Homeಮುಖಪುಟಭಾರತದಲ್ಲಿ ಸಂಪತ್ತಿನ ಅಸಮಾನತೆಯಲ್ಲಿ ಐತಿಹಾಸಿಕ ಮಟ್ಟದಲ್ಲಿ ಹೆಚ್ಚಳ: ವರದಿ

ಭಾರತದಲ್ಲಿ ಸಂಪತ್ತಿನ ಅಸಮಾನತೆಯಲ್ಲಿ ಐತಿಹಾಸಿಕ ಮಟ್ಟದಲ್ಲಿ ಹೆಚ್ಚಳ: ವರದಿ

- Advertisement -
- Advertisement -

ಪ್ಯಾರಿಸ್ ಮೂಲದ ವಿಶ್ವ ಅಸಮಾನತೆಯ ಪ್ರಯೋಗಾಲಯವು(World Inequality Lab) ಭಾರತದಲ್ಲಿ ಆದಾಯ ಮತ್ತು ಸಂಪತ್ತಿನ ಅಸಮಾನತೆ, 1922-2023: ದಿ ರೈಸ್ ಆಫ್ ದಿ ಬಿಲಿಯನೇರ್ ರಾಜ್ ಎಂಬ ಶೀರ್ಷಿಕೆಯಡಿ ವರದಿಯನ್ನು ಬಹಿರಂಗಪಡಿಸಿದ್ದು, ಭಾರತದಲ್ಲಿ ಸಂಪತ್ತಿನ ಅಸಮಾನತೆಯಲ್ಲಿ ಐತಿಹಾಸಿಕವಾಗಿ ಹೆಚ್ಚಳವಾಗಿದೆ ಎಂದು ಹೇಳಿದೆ.

ಭಾರತದ ಜನಸಂಖ್ಯೆಯ ಅಗ್ರ ಶೇ.1ರಷ್ಟು ಜನರು ದೇಶದ ಆದಾಯದ ಹೆಚ್ಚಿನ ಪಾಲು ಹೊಂದಿದ್ದಾರೆ ಎಂದು ವರ್ಲ್ಡ್ ಇನ್ಈಕ್ವಾಲಿಟಿ ಲ್ಯಾಬ್ (ಡಬ್ಲ್ಯುಐಎಲ್)ನ ಅಧ್ಯಯನ ವರದಿಯು ಹೇಳಿದ್ದು, ಒಟ್ಟು ಆದಾಯ ಮತ್ತು ಸಂಪತ್ತಿನಲ್ಲಿ ಅಗ್ರ 1% ಭಾರತೀಯರ ಪಾಲು 2022-23ರಲ್ಲಿ ಅದರ ಅತ್ಯಧಿಕ ಮಟ್ಟವನ್ನು ತಲುಪುವ ನಿರೀಕ್ಷೆಯಿದೆ ಎಂದು ಹೇಳಿದೆ.

World Inequality Lab 1922 ಮತ್ತು 2022ರ ನಡುವಿನ ಡೇಟಾವನ್ನು ವಿಶ್ಲೇಷಿಸಿದೆ. ಈ ವೇಳೆ ಸಂಪತ್ತಿನ ಅಸಮಾನತೆಯು ಐತಿಹಾಸಿಕ ಮಟ್ಟದಲ್ಲಿವೆ. ಇದು ಎಷ್ಟರ ಮಟ್ಟಿಗೆ ಎಂದರೆ ಬ್ರಿಟಿಷರ್ ವಶಾಹತು ಶಾಹಿ ಆಡಳಿತಕ್ಕಿಂತ ಹೆಚ್ಚು ಅಸಮಾನವಾಗಿದೆ ಎಂದು ಹೇಳಿದೆ.

2000 ವಿಷವಿಯ ಆರಂಭದಿಂದಲೂ ಭಾರತದಲ್ಲಿ ಸಂಪತ್ತಿನ ಅಸಮಾನತೆ ಗಗನಕ್ಕೇರಿದೆ, 2022-23ರಲ್ಲಿ ಅಗ್ರ 1 ಶೇಕಡಾ ಜನಸಂಖ್ಯೆಯ ಆದಾಯ ಮತ್ತು ಸಂಪತ್ತಿನ ಪಾಲು ಅನುಕ್ರಮವಾಗಿ ಶೇಕಡಾ 22.6 ಮತ್ತು ಶೇಕಡಾ 40.1ಕ್ಕೆ ಏರಿದೆ. 1980ರ ದಶಕದಿಂದ ಭಾರತದಲ್ಲಿ ಅಸಮಾನತೆಯು ತೀವ್ರವಾಗಿ ಹೆಚ್ಚುತ್ತಿದೆ ಮುಖ್ಯವಾಗಿ 2014-15 ಮತ್ತು 2022-23ರ ನಡುವೆ ಸಂಪತ್ತಿನ ಕೇಂದ್ರೀಕರಣದ ವಿಷಯದಲ್ಲಿ ಅಸಮಾನತೆಯ ಹೆಚ್ಚಳವನ್ನು ಗಮನಿಸಿದೆ.

ಈ ಕುರಿತು ಪ್ರಬಂಧವನ್ನು ಥಾಮಸ್ ಪಿಕೆಟ್ಟಿ (ಪ್ಯಾರಿಸ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ವರ್ಲ್ಡ್ ಇನ್ಈಕ್ವಾಲಿಟಿ ಲ್ಯಾಬ್), ಲ್ಯೂಕಾಸ್ ಚಾನ್ಸೆಲ್ (ಹಾರ್ವರ್ಡ್ ಕೆನಡಿ ಸ್ಕೂಲ್ ಮತ್ತು ವರ್ಲ್ಡ್‌ ಇನ್ಈಕ್ವಾಲಿಟಿ ಲ್ಯಾಬ್) ಮತ್ತು ನಿತಿನ್ ಕುಮಾರ್ ಭಾರ್ತಿ (ನ್ಯೂಯಾರ್ಕ್ ವಿಶ್ವವಿದ್ಯಾಲಯ ಮತ್ತು ವರ್ಲ್ಡ್ ಇನ್ಈಕ್ವಾಲಿಟಿ ಲ್ಯಾಬ್) ಸಿದ್ದಪಡಿಸಿದ್ದಾರೆ.

1980ರ ದಶಕದ ಆರಂಭದಲ್ಲಿ, ಭಾರತ ಸರ್ಕಾರವು 1991ರಲ್ಲಿ ಉದಾರೀಕರಣಕ್ಕೆ ಕಾರಣವಾದ ಆರ್ಥಿಕ ಸುಧಾರಣೆಗಳನ್ನು ಪ್ರಾರಂಭಿಸಿದಾಗ, ಅಗ್ರ 1 ಶೇಕಡಾ ಆದಾಯದ ಷೇರುಗಳಲ್ಲಿನ ಕುಸಿತವು ಸ್ಥಗಿತಗೊಂಡಿತ್ತು. 1990ರ ದಶಕದ ಆರಂಭದಲ್ಲಿ, ಅಗ್ರ 1 ಶೇಕಡಾ ಆದಾಯದ ಷೇರುಗಳು ಮುಂದಿನ 30 ವರ್ಷಗಳಲ್ಲಿ ಸ್ಥಿರವಾಗಿ ಹೆಚ್ಚಿದ್ದು, 2022ರಲ್ಲಿ ಸಾರ್ವಕಾಲಿಕ ಗರಿಷ್ಠ 22.6 ಶೇಕಡಾವನ್ನು ತಲುಪಿದೆ. ಅಸಮಾನತೆಯು ಸ್ವಾತಂತ್ರ್ಯದ ನಂತರ 1980ರ ದಶಕದ ಆರಂಭದವರೆಗೆ ಕಡಿಮೆಯಾಯಿತು, ನಂತರ ಅದು ಏರಲು ಪ್ರಾರಂಭಿಸಿತು ಮತ್ತು 2000 ವಿಷವಿಯ ಆರಂಭದಿಂದ ಗಗನಕ್ಕೇರಿದೆ.

ಆದಾಯಗಳು ಮತ್ತು ಸಂಪತ್ತಿನ ಅತಿಯಾದ ಕೇಂದ್ರೀಕರಣವು ಸಮಾಜ ಮತ್ತು ಸರಕಾರದ ಮೇಲೆ ಅಸಮಾನ ಪ್ರಭಾವಕ್ಕೆ ಕಾರಣವಾಗಬಹುದು ಎಂದು ವರದಿ ಹೇಳಿದ್ದು,ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿಯ ವಿವಿಧ ಪ್ರಮುಖ ಸಂಸ್ಥೆಗಳ ಋಜುತ್ವವು ರಾಜಿ ಮಾಡಿಕೊಂಡಿರುವಂತೆ ಕಂಡುಬರುತ್ತಿದೆ. ಇದು ಭಾರತವು ಶ್ರೀಮಂತ ಪ್ರಭುತ್ವದತ್ತ ಜಾರುವ ಸಾಧ್ಯತೆಯನ್ನು ಇನ್ನಷ್ಟು ಸ್ಪಷ್ಟಗೊಳಿಸಿದೆ ಎಂದು ಹೇಳಿದೆ. ಆದಾಯ ಮತ್ತು ಸಂಪತ್ತು ಎರಡನ್ನೂ  ಲೆಕ್ಕ ಹಾಕಲು ತೆರಿಗೆ ಸಂಹಿತೆಯ ಪುನರ್ರಚನೆ ಅಗತ್ಯವಾಗಿದೆ ಎಂದು ವರದಿಯು ತಿಳಿಸಿದೆ.

ಪತ್ರಿಕೆಯ ಸಂಶೋಧನೆ ಪ್ರಬಂಧ ಪ್ರಕಟದ ಬೆನ್ನಲ್ಲಿ 2014ರಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಮೋದಿ ಸರಕಾರವನ್ನು ಟೀಕಿಸಿದ ಕಾಂಗ್ರೆಸ್, ಕೇಂದ್ರದ ತನ್ನ ಸರ್ಕಾರವು ಬಡತನವನ್ನು ನಿರ್ಮೂಲನೆ ಮಾಡಲು ಮತ್ತು ಸಮಾಜದ ಅಂಚಿನಲ್ಲಿರುವ ವರ್ಗದವರಿಗೆ ಆದಾಯ ಮತ್ತು ಜೀವನ ಮಟ್ಟವನ್ನು ಹೆಚ್ಚಿಸಲು ಅವಿರತವಾಗಿ ಕೆಲಸ ಮಾಡಿದೆ ಎಂದು ಬಿಜೆಪಿ ಸುಳ್ಳು ಹೇಳಿದೆ ಎಂದು ಟೀಕಿಸಿದೆ.

ಇದನ್ನು ಓದಿ: ಯೋಗಿ ಆದಿತ್ಯನಾಥ್‌ಗೆ ಶ್ಲಾಘಿಸಿ, ಮುಸ್ಲಿಮರ ವಿರುದ್ಧ ದ್ವೇಷ ಪೂರಿತ ಹೇಳಿಕೆ: ಬರೇಲಿ ಕೋರ್ಟ್ ಜಡ್ಜ್‌ಗೆ ಹೈಕೋರ್ಟ್‌ ತರಾಟೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...