Homeಕರ್ನಾಟಕಇಂಡೋನೇಷ್ಯಾ: ಫುಟ್ಬಾಲ್‌ ಪಂದ್ಯದ ವೇಳೆ ಕಾಲ್ತುಳಿತಕ್ಕೆ 127 ಮಂದಿ ಬಲಿ

ಇಂಡೋನೇಷ್ಯಾ: ಫುಟ್ಬಾಲ್‌ ಪಂದ್ಯದ ವೇಳೆ ಕಾಲ್ತುಳಿತಕ್ಕೆ 127 ಮಂದಿ ಬಲಿ

- Advertisement -
- Advertisement -

ಪೂರ್ವ ಜಾವಾ ಪ್ರಾಂತ್ಯದಲ್ಲಿ ರಾತ್ರಿಯಿಡೀ ನಡೆದ ಫುಟ್‌ಬಾಲ್ ಪಂದ್ಯವೊಂದರ ವೇಳೆ  ಕಾಲ್ತುಳಿತದಿಂದಾಗಿ 127 ಜನರು ಸಾವನ್ನಪ್ಪಿದ್ದಾರೆ ಮತ್ತು 180 ಜನರು ಗಾಯಗೊಂಡಿದ್ದಾರೆ ಎಂದು ಇಂಡೋನೇಷ್ಯಾ ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಅರೆಮಾ ಎಫ್‌ಸಿ ಮತ್ತು ಪರ್ಸೆಬಯಾ ಸುರಬಯಾ ನಡುವಿನ ಪಂದ್ಯ ಮುಗಿದ ನಂತರ, ಸೋತ ತಂಡದ ಬೆಂಬಲಿಗರು ಮೈದಾನಕ್ಕೆ ನುಗ್ಗಿದಾಗ ಪೊಲೀಸರು ಅಶ್ರುವಾಯು ಸಿಡಿಸಲಾಯಿತು. ಕಾಲ್ತುಳಿತ ಮತ್ತು ಉಸಿರುಗಟ್ಟಿದ ವಾತಾವರಣ ಸೃಷ್ಟಿಯಾಯಿತು ಎಂದು ಪೂರ್ವ ಜಾವಾ ಪೊಲೀಸ್ ಮುಖ್ಯಸ್ಥ ನಿಕೊ ಅಫಿಂಟಾ ಸುದ್ದಿಗಾರರಿಗೆ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸ್ಥಳೀಯ ಸುದ್ದಿ ವಾಹಿನಿಗಳು ವಿಡಿಯೊಗಳನ್ನು ಪ್ರಸಾರ ಮಾಡಿವೆ. ಮಲಾಂಗ್‌ನಲ್ಲಿರುವ ಕ್ರೀಡಾಂಗಣದಲ್ಲಿನ ಪಿಚ್‌ಗೆ ಜನರು ನುಗ್ಗುತ್ತಿರುವುದನ್ನು ವಿಡಿಯೊಗಳಲ್ಲಿ ಕಾಣಬಹುದಾಗಿದೆ.

ಇಂಡೋನೇಷ್ಯಾದ ಪ್ರಖ್ಯಾತ ಲೀಗ್ ಆಗಿರುವ ‘ಬಿಆರ್‌ಐ ಲಿಗಾ 1’ರ ಪಂದ್ಯದಲ್ಲಿ ಪರ್ಸೆಬಯಾ 3-2 ಅಂತರದಲ್ಲಿ ಗೆದ್ದಿತ್ತು. ಒಂದು ವಾರ ಕಾಲ ಆಟಗಳನ್ನು ಸ್ಥಗಿತಗೊಳಿಸಲಾಗಿದ್ದು, ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಇಂಡೋನೇಷ್ಯಾದ ಫುಟ್ಬಾಲ್ ಅಸೋಸಿಯೇಷನ್ (PSSI) ತಿಳಿಸಿದೆ.

ಇಂಡೋನೇಷ್ಯಾದಲ್ಲಿ ಫುಟ್ಬಾಲ್‌ ಪಂದ್ಯಗಳ ವೇಳೆ ಗಲಾಟೆಯಾಗಿರುವ ಉದಾಹರಣೆಗಳಿವೆ. ಕ್ಲಬ್‌ಗಳ ನಡುವಿನ ಪ್ರಬಲ ಪೈಪೋಟಿ ಕೆಲವೊಮ್ಮೆ ಬೆಂಬಲಿಗರ ನಡುವೆ ಹಿಂಸಾಚಾರಕ್ಕೆ ಕಾರಣವಾಗುತ್ತಿದೆ.

ಉತ್ತರ ಪ್ರದೇಶ: ಟ್ರ್ಯಾಕ್ಟರ್-ಟ್ರಾಲಿ ಉರುಳಿ 26 ಮಂದಿ ದುರ್ಮರಣ

ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ಹಳ್ಳಿಯೊಂದರ ಬಳಿ ಶನಿವಾರ ಟ್ರ್ಯಾಕ್ಟರ್-ಟ್ರಾಲಿ ಪಲ್ಟಿಯಾಗಿ ಕೊಳಕ್ಕೆ ಬಿದ್ದ ಪರಿಣಾಮ ಕನಿಷ್ಠ 26 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ವಿಶಾಕ್ ಜಿ.ಅಯ್ಯರ್ ತಿಳಿಸಿದ್ದಾರೆ.

ಸಾವಿಗೀಡಾದವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಟ್ರಾಕ್ಟರ್-ಟ್ರಾಲಿಯಲ್ಲಿ ಸುಮಾರು 50 ಜನರಿದ್ದರು. ಇವರು ಫತೇಪುರ್‌ನ ಚಂದ್ರಿಕಾ ದೇವಿ ದೇವಸ್ಥಾನದಲ್ಲಿ “ಮುಂಡನ್” ಸಮಾರಂಭದಲ್ಲಿ ಭಾಗವಹಿಸಿದ ನಂತರ ಘಟಂಪುರಕ್ಕೆ ತೆರಳುತ್ತಿದ್ದರು. ಆಗ ಅವಘಡ ನಡೆದಿದ್ದು ಹತ್ತಕ್ಕೂ ಹೆಚ್ಚು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವಿವರಿಸಿದ್ದಾರೆ.

ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ.

“ಕಾನ್ಪುರದಲ್ಲಿ ನಡೆದ ಟ್ರಾಕ್ಟರ್-ಟ್ರಾಲಿ ಅಪಘಾತದಿಂದ ದುಃಖಿತನಾಗಿರುವೆ. ಗಾಯಗೊಂಡವರ ಉಳಿವಿಗಾಗಿ ಪ್ರಾರ್ಥಿಸುವೆ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದೆ” ಎಂದು ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಮೃತರ ಸಂಬಂಧಿಕರಿಗೆ ತಲಾ 2 ಲಕ್ಷ ರೂ.ಗಳನ್ನು ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ನೀಡಲಾಗುವುದು ಎಂದು ಪ್ರಧಾನಮಂತ್ರಿ ಕಚೇರಿಯು (ಪಿಎಂಒ) ತಿಳಿಸಿದೆ. ಗಾಯಗೊಂಡವರಿಗೆ 50,000 ರೂಪಾಯಿ ನೀಡಲಾಗುವುದು ಎಂದು ಪ್ರಧಾನಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಆದಿತ್ಯನಾಥ್, “ಕಾನ್ಪುರ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತ ಹೃದಯ ವಿದ್ರಾವಕವಾಗಿದೆ. ಜಿಲ್ಲಾಧಿಕಾರಿಗಳು ಮತ್ತು ಇತರ ಹಿರಿಯ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಯುದ್ಧೋಪಾದಿಯಲ್ಲಿ ನಡೆಸಬೇಕು. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ” ಎಂದಿದ್ದಾರೆ.

“ಅಪಘಾತದಲ್ಲಾದ ಜೀವಹಾನಿ ಬಹಳ ದುಃಖ ತಂದಿದೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ಮೃತರ ಕುಟುಂಬಗಳಿಗೆ ಈ ತುಂಬಲಾರದ ನಷ್ಟವನ್ನು ಭರಿಸುವ ಧೈರ್ಯವನ್ನು ನೀಡಲೆಂದು ಭಗವಾನ್ ಶ್ರೀರಾಮನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಪ್ರತಿಕ್ರಿಯಿಸಿದ್ದಾರೆ. (ವಿವರಗಳನ್ನು ‘ಇಲ್ಲಿ’ ಓದಿರಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...