Homeಮುಖಪುಟನಾನು ಹುತಾತ್ಮರ ಮಗ- ಹುತಾತ್ಮರಿಗೆ ಮಾಡುವ ಅವಮಾನವನ್ನು ಸಹಿಸುವುದಿಲ್ಲ: ರಾಹುಲ್ ಗಾಂಧಿ

ನಾನು ಹುತಾತ್ಮರ ಮಗ- ಹುತಾತ್ಮರಿಗೆ ಮಾಡುವ ಅವಮಾನವನ್ನು ಸಹಿಸುವುದಿಲ್ಲ: ರಾಹುಲ್ ಗಾಂಧಿ

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಜಲಿಯನ್ ವಾಲಾಬಾಗ್ ಸ್ಮಾರಕವನ್ನು  ನವೀಕರಣಗೊಳಿಸಿದೆ. ಇದು ಹುತಾತ್ಮರಿಗೆ ಮಾಡಿದ ಅವಮಾನ. ಹುತಾತ್ಮತೆಯ ಅರ್ಥ ತಿಳಿಯದ ವ್ಯಕ್ತಿ ಮಾತ್ರ ಇಂತಹ ಅಪಮಾನವನ್ನು ಎಸಗಲು ಸಾಧ್ಯ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿ ಅವರು ಜಲಿಯನ್ ವಾಲಾಬಾಗ್‌ನಲ್ಲಿ ನವೀಕೃತ ಸ್ಮಾರಕವನ್ನು ವಿಡಿಯೋ ಕಾನ್ಫರೆನ್ಸ್‌ನಲ್ಲಿ ಶನಿವಾರ ಉದ್ಘಾಟಿಸಿದ್ಧಾರೆ. ಈ ಸಂದರ್ಭದಲ್ಲಿ, ಮೋದಿ ಅವರು ಸ್ಮಾರಕದಲ್ಲಿ ಮ್ಯೂಸಿಯಂ ಗ್ಯಾಲರಿಗಳನ್ನು ಉದ್ಘಾಟಿಸಿದ್ದಾರೆ.

ಪ್ರಧಾನಿ ಮತ್ತು ಕೇಂದ್ರದ ವಿರುದ್ದ ಕಿಡಿಕಾರಿರುವ ರಾಹುಲ್ ಗಾಂಧಿ, “ಹುತಾತ್ಮತೆಯ ಅರ್ಥ ತಿಳಿಯದ ವ್ಯಕ್ತಿ ಮಾತ್ರ ಜಲಿಯನ್ ವಾಲಾಬಾಗ್ ಹುತಾತ್ಮರಿಗೆ ಇಂತಹ ಅವಮಾನವನ್ನು ಮಾಡಲು ಸಾಧ್ಯ. ನಾನು ಹುತಾತ್ಮರ ಮಗ. ಹುತಾತ್ಮರಿಗೆ ಮಾಡುವ ಅವಮಾನವನ್ನು ನಾನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಪ.ಜಾತಿ ಮತ್ತು ಪಂಗಡದವರ ಮೇಲಿನ ದೌರ್ಜನ್ಯ: ಬಾಕಿ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಸಿಎಂ ಸೂಚನೆ

“ನಾವು ಈ ಅಸಭ್ಯ ಕ್ರೌರ್ಯವನ್ನು ವಿರೋಧಿಸುತ್ತೇವೆ. ಇದರ ವಿರುದ್ಧ ನಾವು ಹೋರಾಡುತ್ತೇವೆ. ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡದವರು ಹೋರಾಟ ಮಾಡಿದವರನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ” ಎಂದು ರಾಹುಲ್ ಮತ್ತೊಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

1919ರ ಏಪ್ರಿಲ್ 13 ರಂದು ರೌಲತ್ ಕಾಯಿದೆಯ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗಳು ನಡೆದವು. ಈ ವೇಳೆ, ಜಲಿಯನ್ ವಾಲಾಬಾಗ್‌ನಲ್ಲಿ ಸಭೆ ಸೇರಿದ್ದ ಸಾವಿರಾರು ಜನರ ಮೇಲೆ ಬ್ರಿಟಿಷ್ ಪಡೆಗಳು ಮನಬಂದಂತೆ ಗುಂಡು ಹಾರಿಸಿದ್ದವು. ಬ್ರಿಟಿಷರ ದಾಳಿಗೆ 1,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು.


ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಪ್ರಕರಣ: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿಚಾರಣೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕ್ರಿಕೆಟ್ ತಂಡದಲ್ಲಿ ಅಲ್ಪಸಂಖ್ಯಾತರಿಗೆ ಆದ್ಯತೆ ನೀಡುತ್ತದೆ: ಮತ್ತೆ ದ್ವೇಷ ಬಿತ್ತಿದ...

0
ಧರ್ಮದ ಆಧಾರದ ಮೇಲೆ ಕ್ರೀಡೆಗಳಲ್ಲಿ ಅಲ್ಪಸಂಖ್ಯಾತರಿಗೆ ಆದ್ಯತೆ ನೀಡಲು ಕಾಂಗ್ರೆಸ್ ಪಕ್ಷ ಬಯಸಿದೆ, ಕ್ರಿಕೆಟ್ ತಂಡದಲ್ಲಿ ಯಾರು ಉಳಿಯುತ್ತಾರೆ ಮತ್ತು ಯಾರು ಉಳಿಯುವುದಿಲ್ಲ ಎಂಬುದನ್ನು ಕಾಂಗ್ರೆಸ್‌ ಧರ್ಮದ ಆಧಾರದಲ್ಲಿ ನಿರ್ಧರಿಸುತ್ತದೆ ಎಂದು ಪ್ರಧಾನಿ...