Homeಅಂತರಾಷ್ಟ್ರೀಯಭಾರತದ ಕೋವಿಡ್ 2ನೆ ಅಲೆ ಜಾಗತಿಕ ತೀವ್ರತೆಗೂ ಕಾರಣವಾಗಿದೆ: ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ

ಭಾರತದ ಕೋವಿಡ್ 2ನೆ ಅಲೆ ಜಾಗತಿಕ ತೀವ್ರತೆಗೂ ಕಾರಣವಾಗಿದೆ: ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ

- Advertisement -
- Advertisement -

ಸಾಂಕ್ರಾಮಿಕ ರೋಗವು ಪ್ರಾರಂಭವಾದ ಒಂದು ವರ್ಷದ ನಂತರ, ವಿಶ್ವಾದ್ಯಂತ ಸೋಂಕುಗಳು ತಮ್ಮ ಹಿಂದಿನ ಗರಿಷ್ಠತೆಯನ್ನು ಮೀರಿವೆ. ಪ್ರತಿದಿನ ವರದಿಯಾದ ಕೋವಿಡ್ ಪ್ರಕರಣಗಳ ಸಂಖ್ಯೆ ಈಗ ಹಿಂದೆಂದಿಗಿಂತಲೂ ಹೆಚ್ಚಾಗಿದೆ.

“ಆತಂಕಕಾರಿ ದರದಲ್ಲಿ ಪ್ರಕರಣಗಳು ಮತ್ತು ಸಾವುಗಳು ಹೆಚ್ಚುತ್ತಲೇ ಇವೆ. ಹೆಚ್ಚಳಕ್ಕೆ ಒಂದು ಪ್ರಮುಖ ಕಾರಣ: ಭಾರತದ ಎರಡನೇ ಅಲೆಯ ತೀವ್ರತೆ. ಎಲ್ಲಾ ಹೊಸ ಜಾಗತಿಕ ಪ್ರಕರಣಗಳಲ್ಲಿ ಮೂರರಲ್ಲಿ ಒಂದು ಭಾರತದಲ್ಲಿ ಕಂಡುಬರುತ್ತಿದೆ’ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅಧಾನಮ್ ಘೆಬ್ರೆಯೆಸಸ್ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದು ಈ ರೀತಿ ಆಗಬೇಕಾಗಿರಲಿಲ್ಲ. ಈ ವರ್ಷದ ಆರಂಭದಲ್ಲಿ, ಭಾರತವು ಸಾಂಕ್ರಾಮಿಕ ರೋಗದ ತಡೆಯುವ ಲಕ್ಷಣಗಳನ್ನು ತೋರಿಸಿತ್ತು. ದೈನಂದಿನ ಪ್ರಕರಣಗಳ ಸಂಖ್ಯೆ 10,000 ಕ್ಕಿಂತ ಕಡಿಮೆಯಾಗಿತ್ತು ಮತ್ತು ಸ್ಥಳೀಯವಾಗಿ ತಯಾರಿಸಿದ ಲಸಿಕೆಗಳಿಂದ ಲಸಿಕಾ ಅಭಿಯಾನವನ್ನೂ ಸರ್ಕಾರ ಆರಂಭಿಸಿತ್ತು. ಆದರೆ ಈಗ ಪರಿಸ್ಥಿತಿ ತೀವ್ರವಾಗಿದೆ. ಸತತವಾಗಿ ದಿನಕ್ಕೆ 2 ಲಕ್ಷಕ್ಕೂ ಹೆಚ್ಚು ಪ್ರಕರಣ ವರದಿಯಾಗುತ್ತಿರುವುದು ಕಳವಳದ ವಿಷಯ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಲಸಿಕೆ; ಕೇಂದ್ರ ಸರ್ಕಾರ ಅಸ್ತು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...