Homeಮುಖಪುಟಯೋಗಿ ಆದಿತ್ಯನಾಥ್ ಠಾಕೂರ್ ಅಲ್ಲ, ಅವರೊಬ್ಬ ಹೇಡಿ: ಮಸಿ ಎರಚಿದ ಘಟನೆ ನಂತರ ಆಪ್ ಸಂಸದ...

ಯೋಗಿ ಆದಿತ್ಯನಾಥ್ ಠಾಕೂರ್ ಅಲ್ಲ, ಅವರೊಬ್ಬ ಹೇಡಿ: ಮಸಿ ಎರಚಿದ ಘಟನೆ ನಂತರ ಆಪ್ ಸಂಸದ ಸಂಜಯ್ ಸಿಂಗ್ ಕಿಡಿ

ನನ್ನ ವಿರುದ್ಧ ಯಾವುದೇ ಮೊಕದ್ದಮೆ ಹಾಕಿರಿ, ಲಾಠಿಚಾರ್ಜ್ ಮಾಡಿ ಅಥವಾ ನನ್ನನ್ನು ಕೊಲ್ಲಿ, ಆದರೆ ಸಂತ್ರಸ್ತ ಯುವತಿಯ ನ್ಯಾಯಕ್ಕಾಗಿ ನನ್ನ ಹೋರಾಟ ಮುಂದುವರಿಯುತ್ತದೆ.

- Advertisement -
- Advertisement -

ಇಂದು ಹತ್ರಾಸ್‌ಗೆ ಭೇಟಿ ನೀಡಿದ ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಮೇಲೆ ಮಸಿ ಎರಚಲಾಗಿದೆ. ತಮ್ಮ ನಿಯೋಗದೊಂದಿಗೆ ಸಂತ್ರಸ್ತರ ಭೇಟಿಗೆ ಬಂದಿದ್ದ ಸಂಸದರು ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವಾಗ ವ್ಯಕ್ತಿಯೊಬ್ಬ ದಿಢೀರನೆ ಮಸಿ ಎರಚಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋ ನೋಡಿ.

ಇದನ್ನೂ ಓದಿ: ಮಹಿಳಾ ನಾಯಕಿ ಬಟ್ಟೆಗೆ ಕೈಹಾಕಲು ಆತನಿಗೆಷ್ಟು ಧೈರ್ಯ..?- ಬಿಜೆಪಿಯ ಚಿತ್ರಾ ವಾಘ್ ಆಕ್ರೋಶ

ಸಂಸದ ಸಂಜಯ್ ಸಿಂಗ್ ಮೇಲೆ ಮಸಿ ಎರಚಿದವನನ್ನು ದೀಪಕ್ ಶರ್ಮಾ ಎಂದು ಗುರುತಿಸಲಾಗಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ

ಈ ಕುರಿತು ಸಂಸದ ಸಂಜಯ್ ಸಿಂಗ್ ಟ್ವೀಟ್ ಮಾಡಿರುವ ಅವರು “ಯೋಗಿ ಆದಿತ್ಯನಾಥ್ ಠಾಕೂರ್ ಅಲ್ಲ, ಅವರೊಬ್ಬ ಹೇಡಿ” ಎಂದಿದ್ದಾರೆ.

’ಹತ್ರಾಸ್‌ನಲ್ಲಿ ಶಾಸಕ ರಾಖಿ ಬಿಡ್ಲಾನ್ ಅಜಯ್ ದತ್, ಫೈಸಲ್ ಲಾಲಾ ಜೊತೆಗೆ ಮೃತ ಸಂತ್ರಸ್ತ ಯುವತಿಯ ಮನೆಯಿಂದ ಹಿಂದಿರುಗುವಾಗ ಹೇಡಿಗಳು ದಾಳಿ ಮಾಡಿದ್ದಾರೆ. ಯೋಗಿ ಜಿ, ನೀವು ಠಾಕೂರ್ ಅಲ್ಲ ಹೇಡಿ”. ನನ್ನ ವಿರುದ್ಧ ಯಾವುದೇ ಮೊಕದ್ದಮೆ ಹಾಕಿರಿ, ಲಾಠಿಚಾರ್ಜ್ ಮಾಡಿ ಅಥವಾ ನನ್ನನ್ನು ಕೊಲ್ಲಿ, ಆದರೆ ಸಂತ್ರಸ್ತ ಯುವತಿಯ ನ್ಯಾಯಕ್ಕಾಗಿ ನನ್ನ ಹೋರಾಟ ಮುಂದುವರಿಯುತ್ತದೆ’ ಎಂದಿದ್ದಾರೆ.

ಘಟನೆ ಕುರಿತು ದೆಹಲಿ ಮುಖ್ಯಮಂತ್ರಿ, ಆಪ್ ಮುಖಂಡ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿ’ ನೀವು ಸರಿಯಾದ ದಾರಿಯಲ್ಲಿದ್ದಿರಿ’ ಎಂದು ಸಂಸದ ಸಂಜಯ್ ಸಿಂಗ್ ಅವರನ್ನು ಪ್ರಶಂಸಿಸಿದ್ದಾರೆ.

ಟ್ವೀಟ್‌ನಲ್ಲಿ ’ಸಂಜಯ್ ಜಿ, ಯುಪಿ ಸರ್ಕಾರದ ಅನ್ಯಾಯ ಮತ್ತು ದೌರ್ಜನ್ಯದ ವಿರುದ್ಧ ನೀವು ನಿರ್ಭಯವಾಗಿ ಮಾತನಾಡುತ್ತಿದ್ದೀರಿ. ಅವರು ನಿಮ್ಮ ಮೇಲೆ 14 ಎಫ್‌ಐಆರ್‌ಗಳನ್ನು ಹಾಕಿದ್ದಾರೆ, ಕಚೇರಿಗೆ ಮೊಹರು ಹಾಕಿದರು ಆದರೆ ನಿಮ್ಮನ್ನು ಬಂಧಿಸುವ ಧೈರ್ಯ ಮಾಡಲಿಲ್ಲ. ಇಂದು ಕೂಡ ನಿಮ್ಮ ಮೇಲೆ ಹಲ್ಲೆ ನಡೆಸಿದರು. ಇದು ಯುಪಿ ಸರ್ಕಾರದ ಸೋಲು ಮತ್ತು ಅವಮಾನವನ್ನು ತೋರಿಸುತ್ತದೆ. ಇದರರ್ಥ ನೀವು ಸರಿಯಾದ ಹಾದಿಯಲ್ಲಿದ್ದೀರಿ’ ಎಂದು ಹೇಳಿದ್ದಾರೆ.

ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಲು ಬಂದಿದ್ದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್, ತೃಣಮೂಲ ಕಾಂಗ್ರೆಸ್ ನಿಯೋಗ, ಸಮಾಜವಾದಿ ಪಕ್ಷದ ನಿಯೋಗಗಳ ಮೇಲೂ ಪೊಲೀಸರು ಹಲ್ಲೆ ಮಾಡಿದ್ದರು.


ಇದನ್ನೂ ಓದಿ: ಹತ್ರಾಸ್ ಸಂತ್ರಸ್ತ ಕುಟುಂಬದ ಭೇಟಿ: ಭೀಮ್ ಆರ್ಮಿ ಮುಖ್ಯಸ್ಥ ಆಜಾದ್‌ ಮೇಲೆ FIR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....