Homeಕರ್ನಾಟಕರಮೇಶ್ ಜಾರಕಿಹೊಳಿ ಸಿಡಿ ಕೇಸ್: ಯುವತಿ ಪರ ಅಂತಾರಾಷ್ಟ್ರೀಯ ಖ್ಯಾತಿಯ ಇಂದಿರಾ ಜೈಸಿಂಗ್ ವಕಾಲತ್ತು

ರಮೇಶ್ ಜಾರಕಿಹೊಳಿ ಸಿಡಿ ಕೇಸ್: ಯುವತಿ ಪರ ಅಂತಾರಾಷ್ಟ್ರೀಯ ಖ್ಯಾತಿಯ ಇಂದಿರಾ ಜೈಸಿಂಗ್ ವಕಾಲತ್ತು

ಇಂದಿರಾ ಜೈಸಿಂಗ್ ಸೇವೆಯನ್ನು ಗುರುತಿಸಿ 2005 ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

- Advertisement -

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ, ಲಿಂಗ ಸಮಾನತೆ, ಮಾನವ ಹಕ್ಕುಗಳಿಗಾಗಿ ಹೋರಾಟ ಮಾಡುವಲ್ಲಿ ಅಂತಾರಾಷ್ಟ್ರೀಯ ಖ್ಯಾತಿ ಗಳಿಸಿರುವ ಪದ್ಮಶ್ರೀ ಪುರಸ್ಕೃತ ಇಂದಿರಾ ಜೈಸಿಂಗ್ ಎಂಟ್ರಿ ಕೊಟ್ಟಿದ್ದಾರೆ. ಇದು ಪ್ರಕರಣದಲ್ಲಿ ಕುತೂಹಲ ಮೂಡಿಸಿದೆ.

ಸಿಡಿ ಪ್ರಕರಣದ ಸಂತ್ರಸ್ತ ಯುವತಿ ಪರ ಇಂದಿರಾ ಜೈಸಿಂಗ್ ವಕಾಲತ್ತು ವಹಿಸಿದ್ದಾರೆ. ಎಸ್ಐಟಿ ತನಿಖೆ ನಿರ್ಣಾಯಕ ಹಂತ ತಲುಪಿರುವ ಬೆನ್ನಲ್ಲೇ, ಜೂನ್ 23 ರಂದು ಪ್ರಕರಣ ಯಾವ ಸ್ವರೂಪ ಪಡೆಯಲಿದೆ ಎಂಬುದು ಕುತೂಹಲ ಕೆರಳಿಸಿದೆ. ಇಂದಿರಾ ಅವರು ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ವಕಾಲತ್ತು ವಹಿಸುತ್ತಿರುವುದು ಪೊಲೀಸ್ ವಲಯದಲ್ಲಿ ಮತ್ತು ರಾಜಕೀಯ ವಲಯದಲ್ಲಿ ಚರ್ಚೆಗೆ ನಾಂದಿ ಹಾಡಿದೆ.

ವಿಶೇಷ ತನಿಖಾ ತಂಡ(SIT) ಸ್ವತಂತ್ರವಾಗಿ ತನಿಖೆ ನಡೆಸುತ್ತಿಲ್ಲ. ಹೀಗಾಗಿ, ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು. ಸಿಬಿಐ ತನಿಖೆ ನಡೆಸಬೇಕು ಎಂದು ಸಂತ್ರಸ್ತ ಯುವತಿ ಈ ಹಿಂದೆ ಅರ್ಜಿ ಸಲ್ಲಿಸಿದ್ದರು. ಏಕ ಸದಸ್ಯ ಪೀಠದ ಮುಂದೆ ಸಲ್ಲಿಸಿರುವ ಎಲ್ಲಾ ಅರ್ಜಿಗಳನ್ನು ಒಟ್ಟಿಗೆ ವಿಚಾರಣೆ ನಡೆಸಬೇಕು’ ಎಂದು ಅರ್ಜಿದಾರರ ಪರ ವಕೀಲರಾದ ಇಂದಿರಾ ಜೈಸಿಂಗ್‌ ಕೋರಿದ್ದಾರೆ.

ಇದನ್ನೂ ಓದಿ: ಕೊರೊನಾ 3ನೇ ಅಲೆಯಲ್ಲಿ ರಾಜ್ಯದಲ್ಲಿ 3.4 ಲಕ್ಷ ಮಕ್ಕಳಿಗೆ ಸೋಂಕು ಸಾಧ್ಯತೆ: ತಜ್ಞರ ಸಮಿತಿ

ರಾಜ್ಯ ರಾಜಕಾರಣದಲ್ಲಿ ಸಂಚನಲ ಮೂಡಿಸಿ, ಅತ್ಯಾಚಾರ ಆರೋಪಿ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಕಾರಣವಾಗಿದ್ದ ಸಿಡಿ ಪ್ರಕರಣ ಇಂದಿರಾ ಜೈಸಿಂಗ್ ಆಗಮನದಿಂದ ಮತ್ತೆ ಹೊಸ ಆರಂಭ ಪಡೆಯಲಿದೆ ಎಂದು ಹೇಳಲಾಗುತ್ತಿದೆ.

ಲಿಂಗ ಸಮಾನತೆ ಹಾಗೂ ಮಾನವ ಹಕ್ಕುಗಳ ಹೋರಾಟ ವಿಚಾರವಾಗಿ ಇಂದಿರಾ ಜೈಸಿಂಗ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ್ದಾರೆ. ಇವರ ಸೇವೆಯನ್ನು ಗುರುತಿಸಿ 2005 ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. 2018 ರಲ್ಲಿ ಫಾರ್ಚ್ಯೂನ್ ಮ್ಯಾಗಝೀನ್ ಪ್ರಕಟಿಸಿದ ವಿಶ್ವದ 50 ಪ್ರಭಾವಿ ನಾಯಕರ ಪಟ್ಟಿಯಲ್ಲಿ ಇಂದಿರಾ ಕೂಡ ಒಬ್ಬರು. ಮಾನವ ಹಕ್ಕುಗಳ ರಕ್ಷಣೆ ವಿಚಾರದಲ್ಲಿ ಇಂದಿರಾ ಜೈಸಿಂಗ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದಾರೆ. ಅಡಿಷನಲ್ ಸಾಲಿಸಟರ್ ಜನರಲ್ ಹುದ್ದೆ ಅಲಂಕರಿಸಿದ ಪ್ರಥಮ ಮಹಿಳಾ ವಕೀಲರು ಎಂಬ ಕೀರ್ತಿ ಕೂಡ ಇವರಿಗಿದೆ.

ಇಂದಿರಾ ಜೈಸಿಂಗ್, 1940 ಜೂನ್ 3 ಮುಂಬೈನಲ್ಲಿ ಜನಿಸಿದ್ದರು. ಮುಂಬೈನಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿ, ಬೆಂಗಳೂರು ವಿಶ್ವ ವಿದ್ಯಾಲಯದಲ್ಲಿ 1962 ರಲ್ಲಿ ಪದವಿ ಮುಗಿಸಿದ್ದರು. ಮುಂಬಯಿ ವಿಶ್ವ ವಿದ್ಯಾಲಯದಲ್ಲಿ ಕಾನೂನು ಪದವಿ ಪೂರ್ಣಗೊಳಿಸಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಕೇಸ್‌ನಲ್ಲಿ ಇವರ ಎಂಟ್ರಿ ಹಲವು ಕುತೂಹಲಕ್ಕೆ ಕಾರಣವಾಗಿದೆ.


ಇದನ್ನೂ ಓದಿ: ಕೊರೊನಾದಿಂದ ಮೃತಪಟ್ಟವರಿಗೆ 4 ಲಕ್ಷ ರೂ.ಪರಿಹಾರ ನೀಡಲಾಗದು: ಒಕ್ಕೂಟ ಸರ್ಕಾರ

ನಾನು ಗೌರಿ ಡೆಸ್ಕ್
+ posts

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

Wordpress Social Share Plugin powered by Ultimatelysocial
Shares