Homeಮುಖಪುಟವೆನೆಜುವೆಲಾ ಮೇಲೆ ಅಮೆರಿಕ ದಾಳಿಗೆ ಖಂಡನೆ : ದೇಶದಾದ್ಯಂತ ಪ್ರತಿಭಟನೆಗೆ ಕರೆ ನೀಡಿದ ಭಾರತದ ಎಡಪಕ್ಷಗಳು

ವೆನೆಜುವೆಲಾ ಮೇಲೆ ಅಮೆರಿಕ ದಾಳಿಗೆ ಖಂಡನೆ : ದೇಶದಾದ್ಯಂತ ಪ್ರತಿಭಟನೆಗೆ ಕರೆ ನೀಡಿದ ಭಾರತದ ಎಡಪಕ್ಷಗಳು

- Advertisement -
- Advertisement -

ವೆನೆಜುವೆಲಾ ಮೇಲೆ ಅಮೆರಿಕ ನಡೆಸಿದ ಆಕ್ರಮಣವನ್ನು ಭಾರತದ ಎಡಪಕ್ಷಗಳು ತೀವ್ರವಾಗಿ ಖಂಡಿಸಿದ್ದು, ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿ ಸಿಲಿಯಾ ಫ್ಲೋರ್ಸ್ ಅವರ ಬಂಧನವನ್ನು ‘ಅಪಹರಣ’ ಎಂದು ಹೇಳಿದೆ. ಹಾಗೆಯೇ, ಅಮೆರಿಕದ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗಳಿಗೆ ಕರೆ ನೀಡಿವೆ.

ಸಿಪಿಐ(ಎಂ), ಸಿಪಿಐ, ಸಿಪಿಐ(ಎಂಎಲ್)ಎಲ್, ಆರ್‌ಎಸ್‌ಪಿ ಮತ್ತು ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್ ಪಕ್ಷಗಳು, ತೈಲ ನಿಕ್ಷೇಪಗಳನ್ನು ವಶಪಡಿಸಿಕೊಳ್ಳುವುದಾಗಿ ಅಮೆರಿಕ ಅಧ್ಯಕ್ಷ ನೀಡಿರುವ ಹೇಳಿಕೆಯು ಈ ದಾಳಿಯ ಹಿಂದಿನ ‘ನಿಜವಾದ ಉದ್ದೇಶಗಳನ್ನು’ ಬಯಲು ಮಾಡಿದೆ ಎಂದು ಹೇಳಿದೆ. ಅಮೆರಿಕದ ಆಕ್ರಮಣವನ್ನು ಖಂಡಿಸುವ ಇತರೆ ದೇಶಗಳೊಂದಿಗೆ ಧ್ವನಿಗೂಡಿಸುವಂತೆ ಮತ್ತು ವೆನೆಜುವೆಲಾದೊಂದಿಗೆ ದೃಢವಾಗಿ ನಿಲ್ಲುವಂತೆ ಭಾರತ ಸರ್ಕಾರವನ್ನು ಒತ್ತಾಯಿಸಿವೆ.

ಈ ಬಗ್ಗೆ ಎಡ ಪಕ್ಷಗಳ ಪ್ರಧಾನ ಕಾರ್ಯದರ್ಶಿಗಳಾದ ಎಂ.ಎ ಬೇಬಿ (ಸಿಪಿಐ-ಎಂ), ಡಿ ರಾಜಾ (ಸಿಪಿಐ), ದೀಪಂಕರ್ ಭಟ್ಟಾಚಾರ್ಯ (ಸಿಪಿಐ-ಎಂಎಲ್ಎಲ್), ಜಿ ದೇವರಾಜನ್ (ಎಐಎಫ್‌ಬಿ) ಮತ್ತು ಮನೋಜ್ ಭಟ್ಟಾಚಾರ್ಯ (ಆರ್‌ಎಸ್‌ಪಿ) ಅವರು ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

“ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಭಾಷಣದಲ್ಲಿ ವೆನೆಜುವೆಲಾದ ತೈಲ ನಿಕ್ಷೇಪಗಳನ್ನು ವಶಪಡಿಸಿಕೊಳ್ಳುವುದಾಗಿ ಹೇಳಿದ್ದಾರೆ. ಈ ಮೂಲಕ ಈ ಆಕ್ರಮಣದ ಹಿಂದಿನ ನಿಜವಾದ ಉದ್ದೇಶಗಳನ್ನು ಅವರು ಬಹಿರಂಗಪಡಿಸಿದ್ದಾರೆ. ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಒಂದು ಹೆಜ್ಜೆ ಮುಂದೆ ಹೋಗಿ ಕ್ಯೂಬಾ ಮತ್ತು ಮೆಕ್ಸಿಕೊ ಅವರ ಮುಂದಿನ ಗುರಿಯಾಗಲಿದೆ ಎಂದು ಎಚ್ಚರಿಸಿದ್ದಾರೆ” ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

“ಅಮೆರಿಕದ ರಾಷ್ಟ್ರೀಯ ಭದ್ರತಾ ಕಾರ್ಯತಂತ್ರ 2025 ಬಿಡುಗಡೆಯಾದ ಕೆಲವು ದಿನಗಳ ನಂತರ ಈ ದಾಳಿ ನಡೆದಿದೆ. ಇದು ಅಮೆರಿಕದ ಸಾಮ್ರಾಜ್ಯಶಾಹಿ ಇಡೀ ಪ್ರಪಂಚದ ಮೇಲೆ ತನ್ನ ಪ್ರಾಬಲ್ಯವನ್ನು ಹೇರಲು ಪ್ರಯತ್ನಿಸುತ್ತಿದೆ ಎಂಬುವುದನ್ನು ಸ್ಪಷ್ಟಪಡಿಸುತ್ತದೆ” ಎಂದು ಎಡ ಪಕ್ಷಗಳ ನಾಯಕರು ಹೇಳಿದ್ದಾರೆ.

“ಇಡೀ ಪಶ್ಚಿಮ ಗೋಳಾರ್ಧವನ್ನು ತನ್ನ ಹಿತ್ತಲಿನಂತೆ ಪರಿಗಣಿಸುವ ಮತ್ತು ತನ್ನ ಅಧಿಕಾರವನ್ನು ಚಲಾಯಿಸುವ ಕುಖ್ಯಾತ ಮನ್ರೋ ಸಿದ್ಧಾಂತದ ಟ್ರಂಪ್ ಇಡೀ ವಿಶ್ವದಲ್ಲೇ ಪ್ರಾಬಲ್ಯ ಹೊಂದಲು ಬಯಸುತ್ತಿದ್ದಾರೆ” ಎಂದು ದೂರಿದ್ದಾರೆ.

“ವೆನೆಜುವೆಲಾದ ಹೋರಾಟದ ಜನರಿಗೆ ನಮ್ಮ ಸಂಪೂರ್ಣ ಬೆಂಬಲವಿದೆ. ನಾವು, ಎಡ ಪಕ್ಷಗಳು, ಅಮೆರಿಕದ ಆಕ್ರಮಣದ ವಿರುದ್ಧ ಮತ್ತು ಲ್ಯಾಟಿನ್ ಅಮೆರಿಕದ ಜನರೊಂದಿಗೆ ಒಗ್ಗಟ್ಟಿನಿಂದ ದೇಶಾದ್ಯಂತ ಪ್ರತಿಭಟನೆಗಳಿಗೆ ಕರೆ ನೀಡುತ್ತೇವೆ. ನಮ್ಮ ದೇಶದ ಎಲ್ಲಾ ಶಾಂತಿಪ್ರಿಯ, ಸಾಮ್ರಾಜ್ಯಶಾಹಿ ವಿರೋಧಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಈ ಪ್ರತಿಭಟನೆಗಳಲ್ಲಿ ಭಾಗವಹಿಸಬೇಕು ಎಂದು ನಾವು ಮನವಿ ಮಾಡುತ್ತೇವೆ” ಎಂದು ನಾಯಕರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...