Homeಮುಖಪುಟರೂ. 32,400 ಕೋಟಿ ಜಿಎಸ್‌ಟಿ ವಂಚನೆ ಆರೋಪ : ಇನ್ಫೋಸಿಸ್‌ಗೆ ಐಟಿ ಇಲಾಖೆ ನೋಟಿಸ್

ರೂ. 32,400 ಕೋಟಿ ಜಿಎಸ್‌ಟಿ ವಂಚನೆ ಆರೋಪ : ಇನ್ಫೋಸಿಸ್‌ಗೆ ಐಟಿ ಇಲಾಖೆ ನೋಟಿಸ್

- Advertisement -
- Advertisement -

ಟೆಕ್ ದೈತ್ಯ ಇನ್ಫೋಸಿಸ್ ಲಿಮಿಟೆಡ್ 32,000 ಕೋಟಿ ರೂಪಾಯಿಗೂ ಹೆಚ್ಚು ಸಮಗ್ರ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವಂಚನೆ ಆರೋಪದ ಮೇಲೆ ಜಿಎಸ್‌ಟಿ ಗುಪ್ತಚರ ನಿರ್ದೇಶನಾಲಯ (ಡಿಜಿಜಿಐ)ದಿಂದ ಶೋಕಾಸ್ ನೋಟಿಸ್ ಪಡೆದಿದೆ ಎಂದು ವರದಿಯಾಗಿದೆ.

ಆಪಾದಿತ ವಂಚನೆಯು ಜುಲೈ 2017 ರಿಂದ ಮಾರ್ಚ್ 2022ರ ನಡುವಿನ ಸೇವೆಗಳ ಆಮದಿನ ಮೇಲೆ ಐಜಿಎಸ್‌ಟಿ ಪಾವತಿಸದಿರುವುದಕ್ಕೆ ಸಂಬಂಧಿಸಿದೆ ಎಂದು ವರದಿಗಳು ಹೇಳಿವೆ.

“ಕಂಪನಿಯು ತನ್ನ ಸಾಗರೋತ್ತರ ಶಾಖೆಗಳಿಂದ ಸೇವೆಗಳನ್ನು ಆಮದು ಮಾಡಿಕೊಂಡಿದೆ, ಆದರೆ ಅದರ ಮೇಲೆ ಐಜಿಎಸ್‌ಟಿ ಪಾವತಿಸಿಲ್ಲ” ಎಂದು ತಿಳಿದು ಬಂದಿದೆ.

ಶೋಕಾಸ್‌ ನೋಟಿಸ್‌ ಕುರಿತು ಪ್ರತಿಕ್ರಿಯಿಸಿರುವ ಇನ್ಫೋಸಿಸ್‌, “ಕಂಪನಿಯು 32,403 ಕೋಟಿ ರೂ. ಜಿಎಸ್‌ಟಿ ಪಾವತಿಗೆ ಸಂಬಂಧಿಸಿದಂತೆ ಜಿಎಸ್‌ಟಿ ಇಂಟೆಲಿಜೆನ್ಸ್ ಮಹಾನಿರ್ದೇಶಕರಿಂದ ಪೂರ್ವ ಶೋಕಾಸ್ ನೋಟಿಸ್ ಅನ್ನು ಸ್ವೀಕರಿಸಿದೆ. ಕಂಪನಿಯು ಅದಕ್ಕೆ ಪ್ರತಿಕ್ರಿಯಿಸುವ ಪ್ರಕ್ರಿಯೆಯಲ್ಲಿದೆ” ಎಂದು ಹೇಳಿದೆ.

ಜಿಎಸ್‌ಟಿ ಕೌನ್ಸಿಲ್‌ನ ಶಿಫಾರಸುಗಳ ಮೇಲೆ ಕೇಂದ್ರೀಯ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ (ಸಿಬಿಐಸಿ) ಮಂಡಳಿಯು ಹೊರಡಿಸಿದ ಜೂನ್ 26, 2024ರ ಸುತ್ತೋಲೆಯ ಪ್ರಕಾರ, ಭಾರತೀಯ ಘಟಕಕ್ಕೆ ಸಾಗರೋತ್ತರ ಶಾಖೆಗಳು ಒದಗಿಸುವ ಸೇವೆಗಳು ಜಿಎಸ್‌ಟಿಗೆ ಒಳಪಡುವುದಿಲ್ಲ ಎಂದು ಇನ್ಫೋಸಿಸ್ ಪ್ರತಿಪಾದಿಸಿದೆ.

“ಜಿಎಸ್‌ಟಿ ಪಾವತಿಗಳು ಐಟಿ ಸೇವೆಗಳ ರಫ್ತಿನ ವಿರುದ್ಧ ಕ್ರೆಡಿಟ್ ಅಥವಾ ಮರುಪಾವತಿಗೆ ಅರ್ಹವಾಗಿವೆ ಎಂಬುದನ್ನು ಗಮನಿಸುವುದು ಮುಖ್ಯವಾಗಿದೆ. ಇನ್ಫೋಸಿಸ್ ತನ್ನ ಎಲ್ಲಾ ಜಿಎಸ್‌ಟಿ ಬಾಕಿಗಳನ್ನು ಪಾವತಿಸಿದೆ ಮತ್ತು ಈ ವಿಷಯದಲ್ಲಿ ಕೇಂದ್ರ ಮತ್ತು ರಾಜ್ಯ ನಿಯಮಗಳಿಗೆ ಸಂಪೂರ್ಣವಾಗಿ ಅನುಸಾರವಾಗಿದೆ” ಎಂದು ಕಂಪನಿ ಹೇಳಿದೆ.

ಗಮನಾರ್ಹ ಸಂಗತಿ ಎಂದರೆ, ಜಿಎಸ್‌ಟಿ ನೆಟ್‌ವರ್ಕ್ (ಜಿಎಸ್‌ಟಿಎನ್‌) ಅನ್ನು ಇನ್ಫೋಸಿಸ್ ಕಂಪನಿಯೇ ನಿರ್ವಹಿಸುತ್ತಿದೆ. ಈ ಹಣಕಾಸು ವರ್ಷದಲ್ಲಿ ಪರೋಕ್ಷ ತೆರಿಗೆ ಇಲಾಖೆಯೊಂದಿಗೆ ಇನ್ಫೋಸಿಸ್‌ನ ಕಿತ್ತಾಟಕ್ಕಿಳಿದಿರುವುದು ಇದು ಎರಡನೇ ಬಾರಿಯಾಗಿದೆ. ಏಪ್ರಿಲ್‌ನಲ್ಲಿ, ಒಡಿಶಾ ಜಿಎಸ್‌ಟಿ ಪ್ರಾಧಿಕಾರವು 2018-19ರ ಅನರ್ಹ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ ಪಡೆಯಲು ಕಂಪನಿಗೆ 1.46 ಲಕ್ಷ ರೂಪಾಯಿ ದಂಡ ವಿಧಿಸಿತ್ತು.

ಇದನ್ನೂ ಓದಿ : ‘ಹೊರಗಡೆ ಪೇಪರ್ ಲೀಕ್, ಒಳಗಡೆ ವಾಟರ್ ಲೀಕ್’ : ಹೊಸ ಸಂಸತ್‌ ಭವನದಲ್ಲಿ ಸೋರಿಕೆಗೆ ಕಾಂಗ್ರೆಸ್ ಲೇವಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....