Homeಕರ್ನಾಟಕಇನ್ಫೋಸಿಸ್ ಸಹ-ಸಂಸ್ಥಾಪಕ ಸೇರಿದಂತೆ 18 ಜನರ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ

ಇನ್ಫೋಸಿಸ್ ಸಹ-ಸಂಸ್ಥಾಪಕ ಸೇರಿದಂತೆ 18 ಜನರ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ

- Advertisement -
- Advertisement -

ಇನ್ಫೋಸಿಸ್ ಸಹ-ಸಂಸ್ಥಾಪಕ ಸೇನಾಪತಿ ಕ್ರಿಸ್ ಗೋಪಾಲಕೃಷ್ಣನ್, ಮಾಜಿ ಐಐಎಸ್ಸಿ ನಿರ್ದೇಶಕ ಬಲರಾಮ್ ಮತ್ತು ಇತರ 16 ಜನರ ವಿರುದ್ಧ ಸೋಮವಾರ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಬೆಂಗಳೂರಿನಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಡೆಕ್ಕನ್ ಹೆರಾಲ್ಡ್‌ ಸುದ್ದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

71ನೇ ನಗರ ಸಿವಿಲ್ ಮತ್ತು ಸೆಷನ್ ನ್ಯಾಯಾಲಯದ (ಸಿಸಿಎಚ್) ನಿರ್ದೇಶನದ ಆಧಾರದ ಮೇಲೆ ಬೆಂಗಳೂರಿನ ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ಸುಸ್ಥಿರ ತಂತ್ರಜ್ಞಾನ ಕೇಂದ್ರದಲ್ಲಿ ಅಧ್ಯಾಪಕರಾಗಿದ್ದ, ಬುಡಕಟ್ಟು ಬೋವಿ ಸಮುದಾಯದ ದುರ್ಗಪ್ಪ ಅವರು ನೀಡಿದ ದೂರಿನ ಆಧಾರದಲ್ಲಿ ಈ ಪ್ರಕರಣ ದಾಖಲಾಗಿದೆ. ಇನ್ಫೋಸಿಸ್ ಸಹ-ಸಂಸ್ಥಾಪಕ

2014 ರಲ್ಲಿ, ತನ್ನನ್ನು ಹನಿ ಟ್ರ್ಯಾಪ್ ಪ್ರಕರಣದಲ್ಲಿ ತಪ್ಪಾಗಿ ಸಿಲುಕಿಸಲಾಯಿತು ಮತ್ತು ನಂತರ ಸೇವೆಯಿಂದ ವಜಾಗೊಳಿಸಲಾಯಿತು ಎಂದು ಅವರು ಹೇಳಿಕೊಂಡಿದ್ದಾರೆ. ಈ ವೇಳೆ ತಾನು ಜಾತಿ ನಿಂದನೆ ಮತ್ತು ಬೆದರಿಕೆಗಳಿಗೆ ಒಳಗಾಗಿದ್ದೇನೆ ಎಂದು ಅವರು ಆರೋಪಿಸಿದ್ದಾರೆ.

ಪ್ರಕರಣದಲ್ಲಿ ಆರೋಪಿಸಲಾದ ಇತರ ವ್ಯಕ್ತಿಗಳನ್ನು ಗೋವಿಂದನ್ ರಂಗರಾಜನ್, ಶ್ರೀಧರ್ ವಾರಿಯರ್, ಸಂದ್ಯಾ ವಿಶ್ವೇಶ್ವರಯ್ಯ, ಹರಿ ಕೆ.ವಿ.ಎಸ್., ದಾಸಪ್ಪ, ಬಲರಾಮ್ ಪಿ., ಹೇಮಲತಾ ಮ್ಹಿಷಿ, ಚಟ್ಟೋಪದ್ಯಾಯ ಕೆ., ಪ್ರದೀಪ್ ಡಿ. ಸಾಹುಕಾರ್ ಮತ್ತು ಮನೋಹರನ್ ಎಂದು ಗುರುತಿಸಲಾಗಿದೆ.

ಐಐಎಸ್ಸಿ ಅಧ್ಯಾಪಕರಿಂದ ಅಥವಾ ಐಐಎಸ್ಸಿ ಟ್ರಸ್ಟಿಗಳ ಮಂಡಳಿಯ ಸದಸ್ಯರಾಗಿಯೂ ಸೇವೆ ಸಲ್ಲಿಸುತ್ತಿರುವ ಕ್ರಿಸ್ ಗೋಪಾಲಕೃಷ್ಣನ್ ಅವರಿಂದ ಯಾವುದೇ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ.

ಇದನ್ನೂಓದಿ:  ಯುಜಿಸಿ ನಿಯಮಗಳಲ್ಲಿನ ಬದಲಾವಣೆ ಸಂವಿಧಾನದ ಮೇಲೆ ದಾಳಿ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ

ಯುಜಿಸಿ ನಿಯಮಗಳಲ್ಲಿನ ಬದಲಾವಣೆ ಸಂವಿಧಾನದ ಮೇಲೆ ದಾಳಿ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...