Homeಮುಖಪುಟಕನ್ನಡದಲ್ಲಿ NET ಪರೀಕ್ಷೆ ನಡೆಸಲು ಒತ್ತಾಯ: ಕೇಂದ್ರಕ್ಕೆ ಪತ್ರಬರೆದ ಟಿ.ಎಸ್.ನಾಗಾಭರಣ

ಕನ್ನಡದಲ್ಲಿ NET ಪರೀಕ್ಷೆ ನಡೆಸಲು ಒತ್ತಾಯ: ಕೇಂದ್ರಕ್ಕೆ ಪತ್ರಬರೆದ ಟಿ.ಎಸ್.ನಾಗಾಭರಣ

1976ರ ಕೇಂದ್ರ ಭಾಷಾ ನೀತಿ ಅನ್ವಯ ದಕ್ಷಿಣ ರಾಜ್ಯಗಳಿಗೆ ಹಿಂದಿ ಭಾಷೆಯು ಆಯ್ಕೆಯೇ ಹೊರತು ಅನಿವಾರ್ಯವಲ್ಲ. ಹಾಗಾಗಿ ಆಯಾ ಪ್ರಾದೇಶಿಕ ಭಾಷೆಗಳಲ್ಲಿ ಕೇಂದ್ರ ಸರ್ಕಾರ ಪರೀಕ್ಷೆಗಳನ್ನು ನಡೆಸಿ.

- Advertisement -
- Advertisement -

ರಾಷ್ಟ್ರೀಯ ಅರ್ಹತಾ ಪರೀಕ್ಷೆಗಳನ್ನು(NET) ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವಂತೆ ಕೇಂದ್ರದ ಸಚಿವರು, ಅಧಿಕಾರಿಗಳಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಪತ್ರ ಬರೆದು ಒತ್ತಾಯಿಸಿದ್ದಾರೆ.

ವಿಶ್ವವಿದ್ಯಾಲಯ ಧನಸಹಾಯ ಆಯೋಗ (UGC) ಸಂಸ್ಥೆಯು ಪ್ರತೀ ವರ್ಷ ಎರಡು ಬಾರಿ ನಡೆಸಲಾಗುವ NET ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಕೇವಲ ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಇರುವುದರಿಂದ ದಕ್ಷಿಣ ರಾಜ್ಯದ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸಲು ಸಾಕಷ್ಟು ತೊಂದರೆಯಾಗುತ್ತಿದ್ದು ಈ ಬಗ್ಗೆ ಕೂಡಲೇ ಗಮನಹರಿಸಿ ಕನ್ನಡದಲ್ಲಿಯೂ ಪರೀಕ್ಷೆ ಎದುರಿಸಲು ಸಹಕಾರ ನೀಡುವ ನಿಟ್ಟಿನಲ್ಲಿ ಕ್ರಮವಹಿಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು ಕೇಂದ್ರ ಮಾನವ ಸಂಪನ್ಮೂಲ ಸಚಿವರಾದ ರಮೇಶ್ ಪೊಕ್ರಿಯಲ್ ನಿಶಾಂಕ್‌ಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಸೆಪ್ಟಂಬರ್ 14 ಹಿಂದಿ ದಿವಸ ಆಚರಣೆಗೆ ಕನ್ನಡಿಗರ ತೀವ್ರ ವಿರೋಧ

“ರಾಜ್ಯ ಸರ್ಕಾರಗಳು ಪದವಿ ಕಾಲೇಜುಗಳಿಗೆ ಅಗತ್ಯಕ್ಕೆ ಅನುಗುಣವಾಗಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯನ್ನು ನಡೆಸುತ್ತದೆ. ಸದರಿ ನೇಮಕಾತಿಗೆ ಅರ್ಹತೆ ಪಡೆಯಲು ಪ್ರತೀ ಯುಜಿಸಿ ನಡೆಸುವ NET ಪರೀಕ್ಷೆಯಲ್ಲಿ ಉತ್ತೀರ್ಣವಾಗುವುದು ಅವಶ್ಯಕವಾಗಿರುತ್ತದೆ. ಆದರೆ ಸದರಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಪ್ರಾದೇಶಿಕ ಭಾಷೆಯಲ್ಲಿ ಇರದ ಕಾರಣ ದಕ್ಷಿಣ ರಾಜ್ಯದ ವಿದ್ಯಾರ್ಥಿಗಳು ಉತ್ತೀರ್ಣರಾಗಲು ಸಾಧ್ಯವಾಗುತ್ತಿಲ್ಲ. ಅಲ್ಲದೆ ಇದು ಸಂವಿಧಾನದ 14 ಮತ್ತು 15ನೇ ವಿಧಿಯ ಸಂಪೂರ್ಣ ಉಲ್ಲಂಘನೆಯಾಗುತ್ತದೆ” ಎಂದು ತಿಳಿಸಿದ್ದಾರೆ.

“ಒಕ್ಕೂಟ ವ್ಯವಸ್ಥೆಯಲ್ಲಿ ಭಾರತ ಸರ್ಕಾರದ ಸಂವಿಧಾನದ 8ನೇ ಪರಿಚ್ಚೇದದಲ್ಲಿರುವ ಕನ್ನಡವೂ ಸೇರಿದಂತೆ 22 ಭಾಷೆಗಳಿಗೂ ಮಾನ್ಯ ನೀಡಬೇಕಿದೆ. ಆ ಮೂಲಕ ಒಕ್ಕೂಟ ವ್ಯವಸ್ಥೆಯನ್ನು ಬಲಗೊಳಿಸಬೇಕಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕನ್ನಡ್ ಸುದ್ದಿಗ್ ಏನ್ರಾ ಬಂದ್ರೆ ಮಾನಾ ಉಳ್ಸಾಕಿಲ್ಲ; ‘ರಸೋಕಿನ’ ತಂಡದಿಂದ ವಿಶಿಷ್ಟ ಪ್ರತಿರೋಧ

1976ರ ಕೇಂದ್ರ ಭಾಷಾ ನೀತಿ ಅನ್ವಯ ದಕ್ಷಿಣ ರಾಜ್ಯಗಳಿಗೆ ಹಿಂದಿ ಭಾಷೆಯು ಆಯ್ಕೆಯೇ ಹೊರತು ಅನಿವಾರ್ಯವಲ್ಲ. ಹಾಗಾಗಿ ಆಯಾ ಪ್ರಾದೇಶಿಕ ಭಾಷೆಗಳಲ್ಲಿ ಕೇಂದ್ರ ಸರ್ಕಾರ ಪರೀಕ್ಷೆಗಳನ್ನು ನಡೆಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು ಒತ್ತಾಯಿಸಿದ್ದಾರೆ.

“ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ನಡೆಸಿದರೆ ಆರೋಗ್ಯಕರ ಸ್ಪರ್ಧೆ ಉಂಟಾಗುವಂತೆ ನೋಡಿಕೊಳ್ಳಲು ಭಾಷೆ ಸಹ ಪ್ರಮುಖ ಸಾಧನವಾಗಲಿದೆ. ಹಾಗಾಗಿ ಈ ಮಾದರಿಯ ಪರೀಕ್ಷೆಗಳನ್ನು ಪ್ರಾದೇಶಿಕ ಭಾಷೆಗಳಲ್ಲಿಯೇ ನಡೆಸಿದಲ್ಲಿ ದಕ್ಷಿಣ ರಾಜ್ಯದ ವಿದ್ಯಾರ್ಥಿಗಳು ಸಹ ಉತ್ತರ ರಾಜ್ಯದ ವಿದ್ಯಾರ್ಥಿಗಳಿಗೆ ಸ್ಪರ್ಧೆ ನೀಡಬಲ್ಲರು ಎಂಬುದನ್ನು ತಿಳಿಸಿರುವ ಪ್ರಾಧಿಕಾರದ ಅಧ್ಯಕ್ಷರು, ಕೂಡಲೇ ದಕ್ಷಿಣ ರಾಜ್ಯದ ವಿದ್ಯಾರ್ಥಿಗಳಿಗೂ ಅನುಕೂಲವಾಗುವ ನಿಟ್ಟಿನಲ್ಲಿ ಪರೀಕ್ಷೆಯನ್ನು ನಡೆಸಸಲು ಕ್ರಮಕೈಗೊಳ್ಳುವಂತೆ ತಿಳಿಸಿದ್ದಾರೆ” ಎಂದು ಟಿ.ಎಸ್.ನಾಗಾಭರಣ ಅವರ ಆಪ್ತ ಸಹಾಯಕಿ ಪಂಕಜ ತಿಳಿಸಿದ್ದಾರೆ.


ಇದನ್ನೂ ಓದಿ: ಕರ್ನಾಟಕದಲ್ಲಿ ಉತ್ತರ ಭಾರತೀಯರ ಹೆಸರುಗಳ ವಿಜೃಂಭಣೆ: ಹೀಗಾದರೆ ಕನ್ನಡದ ಅಸ್ಮಿತೆಯ ಕತೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...