HomeಮುಖಪುಟINDIAದ ನಿಯೋಗವು ಮಣಿಪುರ ಜನರ ಕಣ್ಣೀರು ಒರೆಸಿ ಬಂದಿದೆ: ರಾಘವ್ ಚಡ್ಡಾ

INDIAದ ನಿಯೋಗವು ಮಣಿಪುರ ಜನರ ಕಣ್ಣೀರು ಒರೆಸಿ ಬಂದಿದೆ: ರಾಘವ್ ಚಡ್ಡಾ

- Advertisement -
- Advertisement -

ವಿರೋಧ ಪಕ್ಷದ INDIA ಒಕ್ಕೂಟದ ನಿಯೋಗವು ಕಲಹ ಪೀಡಿತ ಮಣಿಪುರಕ್ಕೆ ಭೇಟಿ ನೀಡಿ ”ಮಣಿಪುರದ ಜನರ ಕಣ್ಣೀರು ಒರೆಸಿದ ನಂತರ ಹಿಂತಿರುಗಿದ್ದಾರೆ” ಎಂದು ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ ಅವರು ಸೋಮವಾರ ಶ್ಲಾಘಿಸಿದ್ದಾರೆ.

ಮಣಿಪುರದ ಪರಿಸ್ಥಿತಿ ಮತ್ತು ಸಂಸತ್ತಿನ ಮುಂಗಾರು ಅಧಿವೇಶನದ ಮುಂದಿನ ಕಾರ್ಯತಂತ್ರದ ಕುರಿತು 21 ಸಂಸದ ನಿಯೋಗವು ಉಳಿದ ಪ್ರತಿಪಕ್ಷಗಳ ಸದಸ್ಯರಿಗೆ ವಿವರಿಸಲು ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉಪಸ್ಥಿತರಿದ್ದರು.

ಈ ಸಭೆಯ ಬಳಿಕ ಮಣಿಪುರದ ಬಗ್ಗೆ ಪ್ರತಿಪಕ್ಷಗಳ ಮುಂದಿನ ನಡೆಯ ಬಗ್ಗೆ ನಿಯೋಗ ತಿಳಿಸಲಿದೆ ಎಂದು ಚಾಡಾ ಹೇಳಿದರು. ”ಮಣಿಪುರದ ಜನರ ಕಣ್ಣೀರು ಒರೆಸಿದ ನಂತರ INDIAದ ನಿಯೋಗ ಮರಳಿದೆ. ಇಂದು, ಸಂಸದರು ಸಭೆಯಲ್ಲಿ ಮಣಿಪುರದ ಪರಿಸ್ಥಿತಿಯನ್ನು ವಿವರಿಸುತ್ತಾರೆ, ನಂತರ ನಾವು ಈ ನಿಟ್ಟಿನಲ್ಲಿ ನಮ್ಮ ಮುಂದಿನ ನಡೆಯ ಬಗ್ಗೆ ನಿಮಗೆ ತಿಳಿಸುತ್ತೇವೆ…” ಎಂದು ಹೇಳಿದರು.

ಮೇ 3ರಿಂದ ಭಾರೀ ಹಿಂಸಾಚಾರದಿಂದ ಈಶಾನ್ಯ ರಾಜ್ಯ ಮಣಿಪುರ ನಲುಗಿಹೋಗಿದೆ. ಅಲ್ಲಿಯ ಪರಿಸ್ಥಿತಿಯನ್ನು ತಿಳಿಯಲು ವಿರೋಧಪಕ್ಷಗಳ INDIA ನೀಯೋಗ ಶನಿವಾರ ಹಾಗೂ ಭಾನುವಾರ ಮಣಿಪುರಕ್ಕೆ ಭೇಟಿ ನೀಡಿದ್ದರು.

ಮಣಿಪುರ ಚರ್ಚೆಗೆ ವಿಪಕ್ಷಗಳ ಪಟ್ಟು; ಉಭಯ ಸದನಗಳ ಕಲಾಪ ಮುಂದೂಡಿಕೆ

ಮಾನ್ಸೂನ್ ಅಧಿವೇಶನದಲ್ಲಿ ಎರಡು ಪ್ರಮುಖ ಬೆಳವಣಿಗೆಗಳು ನಡೆಯುವ ಸಾಧ್ಯತೆಯಿದೆ. ಸರ್ಕಾರವು ದೆಹಲಿ ಸೇವೆಗಳ ಮಸೂದೆಯನ್ನು ಮಂಡಿಸುವ ನಿರೀಕ್ಷೆಯಿದೆ. ವಿರೋಧ ಪಕ್ಷಗಳ ಒಕ್ಕೂಟ INDIAದಿಂದ ಅವಿಶ್ವಾಸ ನಿರ್ಣಯ ಮಂಡಿಸಲಾಗಿದೆ.

ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಮಣಿಪುರದಲ್ಲಿ ಶಾಂತಿಯನ್ನು ಮರುಸ್ಥಾಪಿಸುವಲ್ಲಿ ವಿಫಲವಾಗಿದೆ. ಈ ಬಗ್ಗೆ ಪ್ರಧಾನಿ ಮೋದಿ ಸಂಸತ್ತಿನಲ್ಲಿ ಮಾತನಾಡುತ್ತಿಲ್ಲ. ಹಾಗಾಗಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಪ್ರತಿಪಕ್ಷಗಳು ಮಂಡಿಸಿವೆ. ಕೇಂದ್ರ ಮತ್ತು ಈಶಾನ್ಯ ರಾಜ್ಯಗಳೆರಡರಲ್ಲೂ ಬಿಜೆಪಿ ಅಧಿಕಾರದಲ್ಲಿದೆ. ಆದಾಗ್ಯೂ, ಸರ್ಕಾರವು ಬಹುಮತ ಹೊಂದಿರುವುದರಿಂದ ವಿಪಕ್ಷಗಳು ಸೋಲನುಭವಿಸಲಿದೆ. ಮತ್ತೊಂದೆಡೆ, ಪ್ರತಿಪಕ್ಷಗಳು ಈ ವಿಷಯದ ಬಗ್ಗೆ ತಮ್ಮ ಮೌನವನ್ನು ಮುರಿಯುವಂತೆ ಮಾಡಲು ಪ್ರಧಾನಿ ಮೋದಿಯನ್ನು ಒತ್ತಾಯಿಸಲು ಬಯಸುತ್ತವೆ.

ಮಣಿಪುರ ವಿಚಾರದ ಕುರಿತು ಚರ್ಚೆ ನಡೆಸಲು ಪ್ರತಿಪಕ್ಷಗಳುಯ ಪಟ್ಟು ಹಿಡಿದ ಕಾರಣಕ್ಕೆ ಉಭಯ ಸದನ ಕಲಾಪವನ್ನು ಮುಂದೂಡಲಾಗಿದೆ.

ಈ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ನಾಯಕ ರಂಜೀತ್ ರಂಜನ್, ”ನಾವು ಮಣಿಪುರದ ಬಗ್ಗೆ ಚರ್ಚೆಯನ್ನು ಬಯಸುತ್ತಿದ್ದೇವೆ…ಇಂದು ಲೋಕಸಭೆಯಲ್ಲಿ ಚರ್ಚೆ ಆಗಬೇಕು…” ಎಂದು ಹೇಳಿದ್ದಾರೆ.

”ನಾವು ಈ ಅಧಿವೇಶನದ ಆರಂಭದಿಂದಲೂ ಸಂಸತ್ತಿನಲ್ಲಿ ಮಣಿಪುರ (ಸಮಸ್ಯೆ) ಕುರಿತು ಚರ್ಚೆ ನಡೆಸುತ್ತಿದ್ದೇವೆ. ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರತಿಪಕ್ಷಗಳ ಮೈತ್ರಿಕೂಟದ ನಾಯಕರು ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಇಂದು ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯದ ಬಗ್ಗೆ ಚರ್ಚೆ ನಡೆಯಬೇಕೆಂದು ನಾವು ಬಯಸುತ್ತೇವೆ” ಎಂದು ಕಾಂಗ್ರೆಸ್ ನಾಯಕ ರಂಜೀತ್ ರಂಜನ್ ಹೇಳಿದ್ದಾರೆ.

ಇದನ್ನೂ ಓದಿ: ಮಣಿಪುರ ಸಂಘರ್ಷ ಪರಿಹರಿಸದಿದ್ರೆ ದೇಶದ ಭದ್ರತೆಗೂ ಸಮಸ್ಯೆ ಆಗಲಿದೆ: ಅಧೀರ್ ಚೌಧರಿ ಎಚ್ಚರಿಕೆ

ದೆಹಲಿ ಆಡಳಿತ ಸೇವಾ ಮಸೂದೆ:

ದೆಹಲಿಯಲ್ಲಿನ ಆಡಳಿತ ಸೇವೆಗಳ ನಿಯಂತ್ರಣದ ಕುರಿತು ಮಸೂದೆಯನ್ನು ಮಂಡನೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಎಎಪಿ ಸಂಸದರು ಕಿಡಿಕಾರಿದರು.

ಸುಗ್ರೀವಾಜ್ಞೆಯನ್ನು ಪ್ರಜಾಸತ್ತಾತ್ಮಕವಲ್ಲ ಎಂದು ಕರೆದ ಚಡ್ಡಾ, ರಾಷ್ಟ್ರ ರಾಜಧಾನಿಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರವನ್ನು ನಾಶಮಾಡಲು ಇದು ಬಿಜೆಪಿಯ ತಂತ್ರವಾಗಿದೆ ಎಂದು ಹೇಳಿದರು.

”ಈ ಮಸೂದೆ ಕೇವಲ ದೇಶದ ಸಂವಿಧಾನದ ವಿರುದ್ಧ ಮಾತ್ರವಲ್ಲದೆ ದೆಹಲಿಯ 2 ಕೋಟಿ ಜನರ ವಿರುದ್ಧವೂ ಆಗಿದೆ. ದೆಹಲಿಯ ಜನರು ಅವರನ್ನು ಧಿಕ್ಕರಿಸಿ, ಎಎಪಿಗೆ ಬೆಂಬಲಿಸಿದ್ದಾರೆ. ಹಾಗಾಗಿ ಬಿಜೆಪಿ ಹೈಕಮಾಂಡ್ ಇದೀಗ ದೆಹಲಿ ಸರ್ಕಾರವನ್ನು ನಾಶಮಾಡಲು ನಿರ್ಧಾರವನ್ನು ತೆಗೆದುಕೊಂಡಿದೆ” ಎಂದು ಅವರು ಹೇಳಿದರು.

”ಆಗಸ್ಟ್ 4ರವರೆಗೆ ಸದನದಲ್ಲಿ ಹಾಜರಿರಲು ರಾಜ್ಯಸಭೆಯಲ್ಲಿ ತನ್ನ ಎಲ್ಲಾ ಸಂಸದರಿಗೆ ಎಎಪಿ ಮೂರು ಸಾಲಿನ ವಿಪ್ ನೀಡಿದೆ. ಈ ಮಸೂದೆಯು ದೆಹಲಿ ಸರ್ಕಾರಕ್ಕೆ ವರ್ಗಾವಣೆ ಮತ್ತು ಪೋಸ್ಟಿಂಗ್ ಅಧಿಕಾರವನ್ನು ನೀಡುವ ಸುಪ್ರೀಂ ಕೋರ್ಟ್ ಆದೇಶವನ್ನು ನಿರಾಕರಿಸುವ ಸುಗ್ರೀವಾಜ್ಞೆಯನ್ನು ಬದಲಿಸಲು ಪ್ರಯತ್ನಿಸುತ್ತದೆ.”

ಕೇಂದ್ರ ಸರ್ಕಾರವು ಉಭಯ ಸದನಗಳಲ್ಲಿ ಸಾಕಷ್ಟು ಸಂಖ್ಯಾಬಲ ಹೊಂದಿದ್ದರೂ ಮಸೂದೆ ಅಂಗೀಕಾರವನ್ನು ವಿರೋಧಿಸುವುದಾಗಿ I.N.D.I.A ಗುಂಪು ಈ ಹಿಂದೆ ಹೇಳಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...