Homeಮುಖಪುಟಭಾರತದ ’ಮೆಟ್ರೋಮ್ಯಾನ್’ ಬಿಜೆಪಿಗೆ: ಕೇರಳದಲ್ಲಿ ಚುನಾವಣೆ ಎದುರಿಸುವ ಸಾಧ್ಯತೆ

ಭಾರತದ ’ಮೆಟ್ರೋಮ್ಯಾನ್’ ಬಿಜೆಪಿಗೆ: ಕೇರಳದಲ್ಲಿ ಚುನಾವಣೆ ಎದುರಿಸುವ ಸಾಧ್ಯತೆ

- Advertisement -
- Advertisement -

ದೆಹಲಿ ಮೆಟ್ರೋ ಸೇರಿದಂತೆ ದೇಶಾದ್ಯಂತ ಇದೇ ರೀತಿಯ ಅನೇಕ ಯೋಜನೆಗಳ ಹಿಂದಿನ ಎಂಜಿನಿಯರ್‌‌ ಇ.ಶ್ರೀಧರನ್‌‌ ಕೇರಳದಲ್ಲಿ ಚುನಾವಣೆಗೆ ಮುಂಚೆಯೇ ಬಿಜೆಪಿ ಸೇರಲು ಸಜ್ಜಾಗಿದ್ದಾರೆ. ಭಾನುವಾರದಿಂದ ಕೇರಳದಲ್ಲಿ ನಡೆಯಲಿರುವ ವಿಜಯ ಯಾತ್ರೆಯಲ್ಲಿ ಅವರು ಔಪಚಾರಿಕವಾಗಿ ಪಕ್ಷಕ್ಕೆ ಸೇರಲಿದ್ದಾರೆ. 88 ರ ಹರೆಯದ ಶ್ರೀಧರನ್ ಮೇ ವೇಳೆಗೆ ನಡೆಯುವ ಕೇರಳ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ.

“ನಾನು ಬಿಜೆಪಿಗೆ ಸೇರಲು ನಿರ್ಧರಿಸಿದ್ದೇನೆ, ಕೇವಲ ಅಧಿಕೃತ ಔಪಚಾರಿಕತೆ ಕಾರ್ಯಗಳಷ್ಷೇ ಉಳಿದಿವೆ. ಪಕ್ಷದ ಸಿದ್ದಾಂತಗಳನ್ನು ನಾನು ನಂಬಿದ್ದು, ರಾಷ್ಟ್ರೀಯವಾಗಿ ರಾಜಕೀಯ ಪಕ್ಷಗಳ ಕುರುಡು ವಿರೋಧಕ್ಕೆ ನಾನು ವಿರೋಧಿಯಾಗಿದ್ದೇನೆ. ಪಕ್ಷವು ಬಯಸಿದರೆ ನಾನು ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ಹೊಂದಿದ್ದೇನೆ” ಎಂದು ಶ್ರೀಧರನ್ ತಮ್ಮ ಊರಾದ ಮಲಪುರಂನಲ್ಲಿ ತಿಳಿಸಿದ್ದರಾರೆಂದು ಎನ್ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಕೇರಳ ಬಿಜೆಪಿಯಲ್ಲಿ ಭಿನ್ನಮತ: ರಾಜ್ಯಾಧ್ಯಕ್ಷರ ವಿರುದ್ಧ ಹೈಕಮಾಂಡ್‌ಗೆ ಪತ್ರ ಬರೆದ ನಾಯಕರು!

ದೇಶದ ಅತಿದೊಡ್ಡ ಮೆಟ್ರೋ ಮತ್ತು ರೈಲ್ವೆ ಯೋಜನೆಗಳಿಗೆ ಗಣನೀಯ ಸೇವೆ ಸಲ್ಲಿಸಿರುವ ಅವರು ಭಾರತದ “ಮೆಟ್ರೋ ಮ್ಯಾನ್” ಎಂದೇ ಜನಪ್ರಿಯರಾಗಿದ್ದಾರೆ. ಅವರು 2011 ರಲ್ಲಿ ದೆಹಲಿ ಮೆಟ್ರೊ ಮುಖ್ಯಸ್ಥರಾಗಿ ನಿವೃತ್ತರಾದರು. ಜೈಪುರ, ಲಕ್ನೋ ಮತ್ತು ಕೊಚ್ಚಿಯಂತಹ ದೇಶದ ಇತರ ಮೆಟ್ರೋ ಯೋಜನೆಗಳಲ್ಲಿ ಇವರು ಎಂಜಿನಿಯರ್ ಆಗಿ ತೊಡಗಿಸಿಕೊಂಡಿದ್ದರು. ಅವರಿಗೆ 2001 ರಲ್ಲಿ ಪದ್ಮಶ್ರೀ ಮತ್ತು 2008 ರಲ್ಲಿ ಪದ್ಮವಿಭೂಷಣ ನೀಡಲಾಗಿತ್ತು.

2019 ರ ಜೂನ್ 1 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಡೆಲ್ಲಿ ಟ್ರಾನ್ಸ್‍ಪೋರ್ಟ್ ಕಾರ್ಪೋರೇಷನ್ ಬಸ್‍ಗಳಲ್ಲಿ ಮತ್ತು ಡೆಲ್ಲಿ ಮೆಟ್ರೊದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆ ಎಂದು ಘೋಷಿಸಿದ್ದರು. ಆ ಸಮಯದಲ್ಲಿ ವಿ. ಶ್ರೀಧರನ್ ಅದನ್ನು ವಿರೋಧಿಸಿ ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದು ಸುದ್ದಿಯಾಗಿದ್ದರು. ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ನೀಡಿದರೆ, ದೆಹಲಿ ಮೆಟ್ರೊ ಆರ್ಥಿಕ ದಿವಾಳಿತನ ಎದುರಿಸಬೇಕಾಗುತ್ತದೆ, ಅಷ್ಟೇ ಅಲ್ಲದೇ ದೇಶದ ಇತರ ಮೆಟ್ರೊಗಳ ಮೇಲೂ ಇದು ಪರಿಣಾಮ ಬೀರುತ್ತದೆ ಎಂಬ ಕಾರಣವನ್ನು ಪತ್ರದಲ್ಲಿ ಅವರು ಉಲ್ಲೇಖಿಸಿದ್ದರು.

ಆದರೆ ಇದಕ್ಕೆ ತಕ್ಷಣವೇ ಪ್ರತಿಕ್ರಿಯಿಸಿದ್ದ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, “ನೀವು ಪ್ರಧಾನ ಮಂತ್ರಿಗಳಿಗೆ ಬರೆದ ಪತ್ರ ಓದಿ ಆಶ್ಚರ್ಯ ಮತ್ತು ನೋವುಂಟಾಯಿತು. ನೀವು ಪ್ರಸ್ತುತ ಯೋಜನೆಯ ಬಗ್ಗೆ ತಪ್ಪು ಮಾಹಿತಿ ಪಡೆದಿರುವ ಕಾರಣಕ್ಕೆ ಹೀಗಾಗಿದೆ. ದೆಹಲಿ ಮೆಟ್ರೊದ ಮೂರನೇ ಹಂತ ಪೂರ್ಣಗೊಂಡ ನಂತರ ನೀವು ಖಂಡಿತ ಶ್ಲಾಘಿಸುತ್ತೀರೆಂಬ ವಿಶ್ವಾಸವಿದೆ. ಮಹಿಳೆಯರಿಗೆ ಭದ್ರತೆ ಮತ್ತು ಸಾರ್ವಜನಿಕ ವಾಹನಗಳನ್ನು ಬಳಸುವಂತೆ ಪ್ರೇರೆಪಿಸಲು ನಾವು ಈ ಯೋಜನೆ ಘೋಷಿಸಿದ್ದೇವೆ. ಇದರಿಂದ ಖಾಸಗಿ ವಾಹನಗಳ ಬಳಕೆ ತಪ್ಪಿ ವಾಯುಮಾಲಿನ್ಯವನ್ನು ಕಡಿಮೆ ಮಾಡಬಹುದು. ಮಹಿಳೆಯರ ಸಬಲೀಕರಣಕ್ಕಾಗಿ ಇದೊಂದು ಕ್ರಾಂತಿಕಾರಕ ನಡೆಯಾಗಿದೆ” ಎಂದು ವಿ. ಶ್ರೀಧರನ್‌ಗೆ ಉತ್ತರಿಸಿದ್ದರು.

ಇದನ್ನೂ ಓದಿ: ದೇವಾಲಯ ತೆರೆಯುತ್ತಿದ್ದಂತೆ ರಾಜಕೀಯ ಲಾಭಕ್ಕೆ ಮುಂದಾದ ಕೇರಳ ಬಿಜೆಪಿಯ ದ್ವಂದ್ವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...