Homeಕರ್ನಾಟಕಕನ್ನಡದ ಫಲಕಗಳಿಗೆ ಮಸಿ: ಎಂಇಎಸ್, ಶಿವಸೇನೆ ಕಾರ್ಯಕರ್ತರು ಪೊಲೀಸರ ವಶಕ್ಕೆ

ಕನ್ನಡದ ಫಲಕಗಳಿಗೆ ಮಸಿ: ಎಂಇಎಸ್, ಶಿವಸೇನೆ ಕಾರ್ಯಕರ್ತರು ಪೊಲೀಸರ ವಶಕ್ಕೆ

ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು-ಸ್ಥಾಪನೆಗೆ ಸಂಬಂಧಿಸಿದಂತೆ ಇದೆ ರೀತಿಯ ಗಲಭೆ ಆರಂಭವಾಗಿತ್ತು. ಆಡಳಿತ ಮತ್ತು ವಿರೋಧ ಪಕ್ಷಗಳು ಇದರಲ್ಲೂ ತಮ್ಮ ಬೇಳೆ ಬೇಯಿಸಿಕೊಂಡಿದ್ದವು

- Advertisement -
- Advertisement -

ಕೆಲವು ದಿನಗಳ ಹಿಂದೆಯಷ್ಟೇ ಬೆಳಗಾವಿ ಮಹಾನಗರ ಪಾಲಿಕೆ ಮುಂಭಾಗ ಭಗವಾಧ್ವಜ ಹಾರಿಸಲು ವಿಫಲ ಯತ್ನ ನಡೆಸಿದ್ದ ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ಹಾಗೂ ಶಿವಸೇನೆ ಕಾರ್ಯಕರ್ತರು ಇಂದು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡದ ಫಲಕಗಳಿಗೆ ಮಸಿ ಬಳಿದಿದ್ದಾರೆ.

ಶಿವಸೇನೆ ಮುಖಂಡ ಸಂಜಯ್ ಪವಾರ್ ಹಾಗೂ ಅವರ ಬೆಂಬಲಿಗರು ಕನ್ನಡದ ಬೋರ್ಡ್‌ಗಳಿಗೆ ಮಸಿ ಬಳಿದಿದ್ದಾರೆ. ಕೊಲ್ಲಾಪುರದ ಮಹಾಲಕ್ಷ್ಮಿ ಮಂದಿರದ ಬಳಿ ಈ ಕೃತ್ಯ ಎಸಗಿದ್ದಾರೆ. ಕನ್ನಡದ ಬೋರ್ಡ್ ಹಾಕದಂತೆ, ಶಿವಸೇನೆ ಕಾರ್ಯಕರ್ತರು ಅಂಗಡಿ ಮಾಲಿಕರಿಗೆ ಬೆದರಿಕೆ ಹಾಕಿದ್ದಾರೆ. ಎಂಇಎಸ್ ಈ ನಡೆಗೆ ಕನ್ನಡಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಉದ್ವಿಗ್ನ ಪರಿಸ್ಥಿತಿಯಿಂದಾಗಿ ಸ್ಥಳಕ್ಕೆ ಭೇಟಿ ನೀಡಿ, ಅಲ್ಲಿಯೇ ಮೊಕ್ಕಾಂ ಹೂಡಿರುವ ಪೊಲೀಸರು ಬೀಗಿ ಬಂದೋಬಸ್ತ್ ಮಾಡಿದ್ದಾರೆ. ಹಲವು ಎಂಇಎಸ್, ಶಿವಸೇನೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ವಿಬಿ ವರದಿ ಮಾಡಿದೆ.

ಇದನ್ನೂ ಓದಿ: ಬೆಳಗಾವಿ: ಬಸವಣ್ಣನ ಪ್ರತಿಮೆಗೆ ಹಾನಿ ಮಾಡಿದ ದುಷ್ಕರ್ಮಿಗಳು

ಈ ಹಿಂದೆ ಬೆಳಗಾವಿಯ ಮಹಾನಗರ ಪಾಲಿಕೆ ಕಛೇರಿ ಎದುರು ಕನ್ನಡ ಬಾವುಟವನ್ನು ಹಾರಿಸಲಾಗಿತ್ತು. ಇದನ್ನು ಕೆಳಗಿಳಿಸಬೇಕು ಎಂದು ಮಹಾರಾಷ್ಟ್ರ ಏಕೀಕರಣ ಯುವ ಸಮಿತಿ ನಗರ ಪೊಲೀಸ್‌ ಆಯುಕ್ತರಿಗೆ ಗಡುವು ನೀಡಿತ್ತು. ಆದರೆ ಇದನ್ನು ಖಂಡಿಸಿರುವ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಹಗಲು ರಾತ್ರಿ ಎನ್ನದೇ ಧ್ವಜದ ಬಳಿಯೇ ಕಾವಲು ಕಾಯುತ್ತಿದ್ದರು.

ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು-ಸ್ಥಾಪನೆಗೆ ಸಂಬಂಧಿಸಿದಂತೆ ಇದೆ ರೀತಿಯ ಗಲಭೆ ಆರಂಭವಾಗಿತ್ತು. ಆಡಳಿತ ಮತ್ತು ವಿರೋಧ ಪಕ್ಷಗಳು ಇದರಲ್ಲೂ ತಮ್ಮ ಬೇಳೆ ಬೇಯಿಸಿಕೊಂಡಿದ್ದವು. ಹಾಗಾಗಿ ಮಹಾರಾಷ್ಟ್ರ ಏಕೀಕರಣ ಸಮಿತಿಯು ಕ್ಯಾತೆ ತೆಗೆಯುತ್ತಿರುವುದು ಇದೇ ಮೊದಲೇನಲ್ಲ.


ಇದನ್ನೂ ಓದಿ: ಬೆಳಗಾವಿ: ಕನ್ನಡ ಧ್ವಜ ಕೆಳಗಿಳಿಸದಿದ್ದರೆ ಭಗವಾಧ್ವಜ ಹಾರಿಸುತ್ತೇವೆ ಎಂದ ಮಹಾರಾಷ್ಟ್ರ ಏಕೀಕರಣ ಸಮಿತಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆಯಲ್ಲಿ ಬೆಂಬಲಿಸಿಲ್ಲ ಎಂದು ದಲಿತರ ಮೇಲೆ ಹಲ್ಲೆ ಪ್ರಕರಣ: YSRCP ಮುಖಂಡನಿಗೆ ಜೈಲು

0
1996ರಲ್ಲಿ ನಡೆದಿದ್ದ ದಲಿತರ ಮೇಲಿನ ದೌರ್ಜನ್ಯ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಮುಖಂಡ ತೋಟ ತ್ರಿಮೂರ್ತಿಲು ಸೇರಿದಂತೆ ಒಂಬತ್ತು ಮಂದಿಯನ್ನು ವಿಶಾಖಪಟ್ಟಣ ನ್ಯಾಯಾಲಯವು ದೋಷಿ ಎಂದು ಘೋಷಿಸಿ...