Homeಮುಖಪುಟತಮಿಳುನಾಡಿಗೆ ಅನ್ಯಾಯ; ಮೋದಿ ಇದ್ದ ವೇದಿಕೆಯಲ್ಲೇ ಸ್ಟಾಲಿನ್‌ ಹೇಳಿಕೆ; ಅಣ್ಣಾಮಲೈಗೆ ಬೇಸರ

ತಮಿಳುನಾಡಿಗೆ ಅನ್ಯಾಯ; ಮೋದಿ ಇದ್ದ ವೇದಿಕೆಯಲ್ಲೇ ಸ್ಟಾಲಿನ್‌ ಹೇಳಿಕೆ; ಅಣ್ಣಾಮಲೈಗೆ ಬೇಸರ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಇದ್ದ ವೇದಿಕೆಯಲ್ಲೇ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರು ತಮಿಳುನಾಡಿಗೆ ಆಗುತ್ತಿರುವ ಅನ್ಯಾಯಗಳನ್ನು ಪ್ರಸ್ತಾಪಿಸಿದ್ದು ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಬೇಸರಗೊಂಡಿದ್ದಾರೆ.

ಮೂಲಸೌಕರ್ಯ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಸಂಜೆ ಚೆನ್ನೈಗೆ ಭೇಟಿ ನೀಡಿದಾಗ ಆಡಳಿತಾರೂಢ ಸರ್ಕಾರ ರಾಜಕೀಯ ನಾಟಕ ನಡೆಸಿದೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಕಿಡಿಕಾರಿದ್ದಾರೆ.

ನಿನ್ನೆ ಸಂಜೆ ಪ್ರಧಾನಿ ಮೋದಿ ವೇದಿಕೆಯಲ್ಲಿದ್ದಾಗ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮಾಡಿದ ಭಾಷಣವು ರಾಜಕೀಯ ನಾಟಕದಿಂದ ಕೂಡಿತ್ತು ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಷ್ಟ್ರೀಯ ಆರ್ಥಿಕತೆಗೆ ತಮಿಳುನಾಡು ನೀಡುತ್ತಿರುವ ಕೊಡುಗೆ ಜೊತೆಗೆ ಕೇಂದ್ರ ಸರ್ಕಾರದಿಂದ ಪಡೆದ ಪಾಲಿನ ನಡುವಿನ ಅಸಮಾನತೆಯನ್ನು ಸ್ಟಾಲಿನ್ ಪ್ರಸ್ತಾಪಿಸಿದ್ದರು.

ಜಿಡಿಪಿಯಲ್ಲಿ ರಾಜ್ಯದ ಪಾಲು ಶೇ 9.22 ಮತ್ತು ಕೇಂದ್ರ ಸರ್ಕಾರದ ಒಟ್ಟಾರೆ ತೆರಿಗೆ ಆದಾಯದಲ್ಲಿ ರಾಜ್ಯದ ಪಾಲು ಶೇ 6ರಷ್ಟಿದೆ. ಆದರೆ ಕೇಂದ್ರ ಸರ್ಕಾರದಿಂದ ತಮಿಳುನಾಡು ಪಡೆಯುವ ಆದಾಯ ಕೇವಲ ಶೇ 1.23 ಮಾತ್ರ ಎಂದು ಸ್ಟಾಲಿನ್ ಪ್ರಸ್ತಾಪಿಸಿದರು. ಬಾಕಿ ಉಳಿದಿರುವ ಜಿಎಸ್‌ಟಿ ಹಣವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿರಿ: ಸ್ಟಾಲಿನ್‌ ಮುಖ್ಯಮಂತ್ರಿಯಾಗಿ ಒಂದು ವರ್ಷ: ರಾಷ್ಟ್ರ ರಾಜಕಾರಣಕ್ಕೆ ಬೇಕಲ್ಲವೇ ‘ತಮಿಳುನಾಡು ಮಾದರಿ?’

ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಣ್ಣಾಮಲೈ, “ರಾಜ್ಯವು ಕೇಂದ್ರ ಸರ್ಕಾರಕ್ಕೆ 25,979 ಕೋಟಿ ರೂಪಾಯಿಗಳನ್ನು ಬಾಕಿ ಉಳಿಸಿಕೊಂಡಿದೆ, ಆದರೆ ಕೇಂದ್ರ ಹಣಕಾಸು ಸಚಿವರಾಗಲಿ ಅಥವಾ ಪ್ರಧಾನಿಯಾಗಲಿ ಈ ಬಗ್ಗೆ ಮಾತನಾಡಲಿಲ್ಲ. ಜಿಎಸ್‌ಟಿ ಬಾಕಿಯನ್ನು ಜಿಎಸ್‌ಟಿ ಕೌನ್ಸಿಲ್ ಇತ್ಯರ್ಥಪಡಿಸಬೇಕು. ನಮ್ಮ ಹಣಕಾಸು ಸಚಿವರು ಅವರನ್ನು ತಡೆಯಲು ನಿರ್ಧರಿಸಿದರೂ ಅದು ಸಾಧ್ಯವಿಲ್ಲ. ತಮಿಳುನಾಡಿಗೆ ಬಾಕಿ ಇರುವ ಜಿಎಸ್‌ಟಿ ಬಾಕಿಯನ್ನು ನಿಲ್ಲಿಸುವಲ್ಲಿ ಹಣಕಾಸು ಸಚಿವರ ಪಾತ್ರವಿಲ್ಲ” ಎಂದಿದ್ದಾರೆ.

ಭಾಷಣದಲ್ಲಿ ಸ್ಟಾಲಿನ್ ಗಮನ ಸೆಳೆದ ಅಂಶಗಳು

“ಹಿಂದಿಗೆ ಸಮಾನವಾಗಿ ತಮಿಳು ಭಾಷೆಯನ್ನು ಅಧಿಕೃತ ಭಾಷೆಯನ್ನಾಗಿ ಮಾಡಬೇಕು” ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ಟಾಲಿನ್‌ ಒತ್ತಾಯಿಸಿದರು.

ರಾಜ್ಯ ವಿಧಾನಸಭೆಯಲ್ಲಿ ನೀಟ್‌ ವಿರುದ್ಧ ಮಸೂದೆಯನ್ನು ಅಂಗೀಕರಿಸಿದ್ದು, ತಮಿಳುನಾಡಿಗೆ ನೀಟ್‌ನಿಂದ ವಿನಾಯಿತಿ ನೀಡಬೇಕು. ಇತರ ರಾಜ್ಯಗಳಿಗೆ ಹೋಲಿಸಿದರೆ ತಮಿಳುನಾಡು ವಿಶಿಷ್ಟವಾಗಿದೆ. ಸಾಮಾಜಿಕ ನ್ಯಾಯ, ಮಹಿಳಾ ಅಭಿವೃದ್ಧಿ ಮತ್ತು ಸಮಾನತೆಗೆ ಆದ್ಯತೆ ನೀಡಿದೆ ಎಂದು ತಿಳಿಸಿದರು.

“ದ್ರಾವಿಡ ಮಾದರಿಯ ಆಡಳಿತವು ಹಣಕಾಸಿನ ಅಸಮತೋಲನವನ್ನು ಬಹುಮಟ್ಟಿಗೆ ಸರಿಪಡಿಸಿದೆ. ರಾಜ್ಯಗಳಿಗೆ ಹೆಚ್ಚಿನ ಅನುದಾನವನ್ನು ಕೇಂದ್ರ ಸರ್ಕಾರ ಹೆಚ್ಚಿಸಬೇಕು. ಆಗ ಮಾತ್ರ ಸಹಕಾರಿ ಫೆಡರಲಿಸಂನ ನಿಜವಾದ ಮನೋಭಾವವನ್ನು ಎತ್ತಿಹಿಡಿದಂತಾಗುತ್ತದೆ” ಎಂದು ಅಭಿಪ್ರಾಯಪಟ್ಟರು.

14,006 ಕೋಟಿ ರೂಪಾಯಿಗಳ ಜಿಎಸ್‌ಟಿ ಪರಿಹಾರದ ಬಾಕಿಯನ್ನು ಬಿಡುಗಡೆ ಮಾಡಬೇಕು. ಜೂನ್ 2022 ರಿಂದ ಪರಿಹಾರದ ಅವಧಿಯನ್ನು ಇನ್ನೂ ಎರಡು ವರ್ಷಗಳವರೆಗೆ ವಿಸ್ತರಿಸಬೇಕು ಎಂದು ಮನವಿ ಮಾಡಿದರು.

ಇದನ್ನು ಓದಿರಿ: ಒಕ್ಕೂಟ ಸರ್ಕಾರ ತಿರಸ್ಕರಿಸಿದ ಟ್ಯಾಬ್ಲೊ ತಮಿಳುನಾಡಿನಾದ್ಯಂತ ಪ್ರದರ್ಶನ: ಸಿಎಂ ಸ್ಟಾಲಿನ್‌

ಕಳೆದ ವರ್ಷ ತಮಿಳುನಾಡಿನಲ್ಲಿ ಅಧಿಕಾರಕ್ಕೆ ಬಂದ ಡಿಎಂಕೆ, ತಮಿಳಿಗೆ “ಅಧಿಕೃತ ಮತ್ತು ಆಡಳಿತಾತ್ಮಕ” ಭಾಷಾ ಸ್ಥಾನಮಾನವನ್ನು ಬಹಳ ಹಿಂದಿನಿಂದಲೂ ಒತ್ತಾಯಿಸುತ್ತಿದೆ. ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರದಲ್ಲಿದ್ದಾಗ ತಮಿಳಿಗೆ “ಶಾಸ್ತ್ರೀಯ ಭಾಷೆ” ಸ್ಥಾನಮಾನ ನೀಡಲಾಗಿತ್ತು.

ಮೋದಿ ಮಾತುಗಳು

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ತಮಿಳು ಭಾಷೆ “ಶಾಶ್ವತ” ಎಂದು ಬಣ್ಣಿಸಿದರು.

ಎನ್‌ಡಿಎ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಭಾರತೀಯ ಭಾಷೆಗಳನ್ನು ಉತ್ತೇಜಿಸಲು ವಿಶೇಷ ಪ್ರಾಮುಖ್ಯತೆಯನ್ನು ನೀಡಿದೆ ಎಂದು ಪ್ರತಿಪಾದಿಸಿದರು.

“ರಾಷ್ಟ್ರೀಯ ಶಿಕ್ಷಣ ನೀತಿಯಿಂದಾಗಿ ತಾಂತ್ರಿಕ ಮತ್ತು ವೈದ್ಯಕೀಯ ಕೋರ್ಸ್‌ಗಳನ್ನು ಸ್ಥಳೀಯ ಭಾಷೆಗಳಲ್ಲಿ ಮಾಡಬಹುದು. ತಮಿಳುನಾಡಿನ ಯುವಕರು ಇದರಿಂದ ಪ್ರಯೋಜನ ಪಡೆಯುತ್ತಾರೆ” ಎಂದು ತಿಳಿಸಿದರು.

ರಾಷ್ಟ್ರೀಯ ಶಿಕ್ಷಣ ನೀತಿಯು ಅಸಮಾನ ಶಿಕ್ಷಣ ವ್ಯವಸ್ಥೆಯನ್ನು ತರಲಿದೆ ಎಂದು ತಮಿಳುನಾಡು ಆತಂಕ ವ್ಯಕ್ತಪಡಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಎಂ ಜಿ ಆರ್ ಕರುಣಾನಿಧಿ ಜಯಲಲಿತ ಇವತ್ತಿನ ಸ್ಟಾಲಿನ್ ಆಗಲೀ ಅವರ nativity ಉಳಿಸಿಕೊಳ್ಳುವತ್ತ ಪ್ರಾಮಾಣಿಕ ಹೆಜ್ಜೆಹಾಕಿದ್ದಾರೆ…ನಮ್ಮ ರಾಜ್ಯದ ಹಣೆ ಬರಹ ನೋಡಿ ಎಲ್ಲಕ್ಕೂ ದೆಹಲಿಯ ಸುಲ್ತಾನರ ಮುಂದೆ ಮಂಡಿಯೂರಬೇಕು….ಅಲ್ಲಿ ಬಂದವರೆಲ್ಲ ಮುಖ್ಯ ? ಮಂತ್ರಿ ಗಳಾದರೆ ..ನಮ್ಮ ರಾಜ್ಯಕ್ಕೆ ಮಾತ್ರ ಯಾವಾಗಲೂ ಅಮುಖ್ಯ ಮಂತ್ರಿಗಳದೇ I mean ದೆಹಲಿಯ ಗುಲಾಮರ ಸಂತತಿ

LEAVE A REPLY

Please enter your comment!
Please enter your name here

- Advertisment -

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...