Homeಕರ್ನಾಟಕಹಿಂದುಳಿದ ಜಾತಿಗಳಿಗೆ ಅನ್ಯಾಯವಾದರೆ ಸಹಿಸಲ್ಲ: ಸಿದ್ದರಾಮಯ್ಯ ಎಚ್ಚರಿಕೆ

ಹಿಂದುಳಿದ ಜಾತಿಗಳಿಗೆ ಅನ್ಯಾಯವಾದರೆ ಸಹಿಸಲ್ಲ: ಸಿದ್ದರಾಮಯ್ಯ ಎಚ್ಚರಿಕೆ

- Advertisement -
- Advertisement -

“ಹಿಂದುಳಿದ ಜಾತಿಗಳಿಗೆ ಅನ್ಯಾಯವಾದರೆ ಸಹಿಸಲ್ಲ,‌ ಅಧಿಕಾರಕ್ಕಾಗಿ ಅಂಟಿಕೊಂಡು ಕೂರುವುದಿಲ್ಲ. ಸಾಮಾಜಿಕ ನ್ಯಾಯದ ಪರವಾಗಿ ಹೋರಾಟ ನಡೆಸುತ್ತೇನೆ” ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಮೀಸಲಾತಿ ಕುರಿತು ಆಗುತ್ತಿರುವ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, “ಹಿಂದುಳಿದ ಸಮುದಾಯದಲ್ಲಿ 102 ಜಾತಿಗಳಿವೆ, ಒಟ್ಟು ಜನಸಂಖ್ಯಾ ಪ್ರಮಾಣ ಶೇಕಡಾ 52ರಷ್ಟಿದ್ದರೂ ಕೇವಲ ಶೇಕಡಾ 27ರಷ್ಟು ಮೀಸಲಾತಿ ನಿಗದಿಪಡಿಸಲಾಗಿದೆ. ಶೇಕಡಾ 4ರಷ್ಟಿರುವವರಿಗೆ ಶೇಕಡಾ 10ರಷ್ಟು ಮೀಸಲಾತಿ ನೀಡಲಾಗಿದೆ, ಇದು ತಪ್ಪು” ಎಂದು ತಿಳಿಸಿದ್ದಾರೆ.

“ಬೇರೆ ರಾಜ್ಯಗಳಲ್ಲಿ ಶೇಕಡಾ 50ರ ಮಿತಿಯನ್ನು ಮೀರಿ ಮೀಸಲಾತಿ ನೀಡಿದರೆ ರದ್ದುಪಡಿಸಲಾಗುತ್ತದೆ. ಆದರೆ ರಾಜ್ಯದ ಬಿಜೆಪಿ ಸರ್ಕಾರ ಎಲ್ಲ ನಿಯಮಾವಳಿಗಳನ್ನು ಮೀರಿ ಮೀಸಲಾತಿ ಹೆಚ್ಚಿಸುವ ಘೋಷಣೆ ಮಾಡುತ್ತಿದ್ದರೂ ಕ್ರಮ ಕೈಗೊಳ್ಳಲಾಗುತ್ತಿಲ್ಲ” ಎಂದಿದ್ದಾರೆ.

“ಹಿಂದುಳಿದ ಜಾತಿಗಳಿಗೆ 2ಎನಲ್ಲಿ ಮೀಸಲಾತಿ ನೀಡಲಾಗಿದ್ದರೂ ಇತ್ತೀಚೆಗೆ ಬೇರೆ ಜಾತಿಗಳು ಈ ಗುಂಪಿಗೆ ಸೇರಿಕೊಳ್ಳಲು ಪ್ರಯತ್ನ‌ ಮಾಡುತ್ತಿವೆ. ಹಿಂದೆ ಲಿಂಗಾಯತ ಸಾದರರು ಹಿಂದೂ ಸಾದರ ಹೆಸರಲ್ಲಿ ಜಾತಿ ಪ್ರಮಾಣ ಪತ್ರ ಪಡೆದು ಮೀಸಲಾತಿ ಸೌಲಭ್ಯ ಪಡೆಯಲು ಪ್ರಯತ್ನಿಸಿದ್ದರು. ಮೀಸಲಾತಿ ದುರುಪಯೋಗ ತಡೆಯಬೇಕು” ಎಂದು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಮೀಸಲಾತಿ ಹೋರಾಟ ಪರ್ವ

ರಾಜ್ಯದಲ್ಲಿ ಈಗ ಮೀಸಲಾತಿ ಹೋರಾಟ, ಆಗ್ರಹಗಳ ಪರ್ವ ಆರಂಭವಾಗಿದೆ. ಒಂದಲ್ಲ ಒಂದು ಸಮುದಾಯವು ಮೀಸಲಾತಿ ಸಂಬಂಧ ಹೋರಾಟಕ್ಕೆ ಮುಂದಾಗುತ್ತಿವೆ. ಪರಿಶಿಷ್ಟ ಪಂಗಡ ಮೀಸಲಾತಿಯನ್ನು ಹೆಚ್ಚಿಸಬೇಕೆಂದು ನಾಯಕ ಸಮುದಾಯ ಹೋರಾಟ ಮಾಡಿ ತಕ್ಕ ಮಟ್ಟಿನ ಯಶಸ್ಸು ಪಡೆದಿದೆ. ಜಸ್ಟೀಸ್ ಎಚ್.ಎನ್. ನಾಗಮೋಹನದಾಸ್ ವರದಿ ಅನ್ವಯ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ. 15ರಿಂದ 17ಕ್ಕೂ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ. 3ರಿಂದ 7ಕ್ಕೂ ಹೆಚ್ಚಿಸುವ ಭರವಸೆಯನ್ನು ಸರ್ಕಾರ ನೀಡಿದೆ. ಆದರೆ ಸುಪ್ರೀಂ ಕೋರ್ಟ್‌ನ ತೀರ್ಪು ತಡೆಯಾಗಿರುವುದರಿಂದ ಸರ್ಕಾರ, ‘ಕಾಂತರಾಜ್ ಆಯೋಗದ ವರದಿ’ಯನ್ನು ಬಿಡುಗಡೆ ಮಾಡುತ್ತದೆಯೇ ಎಂಬುದು ಸದ್ಯದ ಕುತೂಹಲವಾಗಿದೆ. ಇದರ ನಡುವೆ ಮೀಸಲಾತಿ ಹೋರಾಟಗಳು ಬಿರುಸು ಪಡೆಯುತ್ತಿವೆ.

1990ರ ಅವಧಿಯಲ್ಲಿ ರಚನೆಯಾದ ಮಂಡಲ್‌ ಆಯೋಗದ ಮೂಲಕ ಹಿಂದುಳಿದ ಸಮುದಾಯಗಳಿಗೂ ಮೀಸಲಾತಿ ಸೌಲಭ್ಯ ಕಲ್ಪಿಸಲಾಯಿತು. ಆದರೆ ಒಟ್ಟು ಶೇ. 50ರಷ್ಟು ಮೀಸಲಾತಿ ಮಿತಿಯನ್ನು ಮೀರದಂತೆ ಇಂದಿರಾ ಸಹಾನಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಸೂಚಿಸಿತು. ಹೀಗಾಗಿ ಶೇ.52ರಷ್ಟು ಮೀಸಲಾತಿಯ ಬದಲು ಕೇವಲ ಶೇ.27ರಷ್ಟು ಮೀಸಲಾತಿ ಪ್ರಾತಿನಿಧ್ಯ ಒಬಿಸಿಗಳಿಗೆ ದೊರಕಿತು.

2019ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮೇಲ್ಜಾತಿ ಬಡವರಿಗೆಂದು, ಎಂಟು ಲಕ್ಷ ರೂ. ಆದಾಯ ಮಿತಿಯನ್ನು ವಿಧಿಸಿ ಶೇ.10ರಷ್ಟು ಇಡಬ್ಲ್ಯೂಎಸ್‌ (ಆರ್ಥಿಕವಾಗಿ ಹಿಂದುಳಿದ ವರ್ಗ) ಕೋಟಾವನ್ನು ನೀಡಿತು. ಮೇಲ್ಜಾತಿಗಳಿಗೆ ನೀಡಿರುವ ಅವೈಜ್ಞಾನಿಕ ಮೀಸಲಾತಿಯ ಫಲವೋ ಅಥವಾ ಸಮುದಾಯಗಳಲ್ಲಿ ಮೀಸಲಾತಿ ಕುರಿತು ಹುಟ್ಟಿರುವ ಆಸಕ್ತಿಯ ಕಾರಣವೋ- ಮೀಸಲಾತಿ ಹೋರಾಟಗಳು ಮುನ್ನೆಲೆಗೆ ಬಂದಿವೆ. ರಾಜ್ಯದಲ್ಲೂ ವಿವಿಧ ಸಮುದಾಯಗಳು ಹೋರಾಟಕ್ಕೆ ಧಮುಕಿವೆ. ಚುನಾವಣೆ ಹೊಸ್ತಿಲಲ್ಲಿ ಸರ್ಕಾರದ ಮೇಲೆ ಒತ್ತಡ ತರುವ ಪ್ರಯತ್ನ ಮಾಡುತ್ತಿವೆ. ರಾಜ್ಯದಲ್ಲಿ ನಡೆಯುತ್ತಿರುವ ಮೀಸಲಾತಿ ಹೋರಾಟಗಳನ್ನು ಇಲ್ಲಿ ಪಟ್ಟಿ ಮಾಡಲಾಗಿದೆ.

ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ತರಬೇಕೆಂದು ಮೂರು ದಶಕಗಳಿಂದ ನಡೆಯುತ್ತಿರುವ ಹೋರಾಟ ಈಗ ತೀವ್ರವಾಗಿದೆ. ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟ ನಡೆಯುತ್ತಿದ್ದು, ಪ್ರಸ್ತುತ 3ಬಿಯಲ್ಲಿರುವ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕೆಂದು ಆಗ್ರಹಿಸಲಾಗಿದೆ.

ಒಕ್ಕಲಿಗ ಉಪಪಂಗಡಗಳನ್ನು ಒಳಗೊಂಡು ರಾಜ್ಯದ ಇತರ ಹಿಂದುಳಿದ ವರ್ಗಗಳ ‘ಪ್ರವರ್ಗ–3ಎ’ಗೆ ನೀಡಲಾಗಿರುವ ಮೀಸಲಾತಿ ಪ್ರಮಾಣವನ್ನು ಮುಂಬರುವ ಜನವರಿ 23ರ ಒಳಗೆ ಶೇ 4 ರಿಂದ ಶೇ 12ಕ್ಕೆ ಹೆಚ್ಚಿಸ ಬೇಕು ಎಂದು ಒಕ್ಕಲಿಗ ಸಮುದಾಯ ಆಗ್ರಹಿಸುತ್ತಿದೆ. ಬೃಹತ್ ಹೋರಾಟದ ಎಚ್ಚರಿಕೆಯನ್ನೂ ನೀಡಿದೆ.

ಪರಿಶಿಷ್ಟ ಜಾತಿ ಪಟ್ಟಿಯೊಳಗೆ ಮಡಿವಾಳ ಸಮುದಾಯವನ್ನು ಸೇರಿಸಬೇಕು ಎಂಬ ಕೂಗು ಎದ್ದಿದೆ. ಸವಿತಾ ಸಮಾಜವೂ ಮೀಸಲಾತಿ ಹೋರಾಟದ ಎಚ್ಚರಿಕೆ ನೀಡಿದೆ. ತಮ್ಮ ಸಮುದಾಯಕ್ಕೆ ಪ್ರವರ್ಗ 1 ಮೀಸಲಾತಿ ನೀಡದಿದ್ದಲ್ಲಿ ರಾಜ್ಯಾದ್ಯಂತ ಕ್ಷೌರದಂಗಡಿ ಮುಚ್ಚಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಸವಿತಾನಂದನಾಥ ಸ್ವಾಮೀಜಿ ಹೇಳಿದ್ದಾರೆ.

ಪರಿಶಿಷ್ಟ ಪಂಗಡಕ್ಕೆ ತಮ್ಮನ್ನು ಸೇರಿಸಬೇಕು ಎಂದು ಹಲವು ಸಮುದಾಯಗಳು ಆಗ್ರಹಿಸುತ್ತಿವೆ. ಪ್ರವರ್ಗ 2ಎನಲ್ಲಿ ಇರುವ ಕುರುಬ, ಉಪ್ಪಾರ, ಈಡಿಗ ಸಮುದಾಯಗಳು ತಮ್ಮನ್ನು ಎಸ್‌.ಟಿ. ಸೇರಿಸಬೇಕೆಂದು ಆಗ್ರಹಿಸುತ್ತಿವೆ. ಈ ಸಂಬಂಧ ಹೀಗಾಗಲೇ ಬೃಹತ್ ಹೋರಾಟಗಳೂ ನಡೆದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...