Homeಮುಖಪುಟಭಾರತದ ‘ಅತ್ಯಂತ ಎತ್ತರದ ವ್ಯಕ್ತಿ’ ಸಮಾಜವಾದಿ ಪಾರ್ಟಿಗೆ ಸೇರ್ಪಡೆ

ಭಾರತದ ‘ಅತ್ಯಂತ ಎತ್ತರದ ವ್ಯಕ್ತಿ’ ಸಮಾಜವಾದಿ ಪಾರ್ಟಿಗೆ ಸೇರ್ಪಡೆ

- Advertisement -
- Advertisement -

ನವ ದೆಹಲಿ: ಭಾರತದ ಅತ್ಯಂತ ಎತ್ತರದ ವ್ಯಕ್ತಿ ಎಂದೇ ಗುರುತಿಸಲಾಗುತ್ತಿರುವ ಧರ್ಮೇಂದ್ರ ಪ್ರತಾಪ್ ಸಿಂಗ್ ಅವರು ಶನಿವಾರ ಸಮಾಜವಾದಿ ಪಕ್ಷಕ್ಕೆ ಸೇರಿದ್ದಾರೆ. ಉತ್ತರ ಪ್ರದೇಶದ ಪ್ರತಾಪಗಢದವರಾದ ಸಿಂಗ್ ಅವರು 2.4 ಮೀ (8 ಅಡಿ 1 ಇಂಚು) ಎತ್ತರವಿದ್ದಾರೆ. ವಿಶ್ವ ದಾಖಲೆಗೆ ಕೇವಲ 11 ಸೆಂ. ಕಡಿಮೆ ಇದ್ದಾರೆ ಎನ್ನಲಾಗಿದೆ.

ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷ ನರೇಶ್ ಉತ್ತಮ್ ಪಟೇಲ್ ಅವರು ಸಿಂಗ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು. ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಪಕ್ಷವನ್ನು ಈ ಬೆಳವಣಿಗೆ ಬಲಪಡಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

“ಸಮಾಜವಾದಿ ಪಕ್ಷದ ನೀತಿಗಳು ಮತ್ತು ಅಖಿಲೇಶ್ ಯಾದವ್ ಅವರ ನಾಯಕತ್ವದಲ್ಲಿ ನಂಬಿಕೆಯನ್ನು ವ್ಯಕ್ತಪಡಿಸಿ ಪ್ರತಾಪ್‌ಗಢದ ಧರ್ಮೇಂದ್ರ ಪ್ರತಾಪ್ ಸಿಂಗ್ ಸಮಾಜವಾದಿ ಪಕ್ಷಕ್ಕೆ ಸೇರಿದ್ದಾರೆ. ರಾಜ್ಯಾಧ್ಯಕ್ಷ ನರೇಶ್ ಉತ್ತಮ್ ಅವರು ಪಟೇಲ್ ಧರ್ಮೇಂದ್ರ ಪ್ರತಾಪ್ ಸಿಂಗ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವಾಗ ಸಮಾಜವಾದಿ ಪಕ್ಷವನ್ನು ಬಲಪಡಿಸುವ ಭರವಸೆ ವ್ಯಕ್ತಪಡಿಸಿದರು. ಧರ್ಮೇಂದ್ರ ಅವರ ಸೇರ್ಪಡೆಯಿಂದ ಪಕ್ಷ ಬಲವಾಗುತ್ತದೆ ಎಂದು ಹೇಳಿದರು” ಎಂದು ಎಸ್‌ಪಿ ವಕ್ತಾರ ರಾಜೇಂದ್ರ ಚೌಧರಿ ಶನಿವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸಿಂಗ್ ಅವರು ತಮ್ಮ ಎತ್ತರದ ಕಾರಣದಿಂದ ಬಹಳಷ್ಟು ತೊಂದರೆಗಳನ್ನು ಎದುರಿಸಿದರು. ಅವರು ಹೆಜ್ಜೆ ಹಾಕಿದಾಗ ಅವರು ಹೆಚ್ಚಿನ ಗಮನವನ್ನು ಸೆಳೆಯುತ್ತಾರೆ. ಸಿಂಗ್ ಅವರೇ ಒಂದು ಸಂದರ್ಶನದಲ್ಲಿ ಹೇಳಿದಂತೆ, “ಜನರು ಫೋಟೋವನ್ನು ತೆಗೆದುಕೊಳ್ಳಲು ಬಯಸಿದಾಗ, ಸಿಂಗ್‌ ಅವರನ್ನು ಸೆಲೆಬ್ರಿಟಿಯಂತೆ ಜನ ಭಾವಿಸುತ್ತಾರೆ”.

“ನಾನು ಅಗಾಧವಾಗಿ ಜನಪ್ರಿಯನಾಗಿದ್ದೇನೆ. ನನ್ನ ಎತ್ತರದಿಂದಾಗಿ ಇದೆಲ್ಲ ಸಾಧ್ಯವಾಗಿದೆ” ಎಂದು ಅವರು ದಿ ಟೆಲಿಗ್ರಾಫ್‌ಗೆ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಫೆಬ್ರವರಿ 10 ರಿಂದ ಮಾರ್ಚ್ 7 ರ ನಡುವೆ ಏಳು ಹಂತಗಳಲ್ಲಿ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

ರಾಜ್ಯವು ಹಲವಾರು ಕೌತುಕಗಳಿಗೆ ಸಾಕ್ಷಿಯಾಗುವ ನಿರೀಕ್ಷೆಯಿದೆ. ಅಖಿಲೇಶ್ ಯಾದವ್ ಅವರು ತಮ್ಮ ಕುಟುಂಬದ ತವರು ನೆಲದಲ್ಲಿರುವ ಮೈನ್‌ಪುರಿ ಜಿಲ್ಲೆಯ ಕರ್ಹಾಲ್ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಶನಿವಾರ ಘೋಷಿಸಿದ್ದಾರೆ.

ಗೋರಖ್‌ಪುರದಿಂದ ಐದು ಬಾರಿ ಲೋಕಸಭಾ ಸಂಸದರಾಗಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕ್ಷೇತ್ರದ ಒಂದು ಸ್ಥಾನದಿಂದ ಸ್ಪರ್ಧಿಸಲಿದ್ದಾರೆ. ಗೋರಖ್‌ಪುರದಿಂದ ಭೀಮ್‌ ಆರ್ಮಿಯ ನಾಯಕ ಚಂದ್ರಶೇಖರ್‌ ಆಜಾದ್ ರಾವಣ್ ಅವರೂ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.


ಇದನ್ನೂ ಓದಿರಿ: ಕಾಶ್ಮೀರದಲ್ಲಿ ಯುದ್ಧಾಪರಾಧ ಆರೋಪ: ಅಮಿತ್ ಶಾ, ಸೇನಾ ಮುಖ್ಯಸ್ಥರ ಬಂಧನಕ್ಕೆ ಯುಕೆ ಮೂಲದ ಸಂಸ್ಥೆ ದೂರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕದನ ವಿರಾಮ ಒಪ್ಪಿಗೆ ನಡುವೆಯೇ ರಫಾ ಮೇಲೆ ದಾಳಿ ನಡೆಸಿದ ಇಸ್ರೇಲ್: 12 ಪ್ಯಾಲೆಸ್ತೀನಿಯರು...

0
ಒತ್ತೆಯಾಳುಗಳ ಬಿಡುಗಡೆ ಮೂಲಕ ಕದನ ವಿರಾಮಕ್ಕೆ ಹಮಾಸ್ ಒಪ್ಪಿಗೆ ಸೂಚಿಸಿದ ನಡುವೆಯೇ ಇಸ್ರೇಲ್ ತನ್ನ ಆಕ್ರಮಣವನ್ನು ಮುಂದುವರೆಸಿದೆ. ಗಾಝಾದ ದಕ್ಷಿಣ ನಗರವಾದ ರಫಾದ ಮೇಲೆ ಸೋಮವಾರ (ಮೇ 6) ರಾತ್ರಿ ವಾಯುದಾಳಿ ನಡೆಸುವ...