Homeಅಂತರಾಷ್ಟ್ರೀಯಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿ ಹತ್ಯೆ:  ಇಂದು ಶವ ಪರೀಕ್ಷೆ

ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿ ಹತ್ಯೆ:  ಇಂದು ಶವ ಪರೀಕ್ಷೆ

- Advertisement -
- Advertisement -

ಟೊರೊಂಟೊ: ಡಿಸೆಂಬರ್ 6ರ ಮುಂಜಾನೆ ಕೆನಡಾದ ಅಲ್ಬರ್ಟಾ ಪ್ರಾಂತ್ಯದ ರಾಜಧಾನಿ ಎಡ್ಮಂಟನ್‌ನಲ್ಲಿ ಹರಿಯಾಣದ ವಿದ್ಯಾರ್ಥಿ ಹರ್ಷನ್‌ದೀಪ್ ಸಿಂಗ್ ಅಂತಾಲ್ ನನ್ನು ಶುಕ್ರವಾರದಂದು ಹತ್ಯೆ ಮಾಡಲಾಗಿದೆ. ವಿದ್ಯಾರ್ಥಿಯು ನಗರದ ಅಪಾರ್ಟ್‌ಮೆಂಟ್ ಸಮುಚ್ಚಯದಲ್ಲಿ ಭದ್ರತಾ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಈ ಹತ್ಯೆ ನಡೆದಿದೆ. ಇದಕ್ಕೆ ಸಂಬಂಧಿಸಿ ಎಡ್ಮಂಟನ್ ಪೋಲಿಸ್ ಸರ್ವಿಸ್ (ಇಪಿಎಸ್)  ಇಬ್ಬರನ್ನು ಬಂಧಿಸಿದೆ.

ತನ್ನ ಪ್ರಜೆಯ ಆಘಾತಕಾರಿ ಹತ್ಯೆಗೆ ಭಾರತ ಸಂತಾಪ ವ್ಯಕ್ತಪಡಿಸಿದೆ.

ನಾವು ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದೇವೆ ಮತ್ತು ಸಂತ್ರಸ್ತ ಕುಟುಂಬಕ್ಕೆ ಅಗತ್ಯವಿರುವ ಸಹಾಯವನ್ನು ಒದಗಿಸುತ್ತೇವೆ ಎಂದು ಭಾನುವಾರದ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ, ವ್ಯಾಂಕೋವರ್‌ನಲ್ಲಿರುವ ಭಾರತದ ದೂತಾವಾಸವು ಹೇಳಿದೆ.

ಶನಿವಾರ ಕೆನಡಾ ಪೊಲೀಸರು (ಇಪಿಎಸ್) ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಮತ್ತು ಅವರನ್ನು ಇವಾನ್ ರೈನ್ (30), ಮತ್ತು ಜುಡಿತ್ ಸಾಲ್ಟಿಯಾಕ್ಸ್(30) ಎಂದು ಗುರುತಿಸಲಾಗಿದೆ.

ಶುಕ್ರವಾರ ಮಧ್ಯರಾತ್ರಿ 12:30ಕ್ಕೆ (ಸ್ಥಳೀಯ ಕಾಲಮಾನ) ಡೌನ್‌ಟೌನ್ ಬ್ರಾಂಚ್ ನ ಗಸ್ತು ಅಧಿಕಾರಿಗಳಿಗೆ ಅಪಾರ್ಟ್‌ಮೆಂಟ್ ಕಟ್ಟಡದೊಳಗೆ ಗುಂಡಿನ ಸದ್ದು ಕೇಳಿ ಅಲ್ಲಿಗೆ ಆಗಮಿಸಿದರು. ಅಲ್ಲಿ 20 ವರ್ಷದ  ಭದ್ರತಾ ಸಿಬ್ಬಂದಿ ಹರ್ಷನದೀಪ್ ಸಿಂಗ್‌ ಹತ್ಯೆಯಾಗಿರುವುದನ್ನು ಪತ್ತೆ ಮಾಡಿದರು. ತಕ್ಷಣ ಚಿಕಿತ್ಸೆ ನೀಡಿ, ಆಸ್ಪತ್ರೆಗೆ ಸಾಗಿಸಿದರಾದರೂ ಸಿಂಗ್ ದಾರಿ ಮಧ್ಯೆ ಸಾವನ್ನಪ್ಪಿದನು ಎಂದು ಇಪಿಎಸ್‌ನ ಪ್ರಕಟಣೆ ತಿಳಿಸಿದೆ.

ಸಿಂಗ್ ಸಾವಿನಲ್ಲಿ ಬೇರೆ ಯಾರೋ ಭಾಗಿಯಾಗಿದ್ದಾರೆಂದು ತನಿಖಾಧಿಕಾರಿಗಳು ನಂಬುವುದಿಲ್ಲ ಮತ್ತು ಬಂಧಿತರಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಂದು ( ಸೋಮವಾರ) ಶವ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಅದು ಹೇಳಿದೆ.

ಇಪಿಎಸ್ ನ ನರಹತ್ಯೆಗೆ ಸಂಬಂಧಿಸಿ ಸಿಬ್ಬಂದಿ ಸಾರ್ಜೆಂಟ್ ರಾಬ್ ಬಿಲಾವೆ ಅವರು, “ಸಾಮಾನ್ಯವಾಗಿ” ಮರಣವು ಕೊಲೆ ಎಂದು ದೃಢೀಕರಿಸದ ಹೊರತು ಸತ್ತವರ ಹೆಸರನ್ನು ಬಿಡುಗಡೆ ಮಾಡುವುದಿಲ್ಲ. ಆದರೆ ಈ ನಿದರ್ಶನದಲ್ಲಿ ತನಿಖಾ ಉದ್ದೇಶಕ್ಕಾಗಿ ಮತ್ತು ಸಾರ್ವಜನಿಕ ಸುರಕ್ಷತೆಯನ್ನು ನಿವಾರಿಸುವ ಪ್ರಯತ್ನದ ಭಾಗವಾಗಿ ಸಿಂಗ್ ಅವರ ಹೆಸರನ್ನು ಬಹಿರಂಗಪಡಿಸಲಾಗಿದೆ ಎಂದಿದ್ದಾರೆ.

ಅಂತಾಲ್ ಅವರು ಒಂದೂವರೆ ವರ್ಷಗಳ ಹಿಂದೆ ಅಂತರರಾಷ್ಟ್ರೀಯ ವಿದ್ಯಾರ್ಥಿಯಾಗಿ ಕೆನಡಾಕ್ಕೆ ಬಂದರು. ಆತನು ದಯೆಯುಳ್ಳ ಮತ್ತು ಕಠಿಣ ಪರಿಶ್ರಮದ ಯುವಕನಾಗಿದ್ದನು. ಈ ಅವಿವೇಕದ ಹತ್ಯೆಯು ಅವನ ಕುಟುಂಬ, ಸ್ನೇಹಿತರು ಮತ್ತು ಪ್ರೀತಿಪಾತ್ರರನ್ನು ಛಿದ್ರಗೊಳಿಸಿದೆ ಮತ್ತು ಈ ಅಘಾತಕಾರಿ ನಷ್ಟವನ್ನು ನಿಭಾಯಿಸಲು ಸಂತ್ರಸ್ತನ ಕುಟುಂಬ ಹೆಣಗಾಡುತ್ತಿದೆ ಎಂದು ಸಂತ್ರಸ್ತನ ಕುಟುಂಬಕ್ಕಾಗಿ ಆನ್‌ಲೈನ್ ಹಣ ಸಂಗ್ರಹಿಸುತ್ತಿರುವ ನಿಧಿಸಂಗ್ರಹಣೆಗಾರನೊಬ್ಬ ಹೇಳಿದ್ದಾನೆ.

ಸಿಂಗ್ ತನ್ನ ಹೆತ್ತವರನ್ನು ಮತ್ತು ಸಹೋದರಿಯನ್ನು ಅಗಲಿದ್ದಾರೆ.  ಕುಟುಂಬವು ಹರಿಯಾಣದ ಅಂಬಾಲಾದ ಪಿಂಡ್ ಮಾತೆಹ್ರಿ ಜತ್ತನ್‌ನಲ್ಲಿ ನೆಲೆಸಿದೆ ಎಂದು ವರದಿ ಮಾಡಲಾಗಿದೆ.

ಈ ಹತ್ಯೆಯಿಂದ ಸಮುದಾಯವು ಹೇಗೆ ಬೆಚ್ಚಿಬಿದ್ದಿದೆ ಎಂಬುದಕ್ಕೆ ನಿಧಿಸಂಗ್ರಹಕಾರನು ಈಗಾಗಲೇ ಭಾನುವಾರ ಸಂಜೆಯ ವೇಳೆಗೆ ಕೆನಡಾದ ಡಾಲರ್ 120,000 (ಸುಮಾರು ₹ 75 ಲಕ್ಷ) ಸಂಗ್ರಹಿಸಿದ್ದೆ ಸಾಕ್ಷಿಯಾಗಿದೆ.

ಬಂಧಿತರಲ್ಲಿ ಒಬ್ಬಾತ ಅಪರಾಧದ ಇತಿಹಾಸವನ್ನು ಹೊಂದಿದ್ದಾನೆ ಎಂದು ಔಟ್ಲೆಟ್ ವೆಸ್ಟರ್ನ್ ಸ್ಟ್ಯಾಂಡರ್ಡ್ ಉಲ್ಲೇಖಿಸಿದೆ. ಪಾತಾಕಿ ರೇನ್ ನ ಕ್ರಿಮಿನಲ್ ಇತಿಹಾಸ ನೋಡಿದರೆ ಆತನ ಬಿಡುಗಡೆ ಕುರಿತು ಪ್ರಶ್ನೆ ಉದ್ಭವಿಸುತ್ತದೆ ಮತ್ತು ಕೆನಡಾದ ನ್ಯಾಯ ವ್ಯವಸ್ಥೆಯ ಪರಿಣಾಮ ಬೀರುವಂತಹದ್ದು ಎಂದು ಅದು ಹೇಳಿದೆ.

ಇದನ್ನೂ ಓದಿ…ಮುಂದುವರಿದ ಮ್ಯಾನ್ಯುವಲ್ ಸ್ಕ್ಯಾವೆಂಜರ್‌ಗಳ ಸಾವು; ರಾಜ್ಯಗಳಿಂದ ಉತ್ತರ ಕೇಳಿದ ಎನ್‌ಎಚ್‌ಆರ್‌ಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...