Homeಅಂತರಾಷ್ಟ್ರೀಯಇಂಡೋನೇಷ್ಯಾ | ನಾಲ್ವರು ಪ್ರಮುಖ ಹೋರಾಟಗಾರರು ಖುಲಾಸೆ : ಪ್ರತಿಭಟನೆಯ ಹಕ್ಕಿಗೆ ಹೊಸ ಭರವಸೆ ಎಂದ...

ಇಂಡೋನೇಷ್ಯಾ | ನಾಲ್ವರು ಪ್ರಮುಖ ಹೋರಾಟಗಾರರು ಖುಲಾಸೆ : ಪ್ರತಿಭಟನೆಯ ಹಕ್ಕಿಗೆ ಹೊಸ ಭರವಸೆ ಎಂದ ಆಮ್ನೆಸ್ಟಿ

- Advertisement -
- Advertisement -

2025ರ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನಡೆದ ಹಿಂಸಾತ್ಮಕ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ನಾಲ್ವರು ಪ್ರಮುಖ ಹೋರಾಟಗಾರರನ್ನು ಇಂಡೋನೇಷ್ಯಾದ ಕೇಂದ್ರ ಜಕಾರ್ತಾ ಜಿಲ್ಲಾ ನ್ಯಾಯಾಲಯವು ಶುಕ್ರವಾರ (ಮಾ.6) ಖುಲಾಸೆಗೊಳಿಸಿದೆ.

ದೇಶದಲ್ಲಿ ನಾಗರಿಕ ಸ್ವಾತಂತ್ರ್ಯಕ್ಕೆ ಸಂದ ಒಂದು ಸಣ್ಣ ಜಯ ಎಂದು ಮಾನವ ಹಕ್ಕುಗಳ ಸಂಘಟನೆಗಳು ಈ ತೀರ್ಪನ್ನು ಬಣ್ಣಿಸಿವೆ.

ಸಂಸದರಿಗೆ ಆರ್ಥಿಕ ಸವಲತ್ತುಗಳನ್ನು ಅಥವಾ ಪ್ರೋತ್ಸಾಹಕ ಧನವನ್ನು ಹೆಚ್ಚಿಸುವ ಸರ್ಕಾರದ ನಿರ್ಧಾರ ಸೇರಿದಂತೆ, ಸರ್ಕಾರದ ಖರ್ಚು ವೆಚ್ಚಗಳ ಆದ್ಯತೆಗಳನ್ನು ವಿರೋಧಿಸಿ ಸಾವಿರಾರು ವಿದ್ಯಾರ್ಥಿಗಳು, ಮಾನವ ಹಕ್ಕುಗಳ ಕಾರ್ಯಕರ್ತರು ಮತ್ತು ನಾಗರಿಕರು ದೇಶದಾದ್ಯಂತ ನಡೆದ ಪ್ರತಿಭಟನೆಗಳಲ್ಲಿ ಪಾಲ್ಗೊಂಡಿದ್ದರು.

ರಾಜಧಾನಿ ಜಕಾರ್ತಾದಲ್ಲಿ ಪೊಲೀಸ್ ವಾಹನವೊಂದು ಡಿಕ್ಕಿ ಹೊಡೆದು ಅಫಾನ್ ಕುರ್ನಿಯಾವನ್ ಎಂಬ ಬೈಕ್ ಟ್ಯಾಕ್ಸಿ ಚಾಲಕ ಮೃತಪಟ್ಟ ನಂತರ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ್ದವು. ಇದು ಸೆಪ್ಟೆಂಬರ್ ತಿಂಗಳವರೆಗೂ ಮುಂದುವರಿದು, ಒಟ್ಟು 10 ಜನರು ಸಾವಿಗೀಡಾಗಿದ್ದರು.

ಮಾನವ ಹಕ್ಕುಗಳ ಗುಂಪುಗಳು ಸ್ಥಾಪಿಸಿದ ಸ್ವತಂತ್ರ ಸತ್ಯಶೋಧನಾ ಸಂಸ್ಥೆಯು ಬಿಡುಗಡೆ ಮಾಡಿದ ವರದಿಯ ಪ್ರಕಾರ, 2026ರ ಫೆಬ್ರವರಿ ವೇಳೆಗೆ ಸುಮಾರು 7,000 ಜನರನ್ನು ಪ್ರತಿಭಟನೆ ಸಂಬಂಧ ಬಂಧಿಸಲಾಗಿದೆ. ಇವರಲ್ಲಿ 500 ಜನರಿಗೆ ಶಿಕ್ಷೆ ವಿಧಿಸಲಾಗಿದ್ದು, 125 ಜನರು ಇನ್ನೂ ಬಂಧನದಲ್ಲಿಯೇ ಮುಂದುವರಿದಿದ್ದಾರೆ.

ಪ್ರತಿಭಟನಾಕಾರರಿಗೆ ಕಾನೂನು ನೆರವು ನೀಡುವ ‘ಲೋಕತಾರು ಫೌಂಡೇಶನ್’ ಎಂಬ ಸರ್ಕಾರೇತರ ಸಂಸ್ಥೆಯಲ್ಲಿ ಕೆಲಸ ಮಾಡುವ ಡೆಲ್ಪೆಡ್ರೊ ಮರ್ಹಾನ್ ಅವರನ್ನು ಕೇಂದ್ರ ಜಕಾರ್ತಾದ ನ್ಯಾಯಾಲಯವು ಶುಕ್ರವಾರ ಖುಲಾಸೆಗೊಳಿಸಿದೆ. ಸೆಪ್ಟೆಂಬರ್‌ನಲ್ಲಿ ಅವರ ಬಂಧನವಾದ ನಂತರ, ಡೆಲ್ಪೆಡ್ರೊ ಅವರನ್ನು ಈ ಪ್ರತಿಭಟನೆಯ ಪ್ರಮುಖ ಮುಖ ಎಂದು ದೊಡ್ಡಮಟ್ಟದಲ್ಲಿ ಗುರುತಿಸಲಾಗಿತ್ತು.

ಡೆಲ್ಪೆಡ್ರೊ ಅವರ ಸಹೋದ್ಯೋಗಿ, ಲೋಕತಾರು ಫೌಂಡೇಶನ್‌ನ ಸಿಬ್ಬಂದಿ ಮುಜಾಫರ್ ಸಲೀಂ, ‘ಗೆಜಯನ್ ಮೆಮ್ಮಂಗಿಲ್’ ಎಂಬ ವಿದ್ಯಾರ್ಥಿ ಚಳುವಳಿಯ ಆನ್‌ಲೈನ್ ಕಾರ್ಯಕರ್ತ ಸ್ಯಹದನ್ ಹುಸೇನ್ ಮತ್ತು ರಿಯಾವು ವಿಶ್ವವಿದ್ಯಾಲಯದ ವಿದ್ಯಾರ್ಥಿ ಹೋರಾಟಗಾರ ಖಾರಿಕ್ ಅನ್ಹರ್ ಖುಲಾಸೆಗೊಂಡವರು.

ಆಗಸ್ಟ್‌ನಲ್ಲಿ ನಡೆದ ಪ್ರತಿಭಟನೆಗಳಲ್ಲಿ ಪಾಲ್ಗೊಳ್ಳುವಂತೆ ಜನರನ್ನು ಪ್ರಚೋದಿಸಿದ ಆರೋಪದಿಂದ ಈ ಎಲ್ಲರನ್ನೂ ನಿರ್ದೋಷಿಗಳೆಂದು ಘೋಷಿಸಲಾಗಿದೆ. ಅಷ್ಟೇ ಅಲ್ಲದೆ, ಸಾಮಾಜಿಕ ಮಾಧ್ಯಮಗಳ ಮೂಲಕ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣಗಳನ್ನು ಹರಡಿ ಗಲಭೆಗಳಿಗೆ ಕಾರಣರಾದ ಆರೋಪಗಳಿಂದಲೂ ಅವರನ್ನು ಮುಕ್ತಗೊಳಿಸಲಾಗಿದೆ ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

“ಈ ತೀರ್ಪು ಕೇವಲ ನಮಗೆ ಸೇರಿದ್ದಲ್ಲ, ಇದು ಎಲ್ಲಾ ರಾಜಕೀಯ ಕೈದಿಗಳಿಗೆ ಸೇರಿದ್ದು.. ಊಹಿಸಿ, ನಮ್ಮನ್ನು ಆರು ತಿಂಗಳ ಕಾಲ ಬಂಧನದಲ್ಲಿಡಲಾಗಿತ್ತ. ಆದರೆ, ಈಗ ನಾವು ನಿರ್ದೋಷಿಗಳು ಎಂದು ಸಾಬೀತಾಗಿದೆ” ಎಂಬುವುದಾಗಿ ವಿಚಾರಣೆಯ ನಂತರ ಡೆಲ್ಪೆಡ್ರೊ ಹೇಳಿದ್ದಾರೆ. ಈ ಸಂದರ್ಭದಲ್ಲಿ ಅವರು ಇರಾನಿನ ಧ್ವಜ ಹೊದ್ದುಕೊಂಡಿದ್ದರು ಎಂದು ರಾಯಿಟರ್ಸ್ ವರದಿ ಮಾಡಿದೆ.

ಇಂಡೋನೇಷಿಯನ್ ಲೀಗಲ್ ಏಡ್ ಫೌಂಡೇಶನ್ ಎಂಬ ಮತ್ತೊಂದು ಸಂಸ್ಥೆಯು ಈ ತೀರ್ಪನ್ನು ನಾಗರಿಕ ಸ್ವಾತಂತ್ರ್ಯಕ್ಕೆ ಸಂದ ಒಂದು ಸಣ್ಣ ಜಯ ಎಂದು ಬಣ್ಣಿಸಿದೆ. ಆದರೆ, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸಲು ಸರ್ಕಾರವು ಇನ್ನು ಮುಂದೆ ಹೆಚ್ಚಿನ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅದು ಹೇಳಿದೆ.

‘ಕಣ್ಮರೆಯಾದವರು ಮತ್ತು ಹಿಂಸಾಚಾರದ ಸಂತ್ರಸ್ತರ ಆಯೋಗ’ (KontraS) ಎಂದು ಕರೆಯಲ್ಪಡುವ ಮಾನವ ಹಕ್ಕುಗಳ ಗುಂಪು, ಈ ತೀರ್ಪನ್ನು “ಇಂಡೋನೇಷ್ಯಾದ ಪ್ರಜಾಪ್ರಭುತ್ವದ ಹಿನ್ನಡೆಯ ನಡುವೆ ಕಂಡ ಒಂದು ಓಯಸಿಸ್ (ಮರಳುಗಾಡಿನ ಓಯಸಿಸ್)” ಎಂದು ಬಣ್ಣಿಸಿದೆ.

ವಿಶ್ಲೇಷಕರ ಪ್ರಕಾರ, 2024ರ ಭರ್ಜರಿ ಚುನಾವಣಾ ಗೆಲುವಿನ ನಂತರ ಅಧ್ಯಕ್ಷ ಪ್ರಬೊವೊ ಸುಬಿಯಾಂಟೊ ಅವರಿಗೆ ಎದುರಾದ ಮೊದಲ ದೊಡ್ಡ ಸವಾಲು ಈ ಪ್ರತಿಭಟನೆಗಳಾಗಿದ್ದವು. ಈ ಅಶಾಂತಿಯು 1998ರ ನಂತರ ನಡೆದ ಅತ್ಯಂತ ಭೀಕರ ಘಟನೆ ಎಂದು ಬಣ್ಣಿಸಲಾಗಿದೆ. ಅಂದು ವಿದ್ಯಾರ್ಥಿ ಪ್ರತಿಭಟನೆಗಳು ಮಾಜಿ ಅಧ್ಯಕ್ಷ ಸುಹಾರ್ಟೋ ಅವರ ಮೂರು ದಶಕಗಳ ಸರ್ವಾಧಿಕಾರಿ ಆಡಳಿತದ ಪತನಕ್ಕೆ ಕಾರಣವಾಗಿದ್ದವು.

ಹೋರಾಟಗಾರರ ಖುಲಾಸೆ ಪ್ರತಿಭಟನೆಯ ಹಕ್ಕಿಗೆ ಹೊಸ ಭರವಸೆ ಮೂಡಿಸಿದೆಆಮ್ನೆಸ್ಟಿ

ನಾಲ್ವರು ಹೋರಾಟಗಾರರನ್ನು ಖುಲಾಸೆಗೊಳಿಸಿದ ಇಂಡೋನೇಷ್ಯಾ ನ್ಯಾಯಾಲಯದ ತೀರ್ಪನ್ನು ಮಾನವ ಹಕ್ಕುಗಳ ಸಂಘಟನೆ ಆಮ್ನೆಸ್ಟಿ ಇಂಟರ್ನ್ಯಾಷನಲ್ ಸ್ವಾಗತಿಸಿದೆ. ಈ ಕುರಿತು ಸಂಘಟನೆಯ ಇಂಡೋನೇಷ್ಯಾದ ಕಾರ್ಯನಿರ್ವಾಹಕ ನಿರ್ದೇಶಕ ಉಸ್ಮಾನ್ ಹಮೀದ್ ಈ ಕೆಳಗಿನಂತೆ ಹೇಳಿದ್ದಾರೆ:

“ಇಂಡೋನೇಷ್ಯಾದಲ್ಲಿ ದಿನೇ ದಿನೇ ನಾಗರಿಕ ಸ್ವಾತಂತ್ರ್ಯ ಕುಸಿಯುತ್ತಿರುವ ನಡುವೆ ನ್ಯಾಯಾಲಯದ ತೀರ್ಪು ಹೊಸ ಭರವಸೆಯನ್ನು ಮೂಡಿಸಿದೆ. ಮಾನವ ಹಕ್ಕು ಹೋರಾಟಗಾರರನ್ನು ಮತ್ತು ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕನ್ನು ಚಲಾಯಿಸುವ ಯಾರನ್ನೇ ಆಗಲಿ ಅಪರಾಧಿಗಳೆಂದು ಬಿಂಬಿಸುವುದನ್ನು ನಿಲ್ಲಿಸಬೇಕು ಎಂಬ ಸ್ಪಷ್ಟ ಸಂದೇಶವನ್ನು ಈ ತೀರ್ಪು ಕಾನೂನು ಜಾರಿ ಅಧಿಕಾರಿಗಳಿಗೆ ನೀಡಿದೆ. ಇದು ಇಂಡೋನೇಷ್ಯಾದ ನ್ಯಾಯ ಮತ್ತು ಮಾನವ ಹಕ್ಕುಗಳ ಹೋರಾಟಕ್ಕೆ ಸಂದ ಪ್ರಮುಖ ಗೆಲುವಾಗಿದೆ”

“2025ರ ಆಗಸ್ಟ್ ತಿಂಗಳ ಪ್ರತಿಭಟನೆಗಳ ಸಮಯದಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಕೇವಲ ಜನರನ್ನು ಸೇರುವಂತೆ ಕರೆ ನೀಡಿದ್ದಕ್ಕಾಗಿ ಈ ಹೋರಾಟಗಾರರ ಮೇಲೆ ಮೊಕದ್ದಮೆ ಹೂಡಬಾರದಾಗಿತ್ತು. ಇವರು ಪ್ರತಿಭಟನೆಗೆ ಕರೆ ನೀಡಿದ್ದಕ್ಕೂ ಮತ್ತು ಜಕಾರ್ತದಲ್ಲಿ ಆಗಸ್ಟ್ ಪ್ರತಿಭಟನೆಯ ವೇಳೆ ನಡೆದ ಹಿಂಸಾಚಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ನ್ಯಾಯಾಧೀಶರು ತಮ್ಮ ತೀರ್ಪಿನಲ್ಲಿ ಬಹಳ ಸ್ಪಷ್ಟವಾಗಿ ತಿಳಿಸಿದ್ದಾರೆ”

“ನ್ಯಾಯಾಲಯದ ತೀರ್ಪು ಪ್ರತಿಭಟನೆಗಳ ಸಮಯದಲ್ಲಿ ಸರ್ಕಾರದ ನೀತಿಗಳನ್ನು ವಿರೋಧಿಸಿದ್ದಕ್ಕಾಗಿ ಅಥವಾ ಟೀಕಿಸಿದ್ದಕ್ಕಾಗಿ ಮಾತ್ರ ಬಂಧಿಸಲ್ಪಟ್ಟವರ ಬಿಡುಗಡೆಗೆ ಪ್ರೇರಣೆಯಾಗಬೇಕು. ಟೀಕಾಕಾರರ ಧ್ವನಿಯನ್ನು ಅಡಗಿಸಬಾರದು. ಯಾರೊಬ್ಬರೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕಾಗಿ ಜೈಲಿಗೆ ಹೋಗಬಾರದು. ಇಂಡೋನೇಷ್ಯಾದಲ್ಲಿ ಪ್ರತಿಭಟನೆಗಳು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ನಿರಂತರ ದಮನಕಾರಿ ಕ್ರಮಗಳು ಕೊನೆಗೊಳ್ಳಬೇಕು. ಈ ಪ್ರತಿಭಟನೆಗಳ ಸಂದರ್ಭದಲ್ಲಿ ನಡೆದ ಪೋಲೀಸ್ ದಮನದ ಬಗ್ಗೆ ಸ್ವತಂತ್ರ ತನಿಖೆ ನಡೆಯುವುದು ಮಾತ್ರ ಹೊಣೆಗಾರಿಕೆಯನ್ನು ಖಚಿತಪಡಿಸಿಕೊಳ್ಳಲು ಇರುವ ಏಕೈಕ ವಿಶ್ವಾಸಾರ್ಹ ಮಾರ್ಗವಾಗಿದೆ”

“ನ್ಯಾಯಾಧೀಶರು ಪ್ರತಿಭಟನಾಕಾರರ ವಿರುದ್ಧ ಪೊಲೀಸರು ಅತಿಯಾದ ಬಲಪ್ರಯೋಗ ಮಾಡಿರುವುದನ್ನು ಟೀಕಿಸಿದ್ದಾರೆ, ಇದನ್ನು ಆಮ್ನೆಸ್ಟಿ ಇಂಟರ್ನ್ಯಾಷನಲ್ ಸಂಸ್ಥೆಯು ಈಗಾಗಲೇ ದಾಖಲಿಸಿದೆ”

“ಇದಕ್ಕೂ ಮೊದಲು, ಪ್ರಾಸಿಕ್ಯೂಟರ್‌ಗಳು ಪ್ರತಿ ಹೋರಾಟಗಾರರಿಗೂ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಬೇಕೆಂದು ಕೋರಿದ್ದರು. 2025ರ ಆಗಸ್ಟ್ ಅಂತ್ಯದಲ್ಲಿ ನಡೆದ ಪ್ರತಿಭಟನೆಗಳಿಗೆ ಜನರನ್ನು ‘ಪ್ರಚೋದಿಸುವ’ ಸಲುವಾಗಿ ಸೋಶಿಯಲ್ ಮೀಡಿಯಾದಲ್ಲಿ ‘ಉದ್ರೇಕಕಾರಿ ಮತ್ತು ಸಂಘರ್ಷಾತ್ಮಕ’ ಪೋಸ್ಟ್‌ಗಳನ್ನು ಹಾಕಿದ್ದಾರೆ ಎಂದು ಇವರ ಮೇಲೆ ಆರೋಪ ಹೊರಿಸಲಾಗಿತ್ತು. ಅಲ್ಲದೆ ಈ ಪೋಸ್ಟ್‌ಗಳು ಸಾರ್ವಜನಿಕ ಆಸ್ತಿಪಾಸ್ತಿಗಳ ಹಾನಿಗೆ ಮತ್ತು ಪೊಲೀಸ್ ಅಧಿಕಾರಿಗಳ ಗಾಯಕ್ಕೆ ಕಾರಣವಾಗಿವೆ ಎಂದು ವಾದಿಸಲಾಗಿತ್ತು”

ಅಧ್ಯಕ್ಷರ ಅಮೆರಿಕ ಸಖ್ಯದ ವಿರುದ್ದ ಮತ್ತೆ ಭುಗಿಲೆದ್ದ ಪ್ರತಿಭಟನೆ

ಇತ್ತೀಚೆಗೆ ಇರಾನ್ ಮೇಲೆ ನಡೆದ ದಾಳಿಯ ಹಿನ್ನೆಲೆಯಲ್ಲಿ, ಇಂಡೋನೇಷ್ಯಾದಲ್ಲಿ ಅಮೆರಿಕ ಮತ್ತು ಇಸ್ರೇಲ್ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಅಧ್ಯಕ್ಷ ಪ್ರಬೊವೊ ಸುಬಿಯಾಂಟೊ ಅವರು ಅಮೆರಿಕದೊಂದಿಗೆ ಹೊಂದಿರುವ ನಿಕಟ ಸಂಬಂಧವನ್ನು ಪ್ರತಿಭಟನಾಕಾರರು ಪ್ರಶ್ನಿಸುತ್ತಿದ್ದಾರೆ. ಅಮೆರಿಕದ ಪ್ರಭಾವಕ್ಕೆ ಒಳಗಾಗದೆ ಸ್ವತಂತ್ರ ನಿಲುವು ತಳೆಯುವಂತೆ ಅವರು ಒತ್ತಾಯಿಸುತ್ತಿದ್ದಾರೆ.

ಇಂಡೋನೇಷ್ಯಾ ಅಮೆರಿಕ ನೇತೃತ್ವದ ‘ಬೋರ್ಡ್ ಆಫ್ ಪೀಸ್’ ಮಂಡಳಿಯಲ್ಲಿ ಭಾಗವಹಿಸುತ್ತಿರುವುದನ್ನು ವಿದ್ಯಾರ್ಥಿ ಸಂಘಟನೆಗಳು (BEM SI) ವಿರೋಧಿಸಿವೆ.

ಈ ಮಂಡಳಿಯಿಂದ ಇಂಡೋನೇಷ್ಯಾ ಹೊರಬರಬೇಕು ಮತ್ತು ಪ್ಯಾಲೆಸ್ತೀನ್‌ ಸ್ವಾತಂತ್ರ್ಯಕ್ಕೆ ಹೆಚ್ಚಿನ ಬೆಂಬಲ ನೀಡಬೇಕು ಎಂದು ಆಗ್ರಹಿಸಿ ಶನಿವಾರ (ಮಾ.7) ಜಕಾರ್ತಾದಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ಆಯೋಜಿಸಲಾಗಿದೆ.



ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...