Homeಅಂತರಾಷ್ಟ್ರೀಯಪಾಸ್‌ಪೋರ್ಟ್‌ನಲ್ಲಿ 'ಅರುಣಾಚಲ ಪ್ರದೇಶ' ಉಲ್ಲೇಖ : ಚೀನಾ ಏರ್ಪೋರ್ಟ್‌ನಲ್ಲಿ ಭಾರತೀಯ ಮಹಿಳೆಗೆ ಕಿರುಕುಳ

ಪಾಸ್‌ಪೋರ್ಟ್‌ನಲ್ಲಿ ‘ಅರುಣಾಚಲ ಪ್ರದೇಶ’ ಉಲ್ಲೇಖ : ಚೀನಾ ಏರ್ಪೋರ್ಟ್‌ನಲ್ಲಿ ಭಾರತೀಯ ಮಹಿಳೆಗೆ ಕಿರುಕುಳ

ಆರೋಪ ಅಲ್ಲಗಳೆದ ಚೀನಾ, ಅರುಣಾಚಲ ಪ್ರದೇಶ ನಮ್ಮ ಅವಿಭಾಜ್ಯ ಅಂಗ ಎಂದ ಭಾರತ

- Advertisement -
- Advertisement -

ಪಾಸ್‌ಪೋರ್ಟ್‌ನಲ್ಲಿ ಜನ್ಮಸ್ಥಳ ಅರುಣಾಚಲ ಪ್ರದೇಶ ಎಂದು ಉಲ್ಲೇಖಿಸಿದ್ದಕ್ಕೆ ಭಾರತೀಯ ಮೂಲದ ಮಹಿಳೆಗೆ ಚೀನಾದ ಶಾಂಘೈ ವಿಮಾನ ನಿಲ್ದಾಣದಲ್ಲಿ ಕಿರುಕುಳ ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ನವೆಂಬರ್ 21ರಂದು ಅರುಣಾಚಲ ಪ್ರದೇಶ ಮೂಲದ, ಪ್ರಸ್ತುತ ಲಂಡನ್‌ನಲ್ಲಿ ವಾಸವಿರುವ ಪೇಮಾ ವಾಂಗ್ ಥೋಂಗ್‌ಡಾಕ್ ಎಂಬ ಮಹಿಳೆ ಲಂಡನ್‌ನಿಂದ ಜಪಾನ್‌ಗೆ ಚೀನಾ ಮೂಲಕ ಪ್ರಯಾಣಿಸುತ್ತಿದ್ದರು. ಅವರು ಶಾಂಘೈ ವಿಮಾನ ನಿಲ್ದಾಣದಲ್ಲಿ ಬಂದಿಳಿದಾಗ, ಇಮಿಗ್ರೇಷನ್ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದು ಸುಮಾರು 18 ಗಂಟೆಗಳ ಕಾಲ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಮಹಿಳೆಯ ಪಾಸ್‌ಪೋರ್ಟ್‌ನಲ್ಲಿ ಆಕೆಯ ಜನ್ಮಸ್ಥಳ ಅರುಣಾಚಲ ಪ್ರದೇಶ ಎಂದು ಬರೆಯಲಾಗಿತ್ತು. ಚೀನಾ ಅರುಣಾಚಲ ಪ್ರದೇಶವನ್ನು ತನ್ನ ಭೂಭಾಗ (ಝಾಂಗ್ನಾನ್ ಅಥವಾ ದಕ್ಷಿಣ ಟಿಬೆಟ್) ಎಂದು ವಾದಿಸುತ್ತಿದೆ. ಆದ್ದರಿಂದ ಮಹಿಳೆಯ ಪಾಸ್‌ಪೋರ್ಟ್ ‘ಅಮಾನ್ಯ’ ಎಂದ ಅಧಿಕಾರಿಗಳು, “ನೀನು ಚೀನಾದವಳು, ಭಾರತೀಯಳಲ್ಲ” ಎಂದು ಅಪಮಾನಿಸಿದ್ದಾರೆ ಎಂಬುವುದಾಗಿ ವರದಿಯಾಗಿದೆ.

ಮಹಿಳೆಗೆ 18 ಗಂಟೆಗಳ ಕಾಲ ಆಹಾರ ಕೊಟ್ಟಿಲ್ಲ. ಶೌಚಾಲಯಕ್ಕೆ ತೆರಳಲು ಮಾತ್ರ ಅನುಮತಿಸಿದ್ದರು. ಜಪಾನ್‌ಗೆ ಹೋಗುವ ವಿಮಾನ ಹತ್ತಲು ಬಿಟ್ಟಿಲ್ಲ. ಹೊಸ ಟಿಕೆಟ್ ಖರೀದಿಸಲು ಹೆಚ್ಚುವರಿ ಹಣ ಖರ್ಚು ಮಾಡಿಸಿದರು ಎಂದು ಆರೋಪಿಸಲಾಗಿದೆ.

ಕೊನೆಗೆ, ಶಾಂಘೈಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಮಧ್ಯಪ್ರವೇಶಿಸಿ ಮಹಿಳೆಯನ್ನು ಬಿಡುಗಡೆಗೊಳಿಸಿದೆ. ಭಾರತ ಸರ್ಕಾರ ಅರುಣಾಚಲ ಪ್ರದೇಶ ತನ್ನ ಭೂಭಾಗ ಎಂಬ ಚೀನಾದ ವಾದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ‘ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ’ ಎಂದು ಪುನರುಚ್ಚರಿಸಿದೆ. ಪ್ರಸ್ತುತ ಮಹಿಳೆ ಸುರಕ್ಷಿತವಾಗಿದ್ದಾರೆ. ತಲುಪುವಲ್ಲಿಗೆ ತಲುಪಿದ್ದಾರೆ ಎಂದು ವರದಿಗಳು ಹೇಳಿವೆ.

ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ-ಭಾರತ

“ಮಾನ್ಯ ಪಾಸ್‌ಪೋರ್ಟ್ ಹೊಂದಿದ್ದ ಮತ್ತು ಶಾಂಘೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಜಪಾನ್‌ಗೆ ತೆರಳುತ್ತಿದ್ದ ಅರುಣಾಚಲ ಪ್ರದೇಶದ ಭಾರತೀಯ ಪ್ರಜೆಯನ್ನು ಅನಿಯಂತ್ರಿತವಾಗಿ ಬಂಧಿಸಿದ ಬಗ್ಗೆ ಚೀನಾದ ವಿದೇಶಾಂಗ ಸಚಿವಾಲಯದ ಹೇಳಿಕೆಗಳನ್ನು ನಾವು ನೋಡಿದ್ದೇವೆ. ಅರುಣಾಚಲ ಪ್ರದೇಶವು ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗವಾಗಿದೆ. ಇದು ಸ್ವಯಂ-ಸ್ಪಷ್ಟ ಸತ್ಯ. ಚೀನಾದ ಕಡೆಯಿಂದ ಬರುವ ಯಾವುದೇ ನಿರಾಕರಣೆ ಈ ನಿರ್ವಿವಾದ ವಾಸ್ತವವನ್ನು ಬದಲಾಯಿಸುವುದಿಲ್ಲ” ಎಂದು ಭಾರತೀಯ ವಿದೇಶಾಂಗ ಇಲಾಖೆಯ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ಮುಂದುವರಿದು, “ಈ ವಿಷಯವನ್ನು ಭಾರತ ಸರ್ಕಾರ ಚೀನಾದೊಂದಿಗೆ ಅತ್ಯಂತ ಕಟುವಾಗಿ ಪ್ರಸ್ತಾಪಿಸಿದೆ. ಚೀನಾದ ಅಧಿಕಾರಿಗಳು ಇನ್ನೂ ತಮ್ಮ ಕೃತ್ಯಕ್ಕೆ ಸರಿಯಾದ ವಿವರಣೆ ನೀಡಲು ಸಾಧ್ಯವಾಗಿಲ್ಲ. ಅವರ ಈ ಕ್ರಮವು ಅಂತಾರಾಷ್ಟ್ರೀಯ ವಿಮಾನ ಪ್ರಯಾಣವನ್ನು ನಿಯಂತ್ರಿಸುವ ಹಲವು ಒಡಂಬಡಿಕೆಗಳನ್ನು (ಕನ್ವೆನ್ಷನ್‌ಗಳನ್ನು) ಉಲ್ಲಂಘಿಸಿದೆ. ಅಷ್ಟೇ ಅಲ್ಲ, ಚೀನಾ ತಾನೇ ಜಾರಿಗೊಳಿಸಿರುವ ನಿಯಮವನ್ನೂ ಮೀರಿದೆ. ಆ ನಿಯಮದ ಪ್ರಕಾರ ಎಲ್ಲ ದೇಶಗಳ ಪ್ರಜೆಗಳಿಗೂ 24 ಗಂಟೆಗಳವರೆಗೆ ವೀಸಾ ಇಲ್ಲದೆ ಟ್ರಾನ್ಸಿಟ್ (ಮಧ್ಯದಲ್ಲಿ ನಿಲುಗಡೆ) ಅನುಮತಿ ಇದೆ. ಆದರೂ ಚೀನಾದ ಅಧಿಕಾರಿಗಳು ಭಾರತೀಯ ಮಹಿಳೆಯನ್ನು 18 ಗಂಟೆಗಳ ಕಾಲ ತಡೆಹಿಡಿದು ತಮ್ಮ ಸ್ವಂತ ನಿಯಮವನ್ನೂ ಉಲ್ಲಂಘಿಸಿದ್ದಾರೆ” ಎಂದು ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...