತೀಯ ದೂತಾವಾಸದಿಂ ತ್ವರಿತ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಜೂನ್ 7ರಂದು ನಡೆದ ಈ ಘಟನೆಯ ವಿಡಿಯೋವನ್ನು ಭಾರತೀಯ-ಅಮೆರಿಕನ್ ಉದ್ಯಮಿ ಕುನಾಲ್ ಜೈನ್ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಬಳಿಕ ಎಲ್ಲೆಡೆ ವೈರಲ್ ಆಗಿದೆ.

ಆ ರಾತ್ರಿ ವಿದ್ಯಾರ್ಥಿಗೆ ವಿಮಾನ ಹತ್ತಲು ಸಮಯ ನಿಗದಿಯಾಗಿತ್ತು. ಈ ವೇಳೆ ಭದ್ರತಾ ಸಿಬ್ಬಂದಿ ಆತನನ್ನು ವಶಕ್ಕೆ ಪಡೆದು, ಬಳಿಕ ಬಿಟ್ಟು ಕಳಿಸಿದ್ದಾರೆ ಎಂದು ಜೈನ್ ಹೇಳಿದ್ದಾರೆ.

ಕುನಾಲ್ ಜೈನ್ ಹಂಚಿಕೊಂಡಿರುವ ವಿಡಿಯೋದಲ್ಲಿ ವಿದ್ಯಾರ್ಥಿ ನೆಲದ ಮೇಲೆ ಬಿದ್ದು ಅಳುತ್ತಿರುವು ಮತ್ತು ಅಧಿಕಾರಿಗಳು ಆತನ ಹತ್ತಿರದಲ್ಲಿ ನಿಂತಿರುವುದನ್ನು ನೋಡಬಹುದು. ಘಟನೆಯನ್ನು ನೇರವಾಗಿ ಕಂಡ ಜೈನ್, ವಿದ್ಯಾರ್ಥಿಯ ಪರಿಸ್ಥಿತಿಯ ಬಗ್ಗೆ ದುಃಖ ವ್ಯಕ್ತಪಡಿಸುತ್ತಾ, “ನಿನ್ನೆ ರಾತ್ರಿ ನ್ಯೂವಾರ್ಕ್ ವಿಮಾನ ನಿಲ್ದಾಣದಲ್ಲಿ ಒಬ್ಬ ಭಾರತೀಯ ವಿದ್ಯಾರ್ಥಿಯನ್ನು ಕೈಕೋಳ ಹಾಕಿ ಅಪರಾಧಿಯಂತೆ ನಡೆಸಿಕೊಳ್ಳುವುದನ್ನು ನಾನು ನೋಡಿದೆ” ಎಂದು ಬರೆದುಕೊಂಡಿದ್ದಾರೆ.

“ಅವನು (ವಿದ್ಯಾರ್ಥಿ) ಕನಸುಗಳನ್ನು ಬೆನ್ನಟ್ಟುತ್ತಾ ಬಂದವನು, ಹಾನಿ ಮಾಡಲು ಅಲ್ಲ. ಒಬ್ಬ ಅನಿವಾಸಿ ಭಾರತೀಯನಾಗಿ ನಾನು ಅಸಹಾಯಕನಾಗಿದ್ದೆ, ಎದೆ ಒಡೆದಂತೆ ಆಯಿತು. ಇದು ಮಾನವ ದುರಂತ” ಎಂದು ಕುನಾಲ್ ಜೈನ್ ಹೇಳಿದ್ದಾರೆ.

ವಿದ್ಯಾರ್ಥಿಯ ಕುಟುಂಬಕ್ಕೆ ನಡೆದ ಘಟನೆಗಳ ಬಗ್ಗೆ ಮಾಹಿತಿಯಿಲ್ಲ ಎಂದು ಜೈನ್ ಹೇಳಿದ್ದಾರೆ. “ಈ ಬಡ ಮಗುವಿನ ಪೋಷಕರಿಗೆ ಅವನಿಗೆ ಏನಾಗುತ್ತಿದೆ ಎಂದು ತಿಳಿದಿರುವುದಿಲ್ಲ” ಎಂದು ಜೂನ್ 9ರಂದು ಬೆಳಿಗ್ಗೆ 4:43ಕ್ಕೆ ಹಂಚಿಕೊಂಡ ಪೋಸ್ಟ್‌ನಲ್ಲಿ ಜೈನ್ ಬರೆದಿದ್ದಾರೆ.

ವಾಷಿಂಗ್ಟನ್ ಡಿ.ಸಿಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಮತ್ತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರನ್ನು ಟ್ಯಾಗ್ ಮಾಡಿ ಈ ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ಜೈನ್ ಒತ್ತಾಯಿಸಿದ್ದರು.

ಪೋಸ್ಟ್‌ಗೆ ಪ್ರತಿಕ್ರಿಯಿಸಿದ ನ್ಯೂಯಾರ್ಕ್‌ನಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್, “ನ್ಯೂವಾರ್ಕ್ ಲಿಬರ್ಟಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರತೀಯ ಪ್ರಜೆಯೊಬ್ಬರು ಸಮಸ್ಯೆ ಎದುರಿಸಿರುವ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಲಾಗಿದೆ. ಈ ಸಂಬಂಧ ನಾವು ಸ್ಥಳೀಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ” ಎಂದು ಹೇಳಿದೆ.

ಸದಾ ಭಾರತೀಯ ಪ್ರಜೆಗಳ ನೆರವಿಗೆ ಬದ್ಧ ಎಂದು ಕಾನ್ಸುಲೇಟ್ ಭರವಸೆ ನೀಡಿದೆ.

ವಲಸಿಗರ ವಿರುದ್ಧ ಶೋಧ ಕಾರ್ಯಾಚರಣೆಗೆ ವಿರೋಧ: ಲಾಸ್‌ ಏಂಜಲೀಸ್‌ನಲ್ಲಿ ತೀವ್ರಗೊಂಡ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...