Homeಅಂತರಾಷ್ಟ್ರೀಯಬಾಂಗ್ಲಾದೇಶದ ಚಿತ್ತಗಾಂಗ್‌ನಲ್ಲಿ ಭಾರತೀಯ ವೀಸಾ ಅರ್ಜಿಗಳನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಲಾಗಿದೆ

ಬಾಂಗ್ಲಾದೇಶದ ಚಿತ್ತಗಾಂಗ್‌ನಲ್ಲಿ ಭಾರತೀಯ ವೀಸಾ ಅರ್ಜಿಗಳನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಲಾಗಿದೆ

- Advertisement -
- Advertisement -

ಢಾಕಾ: ಬಾಂಗ್ಲಾದೇಶದ ಪ್ರಮುಖ ಯುವ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ನಂತರ ಹೆಚ್ಚಿದ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಬಾಂಗ್ಲಾದೇಶದ ಎರಡನೇ ಅತಿದೊಡ್ಡ ನಗರ ಚಿತ್ತಗಾಂಗ್‌ನಲ್ಲಿರುವ ಭಾರತೀಯ ವೀಸಾ ಅರ್ಜಿ ಕೇಂದ್ರದಲ್ಲಿ ವೀಸಾ ಕಾರ್ಯಾಚರಣೆಯನ್ನು ಮುಂದಿನ ಸೂಚನೆ ಬರುವವರೆಗೂ ಭಾರತ ಭಾನುವಾರ ಸ್ಥಗಿತಗೊಳಿಸಿದೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ. 

ಕಳೆದ ವರ್ಷ ಪ್ರಧಾನಿ ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್ ಸರ್ಕಾರವನ್ನು ಪದಚ್ಯುತಗೊಳಿಸಲು ಕಾರಣವಾದ ವಿದ್ಯಾರ್ಥಿಗಳ ನೇತೃತ್ವದ ಪ್ರತಿಭಟನೆಯ ಪ್ರಮುಖ ನಾಯಕನಾಗಿದ್ದ ಹಾದಿ, ಫೆಬ್ರವರಿ 12 ರಂದು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಅಭ್ಯರ್ಥಿಯಾಗಿದ್ದರು.

ಡಿಸೆಂಬರ್ 12 ರಂದು ಕೇಂದ್ರ ಢಾಕಾದ ಬಿಜೋಯ್‌ನಗರ ಪ್ರದೇಶದಲ್ಲಿ ಚುನಾವಣಾ ಪ್ರಚಾರದ ವೇಳೆ ಮುಸುಕುಧಾರಿ ಬಂದೂಕುಧಾರಿಗಳು ಅವರ ತಲೆಗೆ ಗುಂಡು ಹಾರಿಸಿದ್ದರು. ಗುರುವಾರ ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಅವರು ನಿಧನರಾದರು.

ಅವರ ಸಾವು ಬಾಂಗ್ಲಾದೇಶದಾದ್ಯಂತ ದಾಳಿಗಳು ಮತ್ತು ವಿಧ್ವಂಸಕ ಕೃತ್ಯಗಳಿಗೆ ಕಾರಣವಾಯಿತು, ಗುರುವಾರ ಚಟ್ಟೋಗ್ರಾಮ್‌ನಲ್ಲಿರುವ ಸಹಾಯಕ ಭಾರತೀಯ ಹೈಕಮಿಷನರ್ ನಿವಾಸದ ಮೇಲೆ ಕಲ್ಲು ತೂರಾಟವೂ ಸೇರಿದಂತೆ ಹಲವೆಡೆ ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಲಾಯಿತು. 

ಚಿತ್ತಗಾಂಗ್‌ನಲ್ಲಿ ಭಾರತೀಯ ವೀಸಾ ಅರ್ಜಿಗಳನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಲಾಗಿದೆ ಎಂದು ಭಾರತೀಯ ವೀಸಾ ಅರ್ಜಿ ಕೇಂದ್ರ (IVAC)ತಿಳಿಸಿರುವುದಾಗಿ ಭಾನುವಾರ ಢಾಕಾ ಟ್ರಿಬ್ಯೂನ್ ಪತ್ರಿಕೆ ಉಲ್ಲೇಖಿಸಿದೆ.

ಚಿತ್ತಗಾಂಗ್‌ನಲ್ಲಿರುವ ಭಾರತದ ಸಹಾಯಕ ಹೈಕಮಿಷನ್‌ನಲ್ಲಿ ಇತ್ತೀಚೆಗೆ ನಡೆದ ಭದ್ರತಾ ವೈಫಲ್ಯದ ಘಟನೆಯ ನಂತರ ಈ ನಿರ್ಧಾರ ತೆಗೆದುಕೊಂಡಿದ್ದು ಭಾನುವಾರದಿಂದ ಜಾರಿಗೆ ಬಂದಿದೆ.

IVAC ಪ್ರಕಾರ, ಬಂದರು ನಗರದಲ್ಲಿನ ಎಲ್ಲಾ ಭಾರತೀಯ ವೀಸಾ ಸಂಬಂಧಿತ ಸೇವೆಗಳು ಡಿಸೆಂಬರ್ 21 ರಿಂದ ಮುಂದಿನ ಸೂಚನೆ ಬರುವವರೆಗೆ ಮುಚ್ಚಲ್ಪಡುತ್ತವೆ.

ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ವೀಸಾ ಅರ್ಜಿ ಕೇಂದ್ರವನ್ನು ಮತ್ತೆ ತೆರೆಯುವ ಕುರಿತು ಮತ್ತಷ್ಟು ಘೋಷಣೆ ಮಾಡಲಾಗುವುದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಡಿಸೆಂಬರ್ 20 ರಂದು, ಬಾಂಗ್ಲಾದೇಶದ ಸಿಲ್ಹೆಟ್ ನಗರದಲ್ಲಿರುವ ಭಾರತೀಯ ಸಹಾಯಕ ಹೈಕಮಿಷನ್ ಕಚೇರಿ ಮತ್ತು ವೀಸಾ ಅರ್ಜಿ ಕೇಂದ್ರದಲ್ಲಿ ಭದ್ರತೆಯನ್ನು ಬಲಪಡಿಸಲಾಯಿತು.

“ಯಾವುದೇ ಮೂರನೇ ವ್ಯಕ್ತಿ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಳ್ಳಬಾರದು” ಎಂದು ಖಚಿತಪಡಿಸಿಕೊಳ್ಳಲು ವರ್ಧಿತ ಭದ್ರತಾ ಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದು ಸಿಲ್ಹೆಟ್ ಮೆಟ್ರೋಪಾಲಿಟನ್ ಪೊಲೀಸ್‌ನ ಹೆಚ್ಚುವರಿ ಉಪ ಆಯುಕ್ತ (ಮಾಧ್ಯಮ) ಸೈಫುಲ್ ಇಸ್ಲಾಂ ಅವರನ್ನು ಢಾಕಾ ಟ್ರಿಬ್ಯೂನ್ ಪತ್ರಿಕೆ ಶನಿವಾರ ಉಲ್ಲೇಖಿಸಿದೆ.

ಢಾಕಾ ವಿಶ್ವವಿದ್ಯಾಲಯದ ಮಸೀದಿಯ ಬಳಿಯ ರಾಷ್ಟ್ರೀಯ ಕವಿ ಕಾಜಿ ನಜ್ರುಲ್ ಇಸ್ಲಾಂ ಅವರ ಸಮಾಧಿಯ ಬಳಿ ಶನಿವಾರ ಹೆಚ್ಚುವರಿ ಬಿಗಿ ಭದ್ರತೆಯ ನಡುವೆ 32 ವರ್ಷದ ಹಾದಿ ಅವರ ಅಂತ್ಯಕ್ರಿಯೆ ನಡೆಸಲಾಯಿತು.

ಅಂತ್ಯಕ್ರಿಯೆಯ ಪ್ರಾರ್ಥನೆಯಲ್ಲಿ ಹತ್ತಾರು ಸಾವಿರ ಜನರು ಭಾಗವಹಿಸಿದ್ದರು, ಮತ್ತು ಆಚರಣೆಗೆ ಮುಂಚಿತವಾಗಿ, ಅವರು “ದೆಹಲಿ ಅಥವಾ ಢಾಕಾ – ಢಾಕಾ, ಢಾಕಾ” ಮತ್ತು “ಸಹೋದರ ಹಾದಿಯ ರಕ್ತ ವ್ಯರ್ಥವಾಗಲು ಬಿಡುವುದಿಲ್ಲ” ಮುಂತಾದ ಭಾರತ ವಿರೋಧಿ ಘೋಷಣೆಗಳನ್ನು ಕೂಗಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....