Homeಕರ್ನಾಟಕಇಂದಿರಾ ಕ್ಯಾಂಟೀನ್‌ನಲ್ಲಿ 14 ದಿನ ಉಚಿತ ಆಹಾರ ನೀಡಲು ಪೌರಾಡಳಿತ ಇಲಾಖೆ ನಿರ್ಧಾರ

ಇಂದಿರಾ ಕ್ಯಾಂಟೀನ್‌ನಲ್ಲಿ 14 ದಿನ ಉಚಿತ ಆಹಾರ ನೀಡಲು ಪೌರಾಡಳಿತ ಇಲಾಖೆ ನಿರ್ಧಾರ

- Advertisement -
- Advertisement -

ಮೇ 10 ರಿಂದ 24ರ ವರೆಗೆ ಕಠಿಣ ನಿಯಮಗಳು ಎಂದು ಕರ್ನಾಟಕದಲ್ಲಿ 14 ದಿನಗಳು ಲಾಕ್‌ಡೌನ್ ವಿಧಿಸಲಾಗಿದೆ. ಈ ವೇಳೆ ಬಿಬಿಎಂಪಿ ಹೊರತು ಪಡಿಸಿ ಸ್ಥಳೀಯ ಸಂಸ್ಥೆಗಳಲ್ಲಿ ಚಾಲನೆಯಲ್ಲಿರುವ ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತ ಆಹಾರ ವಿತರಣೆ ಮಾಡಲು ನಿರ್ಧರಿಸಲಾಗಿದೆ.

14 ದಿನಗಳ ಕಾಲ ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತ ಆಹಾರ ವಿತರಣೆ ಮಾಡಲು ಪೌರಾಡಳಿತ ಇಲಾಖೆಯಿಂದ ಮಹತ್ವದ ನಿರ್ಧಾರ ಹೊರ ಬಂದಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅನುಮತಿ ಪಡೆದು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಯೋಜನೆ ಘೋಷಣೆ ಮಾಡಿದ್ದಾರೆ.

ಮೇ 24 ರವರೆಗೆ ರಾಜ್ಯದ ಎಲ್ಲ ಇಂದಿರಾ ಕ್ಯಾಂಟೀನ್‌ಗಳಲ್ಲಿ ಬಡವರಿಗೆ, ವಲಸಿಗರಿಗೆ ಮತ್ತು ಕೂಲಿ ಕಾರ್ಮಿಕರಿಗೆ, ದುರ್ಬಲ ವರ್ಗದವರಿಗೆ ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ ಮತ್ತು ರಾತ್ರಿಯ ಊಟ ಉಚಿತವಾಗಿ ಸಿಗಲಿದೆ.

ಇದನ್ನೂ ಓದಿ: ಹರಿಯಾಣ: ಮೇ 17 ರವರೆಗೆ ಲಾಕ್‌ಡೌನ್, ಬಿಪಿಎಲ್ ಕುಟುಂಗಳಿಗೆ 5 ಸಾವಿರ ರೂ. ಪ್ಯಾಕೇಜ್

ಈ ಕುರಿತು ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು, ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾದ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ಗಳಲ್ಲಿ ನೀಡುತ್ತಿದ್ದ ಊಟದ ವ್ಯವಸ್ಥೆಯನ್ನ ಸರ್ಕಾರ ನಿಷೇದಿಸಿತ್ತು.

ಪ್ರಚಲಿತ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು, ಊಟಕ್ಕೆ ಬರುವವರ ಸಂಖ್ಯೆಯನ್ನು ಅವರ ವಿವರಗಳನ್ನು ಕಡ್ಡಾಯವಾಗಿ ತೆಗೆದುಕೊಂಡು ಆಹಾರ ವಿತರಿಸಲು ತಿಳಿಸಲಾಗಿದೆ. ಯಾರೂ ಹಸಿವಿನಿಂದ ಬಳಲ ಬಾರದೆಂದು ಈ ಯೋಜನೆ ಅನುಷ್ಠಾನಕ್ಕೆ ತರಲಾಗಿದೆ ಎಂದು ತಿಳಿಸಲಾಗಿದೆ.


ಇದನ್ನೂ ಓದಿ: ಬಿಹಾರದ ಗಂಗಾ ನದಿ ತೀರದಲ್ಲಿ ತೇಲಿ ಬಂದ ಮೃತ ದೇಹಗಳು; ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...