Homeಮುಖಪುಟಬಜೆಟ್ ಅಧಿವೇಶನ | ಜಿಡಿಪಿ ಬೆಳವಣಿಗೆ ದರ ಶೇ 6.3ರಿಂದ 6.8 : ಆರ್ಥಿಕ ಸಮೀಕ್ಷೆ

ಬಜೆಟ್ ಅಧಿವೇಶನ | ಜಿಡಿಪಿ ಬೆಳವಣಿಗೆ ದರ ಶೇ 6.3ರಿಂದ 6.8 : ಆರ್ಥಿಕ ಸಮೀಕ್ಷೆ

- Advertisement -
- Advertisement -

ಮುಂಬರುವ ಹಣಕಾಸು ವರ್ಷದಲ್ಲಿ (2025-26) ಭಾರತದ ಜಿಡಿಪಿ ಬೆಳವಣಿಗೆ ದರ ಶೇಕಡ 6.3 ರಿಂದ ಶೇಕಡ 6.8 ಇರಲಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶುಕ್ರವಾರ (ಜ.31) ಮಂಡಿಸಿದ ಕೇಂದ್ರ ಸರ್ಕಾರದ ವಾರ್ಷಿಕ ಆರ್ಥಿಕ ಸಮೀಕ್ಷೆ ವರದಿ ಅಂದಾಜಿಸಿದೆ.

ಇದರರ್ಥ ಸತತ ಎರಡನೇ ಹಣಕಾಸು ವರ್ಷವೂ ಜಿಡಿಪಿ ಬೆಳವಣಿಗೆ ದರ ಶೇಖಡ 7ಕ್ಕಿಂತ ಕಡಿಮೆ ಇರುತ್ತದೆ ಎಂದಾಗಿದೆ.

ಜನವರಿ 7ರಂದು ರಾಷ್ಟ್ರೀಯ ಅಂಕಿ ಅಂಶ ಕಚೇರಿ ಬಿಡುಗಡೆ ಮಾಡಿದ್ದ ಸರ್ಕಾರದ ಆರಂಭಿಕ ಅಂದಾಜಿನ ಪ್ರಕಾರ, 2024-25ರ ಹಣಕಾಸು ವರ್ಷದಲ್ಲಿ ದೇಶದ ನೈಜ ಜಿಡಿಪಿ ನಾಲ್ಕು ವರ್ಷಗಳ ಕನಿಷ್ಠ ಮಟ್ಟವಾದ ಶೇಖಡ 6.4ಕ್ಕೆ ಇಳಿಯಲಿದೆ ಎಂದಿತ್ತು.

2025-26ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆಗೆ ಒಂದು ದಿನ ಮೊದಲು ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಆರ್ಥಿಕ ಸಮೀಕ್ಷೆ ವರದಿಯು ದೇಶದ ಆರ್ಥಿಕತೆಯ ಸ್ಥಿತಿಯನ್ನು ವಿವರಿಸುತ್ತದೆ ಮತ್ತು ಬೆಳವಣಿಗೆಯನ್ನು ಹೆಚ್ಚಿಸುವ ಕ್ರಮಗಳನ್ನು ಸೂಚಿಸುತ್ತದೆ.

ಆರ್ಥಿಕ ವ್ಯವಹಾರಗಳ ಇಲಾಖೆ ಸಿದ್ದಪಡಿಸಿದ ಈ ಸಮೀಕ್ಷೆ ವರದಿಯು ಜಾಗತಿಕ ಅಡೆತಡೆಗಳನ್ನು ನಿವಾರಿಸಲು “ಕಾರ್ಯತಂತ್ರದ, ವಿವೇಕಯುತ ನೀತಿ ನಿರ್ವಹಣೆ ಮತ್ತು ದೇಶೀಯ ಮೂಲಭೂತ ಅಂಶಗಳನ್ನು ಬಲಪಡಿಸುವ” ಅಗತ್ಯವಿದೆ ಎಂದು ಹೇಳಿದೆ.

ಮುಂದಿನ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕ ನಿರೀಕ್ಷೆಗಳು ಸಮತೋಲಿತವಾಗಿವೆ ಎಂದು ಮುಖ್ಯ ಆರ್ಥಿಕ ಸಲಹೆಗಾರ ವಿ ಅನಂತ ನಾಗೇಶ್ವರನ್ ವರದಿಯಲ್ಲಿ ತಿಳಿಸಿದ್ದಾರೆ.

“ಆರ್ಥಿಕ ಬೆಳವಣಿಗೆಗೆ ಎದುರಾಗುವ ಪ್ರಮುಖ ಕಾರಣಗಳಲ್ಲಿ ಭೌಗೋಳಿಕ, ರಾಜಕೀಯ ವ್ಯಾಪಾರ ಅನಿಶ್ಚಿತತೆಗಳು ಮತ್ತು ಸರಕು ಬೆಲೆಗಳ ಆಘಾತಗಳು ಸೇರಿವೆ” ಎಂದು ನಾಗೇಶ್ವರನ್ ಹೇಳಿದ್ದಾರೆ. “ದೇಶೀಯವಾಗಿ, ಖಾಸಗಿ ಬಂಡವಾಳ ಸರಕುಗಳ ವಲಯದ ನಿರಂತರ ಹೂಡಿಕೆ ಏರಿಕೆ, ಗ್ರಾಹಕರ ವಿಶ್ವಾಸದಲ್ಲಿ ಸುಧಾರಣೆಗಳು ಮತ್ತು ಕಾರ್ಪೊರೇಟ್ ವೇತನ ಏರಿಕೆ ಬೆಳವಣಿಗೆಯನ್ನು ಉತ್ತೇಜಿಸುವ ಪ್ರಮುಖ ಅಂಶಗಳಾಗಿವೆ” ಎಂದು ತಿಳಿಸಿದ್ದಾರೆ.

“ಕೃಷಿ ಉತ್ಪಾದನೆಯಲ್ಲಿನ ಚೇತರಿಕೆ, ಆಹಾರ ಹಣದುಬ್ಬರದಲ್ಲಿ ನಿರೀಕ್ಷಿತ ಇಳಿಕೆ ಮತ್ತು ಸ್ಥಿರವಾದ ಸ್ಥೂಲ-ಆರ್ಥಿಕ ವಾತಾವರಣದಿಂದ ಬೆಂಬಲಿತವಾದ ಗ್ರಾಮೀಣ ಬೇಡಿಕೆಯು ಅಲ್ಪಾವಧಿಯ ಬೆಳವಣಿಗೆಯಲ್ಲಿ ಸಾಧಿಸುತ್ತದೆ” ಎಂದು ಅವರು ಹೇಳಿದ್ದಾರೆ.

2023-24ರ ಆರ್ಥಿಕ ವರ್ಷದಲ್ಲಿ ಶೇ.5.4ರಷ್ಟಿದ್ದ ಚಿಲ್ಲರೆ ಹಣದುಬ್ಬರವು, ಪ್ರಸಕ್ತ ಹಣಕಾಸು ವರ್ಷದಲ್ಲಿ (ಡಿಸೆಂಬರ್ ವರೆಗೆ) ಶೇ.4.9ಕ್ಕೆ ಇಳಿದಿದೆ ಎಂದು ವರದಿ ತಿಳಿಸಿದೆ. ಇಂಧನ ಬೆಲೆ ಹಣದುಬ್ಬರದಲ್ಲಿನ ಇಳಿಕೆಯೇ ಈ ಇಳಿಕೆಗೆ ಪ್ರಮುಖ ಕಾರಣ ಎಂದು ಅದು ಹೇಳಿದೆ.

2024-25ನೇ ಸಾಲಿನ ಪ್ರಸಕ್ತ ಹಣಕಾಸು ವರ್ಷವೂ ಕೃಷಿ ಮತ್ತು ಸೇವಾ ವಲಯಗಳ ಬೆಳವಣಿಗೆಗೆ ಬೆಂಬಲ ನೀಡಿವೆ. ಖಾರಿಫ್ ಉತ್ಪಾದನೆ ಮತ್ತು ಅನುಕೂಲಕರ ಕೃಷಿ ಪರಿಸ್ಥಿತಿಗಳಿಂದಾಗಿ ಗ್ರಾಮೀಣ ಬೇಡಿಕೆ ಸುಧಾರಿಸಿದೆ ಎಂದು ಮುಖ್ಯ ಆರ್ಥಿಕ ಸಲಹೆಗಾರರು ತಿಳಿಸಿದ್ದಾರೆ.

ದೇಶೀಯ ಋತುಮಾನದ ಪರಿಸ್ಥಿತಿಗಳು ಮತ್ತು ಜಾಗತಿಕ ಬೇಡಿಕೆ ದುರ್ಬಲಗೊಂಡ ಕಾರಣ ಉತ್ಪಾದನಾ ವಲಯವು ಒತ್ತಡವನ್ನು ಎದುರಿಸಿದೆ ಎಂದು ವರದಿ ಹೇಳಿದೆ

ಡಿಸೆಂಬರ್ 30ರಂದು ಭಾರತೀಯ ರಿಸರ್ವ್ ಬ್ಯಾಂಕ್ ಭಾರತದ ಆರ್ಥಿಕತೆಯು ಸ್ಥಿತಿಸ್ಥಾಪಕತ್ವ ಮತ್ತು ಸ್ಥಿರತೆಯನ್ನು ಪ್ರದರ್ಶಿಸುತ್ತಿದೆ ಎಂದು ಹೇಳಿತ್ತು. 2024-25ರಲ್ಲಿ ಜಿಡಿಪಿ ಬೆಳವಣಿಗೆಯನ್ನು ಶೇಖಡ 6.6 ಎಂದು ಅಂದಾಜಿಸಿತ್ತು.

ಜನವರಿ 16ರಂದು, ವಿಶ್ವ ಬ್ಯಾಂಕ್ ಭಾರತದ ಆರ್ಥಿಕ ಬೆಳವಣಿಗೆ ಮುಂದಿನ ಎರಡು ಹಣಕಾಸು ವರ್ಷಗಳಲ್ಲಿ ಶೇಖಡ 6.7 ದರದಲ್ಲಿ ಬೆಳೆಯುವ ನಿರೀಕ್ಷೆಯಿದೆ ಎಂದು ಮುನ್ಸೂಚನೆ ನೀಡಿತ್ತು.

ಭಾರತದ ಸೇವಾ ವಲಯವು ಸುಸ್ಥಿರವಾಗಿ ವಿಸ್ತರಿಸುವ ನಿರೀಕ್ಷೆಯಿದೆ. ವ್ಯಾಪಾರ ವಾತಾವರಣವನ್ನು ಸುಧಾರಿಸುವ ಗುರಿಯನ್ನು ಹೊಂದಿರುವ ಸರ್ಕಾರಿ ಉಪಕ್ರಮಗಳಿಂದ ಉತ್ಪಾದನಾ ಚಟುವಟಿಕೆಗಳು ಬಲಗೊಳ್ಳುತ್ತವೆ ಎಂದಿತ್ತು.

ಜನವರಿ 10 ರಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಸ್ಥಿರವಾದ ಜಾಗತಿಕ ಬೆಳವಣಿಗೆಯ ಹೊರತಾಗಿಯೂ, 2025ರಲ್ಲಿ ಭಾರತದ ಆರ್ಥಿಕತೆಯು “ಸ್ವಲ್ಪ ದುರ್ಬಲ”ವಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

ಸಂಸತ್ ಬಜೆಟ್ ಅಧಿವೇಶನ ಆರಂಭ | ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...