Homeಕರ್ನಾಟಕಹೊರಗಿನಿಂದ ಬಂದವರಿಂದ ಮಾತ್ರ ಸೋಂಕು, ರಾಜ್ಯದಲ್ಲಿ ಆತಂಕ ಇಲ್ಲ: ಬಿ.ಎಸ್. ಯಡಿಯೂರಪ್ಪ

ಹೊರಗಿನಿಂದ ಬಂದವರಿಂದ ಮಾತ್ರ ಸೋಂಕು, ರಾಜ್ಯದಲ್ಲಿ ಆತಂಕ ಇಲ್ಲ: ಬಿ.ಎಸ್. ಯಡಿಯೂರಪ್ಪ

- Advertisement -
- Advertisement -

ಹೊರಗಿನಿಂದ ಬಂದವರಿಂದಲೇ ಕೊರೊನ ಸೋಂಕು ಹರಡಿದಿಯೇ ಹೊರತು ರಾಜ್ಯದಲ್ಲಿ ಯಾವುದೇ ಆತಂಕ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಗುಜರಾತ್, ಮಹಾರಾಷ್ಟ್ರ ಮತ್ತು ದೆಹಲಿಯಿಂದ ಬಂದವರಿಂದಲೇ ಹೆಚ್ಚು ಸೋಂಕು ಹರಡಿದೆ, ಸಮಸ್ಯೆಗಳು ಸೃಷ್ಟಿಯಾಗಿವೆ. ರಾಜ್ಯದ ಜನರಲ್ಲಿ ಅಂತಹ ಸೋಂಕು ಕಂಡುಬಂದಿಲ್ಲ ಎಂದು ತಿಳಿಸಿದರು.

ಮುಂದೆ ಲಾಕ್ ಡೌನ್ ಮಾಡುವುದಿಲ್ಲ.. ಭಾನುವಾರವೂ ಲಾಕ್ ಡೌನ್ ಇರುವುದಿಲ್ಲ. ರಾಜ್ಯದಲ್ಲಿ ಶೇ. 93ರಷ್ಟು ಮಂದಿಯಲ್ಲಿ ಕೊರೊನ ಸೋಂಕು ಇಲ್ಲ ಎಂದು ಸ್ಪಷ್ಟಪಡಿಸಿದರು.

ಜೂನ್ 17ರಂದು ಪ್ರಧಾನಿ ಜೊತೆ ವಿಡಿಯೋ ಸಂವಾದ ಮಾಡಲಿರುವ ಯಡಿಯೂರಪ್ಪ, ನಾನು ಪ್ರಧಾನಿಗಳಲ್ಲಿ ಮನವಿ ಮಾಡುತ್ತೇನೆ ಹೆಚ್ಚು ರಿಲೀಫ್ ಕೊಡಬೇಕೆಂದು ಕೋರುತ್ತೇನೆ ಎಂದು ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.

ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಮಾಸ್ಕ್ ಹಾಕದೆ ಓಡಾಡುವವರೆಗೆ 200 ರೂಪಾಯಿ ದಂಡ ವಿಧಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್ಚರಿಕೆ ನೀಡಿದರು.

ಬೆಂಗಳೂರಿನ ವಿಧಾನಸೌಧದ ಬಳಿ ಗುರುವಾರ ಮಾಸ್ಕ್ ಡೇ ಆಚರಿಸಲಾಗುವುದು. ಕೇವಲ ಬೆಂಗಳೂರು ಮಾತ್ರವಲ್ಲ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಇದನ್ನು ಆಚರಿಸಲು ಉದ್ದೇಸಿಸಲಾಗಿದೆ. ಈ ಸಂದರ್ಭದಲ್ಲಿ ದೈಹಿಕ ಅಂತರ ಕಡ್ಡಾಯವಾಗಿ ಪಾಲಿಸಬೇಕು ಎಂದು ಯಡಿಯೂರಪ್ಪ ಹೇಳಿದರು.


ಓದಿ: ವೃದ್ಧ ಯಡಿಯೂರಪ್ಪನವರಿಗೆ ಕೈ ಕೊಡುತ್ತಿವೆ ಈ ಮೂರು ಸಂಗತಿಗಳು


ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪುಲ್ವಾಮದಲ್ಲಿ ಹತರಾದ ಯೋಧರ ಪತ್ನಿಯರ ಮಂಗಳಸೂತ್ರ ಕಸಿದವರು ಯಾರು? : ಡಿಂಪಲ್ ಯಾದವ್

0
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಮ್ಮ ತಾಯಂದಿರು, ಸಹೋದರಿಯರ 'ಮಂಗಳಸೂತ್ರ' ಕಿತ್ತುಕೊಳ್ಳಲಿದೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ಸಮಾಜವಾದಿ ಪಕ್ಷದ ನಾಯಕಿ ಡಿಂಪಲ್ ಯಾದವ್ ತಿರುಗೇಟು ನೀಡಿದ್ದು, "ಪುಲ್ವಾಮ ದಾಳಿಯಲ್ಲಿ ಹತರಾದ ಸೈನಿಕರ...