Homeಮುಖಪುಟಶಾಹೀನ್ ಬಾಗ್: ನಿರ್ದಿಷ್ಟ ಸ್ಥಳಗಳಲ್ಲಿ ಮಾತ್ರ ಪ್ರತಿಭಟಿಸಬೇಕು ಎಂದ ಸುಪ್ರೀಂ

ಶಾಹೀನ್ ಬಾಗ್: ನಿರ್ದಿಷ್ಟ ಸ್ಥಳಗಳಲ್ಲಿ ಮಾತ್ರ ಪ್ರತಿಭಟಿಸಬೇಕು ಎಂದ ಸುಪ್ರೀಂ

ಶಾಂತಿಯುತವಾದ ಪ್ರತಿಭಟನೆಯ ಹಕ್ಕನ್ನು ನಾವು ಗೌರವಿಸುತ್ತೇವೆ. ಆದರೆ ಪ್ರತಿಭಟನೆಗೆಂದು ಗೊತ್ತುಪಡಿಸಿದ ಸ್ಥಳದಲ್ಲಿ ಮಾತ್ರ ಪ್ರತಿಭಟಿಸಬೇಕು" ಎಂದು ಸುಪ್ರೀಂ ಒತ್ತಿ ಹೇಳಿದೆ.

- Advertisement -
- Advertisement -

ಶಾಹಿನ್‌ಬಾಗ್‌ ಪ್ರತಿಭಟನೆಗೆ ಸಂಬಂಧಸಿದಂತೆ ಅರ್ಜಿಗಳನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, “ಸಾರ್ವಜನಿಕ ಸ್ಥಳಗಳನ್ನು ಅನಿರ್ದಿಷ್ಟಾವಧಿಗೆ ಆಕ್ರಮಿಸಿಕೊಳ್ಳಬಾರದು. ನಿರ್ದಿಷ್ಟ ಸ್ಥಳಗಳಲ್ಲಿ ಮಾತ್ರ ಪ್ರತಿಭಟಿಸಬೇಕು” ಎಂದು ಹೇಳಿದೆ.

ಈ ವರ್ಷದ ಜನವರಿ-ಫೆಬ್ರವರಿ ತಿಂಗಳಿನಲ್ಲಿ ದೆಹಲಿಯ ಶಾಹೀನ್ ಬಾಗ್‌ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯ ವಿರುದ್ದ ಸಲ್ಲಿಸಿರುವ ಅರ್ಜಿಯ ವಿಚಾರಣೆ ವೇಳೆ, “ಭಿನ್ನಾಭಿಪ್ರಾಯ ಮತ್ತು ಪ್ರಜಾಪ್ರಭುತ್ವ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಹಾಗಾಗಿ ಇವೆರಡೂ ಜೊತೆಗೇ ಸಾಗುತ್ತವೆ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಶಾಹೀನ್‌ ಬಾಗ್‌ ಪ್ರತಿಭಟನಾಕಾರರನ್ನು ಹೊರಕಳಿಸಲು ಸಾಧ್ಯವಿಲ್ಲ, ಆದರೆ… : ಸುಪ್ರೀಂ ಕೋರ್ಟ್‌

“ಶಾಹಿನ್‌ಬಾಗ್ ಅಥವಾ ದೆಹಲಿಯಲ್ಲಿ ಅಥವಾ ಇನ್ನೆಲ್ಲಿಯಾದರೂ ಸಾರ್ವಜನಿಕ ಸ್ಥಳಗಳನ್ನು ಅನಿರ್ಧಿಷ್ಟವಾಗಿ ಆಕ್ರಮಿಸಿಕೊಳ್ಳುವಂತಿಲ್ಲ. ಈ ರೀತಿಯ ಪ್ರತಿಭಟನೆಗಳು ಸ್ವೀಕಾರಾರ್ಹವಲ್ಲ. ಇದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಕಾರ್ಯ ನಿರ್ವಹಿಸಿ, ಇಂತಹ ಸ್ಥಳಗಳು ಅಡಚಣೆಯಿಂದ ಮುಕ್ತವಾಗಿದೆ ಎಂಬುದನ್ನು ಖಚಿತಪಡಿಸಬೇಕು. ಈ ಪ್ರತಿಭಟನೆಯನ್ನು ನಿಯಂತ್ರಿಸಲು ಆಡಳಿತವು ನ್ಯಾಯಾಲಯದ ಆದೇಶಕ್ಕಾಗಿ ಕಾಯಬಾರದು. ಶಾಂತಿಯುತವಾದ ಪ್ರತಿಭಟನೆಯ ಹಕ್ಕನ್ನು ನಾವು ಗೌರವಿಸುತ್ತೇವೆ. ಆದರೆ ಪ್ರತಿಭಟನೆಗೆಂದು ನಿರ್ದಿಷ್ಟ ಸ್ಥಳದಲ್ಲಿ ಮಾತ್ರ ಪ್ರತಿಭಟಿಸಬೇಕು” ಎಂದು ಸುಪ್ರೀಂ ಒತ್ತಿ ಹೇಳಿದೆ.

ಇದನ್ನೂ ಓದಿ: ದೆಹಲಿ ಲಾಕ್‌ಡೌನ್ ಮಧ್ಯೆ ಶಾಹೀನ್ ಬಾಗ್ ಸಿಎಎ ವಿರೋಧಿ ಪ್ರತಿಭಟನಾ ವೇದಿಕೆ ತೆರವು

ನ್ಯಾಯಮೂರ್ತಿಗಳಾದ ಎಸ್.ಕೆ.ಕೌಲ್, ಕೃಷ್ಣ ಮುರಾರಿ ಮತ್ತು ಋಷಿಕೇಶ ರಾಯ್ ಅವರನ್ನೊಳಗೊಂಡ ನ್ಯಾಯಪೀಠವು, “ಸಾರ್ವಜನಿಕ ಸ್ಥಳಗಳಲ್ಲಿ ರಸ್ತೆ ತಡೆಯಂತಹ ಘಟನೆಗಳನ್ನು ತೆರವುಗೊಳಿಸುವುದು ಆಡಳಿತದ ಕರ್ತವ್ಯ. ಆದರೆ ಇದಕ್ಕೆ ಸಂಬಂಧಿಸಿದಂತೆ ಆಡಳಿತವು ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ನ್ಯಾಯಾಲಯವು ಹಸ್ತಕ್ಷೇಪ ಮಾಡುತ್ತಿದೆ” ಎಂದು ಅಭಿಪ್ರಾಯಪಟ್ಟಿದೆ.

ಪೌರತ್ವ ತಿದ್ದುಪಡಿ ಕಾಯ್ದೆ, ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಸಿ) ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ವಿರುದ್ಧ ಪ್ರತಿಭಟನಾಕಾರರು, ಮುಖ್ಯವಾಗಿ ಮಹಿಳೆಯರು ಮತ್ತು ಮಕ್ಕಳು ದಕ್ಷಿಣ ದೆಹಲಿಯ ಶಾಹೀನ್ ಬಾಗ್‌ನಲ್ಲಿ ಹೋರಾಟ ನಡೆಸಿದ್ದರು.


ಇದನ್ನೂ ಓದಿ: ಅಂಬೇಡ್ಕರ್ ಪಟ – ತ್ರಿವರ್ಣ ಧ್ವಜ ಹಿಡಿದ ಮುಸ್ಲಿಂ ಮಹಿಳೆಯರು:ದೆಹಲಿಯಲ್ಲಿ ಹರ್ ಶಾಮ್ ಶಾಹೀನ್ ಬಾಗ್!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...