Homeಮುಖಪುಟಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

- Advertisement -
- Advertisement -

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. “ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಇನ್ಸ್‌ಪೆಕ್ಟರ್ ಧನಂಜಯ್ ಅವರು ತಮ್ಮ ಕರ್ತವ್ಯವನ್ನು ಅತ್ಯಂತ ಪ್ರಾಮಾಣಿಕವಾಗಿ ಹಾಗೂ ಸರಿಯಾಗಿ ನಿರ್ವಹಿಸಿದ್ದಾರೆ, ನಿಯಮ ಪಾಲನೆ ಮಾಡಿಸುವುದನ್ನು BJP ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವುದು ಸರಿಯಲ್ಲ” ಎಂದು ನೆಟ್ಟಿಗರು BJP ನಾಯಕರನ್ನು ಪ್ರಶ್ನಿಸಿದ್ದಾರೆ.

ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯ ವೇಳೆ ಮಸೀದಿ ಮುಂಭಾಗದಲ್ಲಿ ಪ್ರಚೋದನಕಾರಿಯಾಗಿ ಪಟಾಕಿ ಸಿಡಿಸಬಾರದು ಹಾಗೂ ಸೌಹಾರ್ದತೆ ಕಾಯ್ದುಕೊಳ್ಳಬೇಕು ಎಂದು ಟಿ. ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಎಚ್ಚರಿಕೆಯನ್ನು ವಿರೋಧಿಸಿ ಬಿಜೆಪಿ ನಾಯಕರು ಕಾನೂನು ಮೀರಿ ಠಾಣೆ ಬಳಿ ಪ್ರತಿಭಟನೆ ನಡೆಸಿದ್ದು, ಟಿ. ನರಸೀಪುರ ಪಟ್ಟಣದಲ್ಲಿ ತೀವ್ರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಇನ್ನೊಂದೆಡೆ, ಸಮಾಜದಲ್ಲಿ ಸೌಹಾರ್ದತೆ ಕಾಯಲು ಯತ್ನಿಸಿದ ಅಧಿಕಾರಿಯ ಬೆಂಬಲಕ್ಕೆ ನಿಂತ ದಲಿತ ಸಂಘಟನೆಗಳು ಬಿಜೆಪಿಯ ಕೋಮು ಪ್ರಚೋದನೆಯ ವಿರುದ್ಧ ಪ್ರತಿಭಟನೆ ನಡೆಸುವ ಮೂಲಕ ಬಿಜೆಪಿ ನಾಯಕರ ನಡೆಗೆ ಕೌಂಟರ್ ಕೊಟ್ಟಿದ್ದಾರೆ.

ಗಣೇಶೋತ್ಸವದ ಧಾರ್ಮಿಕ ಚೌಕಟ್ಟನ್ನು ಬಳಸಿಕೊಂಡು ಪ್ರಚೋದನಾಕಾರಿ ವಾತಾವರಣ ಸೃಷ್ಟಿಸುವುದು, ಸೂಕ್ಷ್ಮ ಪ್ರದೇಶಗಳಲ್ಲಿ ಶಾಂತಿ ಕದಡಿ ರಾಜಕೀಯ ಲಾಭ ಗಿಟ್ಟಿಸಿಕೊಳ್ಳುವುದು ಇತ್ತೀಚಿನ ವರ್ಷಗಳಲ್ಲಿ ರಾಜ್ಯ ಕಂಡ ಕಹಿ ವಾಸ್ತವ.

2024ರಲ್ಲಿ ಗಣೇಶ ವಿಸರ್ಜನೆ ವೇಳೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಭೀಕರ ಗಲಭೆ ಇಡೀ ರಾಜ್ಯಕ್ಕೇ ಪಾಠವಾಗಬೇಕಿತ್ತು. ಮಸೀದಿಯ ಮುಂಭಾಗದಲ್ಲಿ ಧ್ವನಿವರ್ಧಕಗಳ ಗದ್ದಲ, ಪ್ರಚೋದನಾಕಾರಿ ಘೋಷಣೆಗಳು ಹಾಗೂ ನಿಗದಿತ ಮಾರ್ಗವನ್ನು ಮೀರಿ ನಡೆದ ಘರ್ಷಣೆ ಕೊನೆಗೆ ಕಲ್ಲು ತೂರಾಟ, ಅಂಗಡಿ-ಮುಂಗಟ್ಟುಗಳ ದಹನ ಮತ್ತು ಬೃಹತ್ ಕೋಮು ಗಲಭೆಗೆ ದಾರಿ ಮಾಡಿಕೊಟ್ಟಿತ್ತು. ಅಂದು ಭದ್ರತಾ ಲೋಪ ಮತ್ತು ಮುನ್ನೆಚ್ಚರಿಕೆಯ ಕೊರತೆಯಿಂದ ನಾಗಮಂಗಲ ಉರಿದು ಬೂದಿಯಾಗಿದ್ದಕ್ಕೆ ಪೊಲೀಸ್ ಇಲಾಖೆ ತೀವ್ರ ಟೀಕೆಗೆ ಗುರಿಯಾಗಿತ್ತು.

ಆದರೆ, ಅದೇ ನಾಗಮಂಗಲ ದುರಂತದಿಂದ ಪಾಠ ಕಲಿತು, ಅಂತಹದ್ದೇ ಸನ್ನಿವೇಶ ಟಿ. ನರಸೀಪುರದಲ್ಲಿ ಮರುಕಳಿಸಬಾರದು ಎಂದು ಮುನ್ನೆಚ್ಚರಿಕೆ ವಹಿಸಿದ ಅಧಿಕಾರಿಯ ಹೇಳಿಕೆಯನ್ನು ತಿರುಚಿ ಈಗ ವಿರೋಧ ಪಕ್ಷದ ನಾಯಕರು ತಮ್ಮ ರಾಜಕೀಯ ಲಾಭಕ್ಕಾಗಿ ಕೋಮು ದ್ವೇಷದ ನರೇಶನ್ ಕಟ್ಟಲು ಯತ್ನಿಸುತ್ತಿದ್ದಾರೆ.

ಘಟನೆಯ ಹಿನ್ನೆಲೆ, ಪೋಲೀಸರ ಸ್ಪಷ್ಟನೆ:

ಘಟನೆಯ ಕುರಿತು ಸ್ಪಷ್ಟನೆ ನೀಡಿರುವ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಮಲ್ಲಿಕಾರ್ಜುನ ಬಾಲದಂಡಿ, ಸೆಪ್ಟೆಂಬರ್ 7 ರಂದು ಇನ್ಸ್‌ಪೆಕ್ಟರ್ ಧನಂಜಯ್ ಅವರು ಸೌಹಾರ್ದ ಸಭೆ ಕರೆದಿದ್ದರು. ವಿಸರ್ಜನಾ ಮೆರವಣಿಗೆಯ ದಿನಾಂಕ ಮತ್ತು ಮಾರ್ಗವನ್ನು ಪೊಲೀಸರಿಗೆ ಮುಂಚಿತವಾಗಿ ತಿಳಿಸಿದರೆ ಸೂಕ್ತ ಭದ್ರತೆ ಒದಗಿಸಬಹುದು ಎಂಬುದು ಅವರ ಉದ್ದೇಶವಾಗಿತ್ತು. ಕಳೆದ ವರ್ಷ ಸೂಕ್ತ ಮಾಹಿತಿಯಿಲ್ಲದೆ ಮೆರವಣಿಗೆ ನಡೆಸಿದ್ದರಿಂದ ಭದ್ರತಾ ಲೋಪವಾಗಿತ್ತು. ಹೀಗಾಗಿ ಈ ಬಾರಿ ಮಸೀದಿ ಇರುವ ಲಿಂಕ್ ರಸ್ತೆಯಲ್ಲಿ ಗದ್ದಲ, ಪಟಾಕಿ ಹಾಗೂ ಪ್ರಚೋದನಕಾರಿ ಘೋಷಣೆ ಕೂಗದಂತೆ ಮುನ್ನೆಚ್ಚರಿಕೆ ನೀಡಲಾಗಿತ್ತು.

ಶಾಂತಿ ಸಭೆಯಲ್ಲಿ ಮಾತನಾಡಿರುವ ಇನ್ಸ್‌ಪೆಕ್ಟರ್ ಧನಂಜಯ್, ಪೊಲೀಸರು ನಿಗದಿಪಡಿಸಿರುವ ಮಾರ್ಗದಲ್ಲಿಯೇ ಗಣೇಶ ಮೂರ್ತಿಯ ಮೆರವಣಿಗೆ ಸಾಗಬೇಕು. ನಿಗದಿತ ಮಾರ್ಗದಿಂದ ಬೇರೆಡೆಗೆ ತೆರಳಿ ಅನಗತ್ಯವಾಗಿ ಮಸೀದಿ ಬಳಿ ನಿಲ್ಲುವುದು, ಪಟಾಕಿ ಸಿಡಿಸುವುದು ಅಥವಾ ಡಿಜೆ ಹಾಕಿಕೊಂಡು ಗದ್ದಲ ಸೃಷ್ಟಿಸುವುದನ್ನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿರುವುದು ವರದಿಯಾಗಿದೆ. ನಿಯಮ ಉಲ್ಲಂಘನೆಯಾದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಅವರು ಹೇಳಿದ್ದಾರೆ.

ಟಿ. ನರಸೀಪುರದಲ್ಲಿ ಪ್ರತಿವರ್ಷ ಸುಮಾರು 15 ರಿಂದ 20 ಗಣಪತಿ ಪೆಂಡಾಲ್‌ಗಳನ್ನು ಸ್ಥಾಪಿಸಲಾಗುತ್ತದೆ ಮತ್ತು ಸಾಂಪ್ರದಾಯಿಕ ಮೆರವಣಿಗೆಗೆ ಯಾವುದೇ ನಿಷೇಧವಿಲ್ಲ. ಆದರೆ ಅಧಿಕಾರಿಯ ಮಾತುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ದುರುದ್ದೇಶಪೂರಿತವಾಗಿ ತಿರುಚಿ ಪ್ರಚಾರ ಮಾಡಲಾಗಿದೆ ಎಂದು ಎಸ್‌ಪಿ ಸ್ಪಷ್ಟಪಡಿಸಿದ್ದಾರೆ.

ಇಲ್ಲಿ ಮುಖ್ಯವಾಗಿ ಗಮನಿಸಬೇಕಾದ ಅಂಶವೆಂದರೆ, ಮೆರವಣಿಗೆಯ ಮಾರ್ಗವನ್ನು ನಿಗದಿಪಡಿಸುವುದು ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಶಬ್ದ, ಸಂಚಾರ ಮತ್ತು ಕಾನೂನು ಸುವ್ಯವಸ್ಥೆಯನ್ನು ನಿಯಂತ್ರಿಸುವ ಅಧಿಕಾರ ಪೊಲೀಸರಿಗೆ ಇದೆ. ಕರ್ನಾಟಕ ಪೊಲೀಸ್ ಕಾಯ್ದೆಯ ಸೆಕ್ಷನ್ 34ರ ಅಡಿಯಲ್ಲಿ ಮೆರವಣಿಗೆಗಳ ಮಾರ್ಗ ಮತ್ತು ಸಮಯವನ್ನು ನಿಯಂತ್ರಿಸುವುದು, ಸಾರ್ವಜನಿಕ ಸ್ಥಳಗಳಲ್ಲಿ ಶಾಂತಿ ಕಾಪಾಡುವುದು ಹಾಗೂ ಡಿಜೆ, ಡೋಲು ಸೇರಿದಂತೆ ಶಬ್ದಕ್ಕೆ ಸಂಬಂಧಿಸಿದ ನಿಯಮಗಳನ್ನು ಜಾರಿಗೊಳಿಸುವ ಅಧಿಕಾರ ಪೊಲೀಸರಿಗೆ ನೀಡಲಾಗಿದೆ. ಹೀಗಾಗಿ, ಗಣೇಶೋತ್ಸವ ಮೆರವಣಿಗೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸುವುದು ಪೊಲೀಸರ ಕರ್ತವ್ಯ ಎಂಬ ಜ್ಞಾನ ಬಿಜೆಪಿ ನಾಯಕರಿಗೆ ಇರಬೇಕಿತ್ತು.

ಬಿಜೆಪಿಯಿಂದ ಹಲ್ಲೆಗೆ ಯತ್ನ, ಅಶೋಕ್ ಬಂಧನ:

ಇನ್ಸ್‌ಪೆಕ್ಟರ್ ನೀಡಿದ ಹೇಳಿಕೆಯನ್ನು ‘ಹಿಂದು ವಿರೋಧಿ’ ಎಂದು ಬಿಂಬಿಸಲು ಮುಂದಾದ ಮಾಜಿ ಸಂಸದ ಪ್ರತಾಪ್ ಸಿಂಹ, ವಿಪಕ್ಷ ನಾಯಕ ಆರ್. ಅಶೋಕ್, ಮೈಸೂರು ಸಂಸದ ಯದುವೀರ್ ಒಡೆಯರ್, ಶಾಸಕ ಶ್ರೀವತ್ಸ ಹಾಗೂ ಬಿಜೆಪಿ ಮುಖಂಡ ಸಚ್ಚಿದಾನಂದ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು. ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಆರ್. ಅಶೋಕ್, “ರಾಜ್ಯ ಸರ್ಕಾರ ತಾಲಿಬಾನ್ ಸರ್ಕಾರದಂತೆ ವರ್ತಿಸುತ್ತಿದೆ” ಎಂದು ಕಿಡಿಕಾರಿದರು. ಈ ವೇಳೆ ಕಾನೂನು ಸುವ್ಯವಸ್ಥೆ ಹದಗೆಡದಂತೆ ತಡೆಯಲು ಪೊಲೀಸರು ಆರ್. ಅಶೋಕ್ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ವಶಕ್ಕೆ ಪಡೆದು, ನಂತರ ಬಿಡುಗಡೆ ಮಾಡಿದರು.

ಜೈ ಭೀಮ್ ಧ್ವಜ ಹಿಡಿದು ಬಿಜೆಪಿ ವಿರುದ್ಧ ದಲಿತರ ಆಕ್ರೋಶ:

ಬಿಜೆಪಿ ನಾಯಕರ ಕೋಮು ರಾಜಕೀಯವನ್ನು ಖಂಡಿಸಿ ದಲಿತ ಸಂಘಟನೆಗಳ ಕಾರ್ಯಕರ್ತರು, ನೀಲಿ ಶಾಲನ್ನು ಹೊತ್ತು ‘ಜೈ ಭೀಮ್’ ಧ್ವಜಗಳೊಂದಿಗೆ ಪ್ರತಿಭಟನೆ ನಡೆಸಿದ್ದಾರೆ. ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಸೌಹಾರ್ದ ವಿರೋಧಿ ಹೇಳಿಕೆಗಳನ್ನು ಖಂಡಿಸಿ, ಶಾಂತಿ ಕಾಯಲು ಶ್ರಮಿಸುತ್ತಿರುವ ಪೊಲೀಸ್ ಅಧಿಕಾರಿಯ ಪರವಾಗಿ ಧ್ವನಿ ಎತ್ತಿದ್ದಾರೆ. ಪ್ರಚೋದನೆ ನೀಡಲು ಯತ್ನಿಸಿದ ಬಿಜೆಪಿ ನಾಯಕರ ವಿರುದ್ಧ ಘೋಷಣೆ ಕೂಗಿದ ದಲಿತ ಕಾರ್ಯಕರ್ತರನ್ನು ಪೊಲೀಸರು ಸ್ಥಳದಿಂದ ತೆರೆವುಗೊಳಿಸಿದ್ದಾರೆ ಎಂದು ವರದಿಯಾಗಿದೆ.

‘ಆರ್‌ಎಸ್‌ಎಸ್-ಬಿಜೆಪಿ ಗೂಂಡಾಗಿರಿಗೆ ಜಾಗವಿಲ್ಲ’: ಡಿಕೆಶಿ ತಿರುಗೇಟು

ಈ ಗೊಂದಲದ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ಗಣೇಶೋತ್ಸವವನ್ನು ಶಾಂತಿಯುತವಾಗಿ ಮತ್ತು ಶಿಸ್ತಿನಿಂದ ಆಚರಿಸಬೇಕು. ಆದರೆ ಬಿಜೆಪಿ ಸಮಾಜಘಾತಕ ಶಕ್ತಿಗಳನ್ನು ಬಳಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರಲು ಸಂಚು ರೂಪಿಸುತ್ತಿದೆ. ಪೊಲೀಸರಿಗೆ ಸಂಪೂರ್ಣ ಜಾಗರೂಕರಾಗಿರಲು ಸೂಚಿಸಲಾಗಿದೆ” ಎಂದು ತಿರುಗೇಟು ನೀಡಿದರು. ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, “ರಾಜ್ಯಾದ್ಯಂತ 80,558 ಗಣೇಶ ಮೆರವಣಿಗೆಗಳಿಗೆ 1.02 ಲಕ್ಷಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕು” ಎಂದು ಮನವಿ ಮಾಡಿದರು.

ನೆಟ್ಟಿಗರ ಬೆಂಬಲ:

ಸಾಮಾಜಿಕ ಜಾಲತಾಣಗಳಲ್ಲಿಯೂ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. “ಅಧಿಕಾರಿ ತಮ್ಮ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸಿದ್ದಾರೆ. ಮಸೀದಿಗಳ ಮುಂಭಾಗ ಪ್ರಚೋದನೆ ನೀಡುವುದನ್ನು ತಡೆಯುವುದು ಹಾಗೂ 10:30ರ ಒಳಗಾಗಿ, ಡಿಜೆ ಸದ್ದಿಲ್ಲದೆ ಮೆರವಣಿಗೆ ಮುಗಿಸುವುದು ಕಾನೂನಿನ ನಿಯಮ. ಇದನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ಸರಿಯಲ್ಲ” ಎಂದು ನೆಟ್ಟಿಗರು ಪ್ರತಿಪಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....