Homeಮುಖಪುಟನನ್ನ ಜನರ ನೋವಿಗಿಂತ ನನ್ನದು ದೊಡ್ಡದಲ್ಲ, ಎಂದಿಗೂ ತಲೆಬಾಗುವುದಿಲ್ಲ: ಮಮತಾ ಬ್ಯಾನರ್ಜಿ

ನನ್ನ ಜನರ ನೋವಿಗಿಂತ ನನ್ನದು ದೊಡ್ಡದಲ್ಲ, ಎಂದಿಗೂ ತಲೆಬಾಗುವುದಿಲ್ಲ: ಮಮತಾ ಬ್ಯಾನರ್ಜಿ

- Advertisement -
- Advertisement -

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು (ಮಾ.14) ವೀಲ್ ಚೇರ್ ಮೂಲಕವೇ ಚುನಾವಣಾ ಪ್ರಚಾರ ಆರಂಭಿಸಿದ್ದು, “ನಾನು ಎಂದಿಗೂ ತಲೆ ಬಾಗುವುದಿಲ್ಲ. ನೆನಪಿರಲಿ ಗಾಯಗೊಂಡ ಹುಲಿ ಹೆಚ್ಚು ಅಪಾಯಕಾರಿ” ಎಂದು ಹೇಳಿದ್ದಾರೆ.

ನಂದಿಗ್ರಾಮದಲ್ಲಿ ತಮ್ಮ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಿದ ನಂತರ ಮಮತಾ ಬ್ಯಾನರ್ಜಿ ಮೊದಲಬಾರಿಗೆ ಸಮಾವೇಶವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವಾಗಲೇ ಹೇಳಿಕೆ ನೀಡಿದ್ದ ಮಮತಾ ಬ್ಯಾನರ್ಜಿ, ಬೆಂಬಲಿಗರಲ್ಲಿ ಶಾಂತಿ ಕಾಪಾಡುವಂತೆ ಕರೆ ನೀಡಿದ್ದರು. ಅಲ್ಲದೆ ಒಂದೆರಡು ದಿನಗಳಲ್ಲಿ ಪ್ರಚಾರಕ್ಕೆ ಹಿಂತಿರುಗಲಿದ್ದು, ಅಗತ್ಯವಿದ್ದರೆ ವೀಲ್ ಚೇರ್ ಬಳಕೆ ಮಾಡುವುದಾಗಿ ಘೋಷಿಸಿದ್ದರು.

ಇಂದು (ಮಾ.14) ಗಾಂಧಿ ಮೂರ್ತಿಯಿಂದ ಹಜ್ರಾಕ್ಕೆ ವೀಲ್‌ ಚೇರ್‌ನಲ್ಲಿಯೇ ರೋಡ್ ಶೋ ನಡೆಸಿದ ಅವರು ನಂತರ ಮಧ್ಯಾಹ್ನ ಹಜ್ರಾದಲ್ಲಿ ಸಾರ್ವಜನಿಕ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ್ದಾರೆ.

“ನಾವು ಧೈರ್ಯದಿಂದ ಹೋರಾಡುತ್ತೇವೆ! ನಾನು ಇನ್ನೂ ಸಾಕಷ್ಟು ನೋವಿನಲ್ಲಿದ್ದೇನೆ. ಆದರೆ ನನ್ನ ಜನರ ನೋವು ನನಗಿಂತಲೂ ದೊಡ್ಡದು ಎಂದು ಭಾವಿಸುತ್ತೇನೆ. ನಮ್ಮ ಪುಣ್ಯ ಭೂಮಿಯನ್ನು ರಕ್ಷಿಸುವ ಈ ಹೋರಾಟದಲ್ಲಿ, ನಾವು ಸಾಕಷ್ಟು ಕಷ್ಟಗಳನ್ನು ಅನುಭವಿಸಿದ್ದೇವೆ. ಹೆಚ್ಚು ತೊಂದರೆಗಳನ್ನು ಅನುಭವಿಸಿದ್ದೇವೆ. ಆದರೆ ನಾವು ಎಂದಿಗೂ ಹೇಡಿಯಂತೆ ತಲೆಬಾಗುವುದಿಲ್ಲ!” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆಂಧ್ರ ಪ್ರದೇಶ ಸ್ಥಳೀಯ ಸಂಸ್ಥೆಗಳ ಚುನಾವಣೆ: ಜಗನ್ ಪಕ್ಷಕ್ಕೆ ಭಾರೀ ಮುನ್ನಡೆ

ಈ ವಾರದ ಆರಂಭದಲ್ಲಿ ಗಾಯಗೊಂಡಿದ್ದ ಮಮತಾ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿಕಿತ್ಸೆಯ ಬಳಿಕ ಮಾರ್ಚ್ 12 ರಂದು ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು.

ಪ್ರಾಥಮಿಕ ವೈದ್ಯಕೀಯ ಪರೀಕ್ಷೆಗಳ ಪ್ರಕಾರ, ಅವರ ಎಡ ಪಾದದ ಮೂಳೆಗೆ ತೀವ್ರವಾದ ಗಾಯಗಳಾಗಿದ್ದು, ಬಲ ಭುಜ, ಮುಂದೋಳು ಮತ್ತು ಕುತ್ತಿಗೆಗೂ ಗಾಯಗಳಾಗಿದೆ ಎಂದು ಸರ್ಕಾರಿ ಎಸ್‌ಎಸ್‌ಕೆಎಂ ಆಸ್ಪತ್ರೆಯ ಹಿರಿಯ ವೈದ್ಯರು ತಿಳಿಸಿದ್ದಾರೆಂದು ಪಿಟಿಐ ವರದಿ ಮಾಡಿತ್ತು.

ಮುಂಬರುವ ವಿಧಾನಸಭಾ ಚುನಾವಣೆಗೆ ನಂದಿಗ್ರಾಮದಲ್ಲಿ ಮಾರ್ಚ್ 10ರಂದು ನಾಮಪತ್ರ ಸಲ್ಲಿಸಿದ ಕೆಲವೇ ಗಂಟೆಗಳ ಅಂತರದಲ್ಲಿ ಅವರ ಮೇಲೆ ದಾಳಿ ಸಂಭವಿಸಿದೆ ಎನ್ನಲಾಗಿದೆ. ಕೆಲವು ಅಪರಿಚಿತ ಜನರು ಮಮತಾ ಅವರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಆದರೆ ಚುನಾವಣಾ ವೀಕ್ಷಕರು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ವರದಿಯಲ್ಲಿ, “ಮಮತಾ ಬ್ಯಾನರ್ಜಿ ಅವರ ಗಾಯಕ್ಕೆ ನಂದಿಗ್ರಾಮದಲ್ಲಿ ನಡೆದಿರುವ ಘಟನೆ ಕಾರಣವಲ್ಲ. ಅದು ಆಕಸ್ಮಿಕವಾಗಿದ್ದು, ಇದೊಂದು ಯೋಜಿತ ದಾಳಿಯಾಗಿರಲಿಲ್ಲ” ಎಂದು  ತಿಳಿಸಿದ್ದಾರೆ.

ಇದನ್ನೂ ಓದಿ: ಕುಂಭಮೇಳಕ್ಕೆ ಬರುವ ಭಕ್ತಾದಿಗಳಿಗೆ ಕೊರೊನಾ ನೆಗೆಟಿವ್ ವರದಿ ಅಗತ್ಯವಿಲ್ಲ: ಉತ್ತರಾಖಂಡ್ ಸಿಎಂ

ವಿಶೇಷ ವೀಕ್ಷಕ ಅಜಯ್ ನಾಯಕ್, ರಾಜ್ಯ ಚುನಾವಣೆಗಾಗಿ ಪಶ್ಚಿಮಬಂಗಾಳದ ವಿಶೇಷ ಪೊಲೀಸ್ ವೀಕ್ಷಕರಾಗಿರುವ ವಿವೇಕ್ ದುಬೆ ವರದಿ ಸಿದ್ಧಪಡಿಸಿದ್ದರು ಎಂದು ಸಿಇಒ ಕಚೇರಿಯ ಮೂಲಗಳು ತಿಳಿಸಿವೆ.

ಆಕಸ್ಮಿಕ ಘಟನೆಯಿಂದಾಗಿ ಮಮತಾ ಅವರು ಗಾಯಗೊಂಡಿದ್ದಾರೆ. ಘಟನೆಯು ಯೋಜಿತ ದಾಳಿಯಾಗಿರಲಿಲ್ಲ. ಇದು ಆಕಸ್ಮಿಕವಾಗಿ ನಡೆದಿದೆ ಎಂದು ವರದಿಯನ್ನು ಉಲ್ಲೇಖಿಸಿ ಮೂಲಗಳು ತಿಳಿಸಿವೆ. ಘಟನೆಯ ಸಮಯದಲ್ಲಿ ಹಾಜರಿದ್ದ ಪ್ರತ್ಯಕ್ಷ ಸಾಕ್ಷಿಗಳು ಒದಗಿಸಿದ ವಿವರಗಳು ಹಾಗೂ ಅವರಿಂದ ಸಂಗ್ರಹಿಸಿದ ವೀಡಿಯೊವನ್ನು ವರದಿಯು ಗಣನೆಗೆ ತೆಗೆದುಕೊಂಡಿದೆ.

ಸ್ಥಳೀಯ ಪೊಲೀಸರು ಹಾಗೂ ಸಿಎಂ ಭದ್ರತಾ ಸಿಬ್ಬಂದಿ ಜನಸಂದಣಿಯನ್ನು ನಿಯಂತ್ರಿಸಲು ವಿಫಲವಾಗಿದ್ದರು. ಇದು ಅನಪೇಕ್ಷಿತ ಪರಿಸ್ಥಿತಿಗೆ ಕಾರಣವಾಯಿತು ಎಂದು ಮೂಲಗಳು ವರದಿಯನ್ನು ಉಲ್ಲೇಖಿಸಿ ತಿಳಿಸಿವೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೇಲಿನ ದಾಳಿಯು ಟಿಎಂಸಿ ಹಾಗೂ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರ ನಡುವೆ ಜಟಾಪಟಿಗೆ ಕಾರಣವಾಗಿತ್ತು.


ಇದನ್ನೂ ಓದಿ: ಬಿಜೆಪಿ ಆಡಳಿತದಲ್ಲಿ ಸದ್ದು ಮಾಡುವುದು ಎರಡೇ; ಒಂದು ಲಂಚ, ಮತ್ತೊಂದು ಮಂಚ – ಕಾಂಗ್ರೆಸ್…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...