Homeಮುಖಪುಟಇಂಡಿಗೋ ಬಿಕ್ಕಟ್ಟು : ತುರ್ತು ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

ಇಂಡಿಗೋ ಬಿಕ್ಕಟ್ಟು : ತುರ್ತು ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

- Advertisement -
- Advertisement -

ಇಂಡಿಗೋ ವಿಮಾನ ಬಿಕ್ಕಟ್ಟಿಗೆ ಸಂಬಂಧಿಸಿದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ (ಡಿಸೆಂಬರ್ 8) ನಿರಾಕರಿಸಿದೆ. ಈ ವಿಷಯದ ಬಗ್ಗೆ ಭಾರತ ಸರ್ಕಾರ ಈಗಾಗಲೇ ಗಮನ ಹರಿಸಿ ಕ್ರಮ ಕೈಗೊಂಡಿದೆ. ಆದ್ದರಿಂದ ತುರ್ತು ವಿಚಾರಣೆಯ ಅಗತ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರ ಪೀಠದ ಮುಂದೆ ಅರ್ಜಿ ಪ್ರಸ್ತಾಪಿಸಿದ ವಕೀಲರು, ಕಳೆದ ಕೆಲವು ದಿನಗಳಿಂದ ಇಂಡಿಗೋ ವಿಮಾನಗಳು ಹಠಾತ್ತನೆ ರದ್ದಾಗಿರುವುದರಿಂದ ದೇಶದ ಹಲವಾರು ವಿಮಾನ ನಿಲ್ದಾಣಗಳಲ್ಲಿ ಸಾವಿರಾರು ಪ್ರಯಾಣಿಕರು ಸಂಕಷ್ಟಕ್ಕೀಡಾಗಿದ್ದಾರೆ. ಮುಂಚಿತವಾಗಿ ತಿಳಿಸದೇ ಕಂಪನಿಯು ವಿಮಾನಗಳನ್ನು ರದ್ದುಗೊಳಿಸಿದೆ. ಇದು ಅತ್ಯಂತ ಗಂಭೀರ ಸಮಸ್ಯೆ ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ, “ಲಕ್ಷಾಂತರ ಜನರು ವಿಮಾನ ನಿಲ್ದಾಣಗಳಲ್ಲಿ ಸಿಲುಕಿಕೊಂಡಿದ್ದಾರೆ ಎಂಬುದು ನಮಗೆ ತಿಳಿದಿದೆ. ತುರ್ತು ಕೆಲಸವಿರುವವರು, ತುರ್ತು ಚಿಕಿತ್ಸೆ ಬೇಕಾದ ರೋಗಿಗಳೂ ಸೇರಿದಂತೆ ಅನೇಕರು ಸಂಕಷ್ಟದಲ್ಲಿದ್ದಾರೆ. ಆದರೆ, ಭಾರತ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಗಮನಿಸಿ, ಸಮಯೋಚಿತ ಕ್ರಮಗಳನ್ನು ತೆಗೆದುಕೊಂಡಿದೆ. ಇನ್ನೂ ಸ್ವಲ್ಪ ಸಮಯ ಕಾಯೋಣ, ಏನಾಗುತ್ತದೆ ನೋಡೋಣ. ಈಗ ತುರ್ತು ವಿಚಾರಣೆಯ ಅಗತ್ಯ ಇಲ್ಲ” ಎಂದಿದ್ದಾರೆ.

ಇಂಡಿಗೋ ವಿಮಾನಗಳ ರದ್ದುಗೊಳಿಸುವಿಕೆಯಿಂದಾಗಿ ಸಂಕಷ್ಟಕ್ಕೀಡಾದ ಪ್ರಯಾಣಿಕರ ಹಕ್ಕುಗಳ ರಕ್ಷಣೆಗಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಲಾಗಿದೆ. ಇಂಡಿಗೋ ಆಲ್ ಪ್ಯಾಸೆಂಜರ್ ಅಂಡ್ ಅದರ್ಸ್ ವಕೀಲ ನರೇಂದ್ರ ಮಿಶ್ರಾ ಅವರ ಮೂಲಕ ಅರ್ಜಿ ಸಲ್ಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...