Homeಕರ್ನಾಟಕಚಿತ್ರದುರ್ಗ ಜಿಲ್ಲೆಯಲ್ಲಿ ಅಮಾನವೀಯ ಘಟನೆ: ಅಂತರ್ಜಾತಿ ವಿವಾಹವಾದ ವಿಕಲಚೇತನ ಜೋಡಿಗೆ ಬಹಿಷ್ಕಾರ

ಚಿತ್ರದುರ್ಗ ಜಿಲ್ಲೆಯಲ್ಲಿ ಅಮಾನವೀಯ ಘಟನೆ: ಅಂತರ್ಜಾತಿ ವಿವಾಹವಾದ ವಿಕಲಚೇತನ ಜೋಡಿಗೆ ಬಹಿಷ್ಕಾರ

- Advertisement -
- Advertisement -

ಅಂತರ್ಜಾತಿ ವಿವಾಹವಾದ ವಿಕಲಚೇತನ ಜೋಡಿಗೆ ಬಹಿಷ್ಕಾರ ಹಾಕಿರುವ ಅಮಾನವೀಯ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಎನ್ ದೇವರಹಳ್ಳಿಯಲ್ಲಿ ನಡೆದಿದೆ.

ಮಾತು ಬಾರದ ಮತ್ತು ಕಿವಿ ಕೇಳಿಸದ ಎನ್ ದೇವರಹಳ್ಳಿ ಗ್ರಾಮದ ಸಾವಿತ್ರಮ್ಮ ಹಾಗೂ ಆಂಧ್ರ ಮೂಲದ ಮಣಿಕಂಠ ಕಳೆದ 3 ವರ್ಷದ ಹಿಂದೆ ಬೆಂಗಳೂರಿನಲ್ಲಿ ಪ್ರೀತಿಸಿ ಮದುವೆ ಆಗಿದ್ದರು. 3 ವರ್ಷದ ಬಳಿಕ ಸಾವಿತ್ರಮ್ಮ ತವರು ಮನೆ ಎನ್ ದೇವರಹಳ್ಳಿಗೆ ಬಂದಿದ್ದರು. ಇಬ್ಬರೂ ಬೇರೆ ಜಾತಿಯವರಾಗಿದ್ದಾರೆ. ಸಾವಿತ್ರಮ್ಮ ಜೋಗಿ ಜನಾಂಗಕ್ಕೆ ಸೇರಿದ್ದು, ಮಣಿಕಂಠ ರೆಡ್ಡಿ ಜನಾಂಗಕ್ಕೆ ಸೇರಿದ್ದಾರೆ.

ಗ್ರಾಮದ ಜೋಗಿ ಜನಾಂಗದ ಹಿರಿಯರು, ನೀವು ಅಂತರ್ ಜಾತಿ ವಿವಾಹ ಆಗಿದ್ದೀರಿ ಎಂದು ಅವರನ್ನು ನಿಂದಿಸಿ, 30,000 ಸಾವಿರ ರೂ. ದಂಡ ವಿಧಿಸಿದ್ದಾರೆ. ಅಲ್ಲದೇ ಗ್ರಾಮದಿಂದ ಬಹಿಷ್ಕಾರ ಹಾಕಿ ಅಮಾನವೀಯತೆ ಮೆರೆದಿದ್ದಾರೆ.

ಸಾವಿತ್ರಮ್ಮ ಬಾಣಂತಿ ಎಂಬುದನ್ನು ಲೆಕ್ಕಸದೇ, ಮಾನವೀಯತೆ ಮರೆತು ಗ್ರಾಮದ ಹಿರಿಯರು ಅನಾಗರೀಕತೆ ತೋರಿ. ಈ ಮುದ್ದಾದ ಜೋಡಿಗೆ ಗ್ರಾಮದಿಂದ ಬಹಿಷ್ಕಾರ ಹಾಕಿದ್ರು ಯಾವುದೇ ಪೊಲೀಸ್ ಠಾಣೆ ಮೆಟ್ಟಿಲೇರದೇ ಮತ್ತೆ ಬೆಂಗಳೂರಿಗೆ ತೆರಳಿದ್ದರು. ಬಳಿಕ ಚಳ್ಳಕೆರೆ ತಾಲೂಕಿನಲ್ಲಿ ನಡೆದ ಪ್ರಸಿದ್ಧ ಗೌರಸಂದ್ರ ಮಾರಮ್ಮ ಜಾತ್ರೆಗೆಂದು ಆಗಮಿಸಿದ್ದಾಗಲೂ ಗ್ರಾಮದ ಅನೇಕ ಮುಖಂಡರು ಅವರಿಗೆ ಕಿರುಕುಳ ಕೊಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ.

ಪುಟ್ಟ ಮಗುವಿನೊಂದಿಗೆ ದಂಪತಿ ಆಗಮಿಸಿದ್ದನ್ನೂ ಲೆಕ್ಕಿಸದ ಗ್ರಾಮಸ್ಥರು ಮನೆ ಬಿಟ್ಟು ಹೋಗುವಂತೆ ಒತ್ತಡ ಹಾಕಿದ್ದಲ್ಲದೇ ಮತ್ತೆಯೂ ದಂಡ ವಿಧಿಸಲು, ಬಹಿಷ್ಕಾರ ಹಾಕಲು ಮುಂದಾಗಿದ್ದಾರೆ. ಇದರಿಂದಾಗಿ ಬೇಸರಗೊಂಡ ಜೋಡಿ ತಮ್ಮ ಪುಟ್ಟ ಮಗುವಿನೊಂದಿಗೆ ಚಳ್ಳಕೆರೆ ಸಾಂತ್ವನ ಕೇಂದ್ರದಲ್ಲಿ ಆಶ್ರಯ ಪಡೆದಿದ್ದಾರೆ. ಸದ್ಯ ಸಂತ್ರಸ್ತ ಜೋಡಿಯ ಪರ ನಿಂತಿರುವ ಸಾಮಾಜಿಕ ಹೋರಾಟಗಾರರಿಂದ ಬಹಿಷ್ಕಾರ ಹಾಕಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬಂದಿದೆ.

ಇದನ್ನೂ ಓದಿ: ಉಜ್ಜಯಿನಿ: ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿ ಅರೆಬೆತ್ತಲೆಯಾಗಿ ಪತ್ತೆ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...