Homeಮುಖಪುಟ25 ಸಾವಿರ ರೂಗಳಿಗೆ ಅಭ್ಯರ್ಥಿಗಳಿಗೆ ಮತದಾರರ ಮಾಹಿತಿ ಮಾರಾಟ: ಎಫ್‌ಐಆರ್ ದಾಖಲು

25 ಸಾವಿರ ರೂಗಳಿಗೆ ಅಭ್ಯರ್ಥಿಗಳಿಗೆ ಮತದಾರರ ಮಾಹಿತಿ ಮಾರಾಟ: ಎಫ್‌ಐಆರ್ ದಾಖಲು

- Advertisement -
- Advertisement -

25 ಸಾವಿರ ನೀಡಿ, ಮತದಾರರ ಸಂಪೂರ್ಣ ಮಾಹಿತಿ ಪಡೆದಕೊಳ್ಳಿ, ಜಯ ಸಾಧಿಸಿ ಎಂದು 6.5 ಲಕ್ಷ ಮತದಾರರ ಮಾಹಿತಿ ಮಾರಾಟ ಮಾಡುತ್ತಿದ್ದ ಕೋರಮಂಗಲದ ಖಾಸಗಿ ಸಂಸ್ಥೆಯ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಈ ವಿಷಯದ ಕುರಿತು ಪಕ್ಷೇತರ ಅಭ್ಯರ್ಥಿಯೊಬ್ಬರ ಮಾಹಿತಿ ಮೇರೆಗೆ ‘ದಿ ನ್ಯೂಸ್‌ ಮಿನಿಟ್‌’ ವೆಬ್‌ಸೈಟ್‌ ತನಿಖಾ ವರದಿ ಪ್ರಕಟಿಸಿತ್ತು. ಬಳಿಕ ಚುನಾವಣಾಧಿಕಾರಿಯು ಪೊಲೀಸರಿಗೆ ದೂರು ನೀಡಿದ್ದರು. ಆಗ್ನೇಯ ವಿಭಾಗದ ಸೈಬರ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖಾಸಗಿ ಕಂಪನಿಯ ದಾಖಲೆಗಳನ್ನು ಪೊಲೀಸರು ವಶಕ್ಕೆ ಪಡೆದು, ತನಿಖೆ ಕೈಗೊಂಡಿದ್ದಾರೆ ಎನ್ನಲಾಗಿದೆ.

ಈ ವೆಬ್‌ಸೈಟ್ ತೆಗೆದ ತಕ್ಷಣ ವಿಧಾನಸಭಾ ಚುನಾವಣಾ ಅಭ್ಯರ್ಥಿಗಳಿಗೆ ಸ್ವಾಗತ ಎಂಬ ಸಂದೇಶ ಬರುತ್ತಿತ್ತು. ₹25 ಸಾವಿರ ಜೊತೆಗೆ ₹500 ಸೇವಾ ಶುಲ್ಕ ನೀಡಿದರೆ ಕ್ಷೇತ್ರದ ಮತದಾರರ ಮಾಹಿತಿ ನೀಡಲಾಗುತ್ತದೆ. ಮಾಹಿತಿ ಪಡೆದು ಚುನಾವಣೆಯಲ್ಲಿ ಜಯಶಾಲಿಯಾಗಿ ಎಂದು ವೆನ್‌ಸೈಟ್‌ನಲ್ಲಿ ತಿಳಿಸಲಾಗಿದೆ. ಒಂದು ವೇಳೆ ಸೋತರೆ ಹಣ ವಾಪಸ್ ಎಂಬ ಪ್ರಣಾಳಿಕೆ ಮಾಡಿಕೊಂಡಿತ್ತು ಎಂದು ವರದಿಯಾಗಿದೆ.

ಕಳೆದ ನವೆಂಬರ್‌ನಲ್ಲಿ ‘ಚಿಲುಮೆ ಸಂಸ್ಥೆ’ಯೂ ಮತದಾರರ ದತ್ತಾಂಶ ಮಾರಾಟ ಮಾಡಿತ್ತು. ಅದೇ ಮಾದರಿಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕ್ಷೇತ್ರಗಳಲ್ಲಿ ಕೋರಮಂಗಲದ ಸಂಸ್ಥೆಯೂ ಸಮೀಕ್ಷೆ ನಡೆಸಿದೆ ಎನ್ನಲಾಗಿದೆ.

ಈ ಖಾಸಗಿ ಕಂಪನಿಯೂ ಮತದಾರರ ಸಂಪೂರ್ಣ ವಿವರಗಳನ್ನು ಸಂಗ್ರಹಿಸುತ್ತಿತ್ತು. ಇದಕ್ಕಾಗಿಯೇ, ಪ್ರತ್ಯೇಕ ಆ್ಯಪ್ ಬಳಸಿ ಮತದಾರರ ಮಾಹಿತಿ, ಹೆಸರು, ವಿಳಾಸ, ಜಾತಿ, ಮತದಾರರು ಕಳೆದ ಬಾರಿ ಯಾವ ಪಕ್ಷಕ್ಕೆ ಬೆಂಬಲಿಸಿದ್ದರು. ಈ ಬಾರಿ ಯಾವ‌ ಪಕ್ಷಕ್ಕೆ ಬೆಂಬಲಿಸಲಿದ್ದಾರೆ ಎಂಬ ಸಂಪೂರ್ಣ ಮಾಹಿತಿ ಆ್ಯಪ್​ನಲ್ಲಿ ನೀಡಲಾಗಿತ್ತು ಎಂದು ಮೂಲಗಳು ತಿಳಿಸಿವೆ.

“ಸುಮಾರು ಆರು ಲಕ್ಷದಷ್ಟು ಮತದಾರರ ಮಾಹಿತಿ ಈ ಖಾಸಗಿ ಸಂಸ್ಥೆಯ ಬಳಿ ಇತ್ತು. ಇದು ನಿರ್ದಿಷ್ಟ ಕ್ಷೇತ್ರದ ಮತದಾರರ ಪಟ್ಟಿಯೇ ಎಂಬ ಬಗ್ಗೆ ತನಿಖೆಯಿಂದ ತಿಳಿಯಬೇಕಿದೆ. ಈ ಸಂಸ್ಥೆಯು ತನ್ನ ವೆಬ್‌ಸೈಟ್‌ನಲ್ಲಿ ಮತದಾರರ ಮೊಬೈಲ್‌ ಸಂಖ್ಯೆ ಹಾಕಿತ್ತು. ₹ 25 ಸಾವಿರ ನೀಡಿದರೆ ಲಾಗ್‌ಇನ್‌ ಐಡಿ ನೀಡುತ್ತಿತ್ತು” ಎಂದು ತಿಳಿದುಬಂದಿದೆ.

“ಖಾಸಗಿ ಕಂಪನಿಯ ವೆಬ್‌ಸೈಟ್‌ವೊಂದರಲ್ಲಿ ಹಣ ಪಡೆದು ಮತದಾರರ ಮಾಹಿತಿ ಮಾರಾಟ ಮಾಡುತ್ತಿದ್ದಾರೆಂದು ಚುನಾವಣೆ ಅಧಿಕಾರಿಗಳು ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಎಫ್‌ಐಆರ್‌ ದಾಖಲು ಮಾಡಿಕೊಳ್ಳಲಾಗಿದೆ. ಪ್ರಸ್ತುತವಾಗಿ ತನಿಖೆ ಕೈಗೊಂಡಿರುವುದರಿಂದ ಖಾಸಗಿ ಸಂಸ್ಥೆಯ ಹೆಸರು ಬಹಿರಂಗ ಪಡಿಸುವುದಿಲ್ಲ” ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆ ವಿವರ ನೀಡುವಂತೆ ಶೋಭಾ ಕರಂದ್ಲಾಜೆ ಪತ್ರ: ಸಿದ್ದರಾಮಯ್ಯ ಆತಂಕ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read