Homeಮುಖಪುಟನಿಂದನೆ ಸಾರ್ವಜನಿಕವಾಗಿ ನಡೆದಿದ್ದರೆ ಮಾತ್ರ ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗುತ್ತದೆ: ಸುಪ್ರೀಂ ಕೋರ್ಟ್‌

ನಿಂದನೆ ಸಾರ್ವಜನಿಕವಾಗಿ ನಡೆದಿದ್ದರೆ ಮಾತ್ರ ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗುತ್ತದೆ: ಸುಪ್ರೀಂ ಕೋರ್ಟ್‌

- Advertisement -
- Advertisement -

ಸಾರ್ವಜನಿಕವಾಗಿ ಉದ್ದೇಶಪೂರ್ವಕ ಅವಮಾನ ಅಥವಾ ನಿಂದನೆ ಮಾಡಿದರೆ  ಮಾತ್ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಕಾಯಿದೆಯಡಿಯಲ್ಲಿ ಅಪರಾಧವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗಬೇಕಿದ್ದರೆ ‘ನಿಂದನೆಯು ಸಾರ್ವಜನಿಕವಾಗಿರಬೇಕು’ ಎಂಬುವುದನ್ನು ಒತ್ತಿ ಹೇಳಿದೆ.

ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಎಸ್.ವಿ.ಎನ್. ಭಟ್ಟಿ ಅವರು ಇದ್ದ ವಿಭಾಗೀಯ ಪೀಠವು, ಈ ಕಾಯ್ದೆಯಡಿಯಲ್ಲಿ ಮಾಡುವ ಯಾವುದೇ ಆರೋಪವು, ಅಪರಾಧಿಕ ಅಂಶಗಳನ್ನು ಹೊಂದಿದೆಯೇ ಎಂಬುದನ್ನು ತೀರ್ಮಾನಿಸುವಾಗ ‘ಸಾರ್ವಜನಿಕರಿಗೆ ಕಾಣಿಸುವ ಯಾವುದೇ ಸ್ಥಳದಲ್ಲಿ’ ಎಂದು ಕಾಯ್ದೆಯಲ್ಲಿ ಹೇಳಿರುವ ಮಾತು ಬಹಳ ಮುಖ್ಯವಾದ ಪಾತ್ರವಹಿಸುತ್ತದೆ ಎಂದು  ಹೇಳಿದೆ.

‘ಸಾರ್ವಜನಿಕರಿಗೆ ಕಾಣಿಸುವಂತಹ ಸ್ಥಳದಲ್ಲಿ’ ಎಂಬ ವಿವರಣೆಯ ಅನ್ವಯ, ದೂರುದಾರರ ಹೊರತಾಗಿ ಇತರ ವ್ಯಕ್ತಿಗಳಿಗೆ ಕಾಣಿಸುವಂತೆ ಆ ಕೃತ್ಯ ನಡೆದಿರಬೇಕು ಎಂದು ಪೀಠವು ತೀರ್ಪಿನಲ್ಲಿ ಹೇಳಿದೆ.

ಈ ಕಾಯ್ದೆಯ ಅಡಿಯಲ್ಲಿ ತಮ್ಮ ವಿರುದ್ಧ ಎಫ್‌ಐಆರ್‌ ದಾಖಲಿಸಲು ನೀಡಿದ್ದ ಆದೇಶವನ್ನು ಪ್ರಶ್ನಿಸಿ ಪ್ರೀತಿ ಅಗರ್ವಾಲ್ ಮತ್ತು ಇತರರು ಸಲ್ಲಿಸಿದ್ದ ಮೇಲ್ಮನವಿಯನ್ನು ಮಾನ್ಯ ಮಾಡಿರುವ ಪೀಠವು ಈ ವಿವರಣೆ ನೀಡಿದೆ.

ಅಂತರಾಷ್ಟ್ರೀಯ ಕುದುರೆ ಸವಾರಿ ಚಾಂಪಿಯನ್‌ನ ದೂರಿನ ಮೇರೆಗೆ ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧಗಳಿಗೆ ಎಫ್‌ಐಆರ್ ದಾಖಲಿಸುವ ಆದೇಶದ ವಿರುದ್ಧ ಪ್ರೀತಿ ಅಗರ್‌ವಾಲಾ ಮತ್ತು ಪೋಷಕರು ಮತ್ತು ಒಲಿಂಪಿಕ್ ರೈಡಿಂಗ್ ಮತ್ತು ಇಕ್ವೆಸ್ಟ್ರಿಯನ್ ಅಕಾಡೆಮಿಯ(ಒಆರ್‌ಇಎ) ತರಬೇತಿ ಅಥ್ಲೀಟ್‌ಗಳು ಮಾಡಿದ ಮನವಿಯನ್ನು ನ್ಯಾಯಾಲಯವು ಅಂಗೀಕರಿಸಿದೆ.

ಮೇಲ್ಮನವಿದಾರರ ಪರ ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ ಅವರು ವಾದ ಮಂಡಿಸಿದ್ದಾರೆ. ವಾಟ್ಸ್ಆ್ಯಪ್‌ ಮೂಲಕ ನಡೆದಿರುವ ಮಾತುಕತೆಗಳು ಕಾಯ್ದೆಯ ಅಡಿಯಲ್ಲಿ ಅಪರಾಧಿಕ ಅಂಶಗಳನ್ನು ಹೊಂದಿರುವುದು ಮೇಲ್ನೋಟಕ್ಕೆ ಕಾಣುವುದಿಲ್ಲ ಎಂದು ಹೇಳಿದ್ದರು. 1989ರ ಕಾಯಿದೆಯ ಸೆಕ್ಷನ್ 3 (1) (ಆರ್) ಅಡಿಯಲ್ಲಿ ಅಪರಾಧವನ್ನು ರೂಪಿಸುವ ಯಾವುದೇ ಅಂಶಗಳನ್ನು ವಾಟ್ಸಾಪ್ ಸಂಭಾಷಣೆಯು ಹೊಂದಿಲ್ಲ ಎಂದು ಹೇಳಲಾಗಿದೆ.

ವಕೀಲ ಕಪಿಲ್ ನಾಥ್ ಮೋದಿ ಅವರು ದೂರಿನಲ್ಲಿ ಕಾಗ್ನಿಸಬಲ್ ಅಪರಾಧಗಳನ್ನು ಬಹಿರಂಗಪಡಿಸಿದ್ದಾರೆ ಮತ್ತು ದೂರುದಾರರು ತಿಂಗಳುಗಳು ಮತ್ತು ವರ್ಷಗಳ ಕಾಲ ಜಾತಿ ನಿಂದನೆಗಳನ್ನು ಮೌನವಾಗಿ ಅನುಭವಿಸಿದ್ದಾರೆ ಮತ್ತು ಕೇವಲ ವಿಳಂಬವು ಯಾವುದೇ ಪ್ರತಿಕೂಲ ತೀರ್ಮಾನಕ್ಕೆ ಕಾರಣವಾಗುವುದಿಲ್ಲ ಎಂದು ವಾದಿಸಿದ್ದರು.

CrPCಯ ಸೆಕ್ಷನ್ 156(3) ಅಡಿಯಲ್ಲಿ ಸಲ್ಲಿಸಲಾದ ಅರ್ಜಿಯಲ್ಲಿ ಎಫ್‌ಐಆರ್ ಮತ್ತು  ತನಿಖೆ ನಡೆಸುವ ಬಗ್ಗೆ ಭಿನ್ನ ಅಭಿಪ್ರಾಯಗಳಿಲ್ಲ. ಅರ್ಜಿಯಲ್ಲಿನ ನಿರ್ದಿಷ್ಟ ಆರೋಪಗಳು ಅಸ್ಪಷ್ಟವಾಗಿದ್ದರೆ ಅದು ಎಫ್‌ಐಆರ್ ಮತ್ತು ತನಿಖೆಯ ನೋಂದಣಿಗೆ ಆದೇಶಕ್ಕೆ ಕಾರಣವಾಗುವುದಿಲ್ಲ ಎಂದು ಪೀಠವು ಹೇಳಿದೆ.

ಇದನ್ನು ಓದಿ: ಮೋದಿ ಸ್ಪರ್ಧಿಸುವ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ನಡೆದಿದ್ಯಾ ಅಕ್ರಮ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...