Homeಮುಖಪುಟಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

- Advertisement -
- Advertisement -

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಶುಕ್ರವಾರ (ಸೆ.18) ರಾತ್ರಿ ರೈಲ್ವೆ ನಿಲ್ದಾಣದ ಆವರಣದ ಬಳಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಪೊಲೀಸ್ ಸಿಬ್ಬಂದಿ ಮಹಿಳೆ ಮೇಲೆ ಅಷ್ಟೊಂದು ಕ್ರೂರವಾಗಿ ಹಲ್ಲೆ ನಡೆಸಲು ಕಾರಣವೇನು ಎಂಬುವುದು ತಿಳಿದು ಬಂದಿಲ್ಲ. ಸ್ಥಳೀಯ ಪ್ರಕಾರ, ಮಹಿಳೆಯು ಅನುಚಿತವಾಗಿ ವರ್ತಿಸಿ, ನಿಂದನಾತ್ಮಕ ಪದಗಳನ್ನು ಬಳಸಿದ್ದಕ್ಕೆ ಪೊಲೀಸ್ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ ಎಂದು ಕೆಲ ವರದಿಗಳು ಉಲ್ಲೇಖಿಸಿವೆ.

ಏನೇ ಆದರೂ, ಒಬ್ಬ ಜವಾಬ್ದಾರಿಯುತ ಪೊಲೀಸ್ ಸಿಬ್ಬಂದಿ ಮಹಿಳೆಯ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವುದಕ್ಕೆ ವ್ಯಾಪಕ ಆಕ್ರೋಶ ಮತ್ತು ಖಂಡನೆ ವ್ಯಕ್ತವಾಗಿದೆ. ಹಲವಾರು ಸಾಮಾಜಿಕ ಜಾಲತಾಣ ಬಳಕೆದಾರರು ಘಟನೆಯ ವಿಡಿಯೋ ಹಂಚಿಕೊಂಡು, ಪೊಲೀಸ್ ಸಿಬ್ಬಂದಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.


ವೈರಲ್ ವಿಡಿಯೋದಲ್ಲಿ ಲಾಠಿ ಹಿಡಿದ ಸಮವಸ್ತ್ರಧಾರಿ ಪೊಲೀಸ್ ಸಿಬ್ಬಂದಿ ಮಹಿಳೆಯ ಕಪಾಳಕ್ಕೆ ಹೊಡೆದು, ನಂತರ ಆಕೆಯ ಕೂದಲು ಹಿಡಿದು ಎಳೆದೊಯ್ದಿರುವುದು ಮತ್ತು ವ್ಯಕ್ತಿಯೊಬ್ಬರು (ಆಕೆಯ ಪತಿ ಎನ್ನಲಾಗಿದೆ) ಪೊಲೀಸ್ ಸಿಬ್ಬಂದಿ ಬಳಿ ಬಿಟ್ಟು ಬಿಡುವಂತೆ ಗೋಗರೆದಿರುವುದನ್ನು ನೋಡಬಹುದು. ವಿಡಿಯೋದ ಕೊನೆಯಲ್ಲಿ ಪುಟ್ಟ ಮಗುವುವೊಂದು ಕಾಣಿಸಿಕೊಂಡಿದೆ. ಈ ಮಗು ಆ ಮಹಿಳೆಯದ್ದು ಎನ್ನಲಾಗ್ತಿದೆ. ಮಗುವಿನ ಮುಂದೆಯೇ ಪೊಲೀಸ್ ಸಿಬ್ಬಂದಿ ತಾಯಿಗೆ ಹಲ್ಲೆ ನಡೆಸಿರುವುದು ಅಕ್ಷಮ್ಯ ಎಂದು ಸಾಮಾಜಿಕ ಬಳಕೆದಾರರು ಬರೆದುಕೊಂಡಿದ್ದಾರೆ.

ವಿಡಿಯೋ ಹಂಚಿಕೊಂಡ ಹಲವರು ತೆಲಂಗಾಣ ಪೊಲೀಸರು, ತೆಲಂಗಾಣ ಡಿಜಿಪಿ, ಮುಖ್ಯಮಂತ್ರಿ, ರೈಲ್ವೇ ಇಲಾಖೆಗೆ ಟ್ಯಾಗ್ ಮಾಡಿದ್ದರು.

ಈ ಕುರಿತು ಪ್ರತಿಕ್ರಿಯೆ ನೀಡಿರುವ ದಕ್ಷಿಣ ಮಧ್ಯ ರೈಲ್ವೆ (South Central Railway), “ಹಫೀಝ್‌ಪೇಟ್ ರೈಲು ನಿಲ್ದಾಣದಲ್ಲಿ ವರದಿಯಾದ ಘಟನೆಯ ಕುರಿತು ವಿಚಾರಣೆ ನಡೆಸಲಾಗಿ, ಸಂಬಂಧಪಟ್ಟ ಸಿಬ್ಬಂದಿಯನ್ನು ಹಫೀಝ್‌ಪೇಟ್ ರೈಲು ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತೆಲಂಗಾಣ ರಾಜ್ಯ ಪೊಲೀಸ್ ಇಲಾಖೆಯ ಹೋಮ್ ಗಾರ್ಡ್ ಎಂದು ಗುರುತಿಸಲಾಗಿದೆ. ಅಗತ್ಯ ಶಿಸ್ತು ಕ್ರಮಕ್ಕಾಗಿ ಅವರನ್ನು ತೆಲಂಗಾಣ ರಾಜ್ಯ ಪೊಲೀಸ್ ಇಲಾಖೆಗೆ ವಾಪಸ್ ಕಳುಹಿಸಲಾಗಿದೆ” ಎಂದು ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...