Homeಮುಖಪುಟಪಾಕ್ ಕ್ರಿಕೆಟ್ ನಾಯಕಿಯ ಪುಟ್ಟ ಮಗುವಿನೊಂದಿಗೆ ಭಾರತೀಯ ತಂಡದ ಪ್ರೀತಿಯ ಕ್ಷಣಗಳು: ಎಲ್ಲೆಡೆ ಅಭಿಮಾನದ ಮಹಾಪೂರ

ಪಾಕ್ ಕ್ರಿಕೆಟ್ ನಾಯಕಿಯ ಪುಟ್ಟ ಮಗುವಿನೊಂದಿಗೆ ಭಾರತೀಯ ತಂಡದ ಪ್ರೀತಿಯ ಕ್ಷಣಗಳು: ಎಲ್ಲೆಡೆ ಅಭಿಮಾನದ ಮಹಾಪೂರ

- Advertisement -
- Advertisement -

ಮಹಿಳಾ ವಿಶ್ವಕಪ್ ಕ್ರಿಕೆಟ್‌ನ ಮೊದಲ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನವನ್ನು 107 ರನ್‌ಗಳ ಅಂತರದಿಂದ ಸೋಲಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿತು. ಆದರೆ ಭಾರತೀಯ ತಂಡ ಅದಕ್ಕಿಂತಲೂ ಹೆಚ್ಚು ಖುಷಿ ಕೊಡುವ ಪ್ರೀತಿಯನ್ನು ಅಂಗಳದ ಹೊರಗೆ ಸಹ ತೋರಿಸಿತು. ಪಂದ್ಯದ ನಂತರ ಪಾಕಿಸ್ತಾನ ಕ್ರಿಕೆಟ್ ತಂಡ ನಾಯಕಿ ಬಿಸ್ಮಾ ಮರೂಫ್‌ರವರ 7 ತಿಂಗಳ ಹೆಣ್ಣು ಮಗುವಿ ಫಾತಿಮಳೊಂದಿಗೆ ಆಟವಾಡಿದ ಭಾರತದ ಆಟಗಾರ್ಟಿಯರು ಪ್ರೀತಿಯ ಕ್ಷಣಗಳಿಗೆ ಸಾಕ್ಷಿಯಾದರು. ಆ ಸಂದರ್ಭದಲ್ಲಿ ಮಗು ಮತ್ತು ಪಾಕ್ ನಾಯಕಿಯ ಜೊತೆಗೆ ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದರು. ಈ ಸುಂದರ ಕ್ಷಣದ ಫೋಟೊ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದ್ದು, ಭಾರತೀಯ ತಂಡದ ಆ ಮಮತೆಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆಯ ಮಹಾಪೂರವೇ ಹರಿದು ಬಂದಿದೆ.

ಭಾರತೀಯ ಆಟಗಾರ್ಟಿಯರು ಸೆಲ್ಫಿ ತೆಗೆದುಕೊಳ್ಳುತ್ತಿರುವ ಚಿತ್ರವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿರುವ ಐಸಿಸಿ, “ಪುಟ್ಟ ಫಾತಿಮಾಗೆ ಕ್ರಿಕೆಟ್ ಸ್ಫೂರ್ತಿಯ ಮೊದಲ ಪಾಠ – ಭಾರತ ಮತ್ತು ಪಾಕ್ ಆಟಗಾರ್ತಿಯರಿಂದ” ಎಂದು ಬರೆದಿದೆ.

“ಎಂತಹ ಸುಂದರ ಕ್ಷಣ! ಕ್ರಿಕೆಟ್ ಮೈದಾನದಲ್ಲಿ ಬೌಂಡರಿಗಳನ್ನು ಹೊಂದಿದೆ, ಆದರೆ ಅದು ಮೈದಾನದ ಹೊರಗೆ ಎಲ್ಲವನ್ನೂ ಮುರಿಯುತ್ತದೆ. ಕ್ರೀಡೆ ಒಂದುಗೂಡಿಸುತ್ತದೆ!” ಎಂದು ಕ್ರಿಕೆಟ್ ದಿಗ್ಗಜ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಟ್ವೀಟ್ ಮಾಡಿದ್ದಾರೆ.

ಜನರು ತಮ್ಮ ಸರ್ಕಾರದಂತೆಯೇ ಇರುವುದಿಲ್ಲ ಎನ್ನುವುದಕ್ಕೆ ಮತ್ತೊಂದು ಉದಾಹರಣೆ ಎಂದು ಇಂಕ್ವಿಲಾಬ್ ಇಂಡಿಯಾ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದೆ. ಆ ಮೂಲಕ ಭಾರತ ಮತ್ತ ಪಾಕ್ ಸರ್ಕಾರಗಳ ದ್ವೇಷ ರಾಜಕಾರಣವನ್ನು ಟೀಕಿಸಿದೆ.

ಭಾರತೀಯ ಮಹಿಳಾ ಕ್ರಿಕೆಟ್ ತಂಡವು ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಪಾಕ್ ತಂಡವನ್ನು ಸೋಲಿಸಿದೆ. ಆದರೆ ಈ ಗೆಲುವಿಗಿಂತ ಹೆಚ್ಚು ಸುದ್ದಿಯಾದುದು, ಭಾರತೀಯ ಆಟಗಾರ್ತಿಯರು ಪಾಕ್ ಆಟಗಾರ್ತಿಯರ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡದ್ದು ಮತ್ತು ಪಾಕ್ ತಂಡದ ನಾಯಕಿ ಬಿಸ್ಮ ಮಹ್ರೂಫ್ ಅವರ ಪುಟ್ಟ ಮಗಳು ಫಾತಿಮಾಳ ಜೊತೆ ಆಟವಾಡುತ್ತಾ ಭಾರತೀಯ ಆಟಗಾರರು ಸಮಯ ಕಳೆದಿರುವುದು. ಐಸಿಸಿ ಈ ವಿಡಿಯೋ ಮತ್ತು ಫೋಟೋವನ್ನು ಹಂಚಿಕೊಂಡಿದೆ.
ನಿನ್ನೆ ಧೋನಿ ಮತ್ತು ಕೊಹ್ಲಿ. ಇವತ್ತು ಎಕ್ತಾ ಬಿಸ್ತ್ ಮತ್ತು ಇತರರು. ದ್ವೇಷ ಮತ್ತೆ ಮತ್ತೆ ಸೋಲುತ್ತಲೇ ಇದೆ ಎಂದು ಏ ಕೆ ಕುಕ್ಕಿಲರವರು ಬರೆದಿದ್ದಾರೆ.


ಇದನ್ನೂ ಓದಿ: ಮಹಿಳಾ ವಿಶ್ವಕಪ್‌: ಪಾಕ್‌ ವಿರುದ್ಧ ಭಾರತ ಜಯಭೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

‘ನಾನು ಹಿಂದೂ ಅಲ್ಲ, ಮನುಷ್ಯ’: ಎಸ್‌ಪಿ ನಾಯಕ ಶಿವರಾಜ್ ಸಿಂಗ್ ಯಾದವ್ ಹೇಳಿಕೆ ತಿರುಚಿ ವಿವಾದ ಸೃಷ್ಟಿಸಿದ ಬಿಜೆಪಿ ಬೆಂಬಲಿಗರು

ಸಮಾಜವಾದಿ ಪಕ್ಷದ ನಾಯಕ, ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಆಪ್ತ ಸಹಾಯಕ ಹಾಗೂ ಉತ್ತರ ಪ್ರದೇಶದ ಫಿರೋಜಾಬಾದ್‌ನ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ಶಿವರಾಜ್ ಸಿಂಗ್ ಯಾದವ್ ‘ನಾನು ಹಿಂದೂ ಅಲ್ಲ, ನಾನು...

ಛತ್ತೀಸ್‌ಗಢ : ಎಂಟು ಮಂದಿ ಬಂಗಾಳಿ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ; ವರದಿ

ಛತ್ತೀಸ್‌ಗಢದ ರಾಯ್‌ಪುರದಲ್ಲಿ ಭಾನುವಾರ (ಜ.4) ಬಜರಂಗದಳ ಕಾರ್ಯಕರ್ತರು ಎಂಟು ಮಂದಿ ಬಂಗಾಳಿ ಮಾತನಾಡುವ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದು, ಒಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರಾಯ್‌ಪುರ ಜಿಲ್ಲೆಯ ಕಟೋವಾಲಿ...

‘ಉಮರ್ ಮತ್ತು ಶಾರ್ಜಿಲ್ ಜಾಮೀನು ನಿರಾಕರಣೆ’: ಶಾಸಕಾಂಗ, ನ್ಯಾಯಾಂಗದ ಕಾರ್ಯವೈಖರಿಯಲ್ಲಿನ ವೈರುಧ್ಯಗಳಿಗೆ ಉದಾಹರಣೆ: ಶ್ರೀಪಾದ್ ಭಟ್

ಇಂಡಿಯನ್ ಎಕ್ಸ್ಪ್ರೆಸ್ ನಲ್ಲಿನ ವರದಿಯ ಪ್ರಕಾರ ಈ ಪ್ರಕರಣದ ವಿಚಾರಣೆಯಲ್ಲಿರುವ ಮುಖ್ಯ ಪ್ರಶ್ನೆ: ಬಂಧನವಾಗಿ ಐದು ವರ್ಷಗಳಾದರೂ ಸಹ ಇನ್ನೂ ವಿಚಾರಣೆ ಆರಂಭವಾಗಿಲ್ಲ. ದೀರ್ಘಕಾಲದ ಜೈಲುವಾಸವನ್ನು ಭಯೋತ್ಪಾದಕ ವಿರೋಧಿ ಕಾನೂನಿನ ಅಡಿಯಲ್ಲಿ ಸಮರ್ಥಿಸಬಹುದೇ?...

ಉತ್ತರ ಪ್ರದೇಶ SIR : ಮತದಾರರ ಪಟ್ಟಿಯಿಂದ 2.89 ಕೋಟಿ ಹೆಸರು ಡಿಲೀಟ್

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐರ್‌) ಬಳಿಕ ಸುಮಾರು 2.89 ಕೋಟಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ನವದೀಪ್ ರಿನ್ವಾ...

ಕರೂರ್ ಕಾಲ್ತುಳಿತ ಪ್ರಕರಣ: ಟಿವಿಕೆ ನಾಯಕ ವಿಜಯ್‌ಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟಿಸ್

ಕರೂರ್ ಕಾಲ್ತುಳಿತ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಟಿವಿಕೆ ನಾಯಕ ವಿಜಯ್ ಅವರಿಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ ಎಂದು ಪಿಟಿಐ ಮಂಗಳವಾರ ವರದಿ ಮಾಡಿದೆ. ಸೆಪ್ಟೆಂಬರ್ 27 ರಂದು ನಟ-ರಾಜಕಾರಣಿ ವಿಜಯ್ ಅವರ ತಮಿಳಗ...

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ರಾಯಭಾರ ಕಚೇರಿ ಉದ್ಘಾಟನೆ : ‘ಐತಿಹಾಸಿಕ ಕ್ಷಣ’ ಎಂದ ರಾಯಭಾರಿ ಹುಸಾಮ್ ಝೊಮ್ಲೋಟ್

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ದೇಶದ ರಾಯಭಾರಿ ಕಚೇರಿ ಅಧಿಕೃತವಾಗಿ ಉದ್ಘಾಟನೆಯಾಗಿದ್ದು, ಯುಕೆಯ ಪ್ಯಾಲೆಸ್ತೀನ್‌ ರಾಯಭಾರಿ ಇದನ್ನು 'ಐತಿಹಾಸಿಕ ಕ್ಷಣ' ಎಂದು ಬಣ್ಣಿಸಿದ್ದಾರೆ. ಸೋಮವಾರ (ಜ.5) ಪಶ್ಚಿಮ ಲಂಡನ್‌ನ ಹ್ಯಾಮರ್‌ಸ್ಮಿತ್‌ನಲ್ಲಿ ನಡೆದ ರಾಯಭಾರ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ...

ಬಾಂಗ್ಲಾದೇಶದಲ್ಲಿ ಹಿಂದೂ ಉದ್ಯಮಿ ಮತ್ತು ಪತ್ರಕರ್ತನಾಗಿದ್ದ ರಾಣಾ ಪ್ರತಾಪ್ ಬೈರಾಗಿ ತಲೆಗೆ ಗುಂಡಿಕ್ಕಿ ಹತ್ಯೆ 

ಬಾಂಗ್ಲಾದೇಶದ ಜೆಸ್ಸೋರ್ ಜಿಲ್ಲೆಯಲ್ಲಿ ಸೋಮವಾರ 38 ವರ್ಷದ ರಾಣಾ ಪ್ರತಾಪ್ ಬೈರಾಗಿ ಅವರ ತಲೆಗೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ ಎಂದು ಹಲವು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ.  ಬೈರಾಗಿ ಒಬ್ಬ ಹಿಂದೂ ಉದ್ಯಮಿ ಮತ್ತು...

ತಿರುಪರನ್‌ಕುಂದ್ರಂ ಬೆಟ್ಟದ ಮೇಲೆ ದೀಪ ಬೆಳಗಿಸುವ ಆದೇಶ ಎತ್ತಿ ಹಿಡಿದ ಮದ್ರಾಸ್ ಹೈಕೋರ್ಟ್

ಮಧುರೈನ ತಿರುಪರನ್‌ಕುಂದ್ರಂ ಬೆಟ್ಟದ ಮೇಲಿರುವ ಕಲ್ಲಿನ ಕಂಬದಲ್ಲಿ ದೀಪ ಬೆಳಗಿಸಲು ಅನುಮತಿ ನೀಡಿ ಮದ್ರಾಸ್‌ ಹೈಕೋರ್ಟ್‌ನ ಮಧುರೈ ಪೀಠದ ಏಕ ಸದಸ್ಯ ನ್ಯಾಯಾಧೀಶರು ನೀಡಿದ ಆದೇಶವನ್ನು ವಿಭಾಗೀಯ ಪೀಠ ಎತ್ತಿಹಿಡಿದಿದೆ. ನ್ಯಾಯಮೂರ್ತಿ ಜಿ. ಜಯಚಂದ್ರನ್...

ಕರ್ನಾಟಕದ ದೀರ್ಘಾವಧಿಯ ಮುಖ್ಯಮಂತ್ರಿಯಾಗಿ ದಾಖಲೆ ಸೃಷ್ಟಿಸಿದ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ದಿವಂಗತ ಡಿ.ದೇವರಾಜ್ ಅರಸ್ ಅವರ ದಾಖಲೆಯನ್ನು (7 ವರ್ಷ 239 ದಿನಗಳು) ಸಿದ್ದರಾಮಯ್ಯ ಮುರಿದಿದ್ದಾರೆ.  ದೇವರಾಜು ಅರಸು ಮತ್ತು ಸಿದ್ದರಾಮಯ್ಯ ಅವರು ಸಾಮಾಜಿಕ...

ಅಜ್ಮೀರ್ ದರ್ಗಾಕ್ಕೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ತಡೆಯುವಂತೆ ಅರ್ಜಿ : ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಉರೂಸ್ ಪ್ರಯುಕ್ತ ಅಜ್ಮೀರ್‌ನ ಸೂಫಿ ಸಂತ ಖ್ವಾಜಾ ಮುಯೀನುದ್ದೀನ್ ಹಸನ್ ಚಿಸ್ತಿ ಅವರ ದರ್ಗಾಕ್ಕೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ಮತ್ತು ದರ್ಗಾಕ್ಕೆ ಸರ್ಕಾರದ ವತಿಯಿಂದ ನೀಡಲಾಗುವ ಗೌರವಗಳನ್ನು ತಡೆಯುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು...