Homeಮುಖಪುಟಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ: ದೃಢಪಡಿಸಿದ ವಿದೇಶಾಂಗ ಇಲಾಖೆ

ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ: ದೃಢಪಡಿಸಿದ ವಿದೇಶಾಂಗ ಇಲಾಖೆ

- Advertisement -
- Advertisement -

ಇಂದು (ಮೇ.10) ಸಂಜೆ 5 ಗಂಟೆಯಿಂದ ಅನ್ವಯವಾಗುವಂತೆ ಕದನ ವಿರಾಮಕ್ಕೆ ಭಾರತ ಮತ್ತು ಪಾಕಿಸ್ತಾನ ಒಪ್ಪಿರುವುದಾಗಿ ಭಾರತೀಯ ವಿದೇಶಾಂಗ ಸಚಿವಾಲಯ ಘೋಷಿಸಿದೆ.

“ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒ) ಇಂದು ಮಧ್ಯಾಹ್ನ 15:35 (3:35) ಗಂಟೆಗೆ ಭಾರತೀಯ ಡಿಜಿಎಂಒಗೆ ಕರೆ ಮಾಡಿದ್ದರು. ಭಾರತೀಯ ಕಾಲಮಾನ ಸಂಜೆ 5 ಗಂಟೆಯಿಂದ ಜಾರಿಗೆ ಬರುವಂತೆ ನೆಲ, ವಾಯು ಮತ್ತು ಸಮುದ್ರದ ಮೂಲಕ ನಡೆಸುವ ಎಲ್ಲಾ ರೀತಿಯ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸಲು ಎರಡೂ ಕಡೆಯವರು ಒಪ್ಪಂದ ಮಾಡಿಕೊಳ್ಳಲಾಗಿದೆ” ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ತಿಳಿಸಿದ್ದಾರೆ.

“ಭಾರತ ಮತ್ತು ಪಾಕಿಸ್ತಾನ ಇಂದು ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವ ಬಗ್ಗೆ ಒಪ್ಪಂದ ಮಾಡಿಕೊಂಡಿವೆ. ಭಾರತವು ಭಯೋತ್ಪಾದನೆಯ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳ ವಿರುದ್ಧ ದೃಢ ಮತ್ತು ರಾಜಿಯಾಗದ ನಿಲುವನ್ನು ನಿರಂತರವಾಗಿ ಕಾಯ್ದುಕೊಂಡಿದೆ. ಅದು ಹಾಗೆಯೇ ಮುಂದುವರಿಯುತ್ತದೆ” ಎಂದು ಭಾರತದ ವಿದೇಶಾಂಗ ಸಚಿವ ಎಸ್‌.ಜೈಶಂಕರ್ ಹೇಳಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಕೂಡ ಹೇಳಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಟ್ರಂಪ್, “ಅಮೆರಿಕದ ಮಧ್ಯಸ್ಥಿಕೆಯಲ್ಲಿ ರಾತ್ರಿಯಿಡೀ ನಡೆದ ಮಾತುಕತೆ ನಂತರ, ಭಾರತ ಮತ್ತು ಪಾಕಿಸ್ತಾನ ಸಂಪೂರ್ಣ ಹಾಗೂ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಘೋಷಿಸಲು ನನಗೆ ಸಂತೋಷವಾಗುತ್ತಿದೆ. ಬುದ್ದಿವಂತಿಕೆಯ ನಿರ್ಧಾರ ತೆಗೆದುಕೊಂಡ ಎರಡೂ ದೇಶಗಳಿಗೆ ಅಭಿನಂದನೆಗಳು” ಎಂದು ಬರೆದುಕೊಂಡಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ, “ಕಳೆದ 48 ಗಂಟೆಗಳಲ್ಲಿ, ಉಪಾಧ್ಯಕ್ಷರಾದ ಜೆ.ಡಿ ವ್ಯಾನ್ಸ್ ಮತ್ತು ನಾನು ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಮತ್ತು ಶೆಹಬಾಜ್ ಷರೀಫ್, ವಿದೇಶಾಂಗ ಸಚಿವ ಸುಬ್ರಹ್ಮಣ್ಯಂ ಜೈಶಂಕರ್, ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರರಾದ ಅಜಿತ್ ದೋವಲ್ ಮತ್ತು ಅಸಿಮ್ ಮಲಿಕ್ ಸೇರಿದಂತೆ ಹಿರಿಯ ಭಾರತೀಯ ಮತ್ತು ಪಾಕಿಸ್ತಾನಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದೇವೆ”

“ಭಾರತ ಮತ್ತು ಪಾಕಿಸ್ತಾನ ಸರ್ಕಾರಗಳು ತಕ್ಷಣದ ಕದನ ವಿರಾಮ ಮತ್ತು ಹೆಚ್ಚಿನ ವಿಷಯಗಳ ಕುರಿತು ಮಾತುಕತೆಗಳನ್ನು ಪ್ರಾರಂಭಿಸಲು ಒಪ್ಪಿಕೊಂಡಿವೆ ಎಂದು ಘೋಷಿಸಲು ನನಗೆ ಸಂತೋಷವಾಗುತ್ತಿದೆ.”

“ಶಾಂತಿಯ ಮಾರ್ಗವನ್ನು ಆರಿಸಿಕೊಳ್ಳುವಲ್ಲಿ ಪ್ರಧಾನಿಗಳಾದ ಮೋದಿ ಮತ್ತು ಷರೀಫ್ ಅವರ ಬುದ್ಧಿವಂತಿಕೆ, ವಿವೇಕ ಮತ್ತು ಮುತ್ಸದ್ದಿತನವನ್ನು ನಾವು ಶ್ಲಾಘಿಸುತ್ತೇವೆ” ಎಂದು ಬರೆದುಕೊಂಡಿದ್ದಾರೆ.

‘ಭಾರತ-ಪಾಕಿಸ್ತಾನ ಸಂಘರ್ಷಕ್ಕೂ ನಮಗೂ ಸಂಬಂಧವಿಲ್ಲ’: ಅಮೆರಿಕ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದೋರ್: ಪೊಲೀಸರಿಂದ ಹಣಕ್ಕಾಗಿ ಬೇಡಿಕೆ, ಹಲ್ಲೆ ಆರೋಪ; 25 ವರ್ಷದ ಟ್ಯಾಕ್ಸಿ ಚಾಲಕ ಆತ್ಮಹತ್ಯೆ: ಪೊಲೀಸ್ ಅಮಾನತು

ಇಂದೋರ್: ಪೊಲೀಸರ ಹಲ್ಲೆ ಮತ್ತು ಭ್ರಷ್ಟಾಚಾರವನ್ನು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿದ ನಂತರ 25 ವರ್ಷದ ಟ್ಯಾಕ್ಸಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಅಧಿಕಾರಿಗಳು ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಭಿಷೇಕ್...

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...

ಇರಾಕ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಬಿಡುಗಡೆ

ಇರಾಕಿನ ರಾಜಧಾನಿ ಬಾಗ್ದಾದ್‌ನಲ್ಲಿ ಒಂದು ವಾರದ ಹಿಂದೆ ಅಪಹರಿಸಲ್ಪಟ್ಟಿದ್ದ ಅಮೆರಿಕದ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ತಿಳಿಸಿದ್ದಾರೆ. ಮಾರ್ಚ್ 31ರಂದು ಶೆಲ್ಲಿ...

ಅಸ್ಸಾಂನ ನಾಗಾಂವ್‌ನಲ್ಲಿ ದರೋಡೆ ಶಂಕೆಯ ಮೇಲೆ ಗುಂಪು ದಾಳಿ: ಮೂವರು ಮುಸ್ಲಿಂ ಪುರುಷರು ಸಾವು

ದರೋಡೆಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ನಡೆದ ಗುಂಪು ದಾಳಿಯಲ್ಲಿ ಮೂವರು ಮುಸ್ಲಿಂ ಪುರುಷರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸೈಫುಲ್ಲಾ, ಅಜೀಬುರ್ ಅಲಿಯಾಸ್ ಖೈರುಲ್ ಮತ್ತು ಇನಾಮುಲ್...