Homeಮುಖಪುಟಇಂದಿರಾ ಗಾಂಧಿ ಜನ್ಮದಿನ: ಮಹಿಳೆಯರಿಗಾಗಿ ಉಚಿತ ಮೊಬೈಲ್ ಕ್ಲಿನಿಕ್ ಆರಂಭಿಸಿದ ಚತ್ತೀಸ್‌ಗಢ ಸರ್ಕಾರ

ಇಂದಿರಾ ಗಾಂಧಿ ಜನ್ಮದಿನ: ಮಹಿಳೆಯರಿಗಾಗಿ ಉಚಿತ ಮೊಬೈಲ್ ಕ್ಲಿನಿಕ್ ಆರಂಭಿಸಿದ ಚತ್ತೀಸ್‌ಗಢ ಸರ್ಕಾರ

- Advertisement -
- Advertisement -

ಚತ್ತೀಸ್‌ಗಢ ಸರ್ಕಾರವು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆಯ ಪ್ರಯುಕ್ತ ನವೆಂಬರ್ 19 ರಿಂದ ಮಹಿಳೆಯರಿಗಾಗಿ ವಿಶೇಷ ವೈದ್ಯಕೀಯ ಸೌಲಭ್ಯದ “ದಾಯ್-ದೀದಿ” (ತಾಯಿ-ಸೋದರಿ) ಮೊಬೈಲ್ ಕ್ಲಿನಿಕ್ ಅನ್ನು ಆರಂಭಿಸಲಾಗುತ್ತಿದ್ದು, ಇದು ಕೊಳೆಗೇರಿಗಳು ಮತ್ತು ನಗರ ಪ್ರದೇಶಗಳ ಇತರ ಭಾಗಗಳಲ್ಲಿ ಕಾರ್ಯನಿರ್ವಹಿಸಲಿದೆ.

ದೇಶದಲ್ಲಿಯೇ ಇಂತಹ ಪ್ರಯತ್ನ ಇದೇ ಮೊದಲನೆಯದಾಗಿದ್ದು, ಈ ಮೊಬೈಲ್ ಕ್ಲಿನಿಕ್ ಮುನ್ಸಿಪಾಲಿಟಿ ವ್ಯಾಪ್ತಿಯ ರಾಯ್‌ಪುರ, ಬಿಲಾಸ್ಪುರ ಮತ್ತು ಭಿಲೈ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ ಇದು ‘ಮುಖ್ಯಮಂತ್ರಿಯವರ ನಗರ ಕೊಳಗೇರಿ ಆರೋಗ್ಯ ಯೋಜನೆ’ಯಡಿ ಉಚಿತ ಆರೋಗ್ಯ ಸೌಲಭ್ಯಗಳನ್ನು ಒದಗಿಸಲಿದೆ.

ಮಹಿಳಾ ರೋಗಿಗಳಿಗೆ ಮಾತ್ರ ಸೀಮಿತವಾಗಿರುವ ಈ ದಾಯ್-ದೀದಿ ಕ್ಲಿನಿಕ್‌ನಲ್ಲಿ ವೈದ್ಯರು, ಅರೆವೈದ್ಯಕೀಯ ಸಿಬ್ಬಂದಿ, ತಂತ್ರಜ್ಞರು ಮತ್ತು ಸಹಾಯಕ ಶುಶ್ರೂಷಕಿ ಸೇರಿದಂತೆ ಎಲ್ಲರೂ ಮಹಿಳಾ ಸಿಬ್ಬಂದಿಯೇ ಇರುತ್ತಾರೆ.

ಇದನ್ನೂ ಓದಿ: ಡ್ರಗ್ ಕೇಸ್: ಎನ್‌ಸಿಬಿಯಿಂದ ನಟಿ ದೀಪಿಕಾ ಪಡುಕೋಣೆ ಮ್ಯಾನೇಜರ್‌ ವಿಚಾರಣೆ

“ಇದು ರಾಜ್ಯದಲ್ಲಿ ಮಹಿಳಾ ಸಬಲೀಕರಣದ ಮತ್ತೊಂದು ಮಹತ್ವದ ಕಾರ್ಯಕ್ರಮವಾಗಿದೆ” ಎಂದು ಮುಖ್ಯಮಂತ್ರಿ ಭೂಪೇಶ್ ಬಾಗೆಲ್ ಹೇಳಿದ್ದಾರೆ.

ಈ ಕ್ಲಿನಿಕ್ ಮಹಿಳೆಯರ ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ಸಂಬಂಧಿಸಿದಂತೆ, ರೋಗಗಳ ಚಿಕಿತ್ಸೆ ಮತ್ತು ರೋಗನಿರ್ಣಯದ ಜೊತೆಗೆ ಎಲ್ಲಾ ಪ್ರಾಥಮಿಕ ಆರೋಗ್ಯ ಸೌಲಭ್ಯಗಳನ್ನು ಹೊಂದಿರುತ್ತದೆ.

ಮಹಿಳೆಯರು ಹಿಂಜರಿಕೆಯಿಲ್ಲದೆ ಸ್ತ್ರೀ ಆರೋಗ್ಯ ಸಿಬ್ಬಂದಿಯೊಂದಿಗೆ ಮುಕ್ತವಾಗಿ ಸಂವಹನ ನಡೆಸಬಹುದು. ಸ್ತ್ರೀರೋಗ ಶಾಸ್ತ್ರ, ಗರ್ಭಧಾರಣೆ ಮತ್ತು ಸಂತಾನೋತ್ಪತ್ತಿ ಹಾಗೂ ಆರೋಗ್ಯಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳ ಬಗ್ಗೆ ಸಲಹೆ ಪಡೆಯಬಹುದು. ಜೊತೆಗೆ ಹೆಚ್ಚುವರಿಯಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಪ್ರಯೋಜನಗಳನ್ನು ಮಹಿಳೆಯರು ಪಡೆಯುತ್ತಾರೆ.


ಇದನ್ನೂ ಓದಿ: ಉತ್ತಮ ಬೆಳೆಯಾದರೂ ಖರೀದಿ ಕೇಂದ್ರ ತೆರೆಯದ ಸರ್ಕಾರದ ವಿರುದ್ಧ ರೈತರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...