Homeಕರ್ನಾಟಕಕೋಲಾರದ ನಂತರ ಬೆಂಗಳೂರಿನಲ್ಲಿ ಅಮಾನವೀಯ ಕೃತ್ಯ; ಶೌಚಾಲಯ ಸ್ವಚ್ಛಗೊಳಿಸಿದ ಶಾಲಾ ಮಕ್ಕಳು!

ಕೋಲಾರದ ನಂತರ ಬೆಂಗಳೂರಿನಲ್ಲಿ ಅಮಾನವೀಯ ಕೃತ್ಯ; ಶೌಚಾಲಯ ಸ್ವಚ್ಛಗೊಳಿಸಿದ ಶಾಲಾ ಮಕ್ಕಳು!

- Advertisement -
- Advertisement -

ಕೋಲಾರದ ಮಾಲೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿದ ಪ್ರಕರಣ ಮಾಸುವ ಮುನ್ನವೆ, ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿರುವ ಮತ್ತೊಂದು ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ಸರ್ಕಾರಿ ಶಾಲೆ ಶಿಕ್ಷಕರು ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ್ದಾರೆ. ಅಂದ್ರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಕೃತ್ಯ ನಡೆದಿದ್ದು, ‘ಶಾಲಾ ಮಕ್ಕಳ ಕೈಯಿಂದಲೇ ಶಿಕ್ಷಕರು ಶೌಚಾಲಯ ಕ್ಲೀನ್ ಮಾಡಿಸಿಕೊಂಡಿದ್ದಾರೆ. ಕಲಿಯುವುದಕ್ಕೆಂದು ಶಾಲೆಗೆ ಬರುವ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸುವುದು ಹೇಯ ಕೃತ್ಯ’ ಎಂದು ಸಾರ್ವಜನಿಕರು ಶಾಲಾ ಸಿಬ್ಬಂದಿಗಳ ವಿರುದ್ಧ ಕಿಡಿಕಾರಿದರು.

ಶಾಲಾ ಮಕ್ಕಳು ಶೌಚಾಲಯದಲ್ಲಿ ತಮ್ಮ ಕೈನಲ್ಲಿ ಕೆಮಿಕಲ್ ಬಾಟಲ್ ಮತ್ತು ಬ್ಲೀಚಿಂಗ್ ಪೌಡರ್ ಹಿಡಿದು ಸ್ವಚ್ಚಗೊಳಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿವಾದಕ್ಕೆ ಕಾರಣವಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದು ಶಾಲೆಯ ಮುಂದೆ ಜಮಾಯಿಸಿ ಶಿಕ್ಷಕರ ವಿರುದ್ದ ಪ್ರತಿಭಟನೆ ನಡೆಸಿದ್ದಾರೆ.

ಬಹಳ ಹಿಂದಿನಿಂದಲೂ ಈ ಶಾಲಾ ಶಿಕ್ಷಕರು ಮಕ್ಕಳಿಂದಲೆ ಶೌಚಾಲಯ ಕ್ಲೀನ್ ಮಾಡಿಸುತ್ತಿದ್ದಾರೆ ಎಂಬ ಆರೋಪವೂ ಕೇಳಿಬಂದಿದ್ದು, ಈ ವಿಚಾರ ಪೋಷಕರ ಅರಿವಿಗೆ ಬಂದ ನಂತರ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಬೆಳಗ್ಗೆಯಿಂದಲೇ ಶಾಲೆಯ ಮುಂದೆ ಜಮಾಯಿಸಿ ಜನರು ಶಿಕ್ಷಕರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಸಾಲದ್ದಕ್ಕೆ, ಶಾಲೆಗೆ ತಡವಾಗಿ ಬಂದ ಶಿಕ್ಷಕರ ವಿರುದ್ಧ ಪೋಷಕರು ಕೆಂಡಾಮಂಡಲರಾದರು.

ಇದೇ ತಿಂಗಳ ಆರಂಭದಲ್ಲಿ ನಡೆದಿದ್ದ ಕೋಲಾರ ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳಿಂದ ಮಲದ ಗುಂಡಿ ಸ್ವಚ್ಛಗೊಳಿಸಿದ ಪ್ರಕರಣ ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ರಾಜ್ಯ ರಾಜಧಾನಿಯಲ್ಲೇ ಈ ಕೃತ್ಯ ನಡೆದಿರುವುದು ಪೋಷಕರ ಆತಂಕಕ್ಕೆ ಕಾರಣವಾಗಿದೆ.

ಇದನ್ನೂ ಓದಿ; ನಾವು ಮಹಿಳಾ ಅಥ್ಲೀಟ್‌ಗಳೊಂದಿಗೆ ನಿಲ್ಲುತ್ತೇವೆ, ಸಾಕ್ಷಿ ನಿವೃತ್ತಿಯಿಂದ ಕ್ರೀಡಾ ಉದ್ಯಮ ಅಸಮಾಧಾನ: ವಿಜೇಂದರ್ ಸಿಂಗ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದೆಹಲಿ ಅಬಕಾರಿ ನೀತಿ ಪ್ರಕರಣ: ಮನೀಶ್ ಸಿಸೋಡಿಯಾ ಕಸ್ಟಡಿ ಅವಧಿ ಮೇ 31ರವರೆಗೆ ವಿಸ್ತರಿಸಿದ...

0
ದೆಹಲಿ ಮದ್ಯದ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಮೇ 31 ರವರೆಗೆ ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಮಂಗಳವಾರ ವಿಸ್ತರಿಸಿದೆ. ಫೆಬ್ರವರಿ 26,...