Homeಅಂತರಾಷ್ಟ್ರೀಯಫೇಸ್‌ಬುಕ್ ಇಂಡಿಯಾ ಬಗ್ಗೆ ವಿಚಾರಣೆ ನಡೆಸಿ: ಮಾರ್ಕ್ ಜುಕರ್‌ಬರ್ಗ್‌ಗೆ ಕೆ.ಸಿ.ವೇಣುಗೋಪಾಲ್ ಪತ್ರ

ಫೇಸ್‌ಬುಕ್ ಇಂಡಿಯಾ ಬಗ್ಗೆ ವಿಚಾರಣೆ ನಡೆಸಿ: ಮಾರ್ಕ್ ಜುಕರ್‌ಬರ್ಗ್‌ಗೆ ಕೆ.ಸಿ.ವೇಣುಗೋಪಾಲ್ ಪತ್ರ

ಫೇಸ್‌ಬುಕ್ ಮತ್ತು ಬಿಜೆಪಿ ಸಂಬಂಧದ ಕುರಿತು ಅಮೇರಿಕಾದ ವಾಲ್‌ಸ್ಟ್ರೀಟ್‌ ಜರ್ನಲ್ ನಲ್ಲಿ ಪ್ರಕಟವಾದ ವರದಿಯ ನಂತರ ಭಾರತದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿವೆ.

- Advertisement -
- Advertisement -

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಫೇಸ್‌ಬುಕ್ ಸಿಇಒ ಮಾರ್ಕ್ ಜುಕರ್‌ಬರ್ಗ್‌ಗೆ ಪತ್ರ ಬರೆದು, ಕಂಪನಿಯ ಪ್ರಧಾನ ಕಚೇರಿಯಿಂದ ಫೇಸ್‌ಬುಕ್ ಇಂಡಿಯಾ ನಾಯಕತ್ವದ ತಂಡದ ಬಗ್ಗೆ ಉನ್ನತ ಮಟ್ಟದ ವಿಚಾರಣೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಫೇಸ್‌ಬುಕ್ ಮತ್ತು ಬಿಜೆಪಿ ಸಂಬಂಧದ ಕುರಿತು ಅಮೇರಿಕಾದ ವಾಲ್‌ಸ್ಟ್ರೀಟ್‌ ಜರ್ನಲ್ ನಲ್ಲಿ ಪ್ರಕಟವಾದ ವರದಿಯ ನಂತರ ಭಾರತದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿವೆ.

ಫೇಸ್‌ಬುಕ್‌ನ ಕಟೆಂಟ್‌ ಪಾಲಿಸಿ ನಿಯಮಗಳು ಆಡಳಿತರೂಢ ಬಿಜೆಪಿ ಪರವಾಗಿವೆ. ಬಿಜೆಪಿ ಮತ್ತು ಹಿಂದೂತ್ವ ನಾಯಕರು ದ್ವೇಷ ಭಾಷಣಗಳು ತನ್ನ ಸಂಸ್ಥೆಯ ನಿಯಮಗಳನ್ನು ಉಲ್ಲಂಘಿಸಿದರೂ ಕೂಡ ಫೇಸ್ ಬುಕ್ ಕ್ರಮ ತೆಗೆದುಕೊಳ್ಳುತ್ತಿಲ್ಲ. ಬಿಜೆಪಿ ಕಾರ್ಯಕರ್ತರ ನಿಯಮ ಉಲ್ಲಂಘನೆಗಳಿಗೆ ಶಿಕ್ಷೆ ನೀಡುವುದು ಅಥವಾ ಪ್ರಶ್ನಿಸುವುದು “ದೇಶದ ಕಂಪನಿಯ ವ್ಯವಹಾರ ಭವಿಷ್ಯವನ್ನು ಹಾನಿಗೊಳಿಸುತ್ತದೆ” ಎಂದು ಫೇಸ್‌ಬುಕ್‌ನ ಹಿರಿಯ ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ವಾಲ್‌ಸ್ಟ್ರೀಟ್‌ ಜರ್ನಲ್ ವಿಶೇಷ ವರದಿ ಮಾಡಿತ್ತು.

ಕರ್ನಾಟಕದ ಸಂಸದ ಅನಂತ್ ಕುಮಾರ್ ಹೆಗಡೆ ಪ್ರಚೋದನಾಕಾರಿ ಭಾಷಣಗಳಿಗೆ ಹಲವು ಬಾರಿ ವಿವಾದಕ್ಕೆ ಈಡಾಗಿದ್ದಾರೆ. ಅವರ ಮುಸ್ಲಿಂ ವಿರೋಧಿ ಪೋಸ್ಟ್‌ಗಳನ್ನು ತೆಗೆದುಹಾಕಲು ಫೇಸ್‌ಬುಕ್ ಮುಂದಾಗಿರಲಿಲ್ಲ. ಹಾಗೆಯೇ ತೆಲಂಗಾಣದ ಬಿಜೆಪಿ ಶಾಸಕ ಟಿ.ರಾಜಾಸಿಂಗ್ ಹಲವು ದ್ವೇ‍ಷ ಭಾಷಣಗಳನ್ನು ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದಾರೆ. ಆದರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಫೇಸ್‌ಬುಕ್ ಭಾರತದ ಉನ್ನತ ಸಾರ್ವಜನಿಕ ನೀತಿ ಕಾರ್ಯನಿರ್ವಾಹಕ ಅಧಿಕಾರಿಣಿ ಅಂಖಿ ದಾಸ್ ನಿರಾಕರಿಸಿದ್ದಾರೆ. ಆಡಳಿತಾರೂಢ ಪಕ್ಷದೊಂದಿಗಿರುವ ಸಂಬಂಧಕ್ಕೆ ಧಕ್ಕೆಯಾದೀತು ಎಂಬ ಹೆದರಿಕೆಯೇ ಇದಕ್ಕೆ ಕಾರಣ ಎಂದು ವಾಲ್‌ಸ್ಟ್ರೀಟ್‌ ಜರ್ನಲ್ ವರದಿ ಮಾಡಿದೆ. ಇವುಗಳನ್ನು ಉಲ್ಲೇಖಿಸಿ, ವೇಣುಗೊಪಾಲ್ ಈ ಪತ್ರ ಬರೆದಿದ್ದಾರೆ.

ಫೇಸ್‌ಬುಕ್‌ನ ಪ್ರಧಾನ ಕಛೇರಿಯಿಂದ ಇದರ ಕುರಿತು ಉನ್ನತ ಮಟ್ಟದಲ್ಲಿ ವಿಚಾರಣೆ ನಡೆಯಬೇಕು ಎಂದು ಪತ್ರದಲ್ಲಿ ಅವರು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಬಿಜೆಪಿ ನಾಯಕರ ದ್ವೇಷ ಭಾಷಣದ ನಿರ್ಲಕ್ಷ್ಯ ಆರೋಪ; ಫೇಸ್‌‌ಬುಕ್ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...