Homeಕರ್ನಾಟಕಆರ್‌ಬಿಎಎನ್‌ಎಂಎಸ್ ಕಾಲೇಜು ಪ್ರಾಂಶುಪಾಲರಿಂದ ದಲಿತ ಸಮುದಾಯದ ಪ್ರಾಧ್ಯಾಪಕರಿಗೆ ಅನ್ಯಾಯ ಆರೋಪ; ದೀರ್ಘಕಾಲದಿಂದ ಅಮಾನತಿನಲ್ಲಿಟ್ಟು ಮಾನಸಿಕ ಕಿರುಕುಳ

ಆರ್‌ಬಿಎಎನ್‌ಎಂಎಸ್ ಕಾಲೇಜು ಪ್ರಾಂಶುಪಾಲರಿಂದ ದಲಿತ ಸಮುದಾಯದ ಪ್ರಾಧ್ಯಾಪಕರಿಗೆ ಅನ್ಯಾಯ ಆರೋಪ; ದೀರ್ಘಕಾಲದಿಂದ ಅಮಾನತಿನಲ್ಲಿಟ್ಟು ಮಾನಸಿಕ ಕಿರುಕುಳ

- Advertisement -
- Advertisement -

ಜಾತಿ ಮತ್ತು ಭಾಷೆಯ ಕಾರಣಕ್ಕಾಗಿ ಕೆಲಸದ ಸ್ಥಳದಲ್ಲಿ ಮಾನಸಿಕ ಹಾಗೂ ದೈಹಿಕ ಕಿರುಕುಳದ ಪ್ರಕರಣಗಳು ಆಗಾಗ ಕೇಳಿಬರುತ್ತಿವೆ. ಇದನ್ನು ತಡೆಗಟ್ಟಲು ಹಲವು ಕಾನೂನುಗಳು ಇದ್ದರೂ, ಬಂಡವಾಳಶಾಹಿಗಳು ಅದ್ಯಾವುದಕ್ಕೂ ಹೆದರದೆ ತಮ್ಮ ಅಟ್ಟಹಾಸ ಮೆರೆಯುತ್ತಾರೆ. ಬೆಂಗಳೂರಿನ ಅತ್ಯಂತ ಹಳೆಯ ಶಿಕ್ಷಣ ಸಂಸ್ಥೆಯಾದ ಹಲಸೂರಿನ ಆರ್‌ಬಿಎಎನ್‌ಎಂಎಸ್‌ (RBANM’S) ಕಾಲೇಜಿನಲ್ಲಿ ಉತ್ತರ ಭಾರತ ಮೂಲದ ಪ್ರಾಂಶುಪಾಲರಾದ ಡಾ. ಚೇತನ್ ಬಜಾಜ್ ಅವರು ಪ್ರಾದೇಶಿಕತೆ ಹಾಗೂ ಜಾತಿ ಕಾರಣಕ್ಕಾಗಿ ಅಲ್ಲಿನ ಸಿಬ್ಬಂದಿಗಳಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಪ್ರಾಂಶುಪಾಲರು ಇಷ್ಟೆಲ್ಲಾ ದೌರ್ಜನ್ಯ, ದಬ್ಬಾಳಿಕೆ ನಡೆಯುತ್ತಿದ್ದರೂ ಸಂಸ್ಥೆಯ ಆಡಳಿತ ಮಂಡಳಿ ಪದಾಧಿಕಾರಿಗಳು ಮಾತ್ರ ಕಣ್ಣು ಮುಚ್ಚಿ ಕುಳಿತಿದ್ದು, ಹಲವು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ತೊಂದರೆ ಅನುಭವಿಸುತ್ತಿದ್ದಾರೆ.

ಪರೀಕ್ಷಾ ಕೊಠಡಿಯಲ್ಲಿ ಮೊಬೈಲ್‌ ಫೋನ್‌ ಬಳಸುತ್ತಿದ್ದನ್ನು ಪ್ರಶ್ನಿಸಿದ ದಲಿತ ಸಮುದಾಯದ ಪ್ರಾಧ್ಯಾಪಕ ಡಾ.  ಅವಿನಾಶ್. ವಿ, ಬೋಧಕೇತರ ಸಿಬ್ಬಂದಿ ದೀಪಾ ಸೇರಿದಂತೆ ಐದು ಜನರನ್ನು ಸಕಾರಣವಿಲ್ಲದೆ ಅಮಾನತು ಮಾಡಿ, ವಿಚಾರಣೆಯನ್ನೇ ನಡೆಸದೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಕಳೆದ ಐದು ತಿಂಗಳಿನಿಂದ ಹಲವು ಸಿಬ್ಬಂದಿಗಳನ್ನು ಅಮಾನತಿನಲ್ಲಿಟ್ಟಿರುವ ಆರ್‌ಬಿಎಎನ್‌ಎಂಎಸ್‌ ಕಾಲೇಜು ಆಡಳಿತ ಮಂಡಳಿ, ದೀರ್ಘಕಾಲದಿಂದ ವಿಚಾರಣೆ ನಡೆಸದೆ ಮಾನಸಿಕ ಕಿರುಕುಳ ನೀಡುತ್ತಿದೆ ಎಂದು ಸಿಬ್ಬಂದಿಗಳು ಅಳಲು ತೋಡಿಕೊಂಡಿದ್ದಾರೆ.

ಪ್ರಾಂಶುಪಾಲರಾದ ಡಾ. ಚೇತನ್ ಬಜಾಜ್

ಈ ಬಗ್ಗೆ ‘ನಾನುಗೌರಿ.ಕಾಂ‘ ಜತೆಗೆ ಮಾತನಾಡಿದ ಡಾ. ಅವಿನಾಶ್, ‘ಕಳೆದ ಆರು ವರ್ಷಗಳಿಂದ ನಾನು ನಿಷ್ಠೆಯಿಂದ ಸಂಸ್ಥೆಗಾಗಿ ಕೆಲಸ ಮಾಡುತ್ತಿದ್ದೇನೆ.. ಈ ಆರು ವರ್ಷಗಳಿಲ್ಲಿ ಹಲವಾರು ಬದಲಾವಣೆಗಳು ಆದರೂ ನನ್ನ ವೃತ್ತಿ ಧರ್ಮವನ್ನು ಪಾಲಿಸಿಕೊಂಡು ಬರುತ್ತಿದ್ದೇನೆ. ನಾನು 2018ರಲ್ಲಿ ಮಂಗಳೂರು ವಿಶ್ವ ವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದು ಆರ್‌ಬಿಎಎನ್‌ಎಂಎಸ್‌ ಕಾಲೇಜಿಗೆ ಬಂದಾಗ, ಅಲ್ಲಿದ್ದ ಉಪನ್ಯಾಸಕರಿಗೆ ಸಂಶೋಧನೆಯ ಅರಿವೆ ಇರಲಿಲ್ಲ. ಪ್ರಾಂಶುಪಾಲರು ಸಂಶೋಧನೆಯ ಮಹತ್ವದ ಬಗ್ಗೆ ತಿಳಿಸಿರಲಿಲ್ಲ, ಪ್ರಾಧ್ಯಾಪಕರಿಗೂ ಈ ಬಗ್ಗೆ ಆಸಕ್ತಿ ಇರಲಿಲ್ಲ. ನಾನು ಅಲ್ಲಿಗೆ ಹೋದಾಗ ಹಲವಾರು ವೈಮನಸ್ಸು ಇತ್ತು. ಆದರೆ, ನಾನು ಎಲ್ಲವನ್ನೂ ಸರಿದೂಗಿಸಿಕೊಂಡು ಕೆಲಸ ಮಾಡಿದ್ದೇನೆ’ ಎಂದರು.

‘ನಾನು ಅಲ್ಲಿಗೆ ಕೆಲಸಕ್ಕೆ ಸೇರಿದಾಗ ಬಿಎನಲ್ಲಿ ಒಂದಂಕಿ ವಿದ್ಯಾರ್ಥಿಗಳು ಮಾತ್ರ ಇದ್ದರು.. ಪಿಯು ಕಾಲೇಜಿನ ವಿದ್ಯಾರ್ಥಿಗಳ ಮನವೊಲಿಸಿದ ನಾನು, ಸುಮಾರು 29 ವಿದ್ಯಾರ್ಥಿಗಳನ್ನು ಬಿಎ ಪದವಿಗೆ ದಾಖಲಾಗುವಂತೆ ಮಾಡಿದ್ದೆ; ಕೊರೊನಾ ನಂತರವೂ 25 ವಿದ್ಯಾರ್ಥಿಗಳು ಬಿಎಗೆ ದಾಖಲಾಗಿದ್ದರು. ನನ್ನ ಶ್ರಮದಿಂದ ಪ್ರಸ್ತುತ ಈ ಸಾಲಿನಲ್ಲಿ ಬಿಎ ಪದವಿಗೆ ಸುಮಾರು 32 ಜನ ವಿದ್ಯಾರ್ಥಿಗಳು ದಾಖಲಾತಿ ಪಡೆದುಕೊಂಡಿದ್ದಾರೆ. ಕೆಲವರಿಗೆ ಕಲಾ ವಿಭಾಗ ತೆಗೆದುಕೊಳ್ಳುವುದುಕ್ಕೂ ಆಸಕ್ತಿ ಇರಲಿಲ್ಲ. ಆದರೆ, ನಾನು ಸಾಕಷ್ಟು ಶ್ರಮಪಟ್ಟು ದಾಖಲಾತಿ ಹೆಚ್ಚಿಸಿದ್ದೇನೆ. ನಾನು ಹಲವು ವರ್ಷಗಳಿಂದ ಅಲ್ಲಿ ಕೆಲಸ ಮಾಡುತ್ತಿರುವುದರಿಂದ ವಿದ್ಯಾರ್ಥಿಗಳ ಕುರಿತು ಪ್ರಾಥಮಿಕ ಮಾಹಿತಿ ತಿಳಿದುಕೊಂಡಿದ್ದೇನೆ; ಆ ಮೂಲಕ ದಾಖಲಾತಿ ಹೆಚ್ಚಿಸಿದ್ದೇನೆ’ ಎಂದು ಹೇಳಿದರು.

‘ನಮ್ಮ ಕಾಲೇಜಿನಲ್ಲಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇಂದು ಬಿಎ ಪದವಿಗೆ ದಾಖಲಾಗಿದ್ದರೆ.. ಅದಕ್ಕೆ ಕಾರಣ ನನ್ನ ಶ್ರಮ ಮಾತ್ರ. ನ್ಯಾಕ್ ಕಮಿಟಿಯವರು ಕೂಡ ನ್ನನ್ನನ್ನು ‘ಮಲ್ಟಿ ಟ್ಯಾಲೆಂಟೆಡ್’ ಎಂದು ನಮ್ಮ ಪ್ರಾಂಶುಪಾಲರಿಗೆ ಹೇಳಿದ್ದಾರೆ; ಸಂಸ್ಥೆ ಬೆಳೆಯಲು ನನ್ನ ಕಡೆಯಿಂದ ಸಾಕಷ್ಟು ಶ್ರಮ ಹಾಕಿದ್ದೇನೆ. ಆದರೆ, ಇಷ್ಟೆಲ್ಲಾ ಕಾಲೇಜಿನ ಬೆಳವಣಿಗೆಗಾಗಿ ಶ್ರಮಿಸಿದ್ದರೂ ನನ್ನನ್ನು ಕಡೆಗಣಿಸುತ್ತಿದ್ದಾರೆ’ ಎಂದು ಅವಿನಾಶ್ ಬೇಸರ ವ್ಯಕ್ತಪಡಿಸಿದರು.

‘ಸಂಸ್ಥೆಗಾಗಿ ಇಷ್ಟೆಲ್ಲಾ ಶ್ರಮಿಸಿರುವ ನಾನು, ಕಾಲೇಜಿಗೆ ಕೆಟ್ಟ ಹೆಸರು ಬರುತ್ತದೆ ಎಂಬ ಕಾರಣಕ್ಕೆ ಅದರ ವಿರುದ್ಧ ಹೋರಾಡಿದ್ದೇನೆ. 2023ರ ಸೆಪ್ಟಂಬರ್ ತಿಂಗಳಲ್ಲಿ ಮಕ್ಕಳು ಸೆಮಿಸ್ಟರ್ ಪರೀಕ್ಷೆ ಬರೆಯುತ್ತಿದ್ದರು; ಅದೇ ಸಮಯದಲ್ಲಿ ಪರೀಕ್ಷಾ ಕೊಠಡಿಯಲ್ಲೆ ಮಹಿಳಾ ಪ್ರಾದ್ಯಾಪಕರು ತಮ್ಮ ಮೊಬೈಲ್‌ ಫೋನಿನಲ್ಲಿ ಮಾತನಾಡುತ್ತಿದ್ದರು. ಅದನ್ನು ಗಮನಿಸಿದ ನಾನು, ಪರೀಕ್ಷಾ ಮುಖ್ಯಸ್ಥರ ಗಮನಕ್ಕೆ ತಂದಿದ್ದೆ. ಆದರೆ, ಆ ಮಹಿಳಾ ಸಿಬ್ಬಂದಿ ನನ್ನ ವಿರುದ್ಧ ಸಂಸ್ಥೆಯ ಕಾರ್ಯದರ್ಶಿಗಳಿಗೆ ದೂರು ನೀಡಿ, ಅನುಮತಿ ಇಲ್ಲದೆ ನಾನು ಫೋಟೋ ತೆಗೆದಿದ್ದೇನೆ ಎಂದು ಆರೋಪ ಮಾಡಿದ್ದಾರೆ’ ಎಂದು ಮಾಹಿತಿ ನೀಡಿದರು.

‘ನಮ್ಮ ಸಂಸ್ಥೆಯ ಕಾರ್ಯದರ್ಶಿಗಳು ಪ್ರಕರಣದ ವಿಚಾರಣೆಯನ್ನೇ ನಡೆಸದೆ ಕಳೆದ ನಾಲ್ಕು ತಿಂಗಳಿಂದ ನನ್ನನ್ನು ಅಮಾನತಿನಲ್ಲಿ ಇಟ್ಟಿದ್ದಾರೆ. ಮಹಿಳಾ ಪ್ರಾಧ್ಯಾಪಕರು ನನ್ನ ವಿರುದ್ಧ ನೀಡಿದ ದೂರಿಗೆ ಸಾಕ್ಷಿ ಇದ್ದಿದ್ದರೆ ನನ್ನ ಮೇಲೆ ಕ್ರಮ ತೆಗೆದುಕೊಳ್ಳಲು ಇಷ್ಟು ದಿನ ಬೇಕಾಗಿತ್ತಾ’ ಎಂದು ಪ್ರಶ್ನಿಸಿದ್ದಾರೆ.

‘ನವೆಂಬರ್ ಆರನೇ ತಾರೀಖಿನಿಂದ ನಾನು ಈವರೆಗೆ ಅಮಾನತಿನಲ್ಲಿ ಇದ್ದೇನೆ. ನಾಲ್ಕು ತಿಂಗಳಿನಿಂದ ನನ್ನ ವಿಚಾರಣೆಯನ್ನೇ ನಡೆಸಿಲ್ಲ; ನನ್ನ ಜೀವನವನ್ನು ಹಾಳು ಮಾಡುವ ಏಕೈಕ ದುರುದ್ದೇಶದಿಂದ ನನಗೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆ’ ಎಂದು ಅವಿನಾಶ್ ಆರೋಪಿಸಿದರು.

‘ನಮ್ಮ ಸಂಸ್ಥೆ ದಲಿತ ಅಭ್ಯುದಯಕ್ಕೆ ಎಂದು ಹೇಳುತ್ತಾರೆ. ಆದರೆ, ನಾನು ಕೂಡ ದಲಿತ, ನನ್ನ ಬಗ್ಗೆ ಇಷ್ಟೊಂದು ಅಸಡ್ಡೆ ಏಕೆ? ವಿದೇಶಗಳಲ್ಲಿ ಓದಿಕೊಂಡು ಬಂದಿದ್ದೇವೆ ಎಂದು ಹೇಳುವ ಇವರ ಮನಸ್ಸಿನಲ್ಲಿ ಕೊಳಕು ಇದೆ. ಇಲ್ಲದಿದ್ದರೆ ಇವರು ಇಷ್ಟು ದಿನ ನನ್ನ ವಿಚಾರಣೆ ನಡೆಸಿಲ್ಲ ಯಾಕೆ? ನಮ್ಮ ಕಾಲೇಜಿನ ಎಲ್ಲ ಕಡೆಯೂ ಸಿಸಿಟಿವಿ ಕ್ಯಾಮೆರಾಗಳಿವೆ; ಬೇಕಿದ್ದರೆ ಪರಿಶೀಲನೆ ನಡೆಸಲಿ. ಅದರಿಂದ ಅವರು ಒಂದು ನಿರ್ಧಾರಕ್ಕೆ ಬರುವುದಕ್ಕೆ ಸಾಧ್ಯವಾಗುತ್ತದೆ. ಆದರೆ, ಏನಾದರೂ ಮಾಡಿಕೊಳ್ಳಲಿ ಎಂಬ ಮನಸ್ಥಿಯ ಆಡಳಿತ ಮಂಡಳಿ ನನಗೆ ಅನ್ಯಾಯ ಮಾಡುತ್ತಿದೆ’ ಎಂದು ಬೇಸರ ಹೊರಹಾಕಿದರು.

ಕಳೆದ ಐದು ತಿಂಗಳಿನಿಂದ ಅಮಾನತಿನಲ್ಲಿರುವ ಬೋಧಕೇತರ ಸಿಬ್ಬಂದಿ ದೀಪಾ ಎಂಬುವವರು ಮಾತನಾಡಿ, ‘ಹೊಸದಾಗಿ ಬಂದಿರುವ ಪ್ರಾಂಶುಪಾಲರಿಗೆ ಕಾಲೇಜು ಆಡಳಿತದ ಬಗ್ಗೆ ಗೊತ್ತಿಲ್ಲ; ಅವರನ್ನು ಯಾಕಾಗಿ ನೇಮಕ ಮಾಡಿಕೊಂಡಿದ್ದಾರೆಯೋ ಗೊತ್ತಿಲ್ಲ. ಅವರು ಅತಿಥಿ ಉಪನ್ಯಾಸಕ ಹಾಗೂ ತರಬೇತುದಾರಾಗಿದ್ದವರು, ಶೈಕ್ಷಣಿಕ ಸಂಸ್ಥೆಯಲ್ಲಿ ಕೆಲಸ ಮಾಡಿದ ಅನುಭವ ಇಲ್ಲ. ನಾನು ಇದೇ ಕಾಲೇಜಿನಲ್ಲಿ 18 ವರ್ಷ ಕೆಲಸ ಮಾಡಿದ ಅನುಭವ ಇದೆ, ನನ್ನ ಕೆಲಸದ ಬಗ್ಗೆ ಹಿಂದಿನ ಆಡಳಿತ ಮಂಡಳಿ ಒಳ್ಳೆಯ ಮಾತನಾಡಿದ್ದಾರೆ. ಈವರೆಗೆ ನಾಲ್ಕು ಜನ ಪ್ರಾಂಶುಪಾಲರು ನನ್ನ ಕೆಲಸವನ್ನು ಒಪ್ಪಿಕೊಂಡಿದ್ದಾರೆ’ ಎಂದರು.

‘ಉತ್ತರ ಭಾರತದಿಂದ ಬಂದಿರುವ ಪ್ರಾಂಶುಪಾಲರು ತಮಗೆ ಬೇಕಾದವರನ್ನು ಕೆಲಸಕ್ಕೆ ನೇಮಕ ಮಾಡಿಕೊಂಡು, ಸ್ಥಳೀಯರು ಮತ್ತು ಕನ್ನಡಿಗರನ್ನು ಕೆಲಸದಿಂದ ತೆಗೆಯುವುದಕ್ಕೆ ಪಿತೂರಿ ನಡೆಸುತ್ತಿದ್ದಾರೆ. ನಮ್ಮ ಬಗ್ಗೆ ಕಾರ್ಯದರ್ಶಿಗಳಿಗೆ ತಪ್ಪು ಮಾಹಿತಿ ನೀಡಿ, ಅವರನ್ನು ಭೇಟಿಯಾಗದಂತೆ ಮಾಡಿದ್ದಾರೆ. ಡಾ. ಅವಿನಾಶ್ ಅವರಿಗಿಂತ ಮೊದಲೆ ನನ್ನನ್ನು ಅಮಾನತು ಮಾಡಿದ್ದಾರೆ. ಐದು ತಿಂಗಳಿನಿಂದ ಅಮಾನತಿನಲ್ಲಿಟ್ಟು, ನನಗೆ ಆರು ತಿಂಗಳ ವೇತನವನ್ನೂ ಕೊಡದೆ ಸತಾಯಿಸುತ್ತಿದ್ದಾರೆ. ನಾನು ಕೊಟ್ಟಿರುವ ಲಾಯರ್ ನೋಟಿಸ್‌ಗೂ ಅವರು ಉತ್ತರಿಸಿಲ್ಲ, ಸಂಸ್ಥೆ ವಿಚಾರಣೆ ಆಗುವವರೆಗೂ ಲೇಬರ್ ಕೋರ್ಟಿಗೆ ಹೋಗುವುದಕ್ಕೆ ಸಾಧ್ಯವಿಲ್ಲ’ ಎಂದು ದೀಪಾ ಅಸಹಾಯಕತೆ ವ್ಯಕ್ತಪಡಿಸಿದರು.

‘ಪ್ರಾಂಶುಪಾಲರು ಮತ್ತು ಕಾಲೇಜು ಆಡಳಿತ ಮಂಡಳಿ ನೀಡುವ ಮಾನಸಿಕ ಹಿಂಸೆಯಿಂದ ನಾನು ಅನಾರೋಗ್ಯಕ್ಕೆ ಈಡಾಗಿದ್ದೇನೆ. ಒಟ್ಟು ಐದು ಜನರನ್ನು ಅಮಾನತಿನಲ್ಲಿಟ್ಟಿದ್ದು, 12 ಜನರಿಗೆ ಮಾನಸಿಕ ಹಿಂಸೆ ನೀಡಿ ಕೆಲಸ ಬಿಡಿಸಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಮಾಹಿತಿ ಪಡೆಯಲು ಸಂಸ್ಥೆಯ ಕಾರ್ಯದರ್ಶಿಗಳಾದ ಸಂಜೀವ್ ನರೇನ್ ಅವರನ್ನು ಸಂಪರ್ಕಿಸಲಾಯಿತು. ಆದರೆ ಅವರು ಈ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕೂಡಲೇ ಕರೆ ಸ್ಥಗಿತಗೊಳಿಸಿದರು; ಪ್ರಾಂಶುಪಾಲರು ಕರೆ ಸ್ವೀಕರಿಸಲಿಲ್ಲ.

ಇದನ್ನೂ ಓದಿ; ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಜಾಮೀನು ಅರ್ಜಿ ಹಿಂಪಡೆದ ಉಮರ್‌ ಖಾಲಿದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...