Homeಚಳವಳಿರೈತರನ್ನು ಬೆಂಬಲಿಸುವ ಖಲಿಸ್ತಾನಿ-ಪಾಕಿಸ್ತಾನಿ ಟ್ವಿಟ್ಟರ್‌ ಖಾತೆಗಳನ್ನು ಕಿತ್ತುಹಾಕಿ: ಟ್ವಿಟರ್‌ಗೆ ಕೇಂದ್ರ ತಾಕೀತು

ರೈತರನ್ನು ಬೆಂಬಲಿಸುವ ಖಲಿಸ್ತಾನಿ-ಪಾಕಿಸ್ತಾನಿ ಟ್ವಿಟ್ಟರ್‌ ಖಾತೆಗಳನ್ನು ಕಿತ್ತುಹಾಕಿ: ಟ್ವಿಟರ್‌ಗೆ ಕೇಂದ್ರ ತಾಕೀತು

- Advertisement -
- Advertisement -

ಇತ್ತಿಚೆಗಷ್ಟೆ ರೈತರನ್ನು ಬೆಂಬಲಿಸುವ ಹಾಗೂ ಅದರ ಬಗ್ಗೆ ಸುದ್ದಿಗಳನ್ನು ಹಂಚುವ ಹಲವು ಟ್ವಿಟ್ಟರ್‌ ಖಾತೆಗಳನ್ನು ನಿರ್ಬಂಧಿಸಿದ್ದ ಕೇಂದ್ರ ಸರ್ಕಾರ, ಮತ್ತೆ 1,178 ಟ್ವಿಟ್ಟರ್‌ ಖಾತೆಗಳನ್ನು ನಿರ್ಬಂಧಿಸಬೇಕು ಎಂದು ಟ್ವೀಟ್ಟರ್‌ಗೆ ಸೂಚಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.

ಎಎನ್‌ಐ ಟ್ವೀಟ್ ಮಾಡಿರುವ ವರದಿಯಲ್ಲಿ, “ರೈತ ಹೋರಾಟಕ್ಕೆ ಸಂಬಂಧಿಸಿ ತಪ್ಪು ಮಾಹಿತಿ ಹಾಗೂ ಉದ್ರೇಕಕಾರಿ ವಿಷಯಗಳನ್ನು ಹರಡುತ್ತಿರುವ 1,178 ಪಾಕಿಸ್ತಾನಿ–ಖಾಲಿಸ್ತಾನಿ ಟ್ವಿಟರ್‌ ಖಾತೆಗಳನ್ನು ಕಿತ್ತು ಹಾಕುವಂತೆ ಕೇಂದ್ರ ಸರ್ಕಾರವು ಟ್ವಿಟರ್‌ಗೆ ಸೂಚಿಸಿದೆ. ಆದರೆ ಟ್ವಿಟ್ಟರ್‌ ಇದುವರೆಗೂ ಸರ್ಕಾರದ ಆದೇಶವನ್ನು ಸಂಪೂರ್ಣವಾಗಿ ಪಾಲಿಸಿಲ್ಲ” ಎಂದು ಮೂಲಗಳನ್ನು ಉಲ್ಲೇಖಿಸಿ ಹೇಳಿದೆ.

ಇದನ್ನೂ ಓದಿ: ರೈತ ಹೋರಾಟದ ಬೆಂಬಲಿಗರ ಖಾತೆ ಅನ್‌ಬ್ಲಾಕ್: ಟ್ವಿಟ್ಟರ್‌ಗೆ ನೋಟಿಸ್ ಕಳುಹಿಸಿದ ಕೇಂದ್ರ

ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69 ಎ ಅಡಿಯಲ್ಲಿ ಖಾತೆಗಳನ್ನು ತೆಗೆದುಹಾಕುವಂತೆ ಐಟಿ ಸಚಿವಾಲಯ ಟ್ವಿಟ್ಟರ್‌ಗೆ ನಿರ್ದೇಶನ ನೀಡಿತ್ತು. ಇದರಿಂದಾಗಿ ಫೆಬ್ರವರಿ 1 ರ ಸೋಮವಾರ ಬೆಳಿಗ್ಗೆ ಸುಮಾರು 100 ಟ್ವಿಟ್ಟರ್ ಖಾತೆಗಳು ಮತ್ತು ರೈತರ ಪ್ರತಿಭಟನೆಗೆ ಸಂಬಂಧಿಸಿದ 150 ಟ್ವೀಟ್‌ಗಳು ಟ್ವಿಟ್ಟರ್‌ ತೆಗೆದು ಹಾಕಿತ್ತು. ಆದರೆ, ಐಟಿ ಸಚಿವಾಲಯದ ಅಧಿಕಾರಿಗಳೊಂದಿಗಿನ ಸಭೆಯ ನಂತರ ಸೋಮವಾರ ತಡರಾತ್ರಿ ಖಾತೆಗಳನ್ನು ಪುನಃ ಸ್ಥಾಪಿಸಿತ್ತು.

ಫೆಬ್ರವರಿ 3 ರಂದು ಹಲವು ಟ್ವಿಟ್ಟರ್‌ ಖಾತೆಗಳನ್ನು ನಿರ್ಬಂಧಿಸಲು ಕೇಂದ್ರ ಐಟಿ ಸಚಿವಾಲಯ ನಿರ್ದೇಶನ ನೀಡಿದ ಹೊರತಾಗಿಯು ರೈತ ಹೋರಾಟವನ್ನು ಬೆಂಬಲಿಸುವ ಹಲವು ಖಾತೆಗಳನ್ನು ಪುನಃ ಸ್ಥಾಪಿಸಿರುವ ಟ್ವಿಟ್ಟರ್‌ ವಿರುದ್ದ ಕೇಂದ್ರ ಸರ್ಕಾರ ನೋಟಿಸ್ ಜಾರಿ ಮಾಡಿತ್ತು. ತನ್ನ ನೋಟಿಸ್‌ನಲ್ಲಿ ಐಟಿ ಕಾಯಿದೆಯ ಸೆಕ್ಷನ್ 69 ಎ ಅಡಿಯಲ್ಲಿ ಹೊರಡಿಸಲಾದ ನಿರ್ದೇಶನಗಳನ್ನು ಪಾಲಿಸದಿರುವ ಪರಿಣಾಮಗಳ ಬಗ್ಗೆ ಎಚ್ಚರಿಕೆಯನ್ನೂ ಕೇಂದ್ರ ಸರ್ಕಾರ ನೀಡಿತ್ತು.

ಇದನ್ನೂ ಓದಿ: ಕುನಾಲ್ ಕಮ್ರಾ ಟ್ವೀಟ್‌‌ಗಳನ್ನು ಅನುಮತಿಸಿದ್ದಕ್ಕಾಗಿ ಟ್ವಿಟ್ಟರನ್ನು ತರಾಟೆಗೆ ಪಡೆದ ಸಂಸದೀಯ ಸಮಿತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...