Homeಮುಖಪುಟಭಾರತದ ಇಂಟರ್ನೆಟ್ ಸ್ಪೀಡ್ ವಿಶ್ವದಲ್ಲಿಯೇ ಅತ್ಯಂತ ಕಳಪೆ; ಡಿಜಿಟಲ್ ಇಂಡಿಯಾ?

ಭಾರತದ ಇಂಟರ್ನೆಟ್ ಸ್ಪೀಡ್ ವಿಶ್ವದಲ್ಲಿಯೇ ಅತ್ಯಂತ ಕಳಪೆ; ಡಿಜಿಟಲ್ ಇಂಡಿಯಾ?

ಜಗತ್ತಿನ 138 ದೇಶಗಳ ಪೈಕಿ ಭಾರತವು 131ನೇ ಸ್ಥಾನದಲ್ಲಿದೆ

- Advertisement -
- Advertisement -

ಭಾರತದಲ್ಲಿ ನಾವು ಬಳಸುವ ಇಂಟರ್ನೆಟ್ ಸ್ಪೀಡ್ ಜಗತ್ತಿನ ಉಳಿದ ದೇಶಗಳಿಗಿಂತ ಅತ್ಯಂತ ಕೆಳಮಟ್ಟದಲ್ಲಿದ್ದು, ಜಗತ್ತಿನ 138 ದೇಶಗಳ ಪೈಕಿ ಭಾರತವು 131ನೇ ಸ್ಥಾನದಲ್ಲಿದೆ ಎಂಬುದು ಅಧ್ಯಯನದ ವರದಿಯೊಂದರ ಫಲಿತಾಂಶದಿಂದ ತಿಳಿದುಬಂದಿದೆ.

ಮೊಬೈಲ್ ಇಂಟರ್ನೆಟ್/ಡಾಟಾ ಸ್ಪೀಡ್‍ನಲ್ಲಿ ಭಾರತಕ್ಕೆ ವಿಶ್ವದಲ್ಲಿ 131 ನೇ ಸ್ಥಾನ ಲಭಿಸಿದ್ದು, ಈ ಸಲದ Ranking ಗಣನೆಗೆ  ಒಟ್ಟು 138 ದೇಶಗಳನ್ನು ತೆಗೆದುಕೊಳ್ಳಲಾಗಿದೆ. ಕಳೆದ ವರ್ಷ 145 ದೇಶಗಳ ಪೈಕಿ 128ನೇ ಸ್ಥಾನದಲ್ಲಿದ್ದ ಭಾರತ, ಅದಕ್ಕಿಂತ ಹಿಂದಿನ ವರ್ಷ 110 ನೇ ಸ್ಥಾನದಲ್ಲಿತ್ತು. ಸದ್ಯಕ್ಕೆ, ಶ್ರೀಲಂಕಾ, ಪಾಕೀಸ್ಥಾನ ಹಾಗೂ ನೇಪಾಳ ಕೂಡಾ ಭಾರತಕ್ಕಿಂತ ಮೇಲಿನ ಸ್ಥಾನಗಳನ್ನು ಪಡೆದಿವೆ ಎಂದು ಗೆಜೆಟ್ ನೌ ವರದಿ ಮಾಡಿದೆ.

ವಿಶ್ವದ ಸರಾಸರಿ ಡೌನ್‍ಲೋಡ್ ಸ್ಪೀಡ್ 35.26 Mbps (megabit per second) ಆಗಿದ್ದರೆ, ಭಾರತದ ಸರಾಸರಿ ಡೌನ್‍ಲೋಡ್ ಸ್ಪೀಡ್ 12.07 Mbps. ಇನ್ನು ಗಣನೆಗೆ ತೆಗೆದುಕೊಂಡಿರುವ ಎಲ್ಲಾ ದೇಶಗಳ ಸರಾಸರಿ ಅಪ್‍ಲೋಡ್ ಸ್ಪೀಡ್ 11.22 Mbps ಆಗಿದ್ದರೆ, ಭಾರತದ್ದು, 4.31 Mbps.

ಇದನ್ನೂ ಓದಿ: ಡಿಜಿಟಲ್ ಮಾಧ್ಯಮಗಳ ಕಡೆ ಗಮನಹರಿಸಿ: ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ಕೇಂದ್ರ ಸರ್ಕಾರ

ಇದನ್ನೂ ಓದಿ: ಭಾರತದ ಡಿಜಿಟಲ್ ಉತ್ತೇಜನಕ್ಕೆ ಗೂಗಲ್‌ನಿಂದ 75,000 ಕೋಟಿ ರೂ. ನಿಧಿ

ಮೊದಲನೆಯ ಸ್ಥಾನದಲ್ಲಿರುವ ದಕ್ಷಿಣ ಕೊರಿಯಾದ ಸರಾಸರಿ ಇಂಟರ್ನೆಟ್ ವೇಗ 121.00 Mbps. ಇದು ಭಾರತದ ಸರಾಸರಿ ಬ್ರಾಡ್‍ಬ್ಯಾಂಡ್ ಸ್ಪೀಡ್‍ 46.47 Mbps ಗಿಂತಾ ಸುಮಾರು ಎರಡೂವರೆ ಪಟ್ಟು ಹೆಚ್ಚು. ಶ್ರೀಲಂಕಾ 19.95 Mbps ಹೊಂದಿದ್ದು 102ನೆಯ ಸ್ಥಾನ ಪಡೆದಿದ್ದರೆ, ಪಾಕೀಸ್ಥಾನ 17.13 Mbps ಸ್ಪೀಡ್‍ನೊಂದಿಗೆ 116ನೆಯ ಸ್ಥಾನದಲ್ಲಿದೆ. ನೇಪಾಳ ಕೂಡಾ 17.12 Mbps ಸ್ಪೀಡ್ ಸರಸಾರಿ ಇಂಟರ್ನೆಟ್‍ನೊಂದಿಗೆ 117ನೆಯ ಸ್ಥಾನದಲ್ಲಿದೆ.

ಭಾರತವನ್ನು ವಿಶ್ವಗುರು ಮಾಡುತ್ತೇವೆ ಎಂದು ಆರ್ಥಿಕತೆ, ಹಸಿವು, ಕೊರನಾ ಸೇರಿದಂತೆ ಕೊನೆಗೆ ಇಂಟರ್ನೆಟ್‌ ಸ್ಪೀಡ್‌ನಲ್ಲೂ ಕಳಪೆ ಪ್ರದರ್ಶನ ನೀಡುತ್ತಿರುವುದಕ್ಕೆ ವಿಮರ್ಶಕರಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಡಿಜಿಟಲ್ ಇಂಡಿಯಾ ಮಾಡುತ್ತೇವೆ ಎಂದು ಇಂಟರ್ನೆಟ್ ಬಳಕೆಯ ಸ್ವೀಡ್‌ನಲ್ಲಿ ಜಗತ್ತಿನಲ್ಲಿಯೇ ಅತ್ಯಂತ ಅಗ್ಗದ ಸ್ಪೀಡ್ ಹೊಂದಿರುವ ದೇಶವನ್ನಾಗಿ ಮಾಡಲಾಗಿದೆ. ಪ್ರತಿಯೊಂದನ್ನೂ ಆನ್ಲೈನ್ ಮಾಡುತ್ತೇವೆ ಎಂದು ಹೊರಟಿರುವ ಸರ್ಕಾರ ಭಾರತದ ವಾಸ್ತವವನ್ನು ಅರಿತಂತೆ ಕಾಣುತ್ತಿಲ್ಲ.

ಕೊರೊನಾ ಕಾರಣದಿಂದ ಆನ್ಲೈನ್ ತರಗತಿಗಳಿಗಾಗಿ ಪರದಾಡುತ್ತಿರುವ ಹಳ್ಳಿಯ ಮಕ್ಕಳನ್ನು ನೆನೆಸಿಕೊಂಡರೆ ನಮ್ಮ ಡಿಜಿಟಲ್ ಇಂಡಿಯಾದ ಕಲ್ಪನೆ ಕಣ್ಣಮುಂದೆ ಬರುತ್ತದೆ. ಎಷ್ಟೋ ಬಾರಿ ಸರ್ಕಾರಿ ಕಛೇರಿಗಳಲ್ಲಿಯೇ ಇಂಟರ್ನೆಟ್ ಸ್ಪೀಡ್ ಕಡಿಮೆಯಾಗಿ ಕಛೇರಿಯ ಕೆಲಸಗಳು ನಿಂತುಹೋಗಿರುವ ಉದಾಹರಣೆಗಳು ಸಾಕಷ್ಟಿವೆ. ಹೀಗಿರುವಾಗ ಎಲ್ಲವನ್ನೂ ಡಿಜಿಟಲ್ ಮಾಡುತ್ತೇವೆ ಎನ್ನುವ ಸರ್ಕಾರಕ್ಕೆ ವಾಸ್ತವದ ಅರಿವಿಲ್ಲ ಎಂದೇ ಹೇಳಬೇಕಿದೆ.


ಇದನ್ನೂ ಓದಿ: ಮೋಡಿಯ ಮಾಡಿದವರ ಪರಸಂಗ: ಡಿಜಿಟಲ್ ಕಾಲದಲ್ಲೊಂದು ತಾರತಮ್ಯದ ತಕರಾರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...