Homeಸಿನಿಮಾಕ್ರೀಡೆಕ್ರೀಡಾ ವ್ಯವಸ್ಥೆ ವಿರುದ್ಧ ಟೀಕೆ: ಭಾರತದ ಜಾವೆಲಿನ್ ಕೋಚ್ ಉವೆ ಹಾನ್ ವಜಾ!

ಕ್ರೀಡಾ ವ್ಯವಸ್ಥೆ ವಿರುದ್ಧ ಟೀಕೆ: ಭಾರತದ ಜಾವೆಲಿನ್ ಕೋಚ್ ಉವೆ ಹಾನ್ ವಜಾ!

ಉವೆ ಹಾನ್ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ನೀರಜ್ ಚೋಪ್ರಾಗೆ ಕೋಚ್ ಆಗಿ ಕೆಲಸ ಮಾಡಿದ್ದರು.

- Advertisement -
- Advertisement -

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ನೀರಜ್ ಚೋಪ್ರಾ ಚಿನ್ನ ಗೆಲ್ಲಲು ಕೋಚ್ ಆಗಿ ಕಾರ್ಯನಿರ್ವಹಿಸಿದ್ದ ಜರ್ಮನಿ ದೇಶದ ಜಾವಲಿನ್ ದಂತಕಥೆ ಉವೆ ಹಾನ್ ರನ್ನು ಭಾರತೀಯ ಅಥ್ಲೆಟಿಕ್ಸ್ ಫೆಡರೇಷನ್ ವಜಾಗೊಳಿಸಿದೆ.

104.80 ಮೀಟರ್ ದೂರ ಜಾವಲಿನ್ ಎಸೆದು ವಿಶ್ವದಾಖಲೆ ಮಾಡಿರುವ ಮತ್ತು ನೂರು ಮೀಟರ್‌ಗಿಂತ ಹೆಚ್ಚು ದೂರ ಎಸೆದ ಏಕೈಕ ಕ್ರೀಡಾಪಟು ಎನಿಸಿಕೊಂಡಿರುವ ಉವೆ ಹಾನ್ 1999ರಿಂದ ಕೋಚ್ ಆಗಿ ಕೆಲಸ ಮಾಡುತ್ತಿದ್ದಾರೆ. 2017ರಿಂದ ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾದೊಂದಿಗೆ ಒಪ್ಪಂದ ಮಾಡಿಕೊಂಡು ಜಾವಲಿನ್ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

ಉವೆ ಹಾನ್ ರವರ ಪ್ರದರ್ಶನ ಚೆನ್ನಾಗಿಲ್ಲ. ಹಾಗಾಗಿ ಅವರನ್ನು ಬದಲಿಸುತ್ತೇವೆ. ಅವರ ಬದಲಿಗೆ ಇಬ್ಬರು ಕೋಚ್‌ಗಳನ್ನು ನೇಮಿಸುತ್ತೇವೆ ಎಂದು ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾ ಅಧ್ಯಕ್ಷ ಅದಿಲ್ಲೆ ಸುಮರಿವಾಲಾ ಹೇಳಿದ್ದಾರೆ.


ಇದನ್ನೂ ಓದಿ: ಒಲಿಂಪಿಕ್ಸ್ ಪದಕಗಳ ಹಿಂದಿದೆ ಪರಿಶ್ರಮ; ತೆರೆಯ ಹಿಂದಿನ ಸಾಧಕರಿವರು


ಸೋಮವಾರ ನಡೆದ ಎರಡು ದಿನಗಳ ಕಾರ್ಯನಿರ್ವಾಹಕ ಮಂಡಳಿ ಸಭೆಯಲ್ಲಿ ಕ್ರೀಡಾಪಟುಗಳು ಮತ್ತು ತರಬೇತುದಾರರ ಕಾರ್ಯಕ್ಷಮತೆಯ ಪರಿಶೀಲನೆಯ ನಂತರ ಹೋನ್ ಅವರನ್ನು ವಜಾಗೊಳಿಸುವ ನಿರ್ಧಾರ ಬಂದಿದೆ. ಒಲಿಂಪಿಕ್ ಚಿನ್ನ ಗೆದ್ದಾಗ ಚೋಪ್ರಾ ಅವರಿಗೆ ತರಬೇತಿ ನೀಡಿದ ಕ್ಲೌಸ್ ಬಾರ್ಟೋನಿಯೆಟ್ಜ್ ಕೋಚ್ ಆಗಿ ಮುಂದುವರಿಯಲಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಜೂನ್ ತಿಂಗಳಲ್ಲಿ ಉವೆ ಹಾನ್ ಭಾರತೀಯ ಕ್ರೀಡಾ ವ್ಯವಸ್ಥೆಯ ವಿರುದ್ಧ ಟೀಕೆ ಮಾಡಿದ್ದರು. “ನಾನು ಕೋಚ್ ಆಗಿ ಬಂದಾಗ ಇಲ್ಲೇನಾದ್ರೂ ಬದಲಾಯಿಸಬಹುದೆಂದು ಊಹಿಸಿದ್ದೆ. ಆದರೆ ಭಾರತೀಯ ಕ್ರೀಡಾ ಪ್ರಾಧಿಕಾರ ಹಾಗೂ ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾದಲ್ಲಿ ಇದು ಸಾಧ್ಯವಿಲ್ಲ. ತರಬೇತಿ, ಕ್ಯಾಂಪ್ ಬಿಡಿ, ನಮ್ಮ ಟಾಪ್ ಆಟಗಾರರಿಗೆ ಬೇಕಾಗುವ ಪೌಷ್ಠಿಕ ಆಹಾರ ಕೂಡಾ ಸಿಗುತ್ತಿಲ್ಲ” ಎಂದು ಉವೆ ಹಾನ್ ಒಲಿಂಪಿಕ್ಸ್ ಆರಂಭವಾಗುವ ಒಂದು ತಿಂಗಳ ಮೊದಲು ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು.

“ಪಟಿಯಾಲದ ಧಗೆಯಲ್ಲಿ ಕೇವಲ ಬೆಳಗಿನ ಜಾವ ಹಾಗೂ ಸಂಜೆ ಆರರ ಬಳಿಕ ಮಾತ್ರ ತರಬೇತಿ ಸಾಧ್ಯವಾಗಿದ್ದರೂ, ಆಟಗಾರರನ್ನು ಹೊರದೇಶಕ್ಕೆ ಕಳುಹಿಸಿ ತರಬೇತಿ ಪಡೆಯಲು ಹಾಗೂ ಪಂದ್ಯಗಳಲ್ಲಿ ಭಾಗವಹಿಸುವಂತೆ ಮಾಡಲು ಸರಕಾರ ಏನೂ ಮಾಡುತ್ತಿಲ್ಲ. ನೀರಜ್ ಚೋಪ್ರಾ ವಿದೇಶದಲ್ಲಿ ತರಬೇತಿ ಪಡೆಯಲು ಸಹಾಯ ಮಾಡಿದ್ದು ಸರಕಾರ ಅಲ್ಲ, ಬದಲಿಗೆ ಅವರನ್ನು ವೈಯಕ್ತಿಕವಾಗಿ ಪ್ರಾಯೋಜಿಸುತ್ತಿರುವ ಜೆಎಸ್‌ಡಬ್ಲ್ಯೂ” ಎಂದೂ ಅವರು ಹೇಳಿದ್ದರು.

ಕೆಲ ದಿನಗಳ ಹಿಂದೆ ಅಥ್ಲೆಟಿಕ್ಸ್ ಫೆಡರೇಷನ್ ಅಧ್ಯಕ್ಷ ಅದಿಲ್ಲೆ ಸುಮೇರಿವಾಲಾ “ಒಲಿಂಪಿಕ್ಸ್‌ನಲ್ಲಿ ಚಿನ್ನಗೆದ್ದ ನೀರಜ್ ಚೋಪ್ರಾಗೆ ಕಾಶೀನಾಥ್ ನಾಯ್ಕ್‌ ಎಂಬುವವರನ್ನು ಕೋಚ್ ಆಗಿ ನೇಮಿಸಿಲ್ಲ. ಕಾಶೀನಾಥ್ ನಾಯ್ಕ್‌ ಯಾರು ಎಂಬುದೇ ನಮಗೆ ಗೊತ್ತಿಲ್ಲ” ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಆ ಮೂಲಕ ಎರಡು ವರ್ಷಗಳ ಕಾಲ ನೀರಜ್‌ ಚೋಪ್ರಾಗೆ ಕೋಚ್ ಆಗಿ ತರಬೇತಿ ನೀಡಿದ್ದ ಕನ್ನಡಿಗ ಕಾಶೀನಾಥ್‌ರನ್ನು ಅವಮಾನಿಸಲಾಗಿತ್ತು. ನಂತರ ಕಾಶಿನಾಥ್ ಮನೆಗೆ ಚಿನ್ನದ ಹುಡುಗ ನೀರಜ್ ಚೋಪ್ರಾ ಭೇಟಿ ನೀಡುವ ಮೂಲಕ ವಿವಾದಗಳಿಗೆ ತೆರೆ ಎಳೆದಿದ್ದರು.


ಇದನ್ನೂ ಓದಿ: ನಾನು ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಪದಕ ಗೆದ್ದಿದ್ದು ಸುಳ್ಳೇ? ನೀರಜ್ ಚೋಪ್ರಾ ಮಾಜಿ ಕೋಚ್ ಕನ್ನಡಿಗ ಕಾಶಿನಾಥ್ ನಾಯ್ಕ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...