Homeಕರ್ನಾಟಕಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆ ಪ್ರಮಾಣ ಹೆಚ್ಚಿಸಲು ಸೂಚನೆ : ಸಿಎಂ ಸಿದ್ದರಾಮಯ್ಯ

ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆ ಪ್ರಮಾಣ ಹೆಚ್ಚಿಸಲು ಸೂಚನೆ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಶೇ.10ಕ್ಕೂ ಮೀರುವಂತೆ ನೋಡಿಕೊಳ್ಳಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು (ಜ.28) ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಮೇಲ್ವಿಚಾರಣಾ ಸಮಿತಿ ಸಭೆ ನಡೆಸಲಾಗಿದೆ. ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ 2020ರಲ್ಲಿ ಶೇ. 10 ರಷ್ಟಿದ್ದುದು, ಪ್ರಸ್ತುತ ಶೇ. 7ಕ್ಕೆ ಇಳಿದಿದೆ. ಶಿಕ್ಷೆಯ ಪ್ರಮಾಣವನ್ನು ಶೇ. 10ಕ್ಕೆ ಹೆಚ್ಚಿಸುವಂತೆ ಸೂಚಿಸಲಾಗಿದೆ ಎಂದರು.

ಈ ಬಗ್ಗೆ ಸರ್ಕಾರಿ ಪ್ರಾಸಿಕ್ಯೂಟರ್‌ಗಳು ಹಾಗೂ ಪೊಲೀಸ್ ಇಲಾಖೆಯವರು ಪರಿಶೀಲನಾ ಸಭೆ ನಡೆಸಬೇಕು. ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಹೆಚ್ಚಿಸುವ ಬಗ್ಗೆ ಜಿಲ್ಲಾಧಿಕಾರಿಗಳು ಮೂರು ತಿಂಗಳಿಗೊಮ್ಮೆ ತಪ್ಪದೇ ಪ್ರಗತಿ ಪರಿಶೀಲನಾ ಸಭೆ ನಡೆಸಲು, ಈ ಬಗ್ಗೆ ವಿಳಂಬ ನೀತಿ ಅನುಸರಿಸುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ ಎಂದು ಸಿಎಂ ತಿಳಿಸಿದರು.

ಬ್ಯಾಕ್ ಲಾಗ್ ಹಾಗೂ ಮುಂಬಡ್ತಿ

ಬ್ಯಾಕ್ ಲಾಗ್ ಹಾಗೂ ಬಡ್ತಿ ವಿಚಾರದಲ್ಲಿ ಅನ್ಯಾಯವಾಗುತ್ತಿರುವ ಬಗ್ಗೆ ಸಭೆಯಲ್ಲಿ ಸಮಿತಿ ಸದಸ್ಯರು ಚರ್ಚಿಸಿದ್ದು, ಬ್ಯಾಕ್ ಲಾಗ್ ಹಾಗೂ ಇಲಾಖಾವಾರು ಮುಂಬಡ್ತಿಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ ಪರಿಶೀಲಿಸಲು ಪರಿಶೀಲನಾ ಸಭೆ ನಡೆಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಲಾಗಿದೆ ಎಂದರು.

ಇಡಿ ನೋಟಿಸ್‌ಗೆ ಹೈಕೋರ್ಟ್ ತಡೆಯಾಜ್ಞೆ

ಇಡಿ ನೋಟಿಸ್ ಜಾರಿ ಮಾಡಿದ್ದು, ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ತನಿಖೆ ನಡೆಯುತ್ತಿದ್ದು, ಸಿಬಿಐಗೆ ಪ್ರಕರಣವನ್ನು ವಹಿಸುವ ಬಗ್ಗೆ ಚರ್ಚೆ ನಡೆಯುತ್ತಿದ್ದು ವಾದ ನಡೆಯುವ ಹಂತದಲ್ಲಿದೆ. ಈ ಹಂತದಲ್ಲಿ ಆತುರ ಮಾಡುವುದು ಸರಿಯಲ್ಲ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ ಎಂದು ಹೇಳಿದರು.

ಮುಡಾ ಪ್ರಕರಣ ರಾಜಕೀಯ ಪ್ರೇರಿತ

ಇಡಿ ನೋಟಿಸ್ ರಾಜಕೀಯ ಪ್ರೇರಿತವೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ, “ಮುಡಾ ಪ್ರಕರಣವೇ ರಾಜಕೀಯ ಪ್ರೇರಿತ” ಎಂದರು.

ನ್ಯಾಯ ದೊರೆಯುವ ಭರವಸೆ

ಪ್ರಕರಣವನ್ನು ಸಿಬಿಐಗೆ ವಹಿಸಬಹುದೆಂಬ ಆತಂಕವಿದೆಯೇ? ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ, “ನನಗೇಕೆ ಆತಂಕವಾಗಬೇಕು. ನ್ಯಾಯ ಸಿಗುತ್ತದೆ ಎಂಬ ಭರವಸೆ ನಮಗಿದೆ” ಎಂದರು. ಮೈಕ್ರೋ ಫೈನಾನ್ಸ್ ಹಾವಳಿ ತಡೆಗಟ್ಟಲು ಸುಗ್ರೀವಾಜ್ಞೆ ಹೊರಡಿಸುವ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದರು.

ನಾವು ಬಸವಣ್ಣನವರ ಅನುಯಾಯಿಗಳು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆಯವರು ಕುಂಭ ಮೇಳದಲ್ಲಿ ಮಿಂದೆದ್ದರೆ ಬಡತನ ಹೋಗುವುದಿಲ್ಲ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, “ಗಂಗೆಯಲ್ಲಿ ಸ್ನಾನ ಮಾಡಿದರೆ ಪಾಪ ಪರಿಹಾರವಾಗುತ್ತದೆ ಎಂಬ ನಂಬಿಕೆ ಇದೆ. ನಾವು ಬಸವಣ್ಣನವರ ಅನುಯಾಯಿಗಳು, ‘ಅಯ್ಯಾ ಎಂದರೆ ಸ್ವರ್ಗ, ಎಲವೋ ಎಂದರೆ ನರಕ’ ಎಂಬ ಬಸವಣ್ಣನವರ ಮಾತಿನಲ್ಲಿ ನಮಗೆ ನಂಬಿಕೆ ಇದೆ ಎಂದರು.

ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಬೇಲ್ ಸಿಕ್ಕರೆ ಅದು ನಿಮ್ಮ ದೌರ್ಬಲ್ಯ : ಅಧಿಕಾರಿಗಳ ವಿರುದ್ಧ ಗರಂ ಆದ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನಿಸಿದ್ದೇವೆ : ಸಿಎಂ ಸಿದ್ದರಾಮಯ್ಯ

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು (ಮಾ.28) ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಜಾರಿ ಮತ್ತು...

ಇರಾನ್‌ನ ಸರ್ವೋಚ್ಚ ನಾಯಕನನ್ನು ‘ನಿರ್ಮೂಲನೆ’ ಮಾಡಲಾಗಿದೆ; ನಮ್ಮ ಮುಂದಿನ ಗುರಿ ಕ್ಯೂಬಾ: ಡೊನಾಲ್ಡ್‌ ಟ್ರಂಪ್

ಪಶ್ಚಿಮ ಏಷ್ಯಾದಾದ್ಯಂತ ಯುದ್ಧ ಮುಂದುವರೆದಿದ್ದರೂ ಮತ್ತು ರಾಜತಾಂತ್ರಿಕ ಪ್ರಯತ್ನಗಳು ಅನಿಶ್ಚಿತವಾಗಿದ್ದರೂ ಸಹ, ಇರಾನ್‌ನ ಉನ್ನತ ನಾಯಕರು ಮತ್ತು ಅದರ ಹೆಚ್ಚಿನ ಮಿಲಿಟರಿ ಸಾಮರ್ಥ್ಯ ನಾಶವಾಗಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಮಿಯಾಮಿಯಲ್ಲಿ ಸೌದಿ...

ತೆಲಂಗಾಣ| ನಿಗದಿತ ವೇತನ-ಉದ್ಯೋಗ ಭದ್ರತೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಸರ್ಕಾರದ ವಿರುದ್ಧ ಪ್ರತಿಭಟನೆ

ಹೈದರಾಬಾದ್‌ನ ಧರಣಾ ಚೌಕ್‌ನಲ್ಲಿ ಇಂದು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಅವರನ್ನು ಬಂಧಿಸಲಾಯಿತು. ಸರ್ಕಾರವು 18,000 ರೂ.ಗಳ ಮಾಸಿಕ ನಿಗದಿತ ವೇತನ ಮತ್ತು ಉದ್ಯೋಗ ಭದ್ರತೆಯ ಚುನಾವಣಾ...

2001-2006 ರ ಚುನಾವಣೆ ಗೆಲ್ಲಲು ವಿ.ಡಿ. ಸತೀಸನ್ ಆರ್‌ಎಸ್‌ಎಸ್ ಬೆಂಬಲ ಕೋರಿದ್ದರು: ಸಂಘದ ನಾಯಕನಿಂದ ಆರೋಪ

ಕೇರಳದ ಯುಡಿಎಫ್ ಅಧ್ಯಕ್ಷ ವಿ ಡಿ ಸತೀಸನ್ 2001 ಮತ್ತು 2006 ರಲ್ಲಿ ವಿಧಾನಸಭಾ ಚುನಾವಣೆಗಳಲ್ಲಿ ಗೆಲ್ಲಲು ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾಯಕರ ಬೆಂಬಲ ಕೋರಿದ್ದರು ಎಂದು ಸಂಘ ಪರಿವಾರದ ಹಿರಿಯ ನಾಯಕ...

ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಕನ್ನಡ ಕಲಿತು ಬರಬೇಕು: ಡಾ.ಎಲ್.ಹನುಮಂತಯ್ಯ

ಬೆಂಗಳೂರು, ಮಾ.28: ಇತರೇ ರಾಜ್ಯಗಳಿಂದ ಕರ್ನಾಟಕದ ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಬರುವವರು ಕಡ್ಡಾಯವಾಗಿ ಕನಿಷ್ಠ ಆರು ತಿಂಗಳು ವ್ಯಾವಹಾರಿಕ ಕನ್ನಡವನ್ನು ಕಲಿತು ಬರಬೇಕು. ಇಲ್ಲದಿದ್ದರೆ ಇಲ್ಲಿನ ಧರ್ಮಾಧ್ಯಕ್ಷರ ಸ್ಥಾನಕ್ಕೆ ಗೌರವ ಉಳಿಯುವುದಿಲ್ಲ ಎಂದು ಸಾಹಿತಿ...

‘ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಒತ್ತಡ ಎದುರಿಸಬಹುದು..’; ಸೇನಾ ಮುಖ್ಯಸ್ಥರಿಂದ ಸರ್ಕಾರಕ್ಕೆ ಎಚ್ಚರಿಕೆ

ಹೆಚ್ಚುತ್ತಿರುವ ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಕಾರ್ಯಾಚರಣೆಯ ಗಂಭೀರ ಒತ್ತಡವನ್ನು ಎದುರಿಸಬಹುದು ಎಂದು ಸೇನಾ ಮುಖ್ಯಸ್ಥ ಇಯಾಲ್ ಜಮೀರ್ ಭದ್ರತಾ ಕ್ಯಾಬಿನೆಟ್ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ ಎಂದು ಇಸ್ರೇಲ್ ಮಾಧ್ಯಮ ವರದಿಗಳನ್ನು...

ಯೆಮೆನ್‌ನಿಂದ ಹಾರಿದ ಮೊದಲ ಕ್ಷಿಪಣಿ ಎದುರಿಸಿದ ಇಸ್ರೇಲ್; ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಹೌತಿ ಪ್ರವೇಶ?

ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ, ಮಾರ್ಚ್ 28 ರಂದು ಯೆಮೆನ್‌ನಿಂದ ಹಾರಿಸಲಾದ ಕ್ಷಿಪಣಿಯೊಂದನ್ನು ಇಸ್ರೇಲ್ ಮೊದಲಬಾರಿಗೆ ಎದುರಿಸಿದೆ. ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ ಯೆಮೆನ್‌ನಿಂದ ಮೊದಲ ಬಾರಿಗೆ...

ಬಿಜೆಪಿಗೆ ಮತ ಹಾಕುವುದು ವ್ಯರ್ಥ; ಬದಲಿಗೆ ಕಾಂಗ್ರೆಸ್‌ಗೆ ಹಾಕಿ: ಸಂಸದ ಶಶಿ ತರೂರ್

ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಮತ ಹಾಕುವುದು ವ್ಯರ್ಥ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಕೇರಳದಲ್ಲಿ ಹೇಳಿದ್ದಾರೆ. ರಾಜ್ಯದ ಚುನಾವಣಾ ಸ್ಪರ್ಧೆ ಪ್ರಾಥಮಿಕವಾಗಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಮತ್ತು ಎಡ...

ಅಬುಧಾಬಿ | ಭದ್ರತಾ ಪಡೆಗಳು ಹೊಡೆದುರುಳಿಸಿದ ಕ್ಷಿಪಣಿಯ ಅವಶೇಷಗಳು ಬಿದ್ದು ಐವರು ಭಾರತೀಯರಿಗೆ ಗಾಯ

ಯುಎಇ ರಾಜಧಾನಿ ಅಬುಧಾಬಿ ಸೇರಿದಂತೆ ವಿವಿಧ ಪ್ರದೇಶಗಳ ಮೇಲೆ ಇರಾನ್ ನಡೆಸಿದ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳ ಸಂದರ್ಭದಲ್ಲಿ, ಕ್ಷಿಪಣಿಗಳ ಅವಶೇಷಗಳು ಬಿದ್ದ ಪರಿಣಾಮ ಐವರು ಭಾರತೀಯರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಬುಧಾಬಿಯ ಸರ್ಕಾರಿ...

ಧುರಂಧರ್-2 ಬಿಜೆಪಿಯ ದೊಡ್ಡ ಬಜೆಟ್‌ನ ರಾಜಕೀಯ ಜಾಹೀರಾತು: ಧ್ರುವ ರಾಥೀ

ಚಲನಚಿತ್ರ ನಿರ್ಮಾಪಕ ಆದಿತ್ಯ ಧರ್ ಅವರ ಆಕ್ಷನ್ ಎಂಟರ್‌ಟೈನರ್ ಧುರಂಧರ್‌ನ ಮುಂದುವರಿದ ಭಾಗವು ಬಾಕ್ಸ್ ಆಫೀಸ್‌ನಲ್ಲಿ ಭಾರಿ ಗಳಿಕೆಯ ಜೊತೆಗೆ ಬಲಪಂಥೀಯ ವರ್ಗದ ಪ್ರೇಕ್ಷಕರ ಪ್ರತಿಕ್ರಿಯೆಯನ್ನು ಗಳಿಸುತ್ತಿದೆ. ಆದರೂ, ಈ ಚಿತ್ರವು ಸಾಕಷ್ಟು...