Homeಮುಖಪುಟಪ್ರಚೋದನಕಾರಿ ಹೇಳಿಕೆ: ಎಫ್‌ಐಆರ್‌ನಲ್ಲಿ ಅಸಾದುದ್ದೀನ್ ಓವೈಸಿ, ಯತಿ ನರಸಿಂಗಾನಂದ ಹೆಸರು

ಪ್ರಚೋದನಕಾರಿ ಹೇಳಿಕೆ: ಎಫ್‌ಐಆರ್‌ನಲ್ಲಿ ಅಸಾದುದ್ದೀನ್ ಓವೈಸಿ, ಯತಿ ನರಸಿಂಗಾನಂದ ಹೆಸರು

- Advertisement -
- Advertisement -

ಪ್ರಚೋದನಕಾರಿ ಹೇಳಿಕೆಗಳ ಕುರಿತು ದೆಹಲಿ ಪೊಲೀಸರು ಬುಧವಾರ (ಜೂನ್ 8) ದಾಖಲಿಸಿರುವ ಎಫ್‌ಐಆರ್‌ನಲ್ಲಿ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮತ್ತು ದ್ವೇಷ ಭಾಷಣ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಯತಿ ನರಸಿಂಗಾನಂದ ಅವರ ಹೆಸರನ್ನು ಸೇರಿಸಲಾಗಿದೆ.

ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಪ್ರವಾದಿಯವರ ಕುರಿತಾದ ಅವಹೇಳನಾಕಾರಿ ಹೇಳಿಕೆಗಳ ಹಿನ್ನೆಲೆ ಉಂಟಾದ ವಿವಾದ ಜಾಗತಿಕ ಮಟ್ಟದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ದೆಹಲಿ ಪೊಲೀಸರು ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದು, ಒಂದರಲ್ಲಿ ನೂಪೂರ್‌ ಶರ್ಮಾ ಅವರನ್ನು ಹೆಸರಿಸಲಾಗಿದೆ‍. ಮತ್ತೊಂದು ಎಫ್‌ಐಆರ್‌ನಲ್ಲಿ ಉಚ್ಚಾಟಿತ ಬಿಜೆಪಿ ನಾಯಕ ನವೀನ್ ಜಿಂದಾಲ್, ಪತ್ರಕರ್ತೆ ಸವಾ ನಖ್ವಿ ಸೇರಿದಂತೆ ಹಲವರನ್ನು ಹೆಸರಿಸಲಾಗಿದೆ.

ಇದನ್ನೂ ಓದಿ: ಹೈದರಾಬಾದ್ ಮಾರ್ಯಾದೆಹೀನ ಹತ್ಯೆ: ಸಂವಿಧಾನ ಮತ್ತು ಇಸ್ಲಾಂ ಪ್ರಕಾರ ಕ್ರಿಮಿನಲ್ ಕೃತ್ಯ – ಅಸಾದುದ್ದೀನ್ ಓವೈಸಿ

ಇಷ್ಟು ದಿನಗಳ ಕಾಲ ಟಿವಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಇದೇ ರೀತಿಯಲ್ಲಿ ಅನೇಕರು ದ್ವೇಷ ಭಾಷಣವನ್ನು ಮಾಡುತ್ತಿದ್ದರೂ ಕ್ರಮ ತೆಗೆದುಕೊಳ್ಳದ ಪೊಲೀಸರು, ಇಬ್ಬರು ಬಿಜೆಪಿ ನಾಯಕರ ಟೀಕೆಗಳನ್ನು 16 ಕ್ಕೂ ಹೆಚ್ಚು ದೇಶಗಳು ಟೀಕಿಸಿದ ನಂತರ ವಿಳಂಬವಾಗಿ ಕ್ರಮ ಕೈಗೊಳ್ಳುತ್ತಿರುವುದು ಹಲವರ ಟೀಕೆಗೆ ಕಾರಣವಾಗಿದೆ.

ಈ ಎಫ್‌ಐಆರ್‌ಗಳನ್ನು ಯಾರದ್ದಾದರೂ ದೂರಿನ ಆಧಾರದ ಮೇಲೆ ದಾಖಲಿಸಲಾಗಿದೆಯೇ ಅಥವಾ ದೆಹಲಿ ಪೊಲೀಸರ ವಿಶೇಷ ಸೆಲ್‌ನ ಸೈಬರ್ ಘಟಕವು ಸ್ವಯಂಪ್ರೇರಿತವಾಗಿ ದಾಖಲಿಸಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೂ, ಸಾಮಾಜಿಕ ಮಾಧ್ಯಮಗಳ ವಿಶ್ಲೇಷಣೆಯ ನಂತರ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದ್ವೇಷದ ಸಂದೇಶಗಳನ್ನು ಹರಡುವ, ವಿವಿಧ ಗುಂಪುಗಳ ನಡುವೆ ಗಲಭೇಗೆ ಪ್ರಚೋದಿಸುವ ಮತ್ತು ಸಾರ್ವಜನಿಕ ನೆಮ್ಮದಿಗೆ ಹಾನಿಕಾರಕವಾದ ಸನ್ನಿವೇಶಗಳನ್ನು ಸೃಷ್ಟಿಸುತ್ತಿರುವವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪ್ರಚೋದನೆ, ಅವಮಾನ ಮತ್ತು ಧಾರ್ಮಿಕ ಭಾವನೆಗಳಿಗೆ ಘಾಸಿ ಉಂಟುಮಾಡುವುದಕ್ಕೆ ಸಂಬಂಧಿಸಿದ ಸೆಕ್ಷನ್ 153, 295 ಮತ್ತು 505 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.


ಇದನ್ನೂ ಓದಿ: ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷ: ನೂಪುರ್ ಶರ್ಮಾ, ಪತ್ರಕರ್ತೆ ಸಬಾ ನಖ್ವಿ ಸೇರಿದಂತೆ ಹಲವರ ವಿರುದ್ಧ ಪ್ರಕರಣ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮೆರಿಕದ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಬಗ್ಗೆ ಸ್ಯಾಮ್ ಪಿತ್ರೋಡಾ ಕೊಟ್ಟಿದ್ದ ವಿವರಣೆಯನ್ನು ‘ರಾಜಕೀಯ ಅಸ್ತ್ರ’...

0
ಲೋಕಸಭೆ ಚುನಾವಣೆ ಹಿನ್ನೆಲೆ ಪ್ರಧಾನಿ ಮೋದಿ ಹಾದಿಯಾಗಿ ಬಿಜೆಪಿ ನಾಯಕರು ವಿವಾದಾತ್ಮಕ ಹೇಳಿಕೆ ಮೂಲಕ ಕಾಂಗ್ರೆಸ್‌ ಪಕ್ಷವನ್ನು ಮತ್ತು ಕಾಂಗ್ರೆಸ್‌ನ ಪ್ರಣಾಳಿಕೆ ವಿರುದ್ಧ ವಾಗ್ಧಾಳಿ ನಡೆಸುತ್ತಾ ಬಂದಿದ್ದಾರೆ. ಈ ಮಧ್ಯೆ ಭಾರತೀಯ ಸಾಗರೋತ್ತರ...